
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಪೋಲಿಯೋ ಹನಿ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಸಂದೇಶ ಹರಡುತ್ತಿರುವ ಬಗ್ಗೆ. ಕೋಲಾರ : ಸಾಮಾಜಿಕ ಜಾಲ ತಾಣಗಳಲ್ಲಿ ವಾಟ್ಸ್ ಆಫ್ನಲ್ಲಿ ಸೆ. 20 ರಂದು “ ದಯಮಾಡಿ ಬೇಗ ಶೇರ್ ಮಾಡಿ ನಾಳೆ 5 ವರ್ಷದ ಒಳಗೆ ಇರುವ ಮಕ್ಕಳಿಗೆ ಪೋಲಿಯೋ ಕೊಡಿಸಬೇಡಿ. ಅದರಲ್ಲಿ ವೈರಸ್ ಬೆರೆಸಿರುತ್ತದೆ. ಪೋಲಿಯೋ ತಯಾರು ಮಾಡಿದ ಆ ಕಂಪನಿಯ ಯಜಮಾನರನ್ನು ಅರೆಸ್ಟ್ ಮಾಡಿದ್ದಾರೆ. ದಯಮಾಡಿ ಎಲ್ಲರಿಗೂ ತುರ್ತು ಶೇರ್ ಮಾಡಿ ಸತ್ಯ. ಸತ್ಯ. ಸತ್ಯ.” […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಮರಗಳನ್ನು ಬೆಳೆಸುವುದರಿಂದ ಉತ್ತಮ ಪರಿಸರ ನಿರ್ಮಾಣ ಸಾಧ್ಯ ಹೆಚ್.ನಾಗೇಶ್ ಕೋಲಾರ :ಮರಗಳನ್ನು ಬೆಳೆಸುವ ಮೂಲಕ ಉತ್ತಮ ಪರಿಸರವನ್ನು ನಿರ್ಮಾಣ ಮಾಡಬೇಕಾಗಿರುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಅಬಕಾರಿ ಸಚಿವರು ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ನಾಗೇಶ್ ಅವರು ತಿಳಿಸಿದರು. ಇಂದು ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಅರಣ್ಯ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ವೃಕ್ಷೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹೆಚ್ಚು ಹೆಚ್ಚು ಮರಗಳನ್ನು ಬೆಳೆಸುವುದರಿಂದ ಉತ್ತಮ ಮಳೆಯಾಗುತ್ತದೆ. […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ ತಾಲ್ಲೂಕಿನ ಯರ್ರವಾರಿಪಲ್ಲಿ ಗ್ರಾಮದಲ್ಲಿ ಏರ್ಪಡಿಸಿದ್ದ ಪೋಷಣ್ ಅಭಿಯಾನ್ ಕಾರ್ಯಕ್ರಮವನ್ನು ಪಿಡಿಒ ಏಜಾಜ್ ಪಾಷ ಉದ್ಘಾಟಿಸಿದರು. ಶ್ರೀನಿವಾಸಪುರ: ಗರ್ಭಿಣಿ ಮಹಿಳೆಯರು ಪೌಷ್ಟಿಕ ಆಹಾರ ಸೇವನೆ ಮಾಡಬೇಕು. ಅಗತ್ಯವಾದ ಚುಚ್ಚುಮದ್ದು ಪಡೆಯಬೇಕು ಎಂದು ಪಿಡಿಒ ಏಜಾಜ್ ಪಾಷ ಹೇಳಿದರು. ತಾಲ್ಲೂಕಿನ ಯರ್ರವಾರಿಪಲ್ಲಿ ಗ್ರಾಮದಲ್ಲಿ ಸಾರ್ವಜನಿಕ ಆರೋಗ್ಯ ಇಲಾಖೆ, ಗ್ರಾಮ ಪಂಚಾಯಿತಿ, ಅಂಗನವಾಡಿ ವತಿಯಿಂದ ಏರ್ಪಡಿಸಿದ್ದ ಗ್ರಾಮ ಪಂಚಾಯಿತಿ ಮಟ್ಟದ ಪೋಷಣ್ ಅಭಿಯಾನ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಪ್ರದೇಶದ ಗರ್ಭಿಣಿಯರು […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಉಪನಿರ್ದೇಶಕರ ಅಧ್ಯಕ್ಷತೆಯಲ್ಲಿ ಅಂಗನವಾಡಿ ನೌಕರರ ಕುಂದುಕೊರತೆಗಳ ಸಭೆ ಕೋಲಾರ : ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕೀಯರ ಕುಂದುಕೊರತೆಗಳನ್ನು ಚರ್ಚೆ ಮಾಡಲು ಸುಮಾರು 3 ವರ್ಷಗಳಿಂದ ಸಾಧ್ಯವಾಗದೆ ಈ ಹಿಂದೆ ಇದ್ದಂತಹ ಉಪ ನಿರ್ದೇಶಕರು ವಿಳಂಭ ಮಾಡಿದ್ದು, ಇತ್ತೀಚೆಗೆ ಅಧಿಕಾರಿಗಳಾಗಿ ಬಂದಿರುವ ಎಂ.ಜಿ.ಪಾಲಿ ರವರು ಜಿಲ್ಲೆಯ ಅಂಗನವಾಡಿ ನೌಕರರ ಸಂಘಟನೆಗಳ ಮುಖಂಡರುಗಳ ಸಭೆಯನ್ನು ನಡೆಸಿದರು. ಸಭೆಯಲ್ಲಿ ಜಿಲ್ಲೆಯಲ್ಲಿ ಸುಮಾರು 3-4 ವರ್ಷಗಳಿಂದ ಸಮಯಕ್ಕೆ ಸರಿಯಾಗಿ ಅಂಗನವಾಡಿ ನೌಕರರಿಗೆ ಗೌರವ ಧನ ನೀಡುತ್ತಿರಲಿಲ್ಲ. ಮತ್ತು […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಮಾನಸಿಕ ಒತ್ತಡಗಳನ್ನು ಧೈರ್ಯದಿಂದ ಎದುರಿಸುವುದು ಅವಶ್ಯಕ – ಜಾಹ್ನವಿ ಕೋಲಾರ : ಪೊಲೀಸ್ ಇಲಾಖೆಯ ಸಿಬ್ಬಂಧಿಗಳು ಸದಾ ಒಂದಿಲ್ಲೊಂದು ರೀತಿಯ ಮಾನಸಿಕ ಒತ್ತಡಗಳಲ್ಲಿ ಕೆಲಸ ನಿರ್ವಹಿಸಬೇಕಾಗಿದ್ದು ಇದನ್ನು ದೈರ್ಯದಿಂದ ಎದರಿಸುವುದು ಅವಶ್ಯಕ ಎಂದು ಅಪರ ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ಜಾಹ್ನವಿ ಅವರು ತಿಳಿಸಿದರು. ನಗರ ಹೊರವಲಯದಲ್ಲಿನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಘಟಕದ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶಾಸಕರು ಮತ್ತು ಜಿಲ್ಲಾಧಿಕಾರಿಗಳ ಮನವಿ ಮೇರೆಗೆ ಕೋಲಾರ ನಗರ ಬಂದ್ ತಾತ್ಕಾಲಿಕವಾಗಿ ಮುಂದೂಡಿಕೆ ಕೋಲಾರ: ಪ್ರಗತಿಪರ ಸಂಘಟನೆಗಳು ಸೆ.27ರಂದು ಕರೆ ನೀಡಿದ್ದ ಕೋಲಾರ ನಗರ ಬಂದ್ ವಿಚಾರವಾಗಿ ಗುರುವಾರ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಜಿಲ್ಲಾಧಿಕಾರಿ ಜೆ ಮಂಜುನಾಥ್ ಮತ್ತು ಜಿಲ್ಲಾ ರಕ್ಷಣಾಧಿಕಾರಿ ಕಾರ್ತಿಕ್ ರೆಡ್ಡಿ ಹಾಗೂ ಕೋಲಾರ ಶಾಸಕ ಕೆ. ಶ್ರೀನಿವಾಸಗೌಡರ ನೇತೃತ್ವದಲ್ಲಿ ಪ್ರಗತಿಪರ ಸಂಘಟನೆಗಳನ್ನು ಕರೆಯಿಸಿ ನಗರದ ರಸ್ತೆ ಅಗಲೀಕರಣ ಮತ್ತು ಅಭಿವೃದ್ಧಿಗೆ ಮಂಜೂರು ಮಾಡಿದ್ದ ಹಣವನ್ನು ವಾಪಸ್ಸು ಪಡೆದಿದ್ದು, ಆ ಅನುದಾನವನ್ನು […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರದಲ್ಲಿ ಏರ್ಪಡಿಸಿದ್ದ ಸಮರ್ಪಕ ಕಸ ವಿಲೇವಾರಿ ಅರಿವು ಕಾರ್ಯಾಗಾರವನ್ನು ಪುರಸಭೆ ಮುಖ್ಯಾಧಿಕಾರಿ ವಿ.