ಬೆಂಗಳೂರು,ಜು.16: ರಾಜ್ಯದಲ್ಲಿ ಮುಂಗಾರು ಮಾರುತ ಪ್ರಭಾವ ಹೆಚ್ಚುತ್ತಲಿದ್ದು ಚುರುಕುಗೊಂಡಿದ್ದು ಎಲ್ಲೆಡೆ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಕರಾವಳಿ ಮತ್ತು ಮಲೆನಾಡಿನ ಆರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಮುಂದಿನ 24 ಗಂಟೆಗಳ ಕಾಲ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಮತ್ತು ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಸನ ಜಿಲ್ಲೆಗೆ ಆರೇಂಜ್ ಅಲರ್ಟ್ ನೀಡಲಾಗಿದೆ. ಇನ್ನು ಉತ್ತರ ಒಳನಾಡಿನ ಬೆಳಗಾವಿ, ಬೀದರ್, ರಾಯಚೂರು, […]

Read More

ಕಾರವಾರ: ಕುಮಟಾ- ಕಾರವಾರ ಮಧ್ಯೆ ಹೆದ್ದಾರಿಯ ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿದ ಏಳು ಜನರ ಪೈಕಿ ಶಾಂತಾ ನಾಯ್ಕ ಎಂಬ ಮಹಿಳೆಯ ಶವ ಪತ್ತೆಯಾಗಿದೆ. ಇಂದು ಬೆಳಗಿನ ಜಾವ 8-45 ಕ್ಕೆ ಧರೆ ಕುಸಿದಿತ್ತು. ಕರಾವಳಿಯಲ್ಲಿ ಸುರಿದ ಭಾರೀ ಮಳೆಗೆ ರಸ್ತೆ ಪಕ್ಕದ ಗುಡ್ಡ ಕುಸಿಯಿತು. ಅಂಕೋಲಾ ತಾಲೂಕಿನ ಶಿರೂರು ರಾಷ್ಟ್ರೀಯ ಹೆದ್ದಾರಿ ಪಕ್ಕದ ಇದ್ದ ಟೀ ಸ್ಟಾಲ್ ಹಾಗೂ ಮನೆಯ ಮೇಲೆ ಅಪಾರ ಪ್ರಮಾಣದ ಮಣ್ಣು ಬಿದ್ದು, ಚಹಾ ಅಂಗಡಿಯಲ್ಲಿ ಇದ್ದ ಏಳು ಜನ ಮಣ್ಣಿನ […]

Read More

ಕುಂದಾಪುರ:ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು,  ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗ್ರತಾ ಕ್ರಮವಾಗಿ, ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ನಾಳೆ ದಿನಾಂಕ 16.07.2024ರಂದು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಶಾಲೆ ,ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಐಟಿಐ ಕಾಲೇಜುಗಳಿಗೆ ರಜೆ ಘೋಷಿಸಿರುವುದಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ […]

Read More

ಕುಂದಾಪುರ,ಜು.15; ಜನನುಡಿ ಸುದ್ದಿ ಸಂಸ್ಥೆ ಆಶ್ರಯದಲ್ಲಿ ನಡೆದ 23-24 ರ ಮುದ್ದು ಯೇಸು ಸ್ಫರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣ ಕಾರ್ಯಕ್ರಮವನ್ನು ಎರಡು ಕಡೆಗಳಲ್ಲಿ ಮಾಡಲಾಯಿತು. ಮೊದಲು ಜು,11 ರಂದು ಕಟ್ಕೆರೆ ಬಾಲ ಯೇಸು ಆಶ್ರಮದ ಪ್ರಾರ್ಥನ ಮಂದಿರದಲ್ಲಿ ಮತ್ತು ಜು. 14 ರಂದು ರೋಜರಿ ಚರ್ಚ್ ಸಭಾಭವನದಲ್ಲಿ ನಡೆಯಿತು.ಕಟ್ಕೆರೆ ಬಾಲ ಯೇಸು ಆಶ್ರಮದ ಪ್ರಾರ್ಥನ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಶ್ರಮದ ಮುಖ್ಯಸ್ಥರಾದ ವಂ|ಧರ್ಮಗುರು ಪ್ರವೀಣ್ ಪಿಂಟೊ ಮತ್ತು ವಂ|ಧರ್ಮಗುರು ಜೊಸ್ವಿ ಸಿದ್ದಕಟ್ಟೆ ಬಹುಮಾನ ವಿತರಣೆಯನ್ನು ಮಾಡಿದರು.ಕುಂದಾಪುರ ರೋಜರಿ […]

