ಶ್ರೀನಿವಾಸಪುರದ ಪುರಸಭಾ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಸಭೆಯಲ್ಲಿ ಪುರಸಭೆಯ ಮುಖ್ಯಾಧಿಕಾರಿ ವಿ.ನಾಗರಾಜ್ ಪೌರ ಕಾರ್ಮಿಕರಿಗೆ ಕಸ ವಿಂಗಣೆ ಕುರಿತು ತಿಳುವಳಿಕೆ ನೀಡಿದರು. ಮೂಲದಲ್ಲಿಯೇ ಕಸ ವಿಂಗಡಿಸಿ ಪರಿಸರ ಉಳಿಸಿ ಶ್ರೀನಿವಾಸಪುರ. ಪಟ್ಟಣದ ಪುರಸಭಾ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಪುರಸಭೆಯ ಪೌರಕಾರ್ಮಿಕರಿಗೆ ಕಸ ವಿಂಗಣೆ ಕುರಿತು ತಿಳುವಳಿಕೆ ನೀಡಲಾಯಿತು. ಪುರಸಭೆ ಮುಖ್ಯಾಧಿಕಾರಿ ವಿ.ನಾಗರಾಜ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಪೌರ ಕಾರ್ಮಿಕರು ಮೂಲದಲ್ಲಿಯೇ ಹಸಿ ಕಸ, ಒಣ ಕಸ ಹಾಗೂ ಪ್ಲಾಸ್ಟಿಕ್ ತ್ಯಾಜ್ಯವನ್ನು ವಿಂಗಡಿಸಿಕೊಳ್ಳಬೇಕು. ಹಾಗೆ ಮಾಡುವುದರಿಂದ […]
ರಾಜ್ಯ ಸರ್ಕಾರ ಒಳಮೀಸಲಾತಿ ಅನುಷ್ಠಾನದ ಹಿನ್ನಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆರನ್ನು ನವದೆಹಲಿಯಲ್ಲಿ ಭೇಟಿ ಮಾಡಿ ಶುಭಾಷಯ ಕೋರಿದ ರಾಜ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆಹೆಚ್. ಮುನಿಯಪ್ಪ ಒಳಮೀಸಲಾತಿ ಸಮಸ್ಯೆ ಇತ್ಯರ್ಥದ ಕುರಿತು ಸಂತಸ ಹಂಚಿಕೊಂಡರು.
ಕುಂದಾಪುರ, ಮೇ.1; ಹೋಲಿ ರೋಜರಿ ಮಾತಾ ಇಗರ್ಜಿಯ ಅಧೀನದಲ್ಲಿರುವ ಪ್ರಸಿದ್ದ ವಿದ್ಯಾ ಸಮೂಹದ ವಿದ್ಯಾ ಸಂಸ್ಥೆಗಳಿಗೆ ನೂತನ ಪ್ರಾಂಶುಪಾಲರಾಗಿ ವಂ।ರೊಲ್ವಿನ್ ಫೆರ್ನಾಂಡಿಸ್ ಅವರು ಮೇ 1 ರಂದು ಆಗಮಿಸಿ ಅಧಿಕಾರ ಸ್ವೀಕರಿಸಿದರು. ಅವರನ್ನು ರೋಜರಿ ಮಾತಾ ಚರ್ಚಿನ ಪ್ರಧಾನ ಧರ್ಮಗುರುಗಳಾದ ಅ।ವಂ।ಪೌಲ್ ರೇಗೊ ಸ್ವಾಗತಿಸಿದರು. ಬಳಿಕ ಚರ್ಚಿನಲ್ಲಿ ಕ್ರತಜ್ಞತೆಯ ಪ್ರಾರ್ಥನೆಯನ್ನು ನಡೆಸಲಾಯಿತು. ಅ।ವಂ।ಪೌಲ್ ರೇಗೊ ಶುಭ ಕೋರಿದರು. ಸಂತ ಮೇರಿಸ್ ಪಿ.ಯು. ಕಾಲೇಜಿನ ಬಗ್ಗೆ ಈ ಹಿಂದಿನ ಪ್ರಾಂಶುಪಾಲರಾದ ರೇಶ್ಮಾ ಫೆರ್ನಾಂಡಿಸ್ ವಿವರ ನೀಡಿದರು. ಹೋಲಿ […]
ಉಡುಪಿ: ಯುನಾಯ್ಟೆಡ್ ಕ್ರಿಶ್ಚಿಯನ್ ಫೋರಮ್ ಉಡುಪಿ ಜಿಲ್ಲೆಯ ವತಿಯಿಂದ ನೂತನವಾಗಿ ಅಧಿಕಾರ ಸ್ವೀಕರಿಸಿದ ಉಡುಪಿ ಕಥೊಲಿಕ್ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಲೆಸ್ಲಿ ಕ್ಲಿಫರ್ಡ್ ಡಿಸೋಜಾ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಲಾಯಿತು.ಭೇಟಿಯ ವೇಳೆ ವಿವಿಧ ಸಭೆಗಳ ಸಭಾಪಾಲಕರು ಮತ್ತು ಧರ್ಮಾಧ್ಯಕ್ಷರು ಪರಸ್ಪರ ಕ್ರೈಸ್ತ ಐಕ್ಯತೆಯ ಕುರಿತು ಚರ್ಚೆಗಳನ್ನು ನಡೆಸಿದರು.ನೂತನ ಧರ್ಮಾಧ್ಯಕ್ಷರು ಜಿಲ್ಲೆಯಲ್ಲಿ ಕೈಸ್ತ ಐಕ್ಯತೆಗೆ ಹೆಚ್ಚಿನ ಒತ್ತು ನೀಡುವುದರೊಂದಿಗೆ ತನ್ನ ಸಂಪೂರ್ಣವಾದ ಸಹಕಾರವನ್ನು ನೀಡುವುದಾಗಿ ಭರವಸೆ ನೀಡಿದರು.ಈ ವೇಳೆ ಯುನಾಯ್ಟೆಡ್ ಕ್ರಿಶ್ಚಿಯನ್ ಫೋರಮ್ ಉಪಾಧ್ಯಕ್ಷ ಪ್ರಶಾಂತ್ ಜತ್ತನ್ನ, […]
ಬೆಂಗಳೂರು : ಗ್ರಾಮ ಪಂಚಾಯಿತಿಗಳಲ್ಲಿ ಸಾರ್ವಜನಿಕರಿಗೆ ತ್ವರಿತ ಸೇವೆ ಒದಗಿಸುವುದು ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ (ಪಿಡಿಒ) ಲಭ್ಯತೆ ಖಚಿತಪಡಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಆಡಳಿತಾತ್ಮಕ ಕ್ರಮ ಕೈಗೊಂಡಿದೆ. ಪಿಡಿಒಗಳು ಪ್ರತಿದಿನ ನಿಗದಿತ ಸಮಯದಲ್ಲಿ ಕಚೇರಿಯಲ್ಲೇ ಸಾರ್ವಜನಿಕರ ಭೇಟಿ ನಡೆಸುವುದು ಕಡ್ಡಾಯವಾಗಿದ್ದು, ಬಯೋಮೆಟ್ರಿಕ್ ಹಾಜರಾತಿ ದಾಖಲಾತಿ, ವಾರವಾರದ ಪ್ರವಾಸ ವಿವರ ಪ್ರಕಟಣೆ ಸೇರಿದಂತೆ ಹಲವು ಹೊಸ ನಿಯಮಗಳನ್ನು ಜಾರಿಗೊಳಿಸಿ ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ ಸುತ್ತೋಲೆ ಹೊರಡಿಸಿದೆ. ಕರ್ನಾಟಕ ವಿಧಾನಮಂಡಲದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ […]
ಬದಲಾವಣೆಯು ಜೀವನದ ಲಯ, ಮತ್ತು ಪ್ರತಿಯೊಂದು ಕ್ಷೇತ್ರದಲ್ಲೂ, ಇದು ನವೀಕೃತ ಶಕ್ತಿ ಮತ್ತು ತಾಜಾ ದೃಷ್ಟಿಕೋನಗಳನ್ನು ತರುತ್ತದೆ. ಚರ್ಚ್ ಕೂಡ ವಾರ್ಷಿಕ ಪುರೋಹಿತರ ವರ್ಗಾವಣೆಯ ಮೂಲಕ ಈ ದೀರ್ಘಕಾಲಿಕ ಪರಿವರ್ತನೆಯನ್ನು ಸ್ವೀಕರಿಸುತ್ತದೆ – ಇದು ಹಿಂದಿನದಕ್ಕೆ ಕೃತಜ್ಞತೆಯನ್ನು ಭವಿಷ್ಯದ ಭರವಸೆಯೊಂದಿಗೆ ಬೆರೆಸುವ ಸಂದರ್ಭವಾಗಿದೆ. ಏಪ್ರಿಲ್ 20, 2026 ರಂದು ಡಯಾಸಿಸ್ನ ಅಧಿಕಾರ ವಹಿಸಿಕೊಂಡ ಹೊಸ ಬಿಷಪ್, ರೆವರೆಂಡ್ ರೆವರೆಂಡ್ ಡಾ. ಲೆಸ್ಲೀ ಕ್ಲಿಫರ್ಡ್ ಡಿ’ಸೋಜಾ ಅವರ ನೇಮಕದೊಂದಿಗೆ, ಹೊಸ ಅಧ್ಯಾಯ ಪ್ರಾರಂಭವಾಗಿದೆ. ನಿರೀಕ್ಷೆ ಮತ್ತು ಊಹಾಪೋಹಗಳು ಗಾಳಿಯಲ್ಲಿದ್ದರೂ, […]
