
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಮಾರುಕಟ್ಟೆ ಅವರೆಕಾಯಿ ಮಂಡಿಗಳನ್ನು ಸ್ಥಳಾಂತರಿಸಬೇಕೆಂದು ಕಛೇರಿಗೆ ಬೀಗವನ್ನು ಜಡಿಯುವ ಮೂಲಕ ರೈತ ಸಂಘ, ಹಸಿರು ಸೇನೆಯಿಂದ ಪ್ರತಿಭಟನೆ ಶ್ರೀನಿವಾಸಪುರ, ಪಟ್ಟಣದ ಮದ್ಯಭಾಗದಲ್ಲಿರುವ ತರಕಾರಿ ಮಾರುಕಟ್ಟೆ ಹಾಗೂ ಎಂ.ಜಿ.ರಸ್ತೆಯಲ್ಲಿರುವ ಅವರೆಕಾಯಿ ಮಂಡಿಗಳನ್ನು ಎ.ಪಿ.ಎಂ.ಸಿ. ಯಾರ್ಡಿಗೆ ಸ್ಥಳಾಂತರಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ತಾಲ್ಲೂಕು ಕಛೇರಿಗೆ ಬೀಗವನ್ನು ಜಡಿಯುವ ಮೂಲಕ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಪಟ್ಟಣದ ತಾಲ್ಲೂಕು ಕಛೇರಿಯ ಮುಂದೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು […]

JANANUDI.COM NETWORK ಕುಂದಾಪುರ ರೋಜರಿ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಗೆ ರಾಜ್ಯ ಮಟ್ಟದಲ್ಲಿ “ಉತ್ತಮ ಸಹಕಾರ ಸಂಘ ಪ್ರಶಸ್ತಿ 2019” ಕುಂದಾಪುರ, ನ.19: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ನಿ. ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಕೇಂದ್ರ. ಬ್ಯಾಂಕ್ ನಿ. ಮಂಗಳೂರು,. ಉಡುಪಿ ಜಿಲ್ಲಾ ಸಹಕಾರ ಯುನಿಯನ್ ನಿ.ಉಡುಪಿ,. ಮತ್ತು ಸಹಾಕಾರಿ ಇಲಾಖೆ, ಹಾಗೂ ಜಿಲ್ಲೆಯ ವಿವಿಧ ಸಹಕಾರಿ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಉಡುಪಿಯ ಶ್ರೀಮತಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ನಡೆದ 66 […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ ತಾಲ್ಲೂಕಿನ ಕೇತಗಾನಹಳ್ಳಿ ಗ್ರಾಮದಲ್ಲಿ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರಂಭವನ್ನು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಎಂ.ಗೋವಿಂದಗೌಡ ಉದ್ಘಾಟಿಸಿದರು. ಶ್ರೀನಿವಾಸಪುರ: ರೈತರ ಹಿತದೃಷ್ಟಿಯಿಂದ, ಹಾಲು ಖರೀದಿ ದರವನ್ನು ಹೆಚ್ಚಿಸಬೇಕು ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಎಂ.ಗೋವಿಂದಗೌಡ ಹೇಳಿದರು. ತಾಲ್ಲೂಕಿನ ಕೇತಗಾನಹಳ್ಳಿ ಗ್ರಾಮದಲ್ಲಿ ಏರ್ಪಡಿಸಿದ್ದ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರಂಭ ಉದ್ಘಾಟಿಸಿ ಮಾತನಾಡಿ, ಹಾಲು ಉತ್ಪಾದನೆಯಲ್ಲಿ ಗ್ರಾಮೀಣ ಪ್ರದೇಶದ ಮಹಿಳೆಯರ ಶ್ರಮ ಅಡಗಿದೆ. ಉತ್ಪಾದನಾ ವೆಚ್ಚ ದಿನದಿಂದ ದಿನಕ್ಕೆ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರದಲ್ಲಿ ಏರ್ಪಡಿಸಿದ್ದ ಕನಕದಾಸರ ಜಯಂತ್ಯುತ್ಸವ ಸಮಾರಂಭವನ್ನು ತಹಶೀಲ್ದಾರ್ ಕೆ.ಎನ್.ಸುಜಾತ ಉದ್ಘಾಟಿಸಿದರು. ಶ್ರೀನಿವಾಸಪುರ: ಪ್ರಿಯೊಬ್ಬರೂ ಕನಕದಾಸರ ಆದರ್ಶ ಪಾಲಿಸಬೇಕು ಎಂದು ತಹಶೀಲ್ದಾರ್ ಕೆ.ಎನ್.ಸುಜಾತ ಹೇಳಿದರು. ಪಟ್ಟಣದ ಮಿನಿ ವಿಧಾನ ಸೌಧದ ಆವರಣದಲ್ಲಿ ಏರ್ಪಡಿಸಿದ್ದ ಕನಕದಾಸರ 532ನೇ ಜಯಂತ್ಯುತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಸಾರ್ವಜನಿಕ ಶಿಕ್ಷಣ ಇಲಾಖೆಯ ರಾಜ್ಯ ಸಂಪನ್ಮೂಲ ವ್ಯಕ್ತಿ ಎ.ವೆಂಕಟರೆಡ್ಡಿ ಮಾತನಾಡಿ, ಕನಕದಾಸರು ಭಕ್ತಿ, ವೈರಾಗ್ಯ ಹಾಗೂ ಮಾನವೀಯತೆಯ ಪ್ರತೀಕ. ಅವರು ತಮ್ಮ ಕೀರ್ತನೆಗಳ ಮೂಲಕ ಸಮಾಜದ ಡೊಂಕನ್ನು […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರದ ವೆಂಕಟೇಶ್ವರ ಪ್ಯಾರಾ ಮೆಡಿಕಲ್ ಸೈನ್ಸ್ ಕಾಲೇಜಿನಲ್ಲಿ ಗುರುವಾರ ಮಕ್ಕಳ ದಿನಾಚರಣೆ ಶ್ರೀನಿವಾಸಪುರ: ವಿದ್ಯಾರ್ಥಿಗಳು, ನೆಹರು ಅವರು ಮಕ್ಕಳ ಬಗ್ಗೆ ಹೊಂದಿದ್ದ ಪ್ರೀತಿ ಹಾಗೂ ವಿಶ್ವಾಸಕ್ಕೆ ತಕ್ಕಂತೆ ನಡೆದುಕೊಳ್ಳಬೇಕು. ದೇಶ ಕಟ್ಟುವ ಕಾರ್ಯದಲ್ಲಿ ನೆರವಾಗಬೇಕು ಎಂದು ವೆಂಕಟೇಶ್ವರ ಗ್ರಾಮೀಣ ಆರೋಗ್ಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ವೈ.ವಿ.ವೆಂಕಟಾಚಲ ಹೇಳಿದರು. ಪಟ್ಟಣದ ವೆಂಕಟೇಶ್ವರ ಪ್ಯಾರಾ ಮೆಡಿಕಲ್ ಸೈನ್ಸ್ ಕಾಲೇಜಿನಲ್ಲಿ ಗುರುವಾರ ಏರ್ಪಡಿಸಿದ್ದ ಮಕ್ಕಳ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿ, ಇಂದಿನ ಮಕ್ಕಳು ನಾಳೆಯ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಮಕ್ಕಳ ದಿನಾಚರಣೆ ಅಂಗವಾಗಿ ವಾಸವಿ ಯುವಜನ ಸಂಘದ ವತಿಯಿಂದ ಲೇಖನ ಸಾಮಗ್ರಿ ವಿತರಣೆ ಶ್ರೀನಿವಾಸಪುರದ ಕರ್ನಾಟಕ ಮಾದರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಗುರುವಾರ ಮಕ್ಕಳ ದಿನಾಚರಣೆ ಅಂಗವಾಗಿ ವಾಸವಿ ಯುವಜನ ಸಂಘದ ವತಿಯಿಂದ ಲೇಖನ ಸಾಮಗ್ರಿ ವಿತರಿಸಲಾಯಿತು. ಸಂಘದ ಪದಾಧಿಕಾರಿಗಳಾದ ಪೃಥ್ವಿ, ನಾಗಕಿರಣ್, ವೆಂಕಟ್ ಕಾರ್ತಿಕ್, ಚಿನ್ಮಯ, ರಘು, ಮುಖ್ಯ ಶಿಕ್ಷಕ ಸಿ.ಮಹೇಶ್, ಶಿಕ್ಷಕ ಪಿ.ಎನ್.ನಾರಾಯಣಸ್ವಾಮಿ ಇದ್ದರು.

