
ಕುಂದಾಪುರ: ಜನವರಿ 18ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ರೆಡ್ ಕ್ರಾಸ್ ಸಂಸ್ಥೆಯ ಕುಂದಾಪುರ ಘಟಕ, ಕಾಲೇಜಿನ ಯುಥ್ ರೆಡ್ ಕ್ರಾಸ್, ಎನ್.ಎಸ್.ಎಸ್, ಎನ್.ಸಿ.ಸಿ ಮತ್ತು ರೇಂಜರ್ಸ್ ಮತ್ತು ರೋವರ್ಸ್ ಇವರ ಸಂಯುಕ್ತಾಶ್ರಯದಲ್ಲಿ ರಕ್ತ ದಾನ ಶಿಬಿರ ನಡೆಯಿತು.ಕಾರ್ಯಕ್ರಮವನ್ನು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕುಂದಾಪುರ ಘಟಕದ ಅಧ್ಯಕ್ಷರಾದ ಜಯಕರ ಶೆಟ್ಟಿ ಉದ್ಘಾಟಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ ಎನ್.ಪಿ.ನಾರಾಯಣ ಶೆಟ್ಟಿ ವಹಿಸಿದ್ದರು.ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕುಂದಾಪುರ ಘಟಕದ […]

ಕೋಟ: ಬೀಜಾಡಿ ಗೋಪಾಡಿ ಮಿತ್ರ ಸಂಗಮದ 25 ಸಾರ್ಥಕ ವಸಂತಗಳ ಸಂಭ್ರಮಾಚರಣೆ “ರಜತಪಥ” ನೆರಳು ಬೆಳಕಿನ ಸಹಯಾನ ಫೆ. 03ರಿಂದ 05 ತನಕ ನಡೆಯಲಿದ್ದು, ಈ ಪ್ರಯುಕ್ತ ರಜತ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಸೋಮವಾರ ಜರಗಿತು.ಹೋಟೆಲ್ ಉದ್ಯಮಿ, ದಾನಿ ರಾಮಚಂದ್ರ ರಾವ್ ಮೂಡುಗೋಪಾಡಿ ಆಮಂತ್ರಣ ಬಿಡುಗಡೆಗೊಳಿಸಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲಿ ಎಂದು ಶುಭಹಾರೈಸಿದರು. ಈ ಸಂದರ್ಭದಲ್ಲಿ ಜಾನಕಿ ರಾಮಚಂದ್ರ ರಾವ್, ವೀಣಾಅನೂಪ್ ಕುಮಾರ್, ಮಿತ್ರ ಸಂಗಮದ ಉಪಾಧ್ಯಕ್ಷ ನಾಗರಾಜ ಬೀಜಾಡಿ, ಪ್ರಧಾನ ಕಾರ್ಯದರ್ಶಿ ರಾಜೇಶ್ […]

ಎಐಸಿಸಿ ಕಾರ್ಯದರ್ಶಿ ಕೇರಳ ಶಾಸಕ ರೋಜಿ ಎಂ. ಜಾನ್ ಮತ್ತು ಕೆಪಿಸಿಸಿ ಕಾರ್ಯಾದ್ಯಕ್ಷ ಶ್ರೀ ಆರ್ . ದ್ರುವ ನಾರಾಯಣರವರು ಶ್ರೀ. ಕೆ. ಪ್ರತಾಪಚಂದ್ರ ಶೆಟ್ಟಿಯವರ ನಿವಾಸಕ್ಕೆ ಬೇಟಿ ನೀಡಿದರು. ನಾಯಕರು ಈ ಸಂದರ್ಭದಲ್ಲಿ ಪ್ರಜಾಧ್ವನಿ ಸಮಾವೇಶ ಯಶಸ್ವಿ ಕುರಿತು ಮತ್ತು ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಕುರಿತು ಚರ್ಚಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕುಮಾರ ಕೊಡವೂರ ,ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಕಾನ್ಮ ಕ್ಕಿ ಹರಿಪ್ರಸಾದ ಶೆಟ್ಟಿ , ಜಿಲ್ಲಾ ಕಾಂಗ್ರೆಸ್ ಪ್ರಧಾನ […]

