ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕಿನ ಅರಿಕೆರೆ ಗ್ರಾಮದಲ್ಲಿ ಸಾಲ ಬಾಧೆ ತಾಳಲಾರದೆ ಯುವ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವುದುದಾಗಿ ವರದಿಯಾಗಿದೆ. ಅರಿಕೆರೆ ಗ್ರಾಮದ ರೈತ ರಾಜೇಶ್ (24) ವಿಷ ಸೇವಿಸಿ ಆತ್ಮ ಹತ್ಯೆ ಮಾಡಿಕೊಂಡಿರುವ ರೈತ. ರಾಜೇಶ್ ನಾಲ್ಕು ದಿನಗಳ ಹಿಂದೆ ತೋಟದ ಸಮೀಪ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಚಿಕಿತ್ಸೆಗಾಗಿ ಕೋಲಾರದ ಜಾಲಪ್ಪ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಸಾವನ್ನಪ್ಪಿದರು ಎಂದು ಪೊಲೀಸರು ತಿಳಿಸಿದ್ದಾರೆ. ರಾಜೇಶ್ ತನ್ನ ತಾಯಿ […]
JANANUDI NETWORK ಭಂಡಾರ್ಕಾರ್ಸ್ ಕಾಲೇಜಿನಲ್ಲಿ ವಿಶ್ವ ವಿದ್ಯಾಲಯ ಮಟ್ಟದ ಅಂತರ್ ಕಾಲೇಜು ರಂಗಭೂಮಿ ಕಲಾಸ್ಪರ್ಧೆ ಮಂಗಳೂರು ವಿಶ್ವವಿದ್ಯಾಲಯ ಮತ್ತು ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶನಾಲಯ ಮಂಗಳೂರು ಇವರ ಆಶ್ರಯದಲ್ಲಿ ಕುಂದಾಪುರ, ಜು.18: ‘ಮಂಗಳೂರು ವಿಶ್ವವಿದ್ಯಾಲಯ ಮತ್ತು ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶನಾಲಯ ಮಂಗಳೂರು ಇವರ ಆಶ್ರಯದಲ್ಲಿ ಭಂಡಾರ್ಕಾರ್ಸ್ ಆಟ್ರ್ಸ್ ಮತ್ತು ಸಾಯನ್ಸ್ ಕಾಲೇಜಿನಲ್ಲಿ ಅಗೋಸ್ತ್ 19 ರಿಂದ 20 ರ ತನಕ 2019 -20ನೇ ಸಾಲಿನ ಅಂತರ್ ಕಾಲೇಜು ರಂಗಭೂಮಿ ಕಲಾ ಸ್ಪರ್ಧೆ ನಡೆಯಲಿದೆ’ ಎಂದು ಭಂಡಾರ್ಕಾರ್ಸ್ ಆಟ್ರ್ಸ್ ಮತ್ತು […]
ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರದ ಶಿರಿಡಿ ಸಾಯಿ ಬಾಬಾ ದೇವಾಲಯದಲ್ಲಿ ಗುರುಪೂರ್ಣಿಮೆ ಪ್ರಯುಕ್ತ ಮಹಿಳೆಯರು ವಿಶೇಷ ಪೂಜೆ ನೆರವೇರಿಸಿದರು. ಗುರು ಪೂರ್ಣಿಮೆ ಪ್ರಯುಕ್ತ ಬಾಬಾ ವಿಗ್ರಹಕ್ಕೆ ವಿಶೇಷ ಅಲಂಕಾರ ಮಾಡಲಾಗಿತ್ತು. ಬಾಬಾ ದೇಗುಲದಲ್ಲಿ ಗುರುಪೂರ್ಣಿಮೆ ಆಚರಣೆ ಶ್ರೀನಿವಾಸಪುರ: ಪಟ್ಟಣದ ಶಿರಿಡಿ ಸಾಯಿ ಬಾಬಾ ದೇವಾಲಯದಲ್ಲಿ ಗುರುಪೂರ್ಣಿಮೆ ಪ್ರಯುಕ್ತ ಹಲವಾರು ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಬಾಬಾ ವಿಗ್ರಹಕ್ಕೆ ಕ್ಷೀರಾಭಿಷೇಕ ಮಾಡಲಾಯಿತು. ವಿಶೇಷ ಅಲಂಕಾರ ಹಾಗೂ ವಿಶೇಷ ಪೂಜೆ ನೆರವೇರಿಸಲಾಯಿತು. ಬಾಬಾ ವಿಗ್ರಹಕ್ಕೆ ತೊಟ್ಟಿಲು […]
ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಸರ್ಕಾರಿ ಆಸ್ಪತ್ರೆಗೆ ಔಷಧಿಗಳ ಸರಬರಾಜು ಆಗದೆ ಇರುವುದರ ಬಗ್ಗೆ ಜಿಲ್ಲಾ ಆರೋಗ್ಯಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡಿರುವ ಸ್ಪೀಕರ್ ರಮೇಶ್ ಕುಮಾರ್. ಸರ್ಕಾರಿ ಆಸ್ಪತ್ರೆಗಳಿಗೆ ಔಷಧಿ ವಿತರಣೆ ಮಾಡುವಲ್ಲಿ ಇಲಾಖೆಯವರು ನಿರ್ಲಕ್ಷ್ಯ ತೋರುತ್ತಿದ್ದೀರಿ. ಸರ್ಕಾರ ಬಿಕ್ಕಟ್ಟಿನಲ್ಲಿ ಇದೆ ಎಂದು ನೀವು ನಿರ್ಲಕ್ಷ್ಯ ಮಾಡುತ್ತಿದ್ದೀರಿ. ಸರ್ಕಾರ ಇರಲಿ ಅಥವಾ ಬೇರೆ ಸರ್ಕಾರ ಬರಲಿ ಔಷಧಿ ವಿತರಣೆ ಮಾಡದೆ ಖಾಸಗಿ ಆಸ್ಪತ್ರೆಗಳ ಹಾಗೂ ಔಷಧಿ ಕಂಪನಿಳೊಂದಿಗೆ ಒಳ ಒಪ್ಪಂದ ಮಾಡಿಕೊಂಡು ಸರ್ಕಾರಿ ಆಸ್ಪತ್ರೆಗಳಿಗೆ ಔಷಧಿ ವಿತರಣೆ ಮಾಡುವುದರಲ್ಲಿ […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಜಲಶಕ್ತಿ ಅಭಿಯಾನವನ್ನು ಸಾಕಾರಗೊಳಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಲಿ-ಜೆ.ಮಂಜುನಾಥ್ ಕೋಲಾರ ; ಜಲಶಕ್ತಿ ಅಭಿಯಾನವು ಭಾರತ ಸರ್ಕಾರದ ಬಹುದೊಡ್ಡ ಯೋಜನೆಯಾಗಿದ್ದು ಇದನ್ನು ಸಾಕಾರಗೊಳಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಬೇಕು ಎಂದು ಜಿಲ್ಲಾಧಿಕಾರಿಗಳಾದ ಜೆ.ಮಂಜುನಾಥ್ ಅವರು ತಿಳಿಸಿದರು. ಇಂದು ಕೋಲಾರ ತಾಲ್ಲೂಕಿನ ಮುದುವಾಡಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ನೀರಿನ ಸಂರಕ್ಷಣೆ ಕುರಿತು ಆಯೋಜಿಸಲಾಗಿದ್ದ ಜಲಶಕ್ತಿ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯ ಸರ್ಕಾರವು ಸಹ ಪ್ರಸಕ್ತ […]
ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರೊ.ಬಿ ಕೃಷ್ಣಪ್ಪ ಸ್ಥಾಪಿತ ಅವಿಭಜಿತ ಜಿಲ್ಲೆಗಳಾದ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳ ಪದಾಧಿಕಾರಿಗಳ ಸಭೆ ಕೋಲಾರ,ಜು.15: ಭಾನುವಾರ ನಗರದ ಪತ್ರಕರ್ತರ ಭವನದಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರೊ.ಬಿ ಕೃಷ್ಣಪ್ಪ ಸ್ಥಾಪಿತ ಅವಿಭಜಿತ ಜಿಲ್ಲೆಗಳಾದ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳ ಪದಾಧಿಕಾರಿಗಳ ಸಭೆಯನ್ನು ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಹೆಣ್ಣೂರು ಶ್ರೀನಿವಾಸ್ ಉದ್ಘಾಟಿಸಿದರು. ಹೆಣ್ಣೂರು ಶ್ರೀನಿವಾಸ್ ಮಾತನಾಡಿ, ದಲಿತ ಚಳುವಳಿ ಉಳಿದ ಎಲ್ಲಾ ಚಳುವಳಿಗಳಿಗೆ ತಾಯಿ ಇದ್ದಂತೆ. ಇದರಿಂದ […]
ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕರ್ನಾಟಕ ರಾಜ್ಯ ಜಿಲ್ಲಾ ಮತ್ತು ಮಾಧ್ಯಮ ಪತ್ರಿಕೆಗಳ ಸಂಪಾದಕರ ಸಭೆ ಕೋಲಾರ.ಜು,15: ಕರ್ನಾಟಕ ರಾಜ್ಯ ಜಿಲ್ಲಾ ಮತ್ತು ಮಾಧ್ಯಮ ಪತ್ರಿಕೆಗಳ ಸಂಪಾದಕರ ಸಂಘದಿಂದ ದಿನಾಂಕ 18-7-2019 ರಂದು ಗುರುವಾರ ಬೆಳಗ್ಗೆ 10-00 ಗಂಟೆಗೆ ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಪತ್ರಿಕೆಗಳ ಸಂಪಾದಕರ ಸಭೆಯನ್ನು ಕರೆಯಲಾಗಿದೆ. ಜಿಲ್ಲಾ ಪತ್ರಿಕೆಗಳ ಹಲವಾರು ಸಮಸ್ಯೆಗಳಿಗೆ ಸ್ಪಂದಿಸುವ ಸಲುವಾಗಿ ಜಿಲ್ಲಾ ಸಂಪಾದಕರ ಸಂಘ ಸ್ಥಾಪನೆ ಬಹುಮುಖ್ಯವಾಗಿದ್ದು, ಇದರ ಆಗುಹೋಗುಗಳ ಬಗ್ಗೆ […]
ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಚಿನ್ನಾಭರಣ ಸಾಲಕ್ಕೂ ಹೆಚ್ಚಿನ ಬಡ್ಡಿ ಹಾಕಿ ರೈತರ ಸುಲಿಗೆಯನ್ನು ತಪ್ಪಿಸಲು ಕ್ರಮ ಡಿಸಿಸಿ ಬ್ಯಾಂಕ್‍ನಿಂದ `ಗೃಹಲಕ್ಷ್ಮಿ ಬೆಳೆಸಾಲ ಯೋಜನೆ’-ಬ್ಯಾಲಹಳ್ಳಿ ಗೋವಿಂದಗೌಡ ಕೋಲಾರ:- ಚಿನ್ನಾಭರಣ ಸಾಲಕ್ಕೂ ಹೆಚ್ಚಿನ ಬಡ್ಡಿ ಹಾಕಿ ಸುಲಿಗೆ ಮಾಡುತ್ತಿರುವುದನ್ನು ತಪ್ಪಿಸಲು ರಾಜ್ಯ ಸರ್ಕಾರ ಡಿಸಿಸಿ ಬ್ಯಾಂಕಿನ ಮೂಲಕ `ಗೃಹಲಕ್ಷ್ಮಿ ಬೆಳೆ ಸಾಲ ಯೋಜನೆ’ಯನ್ನು ಜಾರಿಗೆ ತಂದಿದ್ದು, ಇದರ ಬಗ್ಗೆ ವ್ಯಾಪಕ ಪ್ರಚಾರ ನಡೆಸುವಂತೆ ಅಧಿಕಾರಿಗಳಿಗೆ ಬ್ಯಾಂಕಿನ ಅಧ್ಯಕ್ಷ ಬ್ಯಾಲಹಳ್ಳಿ ಎಂ.ಗೋವಿಂದಗೌಡ ಸೂಚನೆ ನೀಡಿದರು. ಶನಿವಾರ ಜಿಲ್ಲಾ ಸಹಕಾರಿ ಯೂನಿಯನ್ […]
ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ- ಬಾಲಕಿಯರೇ ಮೇಲುಗೈ 2836 ಮಂದಿ ಪೈಕಿ 1303 ಪಾಸ್-ಶೇ.45.94 ರಷ್ಟು ಫಲಿತಾಂಶ ಕೋಲಾರ:- ಜೂನ್‍ನಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಜಿಲ್ಲೆಯಲ್ಲಿ ಪರೀಕ್ಷೆಗೆ ಕುಳಿತಿದ್ದ 2836 ಮಂದಿ ಪೈಕಿ 1303 ಮಂದಿ ತೇರ್ಗಡೆಯಾಗುವ ಮೂಲಕ ಶೇ.45.94 ರಷ್ಟು ಫಲಿತಾಂಶ ಬಂದಿದ್ದು, ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ ಎಂದು ಪರೀಕ್ಷಾ ನೋಡೆಲ್ ಅಧಿಕಾರಿ ಎ.ಎನ್.ನಾಗೇಂದ್ರಪ್ರಸಾದ್ ತಿಳಿಸಿದ್ದಾರೆ. ಈ ಕುರಿತು ಪತ್ರಕರ್ತರಿಗೆ ಮಾಹಿತಿ ನೀಡಿರುವ […]