ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ : ರಾಜ್ಯದ ಶಕ್ತಿಸೌಧ ಹಾಗೂ ಜವರ ದೇವಾಲಯದಂತಿರುವ ವಿಧಾನಸೌಧ ಪಕ್ಕದ ಶಾಸಕರ ಭವನದಲ್ಲೇ ಲಂಚ ಪಡೆದು ಸಿಕ್ಕಿಹಾಕಿಕೊಂಡು ಅಪರಾಧಿ ಎಂದು ಸಾಬೀತಾಗಿ ಶಿಕ್ಷೆ ಅನುಭವಿಸಿರುವ ಕಳಂಕಿತ ಮಾಜಿ ಶಾಸಕ ಸಂಪಂಗಿ ಅವರಿಗೆ ಡಿಸಿಸಿ ಬ್ಯಾಂಕ್ ವಿರುದ್ಧ ಮಾತನಾಡುವ ನೈತಿಕ ಹಕ್ಕಿಲ್ಲ ಎಂದು ಕೋಲಾರ ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ತಿರುಗೇಟು ನೀಡಿದರು . ತಾಲ್ಲೂಕಿನ ಕಡಗಟ್ಟೂರು ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ಆಶ್ರಯದಲ್ಲಿ ಕುರಗಲ್ […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ಪತ್ರಕರ್ತರು ರಾಜಕಾರಣಿಗಳ ಮನೆ ಬಾಗಿಲಿಗೆ ಹೋಗಬಾರದು , ಅವರು ನಿಮ್ಮ ಸಂಘ ಬರುವಂತೆ ಪರಿಸ್ಥಿತಿ ನಿರ್ಮಾಣ ಮಾಡಿ ತಮ್ಮ ವೃತ್ತಿಯ ಗೌರವ ಘನತೆಯನ್ನು ಕಾಪಾಡಿ ಕೊಳ್ಳುವಂತಾಗ ಬೇಕೆಂದು ಸಂಸದ ಎಸ್.ಮುನಿಸ್ವಾಮಿ ಕಿವಿಮಾತು ಹೇಳಿದರು.ಮಾಲೂರು ಪಟ್ಟಣದ ತಾಲ್ಲೂಕು ಪಂಚಾಯಿತಿ ಸಾಮರ್ಥ್ಯ ಸೌಧದಲ್ಲಿ ಆಯೋಜಿಸಿದ್ದ ೨ ನೇ ಕೋಲಾರ ಜಿಲ್ಲಾ ಪತ್ರಕರ್ತರ ಸಮ್ಮೇಳನ ಹಾಗೂ ಸರ್ವ ಸದಸ್ಯರ ಸಭೆ ಮತ್ತು ಮಾಲೂರು ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನವೀಕೃತ ಭವನವನ್ನು ಉದ್ಘಾಟಿಸಿ […]
JANANUDI.COM NETWORK ಸರಕಾರ ತನ್ನ ಕನಿಷ್ಠ ಜವಾಬ್ದಾರಿಗಳನ್ನು ಒಂದು ಐತಿಹಾಸಿಕ ಸಾಧನೆ ಎನ್ನುವುದು ಸರಿಯಲ್ಲ. ಯಾವುದೇ ಯಶಸ್ಸು ಮೈಮರೆವಿಗೆ ಕಾರಣವಾಗಬಹುದು. ನಮ್ಮ ದೇಶದ ಜನಸಂಖ್ಯೆ ಮಕ್ಕಳನ್ನು ಸೇರಿಸಿದರೆ 136 ಕೋಟಿಗಿಂತ ಹೆಚ್ಚು. ಸರಕಾರ ತನ್ನ ಬೆನ್ನು ತಟ್ಟಿಕೊಳ್ಳುವ ವೇಗ ಮುಂದುವರೆದರೆ ಇನ್ನೂ ಉಳಿದ 172 ಕೋಟಿ ಲಸಿಕೆ ಹಾಕಿಸಿಕೊxಳ್ಳಲು ಇನ್ನು 479 ದಿನಗಳು ಬೇಕಾಗಬಹುದು. ಕೋವಿಡ್ ಹರಡುವಿಕೆಯ ವೇಗ ಮತ್ತು ಅದು ಉಂಟು ಮಾಡಬಹುದಾದ ಅನಾಹುತ ಗಣನೆಗೆ ತೆಗೆದುಕೊಂಡರೆ ಲಸಿಕೆ ಅಭಿಯಾನದಲ್ಲಿ ಭಾರತ ಹಿಂದುಳಿದಿರುವುದು ವಿಷಾದವಾಗಿದೆ ಎಂದು […]