ಮೋಹನ್ ಕುಮಾರ್ ಉದ್ಘಾಟಿಸಿ ಮಾತನಾಡಿದರು. ಶ್ರೀನಿವಾಸಪುರ: ಮನೆಯಲ್ಲಿ ಬೀಳುವ ಕಸವನ್ನು ವಿಂಗಡಿಸಿ ಪೌರ ಕಾರ್ಮಿಕರು ತರುವ ವಾನದಲ್ಲಿ ಹಾಕಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ವಿ.ಮೋಹನ್ ಕುಮಾರ್ ಹೇಳಿದರು. ಪಟ್ಟಣದ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಹಾಗೂ ಪುರಸಭೆಯ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ಸಮರ್ಪಕ ಕಸ ವಿಲೇವಾರಿ ಅರಿವು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿರು. ಪಟ್ಟಣದ ಒಂದು […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ ಕೋಲಾರ : 2019-20ನೇ ಸಾಲಿಗೆ ಎನ್.ಎಸ್.ಪಿ ತಂತ್ರಾಂಶದಲ್ಲಿ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರ ಹಾಗೂ ಮೆರಿಟ್ ಕಂ ಮೀನ್ಸ್ ವಿದ್ಯಾರ್ಥಿವೇತನಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಸಲ್ಲಿಸಿರುವ ಅರ್ಜಿಗಳನ್ನು ಶಾಲಾ/ಕಾಲೇಜು ಹಂತದಲ್ಲಿ ಶಾಲೆ/ಕಾಲೇಜಿನ ಲಾಗಿನ್ನಿಂದ ಅರ್ಜಿಗಳನ್ನು ಪರಿಶೀಲಿಸಿ ಮುಂದಿನ ಹಂತಕ್ಕೆ ಸಲ್ಲಿಸಬೇಕಾಗಿರುತ್ತದೆ. ಎನ್.ಎಸ್.ಪಿ ತಂತ್ರಾಂಶದಲ್ಲಿ ಶಾಲಾ/ಕಾಲೇಜು ನೋಡಲ್ ಅಧಿಕಾರಿಗಳ ನೊಂದಣಿ ಮಾಡುವುದು ಕಡ್ಡಾಯವಾಗಿದ್ದು, ಕೋಲಾರ ಜಿಲ್ಲೆಯ ಎಲ್ಲಾ ಶಾಲೆ/ಕಾಲೇಜಿನ ಮುಖ್ಯೋಪಾದ್ಯಾಯರು ಹಾಗೂ ಪ್ರಾಂಶುಪಾಲರು ತಮ್ಮ ತಮ್ಮ ಶಾಲೆ/ಕಾಲೇಜುಗಳ […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಋಣ ಮುಕ್ತ ಕಾಯ್ದೆಯಡಿ ಅರ್ಜಿಗಳನ್ನು ಸಲ್ಲಿಸಲು ಅ 22 ಕೊನೆಯ ದಿನ – ಸೋಮಶೇಖರ್ ಕೋಲಾರ : ಋಣ ಮುಕ್ತ ಕಾಯ್ದೆಯಡಿ ಅರ್ಜಿಗಳನ್ನು ಸಲ್ಲಿಸಲು ಅಕ್ಟೋಬರ್ 22 ಕೊನೆಯ ದಿನವಾಗಿದ್ದು ಅರ್ಹರು ಸೂಕ್ತ ದಾಖಲೆಗಳೊಂದಿಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಉಪವಿಭಾಗಾಧಿಕಾರಿಯಾದ ಸೋಮಶೇಖರ್ ಅವರು ತಿಳಿಸಿದರು. ಇಂದು ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಕಂದಾಯ ಇಲಾಖೆ ಹಾಗೂ ತಾಲ್ಲೂಕು ಕಚೇರಿಯ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಋಣ ಮುಕ್ತ ಕಾಯ್ದೆ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, […]