
ಕುಂದಾಪುರ : ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆ ಇಲ್ಲಿ ವಿವಿಧ ಕ್ಲಬ್ಗಳ ಉದ್ಘಾಟನೆಯ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಹೋಲಿ ರೋಜರಿ ಚರ್ಚಿನ ಪ್ರಧಾನ ಧರ್ಮಗುರುಗಳು ಹಾಗೂ ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯ ಸಂಚಾಲಕರಾಗಿರುವ ಅತೀ ವಂದನೀಯ ಗುರು ಸ್ಟ್ಯಾನಿ ತಾವ್ರೊರವರು ವಿವಿಧ ಕ್ಲಬ್ಗಳು ಶಾಲಾ ಚಟುವಟಿಕೆಯಲ್ಲಿ ಭಾಗವಹಿಸುವ ಹಾಗೂ ನಾಯಕತ್ವ ಗುಣಗಳನ್ನು ಅಳವಡಿಸಿಕೊಂಡಿರುವ ಕುರಿತು ತಮ್ಮ ಅಧ್ಯಕ್ಷೀಯ ಮಾತುಗಳಲ್ಲಿ ತಿಳಿಸಿದರು. ಮುಖ್ಯ ಅತಿಥಿಗಳಾಗಿ ಸನ್ರೈಸ್ ರೋಟರಿ ಕ್ಲಬ್ನ ಅಧ್ಯಕ್ಷರಾಗಿರುವ ರೋಟೇರಿಯನ್ ಬಿ.ಎಂ ಚಂದ್ರಶೇಖರ್ರವರು ವಿವಿಧ […]

ರೋಜರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಕುಂದಾಪುರ ಇದರ 2021 – 22ರ ಸಾಲಿನ ಸಾಧಿಸಿರುವ ಸಾಧನೆಗೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಪ್ರಶಸ್ತಿ ಲಭಿಸಿತು. ಆ.5 ರಂದು ಮಂಗಳೂರಿನ ಉತ್ಕೃಷ್ಟ ಸಹಕಾರಿ ಸೌಧದಲ್ಲಿ ನಡೆದ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ದ.ಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷರಾದ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ರೋಜರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷರಾದ ಜೋನ್ಸನ್ ಡಿಅಲ್ಮೇಡಾ, ಉಪಾಧ್ಯಕ್ಷರಾದ ಕಿರಣ್ ಮೇಲ್ವಿನ್ ಲೋಬೊ ಅವರಿಗೆ ಪ್ರಶಸ್ತಿ […]

ಕಲ್ಮಾಡಿಯ ಸ್ಟೆಲ್ಲಾಮಾರಿಸ್ ಚರ್ಚ್ ಕರಾವಳಿ ಕರ್ನಾಟಕದ ಭಕ್ತರಿಗೆ ಚಿರಪರಿಚಿತ ಮತ್ತು ಎಲ್ಲಾ ಧರ್ಮದ ಜನರು ಭೇಟಿ ನೀಡುವ ಸ್ಥಳವಾಗಿದೆ. ಮಲ್ಪೆ – ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿಯ ಬಲಭಾಗದಲ್ಲಿರುವ ಚರ್ಚ್ ರಾಷ್ಟ್ರೀಯ ಹೆದ್ದಾರಿ 66 (ಕರಾವಳಿ ಬೈ-ಪಾಸ್) ರಿ೦ದ ಕೇವಲ 3 ಕಿಮೀದೂರದಲ್ಲಿದೆ. ಅರಬ್ಬಿ ಸಮುದ್ರಕ್ಕೆ ಸಮೀಪದಲ್ಲಿರುವ ಈಚರ್ಚ್ನನ್ನು ‘ಸ್ಟೆಲ್ಲಾಮಾರಿಸ್’ ಅಂದರೆ ‘ಸಮುದ್ರದತಾರೆ’ ಎಂದು ಕರೆಯಯುತ್ತಾರೆ.ಮೊದಲು, ಕಲ್ಮಾಡಿಯ ಜನರು ತಮ್ಮ ಆಧ್ಯಾತ್ಮಿಕ ಅಗತ್ಯತೆಗಳಿಗಾಗಿ ತೊಟ್ಟಂ ಅಥವಾ ಉಡುಪಿಯ ಚರ್ಚಿಗೆ ಭೇಟಿ ನೀಡಬೇಕಾಗಿತ್ತು. ಹೀಗಾಗಿ ಕಲ್ಮಾಡಿಯ ಜನರ ಧಾರ್ಮಿಕ ಅಗತ್ಯತೆಗಳಿಗಾಗಿ […]