JANANUDI.COM NETWORK ಕುಂದಾಪುರ: ದೇಶದಲ್ಲಿ ಪ್ರಸ್ತುತ ಅತ್ಯಂತ ಜನಪರವಾಗಿ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುತ್ತಿರುವ, ದೇಶದ ರಾಜಕೀಯದ ಭವಿಷ್ಯದ ಆಶಾಕಿರಣ ಎಂದೇ ಬಿಂಬಿತವಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಕುರಿತು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಇತ್ತೀಚೆಗೆ ಮಾಡಿರುವ ಟೀಕೆಗಳು ಅತ್ಯಂತ ಕೀಳುಮಟ್ಟದ್ದಾಗಿವೆ ಎಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿನೋದ್ ಕ್ರಾಸ್ಟೊ ಪತ್ರಿಕಾ ಹೇಳಿಕೆಯ ಮೂಲಕ ಖಂಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ರಾಹುಲ್ ಗಾಂಧಿ ಕುರಿತು ಆಧಾರರಹಿತವಾಗಿ ಅವಾಚ್ಯ ಶಬ್ದ ಬಳಸಿ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಶುಕ್ರವಾರ ಸುರಿದ ಗುಡುಗು ಮಿಂಚಿನೊಂದಿಗೆ ಸುರಿದ ಭಾರಿ ಮಳೆಯಿಂದಾಗಿ, ಜನ ಜೀವನ ಅಸ್ತವ್ಯಸ್ತಗೊಂಡಿದೆ.ಮಳೆಯ ಹೊಡೆತಕ್ಕೆ ಶ್ರೀನಿವಾಸಪುರ ಸೇರಿದಂತೆ ಸಮೀಪದ ಹೆಬ್ಬಟ, ಚಲ್ದಿಗಾನಹಳ್ಳಿ, ಪನಸಮಾಕನಹಳ್ಳಿ ಗ್ರಾಮಗಳಲ್ಲಿ, ಮಳೆ ನೀರು ಮನೆಗಳಿಗೆ ನುಗ್ಗಿದೆ. ಶಾಲೆ ಹಾಗೂ ಕೆಲವು ಮನೆಗಳು ಬಿದ್ದುಹೋಗಿವೆ. ಆದರೆ ಯಾವುದೇ ಜೀವಹಾನಿ ಸಂಭವಿಸಿಲ್ಲ.ಹೆಬ್ಬಟ ಗ್ರಾಮದಲ್ಲಿ 6 ಮನೆಗಳು ಕುಸಿದು ಬಿದ್ದಿವೆ. ಕೆಲವು ಮನೆಗಳ ಗೋಡೆಗಳು ಕುಸಿದಿವೆ. ಶುಕ್ರವಾರ ರಾತ್ರಿ ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್ ಗ್ರಾಮಕ್ಕೆ ಭೇಟಿ ನೀಡಿ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಇತಿಹಾಸ ಪ್ರಸಿದ್ಧ ಬೆಳ್ಮಣ್ಣು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ನವರಾತ್ರಿ ಮಹೋತ್ಸವದ ಅಂಗವಾಗಿ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ನ ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂಡಳಿಯ ನೇತೃತ್ವದಲ್ಲಿ ಶನಿವಾರ 15ನೇ ವರ್ಷದ ಕುಣಿತ ಭಜನಾ ಕಾರ್ಯಕ್ರಮ ಬೆಳ್ಮಣ್ಣು ಶ್ರೀ ಕ್ಷೇತ್ರದಲ್ಲಿ ಜರಗಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಪ್ರಶಾಂತ್ ಪೂಜಾರಿ, ಭಜನಾ ಮಂಡಳಿಯ ಅಧ್ಯಕ್ಷೆ ಸುಲೋಚನಾ ಕೋಟ್ಯಾನ್, ಭಜನ ಮಂಡಳಿಯ ಕಾರ್ಯದರ್ಶಿ ಹರಿಣಾಕ್ಷಿ ಪೂಜಾರಿ, ಸಂಚಾಲಕ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಪೂರ್ವಾಧ್ಯಕ್ಷರಾದ ರಾಜೇಶ್ […]
