ಕುಂದಾಪುರ -ನವೆಂಬರ್ 16ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಬಿಸಿನೆಸ್ ಮ್ಯಾನೇಜಮೆಂಟ್ ವಿಭಾಗದ ಆಶ್ರಯದಲ್ಲಿ ಒಂದು ದಿನದ ಆರಂಭ -23 ಕಾರ್ಯಕ್ರಮದಡಿ “ಬ್ರ್ಯಾಂಡ್ ವಿಸ್ಟಾ” ಪ್ರದರ್ಶನ ಮತ್ತು ವ್ಯಾಪಾರ ಮೇಳ ನಡೆಯಿತು. ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಹಿರಿಯ ಸದಸ್ಯರಾದ ಕೆ. ಶಾಂತಾರಾಮ್ ಪ್ರಭು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಇಂತಹ ಪಾಠಪೂರಕ ಸೃಜನಶೀಲ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಹೊಸ ಉತ್ಸಾಹವನ್ನು ತುಂಬುತ್ತದೆ. ಪ್ರಾಯೋಗಿಕವಾಗಿ ಕಲಿಯಲು ಸಾಕಷ್ಟು ಅವಕಾಶಗಳನ್ನು ಒದಗಿಸುತ್ತದೆ ಎಂದು ಹೇಳಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮೋದಿಕೇರ್ ಇದರ […]
ಬೆಂಗಳೂರು: ಉದ್ಯಮಿಗೆ ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ವಿಚಾರಣೆ ವೇಳೆ ಕುಂದಾಪುರ ನಿವಾಸಿ ಚೈತ್ರಾ ತಪ್ಪೊಪ್ಪಿಗೆ ನೀಡಿದ್ದಾರೆ.2018ರಲ್ಲಿ ಅಭಿನವ ಹಾಲಶ್ರೀಯನ್ನು ಭೇಟಿ ಮಾಡಿದ್ದೆ. ನನಗೂ ಬಿಜೆಪಿಯ ಕೆಲ ನಾಯಕರು ಗೊತ್ತಿದ್ರಿಂದ ಅಭಿನವ ಹಾಲಶ್ರೀ ನನಗೆ ಒಂದು ಮಾತು ಹೇಳಿದ್ರು. ಈಗಾಗಲೇ 10 ಜನರ ಪೈಕಿ 6 ಜನರಿಗೆ ಟಿಕೆಟ್ ಕೊಡಿಸಿದ್ರು. ಇನ್ನು 4 ಜನರಿಗೆ ಟಿಕೆಟ್ ಕೊಡಿಸ್ತೀನಿ ಅಂತ ಹೇಳಲಾಗಿತ್ತು. ಬಿಜೆಪಿಯ ಟಿಕೆಟ್ ಯಾರಿಗಾದ್ರೂ ಬೇಕು ಅಂದ್ರೆ ನನಗೆ ಹೇಳಿ ಟಿಕೆಟ್ ಕೊಡಿಸ್ತೀನಿ ಅಂದಿದ್ರು. […]
ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ತಪಾಸಣೆ ವೇಳೆ ಕಸ್ಟಮ್ ಅಧಿಕಾರಿಗಳಿಂದ 1.26 ಕೋಟಿ ಮೌಲ್ಯದ ಚಿನ್ನ ವಶಕ್ಕೆ ಪಡೆದುಕೊಂಡಿದ್ದಾರೆ. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 2 ಕೆಜಿ ಚಿನ್ನವನ್ನು ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಗುರುವಾರ ತಡರಾತ್ರಿ ಬ್ಯಾಂಕಾಕ್‌ನಿಂದ ಬಂದ ಮೂವರು ಪ್ರಯಾಣಿಕರು ಮತ್ತು ಕೊಲಂಬೋದಿಂದ ಬಂದ ಇಬ್ಬರು ಮಹಿಳಾ ಪ್ರಯಾಣಿಕರ ತಪಾಸಣೆ ವೇಳೆ ದಾಖಲೆ ಇಲ್ಲದ ಚಿನ್ನ ಪತ್ತೆ ಆಗಿತ್ತು. ಚಿನ್ನದ ಸರಗಳನ್ನ ಅಂಗಿಯ ಕಾಲರ್ ಹಾಗೂ ಒಳ ಉಡುಪಿನಲ್ಲಿ ಬಚ್ಚಿಟ್ಟಿಕೊಂಡು […]