ಶಿರ್ವ: ಮಂಗಳೂರಿನ ಪ್ರತಿಷ್ಠಿತ ಗ್ಲೋಟಚ್ ಟೆಕ್ನಾಲಜೀಸ್ (ದಿಯಾ ಸಿಸ್ಟಮ್ ಸಂಸ್ಥೆ)ಯು ನೇರ ನೇಮಕಾತಿ ಕ್ಯಾಂಪಸ್ ಸಂದರ್ಶನವೂ ಈಗಾಗಲೇ ಬಿಸಿಎ, ಬಿಎಸ್ಸಿ (ಸಿ.ಎಸ್, ಸ್ಟಾಟಿಸ್ಟಿಕ್ಸ್, ಎಲೆಕ್ಟ್ರಾನಿಕ್ಸ್), ಬಿಕಾಂ( ಕಂಪ್ಯೂಟರ್ ಅಪ್ಲಿಕೇಶನ್), ಡಿಪ್ಲೋಮಾ( ಸಿ.ಎಸ್),ಎಂಎಸ್ಸಿ, ಎಂಸಿಎ, ಬಿಇ,ಬಿಟೆಕ್ ಮುಗಿಸಿಕೊಂಡಿರುವ ಅಭ್ಯರ್ಥಿಗಳಿಗೆ ಶಿರ್ವ ಸಂತ ಮೇರಿ ಕಾಲೇಜಿನ ಗಣಕ ವಿಜ್ಞಾನ ವಿಭಾಗ,ವೃತ್ತಿ ಸಮಾಲೋಚನೆ ಮತ್ತು ನಿಯೋಜನೆ ಕೋಶ ವತಿಯಿಂದ ಆಗಸ್ಟ್ 03 ರಂದು ಕಾಲೇಜಿನ ಫಾ. ಹೆನ್ರಿ ಕ್ಯಾಸ್ಟಲಿನೊ ಸಭಾಂಗಣದಲ್ಲಿ ನಡೆಯಿತು.ಇದು ಸ್ಪರ್ಧಾತ್ಮಕ ಯುಗ ಎಂದು ತಿಳಿದಿದೆ. ಸ್ಪರ್ಧೆಯಲ್ಲಿ ಸೋಲು ಗೆಲುವುಗಳನ್ನು […]

ಉಡುಪಿ, ಅ.೩: ಕಲ್ಮಾಡಿಯ ವೆಲಂಕಣಿ ಮಾತಾ ಧರ್ಮಕೇಂದ್ರವನ್ನು ಉಡುಪಿ ಧರ್ಮಪ್ರಾಂತ್ಯದ ಅಧಿಕೃತವಾಗಿ ಪುಣ್ಯಕ್ಷೇತ್ರವೆಂದು ಆಗಸ್ಟ್ 15 ರಂದು ಘೋಷಣೆ ಮಾಡಲಾಗುವುದು ಎಂದು ಚರ್ಚಿನ ಧರ್ಮಗುರುಗಳಾದ ವಂ. ಬ್ಯಾಪ್ಟಿಸ್ಟ್ ಮಿನೇಜಸ್ ಹೇಳಿದರು. ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಚರ್ಚಿನ 50ನೇ ವರ್ಷದ ಆಚರಣೆಯನ್ನು ಕೂಡ ನಡೆಸಲಾಗುವುದು. ಕಲ್ಮಾಡಿಯಲ್ಲಿ ವೆಲಂಕಣಿ ಮಾತೆಯ ಪ್ರತಿಮೆಯನ್ನು ತಮಿಳುನಾಡಿನ ವೆಲಂಕಣಿ ಪುಣ್ಯಕ್ಷೇತ್ರದಿಂದ ತರಲಾಯಿತು. 1988ರ ಅಗಸ್ಟ್ 15 ರಂದು ಕಲ್ಮಾಡಿಯಲ್ಲಿ ಅಂದಿನ ಮಂಗಳೂರಿನ ಬಿಷಪ್ ಅತೀ ವಂ| ಡಾ| ಬಾಸಿಲ್ ಡಿಸೋಜಾ ಅವರು ವೆಲಂಕಣಿ ಮಾತೆಯ ಪ್ರತಿಮೆಯನ್ನು […]