JANANUDI.COM NETWORK ಬಸವರಾಜ್ ಬೊಮ್ಮಾಯಿ ಅವರು ಸಿಎಂ ಆದ ಬಳಿಕ ಟಿವಿ ಕಾರ್ಯಕ್ರಮದ ಕಲರ್ಸ್ ಕನ್ನಡದ ‘ಅನುಬಂಧ ಅವಾರ್ಡ್ 2021) ನಲ್ಲಿ ಸಿಎಂ ಭಾಗವಹಿಸಿದ್ದು, ಮನೆ, ಸಂಸಾರ ತಾಪತ್ರಯಗಳ ಬಗ್ಗೆ ಅನುಭವ ಕುರಿತು ಮಾತುಕತೆ ನಡೆದಿದೆ.ಕಲರ್ಸ್ ಕನ್ನಡ ಬಿಡುಗಡೆ ಮಾಡಿರುವ ಪೆÇ್ರಮೋದಲ್ಲಿ, ನಿರೂಪಕ ಅಕುಲ್ ಬಾಲಾಜಿ, ಎಲ್ಲರ ಮನೆಯಲ್ಲಿ ನಳ್ಳಿ ರಿಪೇರಿ, ಮನೆ ಸಂಸಾರದಲ್ಲಿ ಸಣ್ಣ ಸಣ್ಣ ಕಾರಣಕ್ಕೆ ಜಗಳವಾಗುತ್ತದೆ. ಹಾಗೆಯೇ ನಿಮ್ಮ ಮನೆಯಲ್ಲಿ ಕೂಡ ಜಗಳವಾಗುತ್ತಾ? ಎಂದು ಪ್ರಶ್ನಿಸಿದರು.ಅದಕ್ಕೆ ಉತ್ತರಿಸಿದ ಸಿಎಂ, ನಮ್ಮ ಮನೆಯೂ ಸಾಮಾನ್ಯರ […]
JANANUDI.COM NETWORK ಕೋವಿಡ್ ಲಸಿಕೆ ಪ್ರಮಾಣ ಪತ್ರದಲ್ಲಿ, ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರ ಇರುವ ಇದ್ದ ಕಾರಣಕ್ಕೆ, ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಕೇರಳದ ಹೈಕೋರ್ಟ್, ಇದೀಗ ಕೇಂದ್ರ ಸರಕಾರಕ್ಕೆ ನೋಟಿಸ್ ಜ್ಯಾರಿ ಮಾಡಿದೆ.ಕೇರಳದ ಕೊಟ್ಟಾಯಮ್ ನಿವಾಸಿ ಎಂ.ಪೀಟರ್ ತನಗೆ ಪ್ರಧಾನ ಮಂತ್ರಿ ಮೋದಿಯವರ ಭಾವಚಿತ್ರ ಇಲ್ಲದಿರುವ ಪ್ರಮಾಣ ಪತ್ರ ಬೇಕೆಂದು ಕೋರಿ ಸಲ್ಲಿಸಿದ ಅರ್ಜಿಯನ್ನು ಸ್ವೀಕರಿಸಿ ಅರ್ಜಿ ವಿಚಾರಣೆ ನಡೆಸಿ ಹೈಕೋರ್ಟ್ ಕೇಂದ್ರ ಸರಕಾರಕ್ಕೆ ಮತ್ತು ಕೇರಳ ರಾಜ್ಯ ಸರಕಾರಗಳಿಗೆ ನೋಟಿಸ್ ಜ್ಯಾರಿ ಮಾಡಿ, ಕೇಂದ್ರ […]
JANANUDI.COM NET WORK ಕಳೆದ ನಾಲ್ಕು ದಶಕಗಳಿಂದ ಪತ್ರಕರ್ತ ರಾಗಿ,ಸಮಾಜಸೇವಕರಾಗಿ ಸೇವೆ ಸಲ್ಲಿಸುತ್ತಾ ಬಂದಿರುವ ಕುಂದಾಪುರದ ಹಿರಿಯ ಪತ್ರಕರ್ತ ಯು.ಎಸ್.ಶೆಣೈಯವರಿಗೆ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಪಿ.ಆರ್.ರಾಮಯ್ಯ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದೆ.ಶಿವಮೊಗ್ಗ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ, ಶಿವಮೊಗ್ಗ ದ ಕುವೆಂಪು ರಂಗಮಂದಿರದಲ್ಲಿ ನಡೆದ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಗ್ರಹಸಚಿವ ಜ್ಞಾನೇಂದ್ರ,ಸಂಸದ ಬಿ.ವೈ.ರಾಘವೇಂದ್ರಸೇರಿದಂತೆ ಗಣ್ಯ ಅತಿಥಿಗಳು ಸನ್ಮಾನಿಸಿ ಪ್ರಶಸ್ತಿ ಪ್ರದಾನ ಮಾಡಿದರು.