ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರದ ಪುರಸಭಾ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಪೌರಕಾರ್ಮಿಕರ ದಿನಾಚರಣೆ ಸಮಾರಂಭವನ್ನು ಪುರಸಭೆ ಮುಖ್ಯಾಧಿಕಾರಿ ವಿ.ಮೋಹನ್ ಕುಮಾರ್ ಉದ್ಘಾಟಿಸಿದರು. ಶ್ರೀನಿವಾಸಪುರ: ನಾಗರಿಕರ ಆರೋಗ್ಯ ರಕ್ಷಣೆಯಲ್ಲಿ ಪೌರ ಕಾರ್ಮಿಕರ ಸೇವೆ ದೊಡ್ಡದು ಎಂದು ಪುರಸಭೆ ಮುಖ್ಯಾಧಿಕಾರಿ ವಿ.ಮೋಹನ್ ಕುಮಾರ್ ಹೇಳಿದರು. ಪಟ್ಟಣದ ಪುರಸಭಾ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಪೌರಕಾರ್ಮಿಕರ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿ, ಪೌರ ಕಾರ್ಮಿಕರು ತಮ್ಮ ಆರೋಗ್ಯದ ಬಗ್ಗೆಯೂ ಹೆಚ್ಚಿನ ಕಾಳಜಿ ವಹಿಸಬೇಕು. ಸ್ವಚ್ಛತಾ ಕಾರ್ಯ ಕೈಗೊಳ್ಳುವಾಗ ತಪ್ಪದೆ […]
ಸರ್ಕಾರದ ಸವಲತ್ತುಗಳು ಎಲ್ಲರಿಗೂ ತಲುಪುವಂತಾಗಲಿ – ಜಿ.ಎ. ಬಾವಾ ಕೋಲಾರ : ಸರ್ಕಾರವು ಎಲ್ಲರಿಗೂ ಸಾಮಾಜಿಕ ನ್ಯಾಯ ಸಿಗಬೇಕೆಂಬ ಉದ್ದೇಶದಿಂದ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದು ಇವುಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪುವಂತಾಗಬೇಕು ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾದ ಜಿ.ಎ ಬಾವಾ ತಿಳಿಸಿದರು. ಇಂದು ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಅಲ್ಪಸಂಖ್ಯಾತ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಸ್ವಯಂ ಸೇವಾ ಸಂಸ್ಥೆಗಳು, ಸಾರ್ವಜನಿಕರು ಹಾಗೂ ಅಲ್ಪಸಂಖ್ಯಾತ ಪ್ರತಿನಿಧಿಗಳೊಂದಿಗೆ ಕುಂದುಕೊರತೆಗಳ ಸಭೆಯ ಅಧ್ಯಕ್ಷ […]
ಅಲ್ಪಸಂಖ್ಯಾತರ ಕಲ್ಯಾಣಕ್ಕೆ ರೂಪಿಸಿರುವ ಯೋಜನೆಗಳು ಪರಿಣಾಮಕಾರಿಯಾಗಿ ಜಾರಿಯಾಗಲಿ -ಎ.ಜಿ. ಬಾವಾ ಕೋಲಾರ : ಸರ್ಕಾರವು ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಹಲವಾರು ಯೋಜನೆಗಳನ್ನು ರೂಪಿಸಿದ್ದು, ಈ ಯೋಜನೆಗಳು ಪರಿಣಾಮಕಾರಿಯಾಗಿ ಜಾರಿಯಾಗುವ ಮೂಲಕ ಅಲ್ಪಸಂಖ್ಯಾತರ ಅಭಿವೃದ್ಧಿಯಾಗಬೇಕು ಎಂದು ಅಧಿಕಾರಿಗಳಿಗೆ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾದ ಜಿ.ಎ ಬಾವಾ ಸೂಚಿಸಿದರು. ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಲ್ಪಸಂಖ್ಯಾತರ ಹಾಸ್ಟೆಲ್‍ಗಳಲ್ಲಿ ವಿದ್ಯಾರ್ಥಿಗಳು ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗುವಂತೆ ಅರಿವು ಮೂಡಿಸಬೇಕು. ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಅಗತ್ಯ ಮೂಲಭೂತ […]
ಶ್ರೀನಿವಾಸಪುರ ತಾಲ್ಲೂಕಿನ ಉನಿಕಿಲಿ ಗ್ರಾಮದಲ್ಲಿ ಏರ್ಪಡಿಸಿದ್ದ ಗ್ರಾಮ ಸಭೆಯಲ್ಲಿ ಶಾಸಕ ಕೆ.ಆರ್.ರಮೇಶ್ ಕುಮಾರ್ ಮಾತನಾಡಿದರು. ಶ್ರೀನಿವಾಸಪುರ: ಅಧಿಕಾರಿಗಳು ಗ್ರಾಮಾಭಿವೃದ್ಧಿ ಕಾಮಗಾರಿಗಳನ್ನು ಪಾರದರ್ಶಕವಾಗಿ ನಿರ್ವಹಿಸಬೇಕು ಎಂದು ಕೆ.ಆರ್.ರಮೇಶ್ ಕುಮಾರ್ ಹೇಳಿದರು. ತಾಲ್ಲೂಕಿನ ಉನಿಕಿಲಿ ಗ್ರಾಮದಲ್ಲಿ ಏರ್ಪಡಿಸಿದ್ದ ಗ್ರಾಮ ಸಭೆಯಲ್ಲಿ ಮಾತನಾಡಿ, ಗ್ರಾಮದ ಅಭಿವೃದ್ಧಿಗೆ ಪೂರಕವಾದ ಎಲ್ಲ ಕ್ರಮ ಕೈಗೊಳ್ಳಲಾಗುವುದು. ಮೂಲ ಸೌಕರ್ಯ ಕಲ್ಪಿಸಲು ಮೊದಲ ಆದ್ಯತೆ ನೀಡಲಾಗುವುದು. ಎಂದು ಹೇಳಿದರು. ಗ್ರಾಮದಲ್ಲಿ ರೂ.10 ಲಕ್ಷ ವೆಚ್ಚದಲ್ಲಿ ಅಂಗನವಾಡಿ ಕಟ್ಟಡ ನಿರ್ಮಿಸಲಾಗುವುದು. ಮನೆ ಇಲ್ಲದವರಿಗೆ 86 ಮನೆಗಳನ್ನು […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ನಿವಾಸಪುರದಲ್ಲಿ ಡಿಸಿಸಿ ಬ್ಯಾಂಕ್ ವತಿಯಿಂದ ಏರ್ಪಡಿಸಿದ್ದ ಸಾಲ ವಿತರಣಾ ಸಮಾರಂಭದಲ್ಲಿ ಸ್ತ್ರೀ ಶಕ್ತಿ ಸಂಘಗಳ ಸದಸ್ಯರಿಗೆ ಶಾಸಕ ಕೆ.ಆರ್.ರಮೇಶ್ ಕುಮಾರ್ ಚೆಕ್ ವಿತರಿಸಿದರು. ನಿವಾಸಪುರದಲ್ಲಿ ಡಿಸಿಸಿ ಬ್ಯಾಂಕ್ ವತಿಯಿಂದ ಏರ್ಪಡಿಸಿದ್ದ ಸಾಲ ವಿತರಣಾ ಸಮಾರಂಭದಲ್ಲಿ ಸ್ತ್ರೀ ಶಕ್ತಿ ಸಂಘಗಳ ಸದಸ್ಯರಿಗೆ ಶಾಸಕ ಕೆ.ಆರ್.ರಮೇಶ್ ಕುಮಾರ್ ಚೆಕ್ ವಿತರಿಸಿದರು. ಶ್ರೀನಿವಾಸಪುರ: ಡಿಸಿಸಿ ಬ್ಯಾಂಕ್ ಸಾಲ ಪಡೆದವರು ಸಾಲ ಸದುಪಯೋಗ ಪಡೆಸಿಕೊಳ್ಳುವುದರ ಜೆಗೆ ಸಮಯಕ್ಕೆ ಸರಿಯಾಗಿ ಮರುಪಾವತಿ ಮಾಡಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರದ ಸೈನಿಕ್ ಪಬ್ಲಿಕ್ ಶಾಲೆಯ ನಾಲ್ವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕೋಲಾರ: ವಿದ್ಯಾರ್ಥಿಗಳು ಸಹ ಪಠ್ಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಪೂರಕವಾದ ಚಟುವಟಿಕೆ ಕೈಗೊಳ್ಳಬೇಕು ಎಂದು ಸೈನಿಕ್ ಪಬ್ಲಿಕ್ ಸಾಲೆಯ ಕಾರ್ಯದರ್ಶಿ ವೈ.ಸಿ.