ಬ್ರಹ್ಮಾವರ: ನಿನ್ನೆ ಸಂಜೆ ಬೈಕ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಮ್ರತಪಟ್ಟ ದುರ್ಘಟನೆ ಬ್ರಹ್ಮಾವರ ರಾಷ್ಟ್ರೀಯ ಹೆದ್ದಾರಿ 66ರ ಪೆಟ್ರೋಲ್ ಬಂಕ್ ವೊಂದರ ಬಳಿ ನಡೆದಿದೆ. ಶಿವಮೊಗ್ಗ ನಿವಾಸಿ ಸಮಿತ್ ಕುಮಾರ್(19) ಹಾಗೂ ಸಾಲಿಗ್ರಾಂ ಚಿತ್ರಪಾಡಿ ನಿವಾಸಿ ವಾಗೀಶ್(19) ಮೃತರೆಂದು ಗುರುತು ಹಿಡಿಯಲಾಗಿದೆ.. ಇವರು ಉಡುಪಿಯ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು, ಇವರು ಕಾಲೇಜು ಮುಗಿಸಿ ರಾತ್ರಿ ಮನೆಗೆ ಬೈಕ್ನಲ್ಲಿ ತೆರಳುತ್ತಿದ್ದಾಗ ಎದುರಿದ್ದ ಲಾರಿಯನ್ನು ಓವರ್ ಟೇಕ್ ಮಾಡುವಾಗ ಬೈಕ್ ಲಾರಿಗೆ ಢಿಕ್ಕಿ […]

ಕುಂದಾಪುರ : ಸಾಹಿತ್ಯ, ಸಾಂಸ್ಕೃತಿಕ ಶೈಕ್ಷಣಿಕ ಹಾಗೂ ಸಂಶೋಧನಾ ಚಟುವಟಿಕೆಯಲ್ಲಿ ನಿರತರಾಗಿರುವ ಕುಂದಾಪುರದ ಪ್ರತಿಷ್ಠಿತ ಡಾ|ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉಪಪ್ರಾಂಶುಪಾಲರು ಹಾಗೂ ಕಾಲೇಜಿನ ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿಯಾದ ಶ್ರೀಚೇತನ್ ಶೆಟ್ಟಿ ಕೊವಾಡಿಯವರಿಗೆ ಜೆ.ಸಿ.ಐ ಕುಂದಾಪುರ ಸಿಟಿ ವತಿಯಿಂದ ಯುವ ರತ್ನ ಪ್ರಶಸ್ತಿಯನ್ನು ಜ.12 ರಂದು ವಿವೇಕಾನಂದ ಜಯಂತಿಯ ಪ್ರಯುಕ್ತ ಹಮ್ಮಿಕೊಂಡ ಯುವ ದಿನಾಚರಣೆಯ ಕಾರ್ಯಕ್ರಮದಲ್ಲಿ ಪ್ರಧಾನ ಮಾಡಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ .ಉಮೇಶ ಶೆಟ್ಟಿ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಕುಂದಾಪುರದ ವಕೀಲರ ಸಂಘದ […]

ಕುಂದಾಪುರ: ವಲಯ 15 ರ ಪ್ರತಿಷ್ಠಿತ ಘಟಕ ಜೆಸಿಐ ಕುಂದಾಪುರ ಸಿಟಿಯ 2023 ನೇ ಸಾಲಿನ ಪದಪ್ರದಾನ ಸಮಾರಂಭವು ಇಲ್ಲಿನ ಸಹನ ಕನ್ವೆನ್ಷನ್ ಸುಮೇದ ಪಾರ್ಕ್ ನಲ್ಲಿ ನಡೆಯಿತು. ಭಾರತೀಯ ರೆಡ್ ಕ್ರಾಸ್ ಕುಂದಾಪುರ ಸೇರಿದಂತೆ ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿರುವ ಡಾ. ಸೋನಿ ಡಿಕೋಸ್ಟ ರವರು ನೂತನ ಅಧ್ಯಕ್ಷರಾಗಿ ಪದ ಸ್ವೀಕಾರ ಮಾಡಿದರು. ಇದೇ ಸಂದರ್ಭದಲ್ಲಿ ಸಂಸ್ಥೆಗೆ 10 ಜನ ನೂತನ ಸದಸ್ಯರನ್ನು ಸೇರಿಸಲಾಯಿತು. ಸಮಾರಂಭದ ಮುಖ್ಯ ಅತಿಥಿಗಳಾಗಿ ವoದನೀಯ ಫಾದರ್ ಸ್ಟ್ಯಾನಿ ತಾವ್ರೊ, ವಲಯ […]

