ಉಡುಪಿ: ಕೇಂದ್ರ ಮಾಜಿ ಸಚಿವ ದಿ. ಆಸ್ಕರ್‌ ಫೆರ್ನಾಂಡಿಸ್‌ ಪ್ರಥಮ ಪುಣ್ಯತಿಥಿಯನ್ನು ರೋಗಿಗಳಿಗೆ ಹಣ್ಣುಹಂಪಲು ವಿತರಿಸುವ ಮೂಲಕ ಸೆಪ್ಟಂಬರ್ 13 ರಂದು ಉಡುಪಿ ಜಿಲ್ಲೆಯ ಆಸ್ಕರ್‌ ಫೆರ್ನಾಂಡಿಸ್‌ ಅಭಿಮಾನಿ ಬಳಗವರು ಆಚರಿಸಿದರು. ಉಡುಪಿಯ ಅಜ್ಜರಕಾಡು ಸರಕಾರಿ ಆಸ್ಪತ್ರೆ ಹಾಗೂ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು.     ಈ ಸಂದರ್ಭದಲ್ಲಿ ಮಾಜಿ ಸಚಿವ ವಿನಯ ಕುಮಾರ್‌ ಸೊರಕೆ, ಆಸ್ಕರ್‌ ಫರ್ನಾಂಡಿಸ್‌ ಅಭಿಮಾನಿ ಬಳಗ ಗೌರವ ಅಧ್ಯಕ್ಷ ರೊನಾಲ್ಡ್‌ ಮನೋಹರ್‌ ಕರ್ಕಡ, ಪ್ರಮುಖರಾದ ಮಂಜಿತ್‌ […]

Read More

2021-22 ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯ ನೋಟೀಸುಸನ್ಮಾನ್ಯ ಸದಸ್ಯರೇ,ನಮ್ಮ ಸಂಘದ 2021-22 ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯು ದಿನಾಂಕ 24-09-2022ನೇ ಶನಿವಾರ ಮಧ್ಯಾಹ್ನ ಗಂಟೆ 3:00ಕ್ಕೆ ಅಧ್ಯಕ್ಷರಾದ ಶ್ರೀ ಎಸ್. ಜನಾರ್ಧನ ಇವರ ಅಧ್ಯಕ್ಷತೆಯಲ್ಲಿ ಸಂಘದ ಆವರಣದಲ್ಲಿ ನಡೆಯಲಿದೆ. ಮಾನ್ಯ ಸದಸ್ಯರು ತಪ್ಪದೇ ಸಕಾಲದಲ್ಲಿ ಹಾಜರಾಗಲು ಕೋರಲಾಗಿದೆ.

Read More

ಯಾರು ಶ್ರೇಷ್ಠ ವ್ಯಕ್ತಿಗಳಾಗಿರುತ್ತಾರೋ ಅವರೆಲ್ಲಾ ತುಂಬಾ ಸಂಸ್ಕಾರವಂತರು, ಮೌಲ್ಯವಂತರು ಆಗಿರುತ್ತಾರೆ ಎಂದು ಶ್ರೀಮತಿ ಭೀಮವ್ವ ಅಧ್ಯಕ್ಷರು ಗ್ರಾಮ ಪಂಚಾಯತ್ ತಲ್ಲೂರು ಅವರು ಇತ್ತೀಚೆಗೆ ಅಭಿವೃದ್ಧಿ ಸಂಸ್ಥೆ (ರಿ) ಬಾಳ್ಕುದ್ರು ಹಂಗಾರಕಟ್ಟೆ ಗ್ರಾಮ ಪಂಚಾಯತ್ ತಲ್ಲೂರು ಸರಕಾರಿ ಪ್ರೌಢಶಾಲೆ ಉಪ್ಪಿನಕುದ್ರು ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸಂಯುಕ್ತ ಆಶ್ರಯದಲ್ಲಿ ಒಂದು ದಿನದ “ವ್ಯಕ್ತಿತ್ವ ವಿಕಸನ ಮತ್ತು ಜೀವನ ಮೌಲ್ಯಗಳು” ಎಂಬ ಕಾರ್ಯಕ್ರಮ ಉದ್ಘಾಟಿಸಿ ಮಾತಾಡಿದರು. ಸಭಾದ್ಯಕ್ಷತೆಯನ್ನು ಶ್ರೀ ಉಮೇಶ್ ಮೊಗವೀರ ಅಧ್ಯಕ್ಷರು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ […]