ಐಡಿಯಲ್ ಪ್ಲೇ ಅಭಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ನಡೆದ 18ನೇ ರಾಜ್ಯ ಮಟ್ಟದ ಅಭಾಕಸ್ ಮತ್ತು ವೇದಿಕ್ ಮಾಥ್ಸ್ ಸ್ಪರ್ಧೆಯು ಹಾಸನದಲ್ಲಿ ನಡೆಯಿತು . ರಾಜ್ಯ ವಿವಿಧ ಪ್ರದೇಶದಿಂದ ಸುಮಾರು 1600 ವಿದ್ಯಾರ್ಥಿಗಳು ವಗವಿಹಿಸದ್ದರು. ಇದರಲ್ಲಿ ಕುಂದಾಪುರ ಸೆಂಟರ್ ನ 67 ವಿದ್ಯಾರ್ಥಿಗಳಲ್ಲಿ 6 ಪ್ರಥಮ ಬಹುಮಾನ, 16 ದ್ವಿತೀಯ ಬಹುಮಾನ ಮತ್ತು 18 ತೃತಿಯ ಬಹುಮಾನ ವಿವಿಧ ವಿಭಾಗದಲ್ಲಿ ಪಡಿದ್ದಾರೆ. ಇವರಿಗೆ ಐಡಿಯಲ್ ಪ್ಲೇ ಅಭಾಕಸ್ ಕುಂದಾಪುರ ಸೆಂಟರ್ ನ ಬೋಧಕರಾದ ಮಹಾಲಕ್ಷ್ಮಿ, ದೀಪ, […]
ಬೆಂಗಳೂರು : ನಾಯಿ ಕಡಿತದಿಂದ ಮೃತಪಟ್ಟರೇ 5 ಲಕ್ಷ ರೂ. ಪರಿಹಾರ ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ನಾಯಿ ಕಡಿತದಿಂದ ಗಾಯಗೊಂಡವರಿಗೆ 5 ಸಾವಿರ ರೂ. ಮತ್ತು ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರ ನೀಡಬೇಕೆಂದು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.ವಕೀಲ ರಮೇಶ್ ಎಲ್ ನಾಯಕ್ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ, ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠವು ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ […]
ಚಿಕ್ಕಬಳ್ಳಾಪುರ: ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಏಕಾಏಕಿಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡಘಟನೆ ಮುನ್ಸಿಪಾಲ್ ಕಾಲೇಜಿನ ಮುಂಭಾಗದ ಫರ್ಜಾನಾ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದೆ. ಮನೆ ಮಾಲೀಕೆಯಾದ ಫರ್ಜಾನಾ ಕೆಲಸಕ್ಕೆ ತೆರಳಿದ್ದ ವೇಳೆ ಅವರ ಮಗ ರಫೀಕ್ (4) ಹಾಗೂ ಮಗಳು ಹರ್ಷಿಯಾ ಭಾನು (10) ಮನೆಯಲ್ಲಿದ್ದರು. ಈ ವೇಳೆ ಮನೆಯಿಂದ ಗ್ಯಾಸ್‌ವಾಸನೆ ಬರುತ್ತಿದೆ ಎಂದು ಪಕ್ಕದ ಮನೆಯ ಹೇಮಾವತಿ (8) ಎಂಬಾಕೆ ಬಂದಿದ್ದಾಳೆ ಇದೇ ವೇಳೆ ತಕ್ಷಣ ಬೆಂಕಿ ಹೊತ್ತಿಕೊಂಡಿದ್ದು ಸಿಲಿಂಡರ್ ಸ್ಫೋಟ […]