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಗುಜರಾತ್ನ ಸ್ಟ್ಯಾಚ್ಯು ಆಫ್ ಯೂನಿಟಿ ಸಮೀಪ ನ.17 ರಂದು ರಾಜ್ಯ ಮಟ್ಟದ ಆರ್ಯ ವೈಶ್ಯ ಯುವಕರ ಏಕತಾ ಸಮಾವೇಶ ಶ್ರೀನಿವಾಸಪುರ: ಗುಜರಾತ್ನ ಸ್ಟ್ಯಾಚ್ಯು ಆಫ್ ಯೂನಿಟಿ ಸಮೀಪ ನ.17 ರಂದು ರಾಜ್ಯ ಮಟ್ಟದ ಆರ್ಯ ವೈಶ್ಯ ಯುವಕರ ಏಕತಾ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಆರ್ಯ ವೈಶ್ಯ ಯುವಜನ ಮಹಾಸಭಾದ ಅಧ್ಯಕ್ಷ ಶಬರೀಶ್ ತಿಳಿಸಿದ್ದಾರೆ. ಸುಗಟೂರು ಗ್ರಾಮದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಏಕತಾ ಸಮಾವೇಶದಲ್ಲಿ ರಾಜ್ಯದ 330 ವಾಸವಿ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ನ.14-20ರವರೆಗಿನ ಸಹಕಾರಿ ಸಪ್ತಾಹದಲ್ಲಿ ಸದಸ್ಯತ್ವ ಹೆಚ್ಚಿಸಲು ಚಿಂತನೆ ಸಹಕಾರಿಗಳ ಆತ್ಮವಿಮರ್ಶೆಗೆ ಇದು ಸಕಾಲ-ಬ್ಯಾಲಹಳ್ಳಿ ಗೋವಿಂದಗೌಡ ಕೋಲಾರ:- ಅವಿಭಜಿತ ಜಿಲ್ಲೆಯಲ್ಲಿ ಶೇ.28 ರಷ್ಟಿರುವ ಸಹಕಾರ ಸಂಸ್ಥೆಗಳ ಸದಸ್ಯತ್ವವನ್ನು ಕನಿಷ್ಟ 75ಕ್ಕೇರಿಸುವ ಗುರಿ ತಲುಪಲು ತಮ್ಮ ಪ್ರಾಮಾಣಿಕ ಕೊಡುಗೆ ಏನು ಎಂಬುದರ ಕುರಿತು ಸಹಕಾರಿ ಸಪ್ತಾಹದಲ್ಲಿ ಸಹಕಾರಿಗಳು ಆತ್ಮವಿಮರ್ಶೆ ಮಾಡಿಕೊಳ್ಳಬೇಕು ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಕರೆ ನೀಡಿದರು. ಬುಧವಾರ ಜಿಲ್ಲಾ ಸಹಕಾರಿ ಯೂನಿಯನ್ ಸಭಾಂಗಣದಲ್ಲಿ ಸಹಕಾರಿ ಸಪ್ತಾಹದ ಅಂಗವಾಗಿ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಸಹಕಾರಿ ಸಂಸ್ಥೆಗಳ ಮೂಲಕ ಗೃಹೋಪಯೋಗಿ ವಸ್ತುಗಳ ಮಾರಾಟ ಬಡ್ಡಿರಹಿತ ಕಂತಿನಲ್ಲಿ ತಲುಪಿಸುವ ಪ್ರಯತ್ನ-ಬ್ಯಾಲಹಳ್ಳಿ ಗೋವಿಂದಗೌಡ ಕೋಲಾರ:- ಸಹಕಾರ ಸಂಸ್ಥೆಗಳ ಮೂಲಕ ಗೃಹೋಪಯೋಗಿ ವಸ್ತುಗಳನ್ನು ಬಡ್ಡಿರಹಿತ ಕಂತಿನಲ್ಲಿ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವ ಪ್ರಯತ್ನವನ್ನು ಡಿಸಿಸಿ ಬ್ಯಾಂಕ್ವತಿಯಿಂದ ಸಹಕಾರ ಸಂಘಗಳ ಮೂಲಕ ಕಾರ್ಯಗತಗೊಳಿಸಲು ಮೂಂದಾಗಿರುವುದಾಗಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ತಿಳಿಸಿದರು. ತಾಲ್ಲೂಕಿನ ಅಣ್ಣಿಹಳ್ಳಿ ರೇಷ್ಮೇ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘ ಮತ್ತು ಗೀಮ್ ವೇ ಗ್ರಾಮೀಣಾ ಇಸ್ಪ್ರಾ ಇವರ […]