ಕುಂದಾಪುರ: ಅಂತರ ರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಕುಂದಾಪುರದ ಆರ್.ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಕೋಡಿ ಸಮುದ್ರ ತೀರದ ಸೀ ವಾಕ್ ನಲ್ಲಿ ಯೋಗ ಪ್ರದರ್ಶನ ನಡೆಯಿತು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀರಾಮ್ ಶೆಟ್ಟಿಯವರ ನೇತೃತ್ವದಲ್ಲಿ ನಡೆದ ಈ ಯೋಗ ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರು ಉಪಸ್ಥಿತರಿದ್ದರು.
ಕುಂದಾಪುರ: ಸ್ಥಳೀಯ UBMC & CSI ಕೃಪಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ 21 ಜೂನ್, 2024 ರಂದು ಹತ್ತನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.ಕಾರ್ಯಕ್ರಮವು ಆವಾಹನೆಯೊಂದಿಗೆ ಪ್ರಾರಂಭವಾಯಿತು. ಸಹಾಯಕ ಶಿಕ್ಷಕಿ ಹಾಗೂ ಕಾರ್ಯಕ್ರಮ ಸಂಯೋಜಕಿ ಶ್ರೀಮತಿ ಸವಿತಾ ಸ್ವಾಗತಿಸಿದರು. ಉದ್ಘಾಟನಾ ಸಮಾರಂಭದಲ್ಲಿ ವಿದ್ಯಾರ್ಥಿಗಳೊಂದಿಗೆ ಗಣ್ಯರು ದೀಪ ಬೆಳಗಿಸಿದರು.ಸಂಪನ್ಮೂಲ ವ್ಯಕ್ತಿಗಳಾದ ಶ್ರೀಮತಿ ಲತಾ ಮತ್ತು ಶ್ರೀಮತಿ ವೀಣಾ, ಯೋಗ ತರಬೇತುದಾರರು ಪ್ರತಿ ಆಸನದ ವಿವರವಾದ ವಿವರಣೆಯನ್ನು ನೀಡಿದರು ಮತ್ತು ತೆಗೆದು ಕೊಳ್ಳಬೇಕಾದ ಮುನ್ನೆಚ್ಚರಿಕೆಗಳ ಬಗ್ಗೆ ಮಾರ್ಗದರ್ಶನ ನೀಡಿದರು. […]
ಕುಂದಾಪುರ :ವಿಶ್ವ ಯೋಗ ದಿನಾಚರಣೆಯ ದಿನದಂದು (21-06-2024) ಸಂತ ಜೋಸೆಫರ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ದೈಹಿಕ ಶಿಕ್ಷಕರಾದ ಮೈಕಲ್ ಪುಟಾರ್ಡೊ ಇವರು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು. ಶಿಕ್ಷಕರಾದ ಅಶೋಕ್ ದೇವಾಡಿಗ ಇವರು ವಿಶ್ವ ಯೋಗ ದಿನಾಚರಣೆಯ ಮಹತ್ವದ ಬಗ್ಗೆ ತಿಳಿಸಿದರು. ದೈಹಿಕ ಶಿಕ್ಷಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳಿಂದ ಯೋಗದ ಆಸನಗಳನ್ನು ಪ್ರದರ್ಶಿಸಲಾಯಿತು.