ವೃತ್ತಿ ಸೇವೆಯಲ್ಲಿ ಅತ್ಯುತ್ತಮ ಸಾಧನೆಗೈದು ರಾಷ್ಟ್ರ ಮಟ್ಟದಲ್ಲಿ ಗುರುತಿಸಲ್ಪಟ್ಟಿರುವ ಕುಂದಾಪುರ ಕೆನರಾ ಬ್ಯಾಂಕ್ ವಿಭಾಗೀಯ ಪ್ರಬಂಧಕ ರತ್ನಾಕರ ಗಾಣಿಗ ಗಂಗೊಳ್ಳಿಯವರನ್ನು ರೋಟರಿ ಕುಂದಾಪುರ ದಕ್ಷಿಣದ ವತಿಯಿಂದ ಗೌರವಿಸಲಾಯಿತು.ಕುಂದಾಪುರ ಸರಕಾರಿ ಪ. ಪೂ. ಕಾಲೇಜಿನ ಲಕ್ಷ್ಮೀ ನರಸಿಂಹ ಕಲಾಮಂದಿರದಲ್ಲಿ ನಡೆದ ಸಮಾರಂಭದಲ್ಲಿ ರೋಟರಿ ಕುಂದಾಪುರ ದಕ್ಷಿಣದ ಅಧ್ಯಕ್ಷ ಸತ್ಯನಾರಾಯಣ ಪುರಾಣಿಕ ಅಧ್ಯಕ್ಷತೆ ವಹಿಸಿದ್ದರು.ವೃತ್ತಿ ಸೇವೆ ನಿರ್ದೇಶಕ ಯು.ಎಸ್.ಶೆಣೈ ರತ್ನಾಕರ ಗಾಣಿಗರನ್ನು ಪರಿಚಯಿಸಿ ಅಭಿನಂದಿಸಿದರು.ರತ್ನಾಕರ ಗಾಣಿಗ ಮಾತನಾಡಿ “ಬ್ಯಾಂಕ್ ಮೂಲಕ ಸಾರ್ವಜನಿಕ ಸೇವೆಗೈಯಲು ತುಂಬಾ ಅವಕಾಶವಿದ್ದು ನಾನು ಬಡವರು, ವಿದ್ಯಾರ್ಥಿ […]

ಕುಂದಾಪುರ ಸಂತ ಜೋಸೆಫ್ ಪ್ರೌಢ ಶಾಲೆಯಲ್ಲಿ ದಿನಾಂಕ 01-08-22 ರಂದು ಡಾ. ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆಯನ್ನು ” ವ್ಯಸನ ಮುಕ್ತ” ದಿನಾಚರಣೆಯನ್ನಾಗಿ ಆಚರಿಸಲಾಯಿತು. ಪ್ರೌಢಶಾಲಾ ಮುಖ್ಯೋಪಾಧ್ಯಾಯನಿ ಸಿಸ್ಟರ್ ಐ ವಿ ಇವರು ಡಾ. ಮಹಾಂತ ಶಿವಯೋಗಿ ಅವರ ಕುರಿತು ಮಾಹಿತಿ ನೀಡಿದರು. ಶಿಕ್ಷಕರಾದ ಮೈಕಲ್ ಇವರು ವ್ಯಸನ ಮುಕ್ತ ಸಮಾಜ ನಿರ್ಮಾಣ ವಿಷಯದ ಕುರಿತು ಮಾತನಾಡಿ ಮಧ್ಯಪಾನ, ಮಾದಕ ದ್ರವ್ಯ ,ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿದರು. ಶಿಕ್ಷಕರಾದ ಅಶೋಕ್ ದೇವಾಡಿಗ ಇವರು ವ್ಯಸನ […]