Read More

ಕುಂದಾಪುರ: ದಿನಾಂಕ 10.9.22 ರಂದು ಭಾರತೀಯ ವೈದ್ಯಕೀಯ ಸಂಘ (I M A) ಯ ರಾಜ್ಯಾಧ್ಯಕ್ಷರಾದ ಸುರೇಶ್ ಕುಡ್ವರು ಕುಂದಾಪುರ ಶಾಖೆಯ ತಮ್ಮ ಅಧಿಕೃತ ಭೇಟಿ ಗಾಗಿ ಆಗಮಿಸಿದ್ದರು.ಅವರೊಂದಿಗೆ ಜೊತೆ ಕಾರ್ಯದರ್ಶಿಗಳಾದ ವೈ . ಎಸ್ . ರಾವ್ ಅವರೂ ಆಗಮಿಸಿದ್ದರು .ಸಮಾರಂಭವು ಗಿಳಿಯಾರ ಕುಶಾಲ್ ಹೆಗ್ಡೆ ರೋಟರಿ ಭವನದಲ್ಲಿ ನಡೆಯಿತು. ರಾಜ್ಯಾಧ್ಯಕ್ಷರು ima ಯ ವಿವಿಧ ಕಾರ್ಯಕ್ರಮ ಗಳ ಮಹತ್ವ ದ ಬಗ್ಗೆ ವಿಶೇಷ ಮಾಹಿತಿ ನೀಡಿದರು.ಎಲುಬು ಕೀಲು ಶಸ್ತ್ರ ಚಿಕಿತ್ಸಕ ತಜ್ಞ Dr ಸಂದೀಪ […]

Read More

ಶಿಕ್ಷಕರ ದಿನಾಚರಣೆಯ ಪ್ರಯುಕ್ತ 92 ವಯಸ್ಸಿನ ಆದರ್ಶ ಶಿಕ್ಷಕರಾದ, ಸ್ವತಃ ತಾವೇ ಜಪ್ತಿ ಗ್ರಾಮದಲ್ಲಿ ಶ್ರೀ ರಾಮಚಂದ್ರ ವಿದ್ಯಾಲಯವನ್ನು ಸ್ಥಾಪಿಸಿ, ಬೆಳೆಸಿದ ಶ್ರೀ ಸುಬ್ರಾಯ ಉಡುಪ ಬಳ್ಕೂರು ಇವರನ್ನು ರೋಟರಿ ಕುಂದಾಪುರ ದಕ್ಷಿಣದ ವತಿಯಿಂದ ಅವರ ಸ್ವಗೃಹದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಅಧ್ಯಕ್ಷ ಸತ್ಯನಾರಾಯಣ ಪುರಾಣಿಕ, ಕಾರ್ಯದರ್ಶಿ ಸಚಿನ್ ನಕ್ಕತ್ತಾಯ, ಕೆ.ಪಿ.ಭಟ್ ಹಾಗೂ ಮನೋಹರ ಪಿ ಉಪಸ್ಥಿತರಿದ್ದರು.