ಕುಂದಾಪುರ: ಸಂತ ಮೇರಿಯ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿ ವಿಶ್ವ ಯೋಗ ದಿನಾಚರಣೆ ಯನ್ನು ಸಂಭ್ರಮದಿಂದ ಆಚರಿಸಲಾಯಿತು. ಅತಿಥಿಯಾಗಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿಗಳಾದ ಶ್ರೀ ಜಯಕರ್ ಶೆಟ್ಟಿ, ಇವರು ವಿದ್ಯಾರ್ಥಿಗಳಿಗೆ ಯೋಗದ ಮೂಲಕ ನಮ್ಮ ದೇಹದಲ್ಲಿರುವ ನಕಾರಾತಮಕ ಶಕ್ತಿಯನ್ನು ಹೊರಹಾಕಬಹುದು ಹಾಗೂ ದೈಹಿಕ ಸಾಮರ್ಥ್ಯ ಹೆಚ್ಚಿಸಬಹುದು ಎಂಬ ಮಾಹಿತಿ ನೀಡಿದರು. ಇನ್ನೋರ್ವ ಅತಿಥಿ ಶಾಲಾ ಹಳೆ ವಿದ್ಯಾರ್ಥಿ ಶ್ರೀ ರಾಮಕೃಷ್ಣ ಆಸ್ಪತ್ರೆಯ ವೈದ್ಯಾದಿಕಾರಿ ಡಾ. ಸೋನಿ ಡಿಕೋಸ್ತಾ ಇವರು ಉತ್ತಮ ಆಹಾರ ಸೇವನೆ ಮಾಡುವುದರಿಂದ […]
ಕುಂದಾಪುರ,ದಿನಾಂಕ : 21/06/2024 ದಂದು ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 10ನೇ ವಿಶ್ವಯೋಗ ದಿನಾಚರಣೆಯನ್ನು ನಮ್ಮ ಶಾಲಾ ವಿದ್ಯಾರ್ಥಿನಿ ಯೋಗಕುಮಾರಿ ಎಂಬ ಬಿರುದಾಂಕಿತೆ ಕುಮಾರಿ ಲಾಸ್ಯ ಮಧ್ಯಸ್ಥ ಇವರ ಯೋಗಾಸನ ಪ್ರದರ್ಶನದೊಂದಿಗೆ ಉದ್ಘಾಟನೆಗೊಂಡಿತು.ಕುಂದಾಪುರದ ಪ್ರಸಿದ್ಧ ಉದ್ಯಮಿಕೆ.ಆರ್. ನಾಯಕ್ ಹಾಗು ತಾಲೂಕುದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶ್ರೀ ರವೀಂದ್ರ ನಾಯಕ್ ಹಾಗು ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ತೆರೆಜ್ ಶಾಂತಿ ಎ.ಸಿ.ರವರು ಉಪಸ್ಥಿತರಿದ್ದರು.ಮುಖ್ಯ ಅತಿಥಿಗಳಾಗಿ ಆಗಮಿಸಿರುವ ಶ್ರೀ ರವೀಂದ್ರ ನಾಯಕ್ರವರು ತಮ್ಮ ಪ್ರಾಸ್ತಾವಿಕ ನುಡಿಯಲ್ಲಿ ಯೋಗ ಶ್ಲೋಕವನ್ನು ಮಕ್ಕಳಿಗೆ ಭೋಧಿಸಿ […]
ಕುಂದಾಪುರ: ಇಲ್ಲಿನ ಸೈಂಟ್ ಮೇರಿಸ್ ಪ್ರೌಢಶಾಲೆಯಲ್ಲಿ ಶುಕ್ರವಾರ ವಿಶ್ವ ಯೋಗ ದಿನಾಚರಣೆ ಸಂಭ್ರಮದಿಂದ ಜರಗಿತು.ಈ ಸಂದರ್ಭದಲ್ಲಿ ವಿದ್ಯಾರ್ಥಿ ಗಳಿಗೆ ನಾನು ಸುಳ್ಳು ಹೇಳುವುದಿಲ್ಲ.ಬೇರೆಯವರಿಗೆ ವಿನಾ ಕಾರಣ ತೊಂದರೆ ಕೊಡೋದಿಲ್ಲ.ಸಮಾಜ ಮತ್ತು ಕುಟುಂಬದ ನೆಮ್ಮದಿ ಹಾಳು ಮಾಡೋದಿಲ್ಲ.ಬೇರೆಯವರ ವಸ್ತುವಿಗೆ ಆಸೆ ಪಡೋದಿಲ್ಲ ಮತ್ತು ನನ್ನನ್ನು ನಾನು ಕಲುಷಿತಗೊಳಿಸುವುದಿಲ್ಲ ಎನ್ನುವ ಪಂಚ ಪ್ರತಿಜ್ಞೆ ಯನ್ನು ಭೋದಿಸಲಾಯಿತು. ಶಿಕ್ಷಕಿ ಪ್ರೀತಿ ಪಾಯಸ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ಶಿಕ್ಷಕಿಯರಾದ ಸುಶೀಲಾ ಖಾರ್ವಿ,ಡೀನಾ ಪಾಯಸ್,ಶ್ರೀದೇವಿ ಸಹಕರಿಸಿದರು. ಶಿಕ್ಷಕ ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ಸಂಯೋಜಿಸಿದರು.
