
ಕುಂದಾಪುರ,ದಿನಾಂಕ : 21/06/2024 ದಂದು ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 10ನೇ ವಿಶ್ವಯೋಗ ದಿನಾಚರಣೆಯನ್ನು ನಮ್ಮ ಶಾಲಾ ವಿದ್ಯಾರ್ಥಿನಿ ಯೋಗಕುಮಾರಿ ಎಂಬ ಬಿರುದಾಂಕಿತೆ ಕುಮಾರಿ ಲಾಸ್ಯ ಮಧ್ಯಸ್ಥ ಇವರ ಯೋಗಾಸನ ಪ್ರದರ್ಶನದೊಂದಿಗೆ ಉದ್ಘಾಟನೆಗೊಂಡಿತು.ಕುಂದಾಪುರದ ಪ್ರಸಿದ್ಧ ಉದ್ಯಮಿಕೆ.ಆರ್. ನಾಯಕ್ ಹಾಗು ತಾಲೂಕುದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶ್ರೀ ರವೀಂದ್ರ ನಾಯಕ್ ಹಾಗು ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ತೆರೆಜ್ ಶಾಂತಿ ಎ.ಸಿ.ರವರು ಉಪಸ್ಥಿತರಿದ್ದರು.ಮುಖ್ಯ ಅತಿಥಿಗಳಾಗಿ ಆಗಮಿಸಿರುವ ಶ್ರೀ ರವೀಂದ್ರ ನಾಯಕ್ರವರು ತಮ್ಮ ಪ್ರಾಸ್ತಾವಿಕ ನುಡಿಯಲ್ಲಿ ಯೋಗ ಶ್ಲೋಕವನ್ನು ಮಕ್ಕಳಿಗೆ ಭೋಧಿಸಿ […]

ಕುಂದಾಪುರ: ಇಲ್ಲಿನ ಸೈಂಟ್ ಮೇರಿಸ್ ಪ್ರೌಢಶಾಲೆಯಲ್ಲಿ ಶುಕ್ರವಾರ ವಿಶ್ವ ಯೋಗ ದಿನಾಚರಣೆ ಸಂಭ್ರಮದಿಂದ ಜರಗಿತು.ಈ ಸಂದರ್ಭದಲ್ಲಿ ವಿದ್ಯಾರ್ಥಿ ಗಳಿಗೆ ನಾನು ಸುಳ್ಳು ಹೇಳುವುದಿಲ್ಲ.ಬೇರೆಯವರಿಗೆ ವಿನಾ ಕಾರಣ ತೊಂದರೆ ಕೊಡೋದಿಲ್ಲ.ಸಮಾಜ ಮತ್ತು ಕುಟುಂಬದ ನೆಮ್ಮದಿ ಹಾಳು ಮಾಡೋದಿಲ್ಲ.ಬೇರೆಯವರ ವಸ್ತುವಿಗೆ ಆಸೆ ಪಡೋದಿಲ್ಲ ಮತ್ತು ನನ್ನನ್ನು ನಾನು ಕಲುಷಿತಗೊಳಿಸುವುದಿಲ್ಲ ಎನ್ನುವ ಪಂಚ ಪ್ರತಿಜ್ಞೆ ಯನ್ನು ಭೋದಿಸಲಾಯಿತು. ಶಿಕ್ಷಕಿ ಪ್ರೀತಿ ಪಾಯಸ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ಶಿಕ್ಷಕಿಯರಾದ ಸುಶೀಲಾ ಖಾರ್ವಿ,ಡೀನಾ ಪಾಯಸ್,ಶ್ರೀದೇವಿ ಸಹಕರಿಸಿದರು. ಶಿಕ್ಷಕ ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ಸಂಯೋಜಿಸಿದರು.

ಕುಂದಾಪುರ: “ನಾಡಿಗೆ ಸಮರ್ಪಣಾ ಭಾವದಿಂದ ತನ್ನನ್ನು ಅರ್ಪಿಸಿಕೊಂಡು ಮಾದರಿಯಾದ ಗಿಳಿಯಾರು ಕುಶಲ ಹೆಗ್ಡೆಯವರ ಸ್ಮರಣೆಯಲ್ಲಿ ದತ್ತಿ ನಿಧಿ ಮೂಲಕ ವಿದ್ಯಾರ್ಥಿಗಳಿಗೆ, ಅಸಹಾಯಕರಿಗೆ 23 ವರ್ಷಗಳಿಂದ ಮಾಡುವ ಸಹಾಯ ಒಂದು “ಪವಿತ್ರ ಯಜ್ಞ” ಎಂದು ಕರೆಯಬಹುದಾಗಿದೆ. ಕೆಲವೇ ಮನುಷ್ಯರು ನಿಧನರಾದ ನಂತರ ಬದುಕಿದಂತೆ ಇರುತ್ತಾರೆ. ಅವರಲ್ಲಿ ಗಿಳಿಯಾರು ಕುಶಲ ಹೆಗ್ಡೆಯವರು ಪ್ರಮುಖರು. ಇಂದು ವಿಸ್ಮತಿಯ ಕಾಲ. ಜನರು ಕೆಲವೇ ವರ್ಷಗಳಲ್ಲಿ ಹಿರಿಯರನ್ನು, ಸಾಧಕರನ್ನು ಮರೆತು ಬಿಡುತ್ತಾರೆ. ಆದರೆ ಗಿಳಿಯಾರು ಕುಶಲ ಹೆಗ್ಡೆ ಮೆಮೋರಿಯಲ್ ಚಾರಿಟೆಬಲ್ ಟ್ರಸ್ಟ್ನವರು, ಕುಶಲ ಹೆಗ್ಡೆಯವರ […]