ಗಿಳಿಯಾರು ಕುಶಲ ಹೆಗ್ಡೆ ಮೆಮೋರಿಯಲ್ ಚಾರಿಟೆಬಲ್ ಟ್ರಸ್ಟ್ (ರಿ.) ವತಿಯಿಂದ 2025-26ನೇ ಸಾಲಿನ ಪದವಿ, ಪದವಿ ಪೂರ್ವ ಹಾಗೂ ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ ವಿಶ್ವ ವಿದ್ಯಾಲಯ ಹಾಗೂ ರಾಜ್ಯ ಮಟ್ಟದಲ್ಲಿ ರ್ಯಾಂಕ್ ಗಳಿಸಿದ ಕುಂದಾಪುರ-ಬೈಂದೂರು ತಾಲೂಕಿನ ವಿದ್ಯಾರ್ಥಿಗಳನ್ನು ಗೌರವಿಸುವ ಕಾರ್ಯಕ್ರಮ ನಡೆಯಲಿದೆ.ಮಂಗಳೂರು ವಿಶ್ವ ವಿದ್ಯಾಲಯದ ವ್ಯಾಪ್ತಿಗೆ ಒಳಪಡುವ ಕುಂದಾಪುರ-ಬೈಂದೂರು ತಾಲೂಕಿನ ಕಾಲೇಜುಗಳ ಅಂತಿಮ ಪದವಿ ಶಿಕ್ಷಣದಲ್ಲಿ 10 ರ್ಯಾಂಕ್ ಒಳಗೆ ಸ್ಥಾನ ಪಡೆದವರು ಮಾಹಿತಿ ಕಳುಹಿಸಬಹುದು.ಪಿಯುಸಿ ಹಾಗೂ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ರಾಜ್ಯ ಮಟ್ಟದ 10ನೇ […]
ಎಂಸಿಸಿ ಬ್ಯಾಂಕ್ ವತಿಯಿಂದ 2026 ಏಪ್ರಿಲ್ 25 ಮತ್ತು 26ರಂದು ಗೋವಾದ Courtyard by Marriottನಲ್ಲಿ ಅಂತರರಾಜ್ಯ ಬ್ಯಾಂಕಿಂಗ್ ಸಂವಾದವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಬ್ಯಾಂಕಿನ ಹಿರಿಯ ಅಧಿಕಾರಿಗಳು, ಶಾಖಾ ವ್ಯವಸ್ಥಾಪಕರು, ಪೆಕ್ರಡಿಟ್ ಅಧಿಕಾರಿಗಳು, ಮುಂದಿನ ವ್ಯವಸ್ಥಾಪಕರು ಹಾಗೂ ನಿರ್ದೇಶಕ ಮಂಡಳಿಯ ಸದಸ್ಯರು ಭಾಗವಹಿಸಿದ್ದರು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಬದಲಾಗುತ್ತಿರುವ ಪರಿಸ್ಥಿತಿಗಳನ್ನು ಚರ್ಚಿಸುವುದು ಹಾಗೂ ಅಂತರರಾಜ್ಯ ಸಹಕಾರವನ್ನು ಉತ್ತೇಜಿಸುವುದು ಈ ಸಂವಾದದ ಮುಖ್ಯ ಉದ್ದೇಶವಾಗಿತ್ತು. ಈ ಸಂವಾದದ ಉದ್ಘಾಟನಾ ಕಾರ್ಯಕ್ರಮದಲ್ಲಿ ಎಂಸಿಸಿ ಬ್ಯಾಂಕ್ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ […]
ಶ್ರೀನಿವಾಸಪುರ : ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಶ್ರೀನಿವಾಸಪುರ ತಾಲ್ಲೂಕು ಸಮಿತಿ ವತಿಯಿಂದ ಶುಕ್ರವಾರ ವಿವಿಧ ಬೇಡಿಕೆಗಳನ್ನು ಈಡೇರಿಸುವ ಸಲುವಾಗಿ ತಹಶೀಲ್ದಾರ್ ರವರ ಮೂಲಕ ರಾಜ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ತಹಶೀಲ್ದಾರ್ ಕಚೇರಿಯ ಮುಜರಾಯಿ ಗುಮಾಸ್ತೆ ಶೈಲಜ ಮನವಿ ಸ್ವೀಕರಿಸಿದರು.ಮನವಿ ಸಲ್ಲಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಕಾರ್ಯಾಧ್ಯಕ್ಷ ಹಬ್ಬನಿ ಶಿವಪ್ಪ ಮಾತನಾಡಿ ರಾಜ್ಯದಲ್ಲಿ ಲೈಸೆನ್ಸ್ ಸರ್ವೇಯರ್ ಗಳು ಕೆಲಸ ಮಾಡದೆ ಚಳುವಳಿ ಮಾಡುತ್ತಿರುವುದರಿಂದ ರೈತರಿಗೆ ತುಂಬಾ ತೊಂದರೆ ಆಗುತ್ತಿರುತ್ತದೆ, […]