ಕುಂದಾಪುರ: “ನಾಡಿಗೆ ಸಮರ್ಪಣಾ ಭಾವದಿಂದ ತನ್ನನ್ನು ಅರ್ಪಿಸಿಕೊಂಡು ಮಾದರಿಯಾದ ಗಿಳಿಯಾರು ಕುಶಲ ಹೆಗ್ಡೆಯವರ ಸ್ಮರಣೆಯಲ್ಲಿ ದತ್ತಿ ನಿಧಿ ಮೂಲಕ ವಿದ್ಯಾರ್ಥಿಗಳಿಗೆ, ಅಸಹಾಯಕರಿಗೆ 23 ವರ್ಷಗಳಿಂದ ಮಾಡುವ ಸಹಾಯ ಒಂದು “ಪವಿತ್ರ ಯಜ್ಞ” ಎಂದು ಕರೆಯಬಹುದಾಗಿದೆ. ಕೆಲವೇ ಮನುಷ್ಯರು ನಿಧನರಾದ ನಂತರ ಬದುಕಿದಂತೆ ಇರುತ್ತಾರೆ. ಅವರಲ್ಲಿ ಗಿಳಿಯಾರು ಕುಶಲ ಹೆಗ್ಡೆಯವರು ಪ್ರಮುಖರು. ಇಂದು ವಿಸ್ಮತಿಯ ಕಾಲ. ಜನರು ಕೆಲವೇ ವರ್ಷಗಳಲ್ಲಿ ಹಿರಿಯರನ್ನು, ಸಾಧಕರನ್ನು ಮರೆತು ಬಿಡುತ್ತಾರೆ. ಆದರೆ ಗಿಳಿಯಾರು ಕುಶಲ ಹೆಗ್ಡೆ ಮೆಮೋರಿಯಲ್ ಚಾರಿಟೆಬಲ್ ಟ್ರಸ್ಟ್ನವರು, ಕುಶಲ ಹೆಗ್ಡೆಯವರ […]
ಕುಂದಾಪುರ: “ಕಾಲೇಜು ಜೀವನದ ಆರಂಭದ ವರ್ಷಗಳಿಂದಲೇ ಪಡೆಯುವ ಸಿ.ಎ/ ಸಿ.ಎಸ್ ಕೋಚಿಂಗ್ ವಿದ್ಯಾರ್ಥಿಗಳಿಗೆ ಆ ಪರೀಕ್ಷೆಯ ವಿವಿಧ ಹಂತಗಳಲ್ಲಿ ಉತ್ತೀರ್ಣಗೊಳ್ಳಲು ಸಹಕಾರಿಯಾಗುವುದು ಮಾತ್ರವಲ್ಲದೇ ಇನ್ನಿತರ ಉನ್ನತ ಅಧ್ಯಯನಕ್ಕೆ ಸಂಬಂಧಿಸಿದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಪಡೆಯಲು ಕೂಡ ಅನುಕೂಲವಾಗುವುದು ” ಎಂದು ಉಡುಪಿಯ ತ್ರಿಶಾ ಸಮೂಹ ಸಂಸ್ಥೆಗಳ ಸ್ಥಾಪಕರಾದ C.A ಗೋಪಾಲಕೃಷ್ಣ ಭಟ್ ರವರು ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಸಿ.ಎ/ ಸಿ.ಪಿ.ಟಿ ಮತ್ತು ಸಿ.ಎಸ್ ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಸಿ.ಎ ಕೋರ್ಸ್ ನ […]