Read More

ಕುಂದಾಪುರ:ರೆಡ್ ಕ್ರಾಸ್ ಒಂದು ಸಮಾಜಸೇವೆ ಸಂಸ್ಥೆಯಾಗಿದ್ದು ವಿದ್ಯಾರ್ಥಿಗಳು ರೆಡ್ ಕ್ರಾಸ್ ನಲ್ಲಿ ಸಕ್ರೀಯವಾಗಿ ಭಾಗವಹಿಸಬೇಕು ಎಂದು ಕುಂದಾಪುರ ರೆಡ್ ಕ್ರಾಸ್ ಚೇರ್ಮನ್ ಜಯಕರ್ ಶೆಟ್ಟಿ ಹೇಳಿದರು.ಅವರು ಕುಂದಾಪುರ ಸೈಂಟ್ ಮೇರಿಸ್ ಪ್ರೌಢಶಾಲೆಯಲ್ಲಿ ಕಿರಿಯ ರೆಡ್ ಕ್ರಾಸ್ ಘಟಕ ಉದ್ಘಾಟಿಸಿ ಮಾತನಾಡಿದರು.ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕಿ ಅಸುಂತಾ ಲೋಬೋ ವಹಿಸಿದ್ದರು.ಇದೇ ಸಂದರ್ಭದಲ್ಲಿ ಕಿರಿಯ ರೆಡ್ ಕ್ರಾಸ್ ಘಟಕದ ಅಧ್ಯಕ್ಷೆ ಕು.ಅರ್ಚನಾ ಸೇರಿದಂತೆ ಒಟ್ಟು 52 ವಿದ್ಯಾರ್ಥಿಗಳು ರೆಡ್ ಕ್ರಾಸ್ ಪ್ರತಿಜ್ಞೆ ಸ್ವೀಕರಿಸಿದರು.ಕುಂದಾಪುರ ಜೂನಿಯರ್ ರೆಡ್ ಕ್ರಾಸ್ ಸಂಯೋಜಕ […]

Read More

ಕುಂದಾಪುರ: ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ಇಲ್ಲಿ ರೆಡ್‌ ಕ್ರಾಸ್‌ ಸಂಸ್ಥೆ ಕುಂದಾಪುರ ಇವರಿಂದ ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪದವಿಪೂರ್ವ ವಿದ್ಯಾರ್ಥಿಗಳಿಗಾಗಿ ಯೂತ್‌ ರೆಡ್‌ ಕ್ರಾಸ್‌ ಘಟಕವನ್ನು ಕುಂದಾಪುರ ರೆಡ್‌ ಕ್ರಾಸ್‌ ಸಂಸ್ಥೆ ಅಧ್ಯಕ್ಬರಾದ ಶ್ರೀ ಜಯಕರ ಶೆಟ್ಟಿ ಉದ್ಭಾ, ಟಸಿದರು. ಕಾಲೇಜಿನ ಪ್ರಾಂಶುಪಾಲರಾದ ಶ್ರಿ ರಾಮಕೃಷ್ಣ ಬಿ.ಜಿ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ರೆಡ್‌ ಕ್ರಾಸ್‌ ಸಂಸ್ಥೆಯ ಕಾರ್ಯದರ್ಶಿ ಶ್ರೀ ಸೀತಾರಾಮ ಶೆಟ್ಟಿ, ಕೋಶಾಧಿಕಾರಿ ಶ್ರೀ ಶಿವರಾಮ ಶೆಟ್ಟಿ, ಕಾರ್ಯಕಾರಿಣಿ ಸದಸ್ಯರಾದ ಶ್ರೀ […]

Read More

2021-22 ನೇ ಸಾಲಿನ ನೀಟ್ ಪರೀಕ್ಷೆಯಲ್ಲಿ ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾದ ಪಲ್ಲವಿ. ಪಿ ಇವರು 97.84 ಪರ್ಸೆಂಟೈಲ್ ಪಡೆದಿರುತ್ತಾಳೆ..ಪಲ್ಲವಿ ಯ ಈ ಉತ್ಕೃಷ್ಟ ಸಾಧನೆಯನ್ನು ಶ್ಲಾಘಿಸಿ ಕಾಲೇಜಿನ‌ ಸಂಚಾಲಕರಾದ ಶ್ರೀ ಸುಕುಮಾರ್ ಶೆಟ್ಟಿಯವರು,  ಕಾಲೇಜಿನ ಆಡಳಿತ ಮಂಡಳಿ ಕುಂದಾಪುರ ಎಜುಕೇಶನ್ ಸೊಸೈಟಿ, ಪ್ರಾಂಶುಪಾಲರು ಹಾಗೂ ಅಧ್ಯಾಪಕ ವೃಂದದವರು ಅಭಿನಂದನೆ ಸಲ್ಲಿಸಿರುತ್ತಾರೆ. 

Read More