Read More

ಉಡುಪಿ: ವಂ|ವಲೇರಿಯನ್ ಮೆಂಡೊನ್ಸಾ ಅವರ ನಿಧನದಿಂದ ತೆರವಾದ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ಇದರ ರೆಕ್ಟರ್ ಹಾಗೂ ಧರ್ಮಗುರುಗಳಾಗಿ ಉಡುಪಿ ಧರ್ಮಪ್ರಾಂತ್ಯದ ಶ್ರೇಷ್ಠಗುರು ಮೊನ್ಸಿಂಜ್ಞೊರ್ ಫರ್ಡಿನಾಂಡ್ ಗೊನ್ಸಾಲ್ವಿಸ್ ಅವರನ್ನು ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ನೇಮಕಗೊಳಿಸಿದ್ದಾರೆ. ಅವರು ಧರ್ಮಪ್ರಾಂತ್ಯದ ಶ್ರೇಷ್ಠ ಗುರುವಿನ ಹುದ್ದೆಯೊಂದಿಗೆ ಮಿಲಾಗ್ರಿಸ್ ಕ್ಯಾಥೆಡ್ರಲ್ ಇದರ ರೆಕ್ಟರ್, ಧರ್ಮಗುರು ಹಾಗೂ ಕಲ್ಯಾಣಪುರ ವಲಯದ ಪ್ರಧಾನ ಧರ್ಮಗುರುಗಳಾಗಿ ಹೆಚ್ಚುವರಿ ಹುದ್ದೆಯನ್ನು ನಿರ್ವಹಿಸಲಿದ್ದಾರೆ.ಇವರ ಅಧಿಕಾರ ಸ್ವೀಕಾರ ಸಮಾರಂಭವು ಜುಲೈ 13 ರಂದು ಶನಿವಾರ ಮಧ್ಯಾಹ್ನ 3.30 ಕ್ಕೆ ಕ್ಯಾಥೆಡ್ರಲ್ […]

Read More

ಶ್ರೀನಿವಾಸಪುರ : ಕರ್ನಾಟಕ ರಾಜ್ಯದ ಕೃಷಿ ರಂಗದಲ್ಲಿ ಹೈನುಗಾರಿಕೆ ಕ್ಷೇತ್ರ ಪ್ರಮುಖ ಪಾತ್ರ ನಿರ್ವಹಿಸುತ್ತಿದೆ. ಹೈನುಗಾರಿಕೆ ಬಹುತೇಕ ರೈತಾಪಿ-ಕೃಷಿ ಕೂಲಿಕಾರರ ಕುಟುಂಬಗಳ ಆರ್ಥಿಕ ಮೂಲವು ಆಗಿದೆ. ಮಹಿಳೆಯರ ಶ್ರಮವೇ ಪ್ರಧಾನವಾಗಿರುವ ಈ ಹೈನುಗಾರಿಕೆಯು ಆನೇಕ ಬಿಕ್ಕಟ್ಟುಗಳನ್ನು ಎದುರುಸುತ್ತಿದೆ ಎಂದು ರಾಜ್ಯ ಹಾಲು ಉತ್ಪಾದಕರ ರೈತರ ಕ್ಷೇಮಾಭಿವೃದ್ಧಿ ಸಂಘ ಸಂಚಾಲಕ ಪಿ.ಆರ್.ಸೂರ್ಯನಾರಾಯಣ ಒತ್ತಾಯಿಸಿದರು.ಪಟ್ಟಣದ ಕೋಚಿಮುಲ್ ಶ್ರೀನಿವಾಸಪುರ ತಾಲೂಕು ಶಾಖಾ ಘಟಕದ ಮುಂಭಾಗ ಸೋಮವಾರ ಕರ್ನಾಟಕ ರಾಜ್ಯ ಹಾಲು ಉತ್ಪಾದಕರ ರೈತರ ಕ್ಷೇಮಾಭಿವೃದ್ಧಿ ಸಂಘ ಹಾಗು ಕರ್ನಾಟಕ ಪ್ರಾಂತ ರೈತ […]

Read More
1 21 22 23 24 25 194