ಮಂಗಳೂರು: ಬಿಕರ್ನಕಟ್ಟೆ ಬಾಲ ಯೇಸು ಪುಣ್ಯ ಕ್ಷೇತ್ರದ 2023 ರ ವಾರ್ಷಿಕ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮಗಳಿಗೆ ತೆರೆ ಏಳೆಯಲಾಯಿತು. ಇದರ ಪ್ರಯುಕ್ತ ಅ|ವಂ|ಮೊ|ಮ್ಯಾಕ್ಷಿಮ್ ನೊರೊನ್ಹಾ ಬಲಿಪೂಜೆಯನ್ನು ಅರ್ಪಿಸಿದ ಬಳಿಕ ಬಾಲ ಯೇಸುವಿನ ಸ್ವರೂಪವಿದ್ದ ಧ್ವಜವನ್ನು ಗೌರವ ಪೂರ್ವಕವಾಗಿ ಕೆಳಗಿಳಿಸಿ ಉತ್ಸವಕ್ಕೆ ತೆರೆ ಏಳೆಯಲಾಯಿತು.ಈ ಸಂದರ್ಭದಲ್ಲಿ ಪುಣ್ಯ ಕ್ಷೇತ್ರದ ಮುಖ್ಯಸ್ಥರಾದ ವಂ|ಧರ್ಮಗುರು ರೊಮೇಲ್ ಡಿಸೋಜಾ, ಹಾಗೂ ಇನ್ನಿತರ ಧರ್ಮಗುರುಗಳು ಸಾವಿರಾರು ಭಕ್ತಾಧಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಮಂಗಳೂರು: ರಚನಾ, ಕ್ಯಾಥೋಲಿಕ್ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿಯು ತನ್ನ ಪ್ರತಿಷ್ಠಿತ ಪ್ರಶಸ್ತಿಗಳನ್ನು ವಿವಿಧ ಕ್ಷೇತ್ರಗಳ ಐದು ಗಣ್ಯ ವ್ಯಕ್ತಿಗಳಿಗೆ, ಭಾನುವಾರ, ಜನವರಿ 15 ರಂದು ಮಿಲಾಗ್ರೆಸ್ ಜುಬಿಲಿ ಹಾಲ್ನಲ್ಲಿ ಪ್ರದಾನ ಮಾಡಲಾಯಿತು. ಮಂಗಳೂರು ಬಿಷಪ್ ಡಾ.ಪೀಟರ್ ಪಾವ್ಲ್ ಸಲ್ಡಾನ್ಹ ಅಧ್ಯಕ್ಷತೆ ವಹಿಸಿದ್ದರು. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಎಚ್ಡಿಎಫ್ಸಿ ಬ್ಯಾಂಕ್ನ ಹಿರಿಯ ಕಾರ್ಯನಿರ್ವಾಹಕ ಉಪಾಧ್ಯಕ್ಷ ಸಂಜಯ್ ಡಿಸೋಜ ಭಾಗವಹಿಸಿದ್ದರು. ಲಿಯೋ ಫೆರ್ನಾಂಡಿಸ್, ಅಲ್ಲಿಪಾಡೆ, ಜೆರ್ರಿ ವಿನ್ಸೆಂಟ್ ಡಯಾಸ್, ಸೀನಿಯರ್ ಡಾ ಗ್ಲಾಡಿಸ್ ಮೆನೆಜಸ್, […]