ಮುನೇಗೌಡ ಹೇಳಿದರು. ಶಾಲೆಯ ಆವರಣದಲ್ಲಿ ಜಿಲ್ಲಾ ಮಟ್ಟದ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳಿಗೆ […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ರೋಟರಿ ಸಂಸ್ಥೆ ಮತ್ತು ಗ್ರಾಮಪಂಚಾಯತ ಸಹಯೋಗದೊಂದಿಗೆ ಕೋಟಿ- ನಾಟಿ ಕಾರ್ಯಕ್ರಮ ಶ್ರೀನಿವಾಸಪುರ: ತಾಲ್ಲೂಕಿನಲ್ಲಿ ನೀರಾವರಿ ಸಮಸ್ಯೆ ಹೆಚ್ಚಾಗಿದ್ದು, ಗಿಡ-ಮರಗಳನ್ನು ಬೆಳೆಸುವ ಹಿತದೃಷ್ಟಿಯಿಂದ ರೋಟರಿ ಸಂಸ್ಥೆ ಮತ್ತು ಗ್ರಾಮಪಂಚಾಯಿತಿಯ ಸಹಯೋಗದೊಂದಿಗೆ ಕೋಟಿ- ನಾಟಿ ಕಾರ್ಯಕ್ರಮವನ್ನು ಹಮ್ಮಿಕೊಂಡಿಂದ್ದು, ಈ ಕಾರ್ಯಕ್ರಮದಲ್ಲಿ 100 ಕೋಟಿ ವಿವಿಧ ಸಸಿಗಳನ್ನು ನಾಟಿ ಮಾಡಲಾಗುವುದು ಎಂದು ರೋಟರಿ ಶ್ರೀನಿವಾಸಪುರ ಸೆಂಟ್ರಲ್‍ನ ಚಾರ್ಟಡ್ ಪ್ರಸಿಡೆಂಟ್ ಎಲ್. ಗೋಪಾಲಕೃಷ್ಣ ತಿಳಿಸಿದರು.ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದ ಆವರಣದಲ್ಲಿ ರೋಟರಿ ಶ್ರೀನಿವಾಸಪುರ ಸೆಂಟ್ರಲ್ ಮತ್ತು ಗ್ರಾಮಪಂಚಾಯಿತಿಯ […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರದಲ್ಲಿ ಸೋಮವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಜಲಶಕ್ತಿ ಅಭಿಯಾನ ವತಿಯಿಂದ ಏರ್ಪಡಿಸಿದ್ದ ಸ್ಪರ್ಧೆಯಲ್ಲಿ ವಿಜೇತರಾಗಿದ್ದ ವಿದ್ಯಾರ್ಥಿಗಳಿಗೆ ಪುರಸಭೆ ಮುಖ್ಯಾಧಿಕಾರಿ ವಿ.ಮೋಹನ್ ಕುಮಾರ್ ಬಹುಮಾನ ವಿತರಿಸಿದರು. ಶ್ರೀನಿವಾಸಪುರ: ವಿದ್ಯಾರ್ಥಿಗಳು ಮಳೆ ನೀರಿನ ಸಂರಕ್ಷಣೆ ಕುರಿತು ಜನರಲ್ಲಿ ಅರಿವು ಮೂಡಿಸಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ವಿ.ಮೋಹನ್ ಕುಮಾರ್ ಹೇಳಿದರು. ಪಟ್ಟಣದ ಪುರಸಭಾ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಜಲ ಶಕ್ತಿ ಅಭಿಯಾನ ವತಿಯಿಂದ ಜಲ ಸಂಕ್ಷಣೆ ಕುರಿತು ಏರ್ಪಡಿಸಿದ್ದ ರಸ ಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಾಗಿದ್ದ […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಏರ್ಪಡಿಸಿದ್ದ ಆಯಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಪ್ರಚಾರ ಜಾಥಾಗೆ ಶಾಸಕ ಕೆ.ಆರ್.ರಮೇಶ್ ಕುಮಾರ್ ಚಾಲನೆ ನೀಡಿದರು. ಶ್ರೀನಿವಾಸಪುರ: ಫಲಾನುಭವಿಗಳು ಆಯಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು. ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಏರ್ಪಡಿಸಿದ್ದ ಆಯಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಪ್ರಚಾರ ಜಾಥಾಗೆ ಚಾಲನೆ ನೀಡಿ ಮಾತನಾಡಿ, ಈ ಯೋಜನೆಯಿಂದ ಸಮಾಜದ ಎಲ್ಲ ವರ್ಗದ ಜನರಿಗೂ ಅನುಕೂಲವಾಗಿದೆ. ಬಿಪಿಎಲ್ […]