ಉಡುಪಿ: ಉಡುಪಿಯ ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ, ಉಡುಪಿ ಪೊಲೀಸರು ಬೆಳಗಾವಿ ಪೊಲೀಸರ ಸಹಕಾರದಿಂದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳಗಾವಿಯ ಕುಡುಚಿಯಲ್ಲಿ ಬಂಧಿಸಿದ ಉಡುಪಿ ಪೊಲೀಸರು ಪ್ರವೀಣ್ ಅರುಣ್ ಚೌಗಲೆ ಎಂಬಾತನನ್ನು ಬಂಧಿಸಿದ್ದಾರೆ. ಈತ ಮಂಗಳೂರು ಏರ್ ಏರ್‌ಪೋರ್ಟ್ ಸೆಕ್ಯೂರಿಟಿಯಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಸಿಆರ್ ಪಿಎಫ್ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಆರೋಪಿ ಮಹಾರಾಷ್ಟ್ರ ಸಾಂಗ್ಲಿ ಮೂಲದವನಾಗಿದ್ದಾನೆ ಎನ್ನಲಾಗಿದೆ. ಕುಡಚಿಯಲ್ಲಿರುವ […]
ಉಡುಪಿ: ಜಿಲ್ಲೆಯನ್ನೇ ಬೆಚ್ಚಿಬೀಳಿಸಿದ ನೆಜಾರಿನ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಉಡುಪಿ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಆರೋಪಿಯನ್ನು ಉಡುಪಿ ಡಿವೈಎಸ್‌ಪಿ ದಿನಕರ್ ಪಿ. ನೇತೃತ್ವದ ತಂಡ ಕೇರಳದ ಕೊಟ್ಟಾಯಂನಲ್ಲಿ ವಶಕ್ಕೆ ಪಡೆಯುವ ಸಾಧ್ಯತೆ ಇದೆಂದು ಪೊಲೀಸ್ ಮೂಲಗಳು ಖಚಿತಪಡಿಸಿವೆ. ಸೇಜಾರು ತೃಪ್ತಿ ಲೇಔಟ್‌ನಲ್ಲಿ ರವಿವಾರ ನಡೆದ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಸಿಸಿಟಿವಿ ಜಾಡು ಹಿಡಿದು ತನಿಖೆಯನ್ನು ಚುರುಕುಗೊಳಿಸಿದ್ದರು. ಕೊಲೆಗೈದ ಬಳಿಕ ಹಂತಕ […]
ಕುಂದಾಪುರದ ವಿಠಲವಾಡಿಯ “ಡೌನ್ ಟೌನ್” ನ ಪಂಚಗಂಗಾವಳಿ ತೀರದಲ್ಲಿ ದೀಪಾವಳಿಯ ದಿನ ಭಾನುವಾರ ಮುಂಜಾನೆ ಶಾಸ್ತ್ರೀಯ ಭಾವ ಸಂಗೀತ ಲಹರಿ ಕಾರ್ಯಕ್ರಮ ಸಂಗೀತ ಪ್ರಿಯರಿಗೆ ಆನಂದ ಉಂಟು ಮಾಡಿತು. ಸಂಗೀತ ಭಾರತಿ ಟ್ರಸ್ಟ್ ಕುಂದಾಪುರ ಹಾಗೂ ಗೋರಕ್ಷಾ ಗೋಕುಲಧಾಮ ಟ್ರಸ್ಟ್ ಕೋಟೇಶ್ವರದ ಜಂಟಿ ಆಶ್ರಯದಲ್ಲಿ ಡೌನ್ ಟೌನ್ ನದಿ ತೀರದಲ್ಲಿ ಅಭಿವೃದ್ಧಿ ಪಡಿಸಿದ ಹಸಿರು ಉದ್ಯಾನವನದಲ್ಲಿ, ಖ್ಯಾತ ಸಂಗೀತಗಾರ ಸಿದ್ಧಾರ್ಥ ಬೆಳ್ಮಣ್ಣು ಶುಶ್ರಾವ್ಯವಾಗಿ ಹಾಡಿದರು. ಈ ಶಾಸ್ತ್ರೀಯ ಸಂಗೀತ, ಭಕ್ತಿ ಸಂಗೀತ ಕಾರ್ಯಕ್ರಮದಲ್ಲಿ ಹಾರ್ಮೋನಿಯಂನಲ್ಲಿ ಪ್ರಸಾದ್ ಕಾಮತ್ […]