ಶಿರ್ವ:ಇಂದು ಪ್ರತಿಯೊಂದು ಕ್ಷೇತ್ರದಲ್ಲಿ ಹೆಚ್ಚಿನ ಕಾರ್ಯಗಳನ್ನು ನಿರ್ವಹಿಸಲು ಕಂಪ್ಯೂಟರ್ಗಳನ್ನು ಬಳಸಲಾಗಿದೆ. ಹೀಗಾಗಿ ಪ್ರತಿಯೊಬ್ಬರಿಗೂ ಕಂಪ್ಯೂಟರ್ ಜ್ಞಾನ ಹೊಂದುವುದು ಅವಶ್ಯಕ. ವಿದ್ಯಾರ್ಥಿಗಳು ಕಂಪ್ಯೂಟರ್ಗಳ ಸದುಪಯೋಗ ದಿಂದ ಉತ್ತಮ ಉಪಾದಿ ಹಾಗೂ ಉನ್ನತ ಶಿಕ್ಷಣವನ್ನು ಪಡೆದುಕೊಳ್ಳಬೇಕು. ಇವತ್ತು ಕಂಪ್ಯೂಟರ್ ಒಂದು ಮೂಲಭೂತ ಅಗತ್ಯ ವಸ್ತುವಾಗಿದೆ. ಶಿಕ್ಷಣ ,ಆರೋಗ್ಯ ,ಪ್ರಾಕೃತಿಕ ಹಿನ್ನಲೆಯಲ್ಲಿ ಕರ್ಣಾಟಕ ಬ್ಯಾಂಕ್ ತನ್ನದೇ ಆದ ಕೊಡುಗೆಯನ್ನು ಈ ಸಮಾಜಕ್ಕೆ ನೀಡುತ್ತಾ ಬಂದಿದೆ ಎಂದು ಇಲ್ಲಿನ ಶಿರ್ವ ಸೈಂಟ್ ಮೇರಿಸ್ ಕಾಲೇಜಿಗೆ ಕರ್ಣಾಟಕ ಬ್ಯಾಂಕ್ ವತಿಯಿಂದ ಕೊಡುಗೆಯಾಗಿ ನೀಡಲಾದ 5 […]

ಕುಂದಾಪುರ: ಸ್ಪರ್ಧೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ. ಸ್ಪರ್ಧಾತ್ಮಕ ದೃಷ್ಟಿಯಲ್ಲಿ ಭಾಗವಹಿಸುವುದು ಮುಖ್ಯ. ಸೋಲನ್ನು ಸವಾಲಾಗಿ ಸ್ವೀಕರಿಸಿ ಗೆಲುವಿನಡೆಗೆ ಸಾಗುವಲ್ಲಿ ಸದಾ ಪ್ರಯತ್ನಶೀಲರಾಗಿರಬೇಕು ಎಂದು ಸೈಂಟ್ ಮೇರಿಸ್ ಸಮೂಹ ಸಂಸ್ಥೆಯ ಸಂಚಾಲಕ ಅತೀ.ವಂ.ಫಾ. ಸ್ಟ್ಯಾನಿ ತಾವ್ರೋ ಹೇಳಿದರು.ಅವರು ಸೋಮವಾರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ, ಸೈಂಟ್ ಮೇರಿಸ್ ಪ್ರೌಢಶಾಲೆ ಕುಂದಾಪುರದ ಆಶ್ರಯದಲ್ಲಿ ನಡೆದ ಕುಂದಾಪುರ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಕರಾಟೆ ಸ್ಪರ್ಧೆ-2022 ಹಾಗೂ ವ್ಯಸನ ಮುಕ್ತ ದಿನಾಚರಣೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಪಂದ್ಯಾಟವನ್ನು ಕುಂದಾಪುರ […]