ಕುಂದಾಪುರ: “ಕಾಲೇಜು ಜೀವನದ ಆರಂಭದ ವರ್ಷಗಳಿಂದಲೇ ಪಡೆಯುವ ಸಿ.ಎ/ ಸಿ.ಎಸ್ ಕೋಚಿಂಗ್ ವಿದ್ಯಾರ್ಥಿಗಳಿಗೆ ಆ ಪರೀಕ್ಷೆಯ ವಿವಿಧ ಹಂತಗಳಲ್ಲಿ ಉತ್ತೀರ್ಣಗೊಳ್ಳಲು ಸಹಕಾರಿಯಾಗುವುದು ಮಾತ್ರವಲ್ಲದೇ ಇನ್ನಿತರ ಉನ್ನತ ಅಧ್ಯಯನಕ್ಕೆ ಸಂಬಂಧಿಸಿದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಪಡೆಯಲು ಕೂಡ ಅನುಕೂಲವಾಗುವುದು ” ಎಂದು ಉಡುಪಿಯ ತ್ರಿಶಾ ಸಮೂಹ ಸಂಸ್ಥೆಗಳ ಸ್ಥಾಪಕರಾದ C.A ಗೋಪಾಲಕೃಷ್ಣ ಭಟ್ ರವರು ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಸಿ.ಎ/ ಸಿ.ಪಿ.ಟಿ ಮತ್ತು ಸಿ.ಎಸ್ ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಸಿ.ಎ ಕೋರ್ಸ್ ನ […]

ಕುಂದಾಪುರ : ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ.ಆರ್ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳಲ್ಲಿ 19.06.2024 ಬುಧವಾರದಂದು ವಿದ್ಯಾರ್ಥಿ ಸಂಸತ್ ಗೆ ವಿದ್ಯಾರ್ಥಿ ನಾಯಕರ ಆಯ್ಕೆಗಾಗಿ ಚುನಾವಣೆ ನಡೆಯಿತು.ಚುನಾವಣೆಯ ಪ್ರತಿಯೊಂದು ಮಜಲುಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವ ಸಲುವಾಗಿ ನೈಜ ಚುನಾವಣಾ ಮಾದರಿಯಲ್ಲಿಯೇ ಆರಂಭವಾದ ಈ ಚುನಾವಣಾ ಪ್ರಕ್ರಿಯೆ ನಾಮಪತ್ರ ಸಲ್ಲಿಕೆ, ನಾಮಪತ್ರ ಹಿಂಪಡೆಯುವಿಕೆ, ಚಿನ್ಹೆಗಳ ವಿತರಣೆ, ಚುನಾವಣಾ ಪ್ರಚಾರ, ಅಭ್ಯರ್ಥಿಗಳ ಆಯ್ಕೆ ಹೀಗೆ ಅನೇಕ ಹಂತಗಳನ್ನು ಒಳಗೊಂಡಿತ್ತು. […]

ಕುಂದಾಪುರ, 2024 ಜೂನ್ 16 ರಂದು ತಲ್ಲೂರಿನ ಸಂತ ಫ್ರಾನ್ಸಿಸ್ ಆಸಿಸ್ಸಿ ಚರ್ಚಿನಲ್ಲಿ ಕುಟುಂಬ ಆಯೋಗದಿಂದ ವಿಶ್ವ ಅಪ್ಪಂದಿರ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ಮೊದಲಿಗೆ ಚರ್ಚಿನ ಧರ್ಮ ಗುರುಗಳಾದ ರೆ. ಫಾ. ಎಡ್ವಿನ್ ಡಿಸೋಜರವರು ಬಲಿ ಪೂಜೆಯನ್ನು ಅರ್ಪಿಸಿದರು. ನಂತರ ಅವರು ಬಳಿಕ ಚರ್ಚಿನ ಸಭಾಂಗಣದಲ್ಲಿ ಕಾರ್ಯಕ್ರಮವನ್ನು ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಸ್ವಾಗತ ಕೋರಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಉಡುಪಿ ಧರ್ಮ ಪ್ರಾಂತ್ಯದ ಕುಟುಂಬ ಆಯೋಗದ ನಿರ್ದೇಶಕರಾಗಿರುವ ಶ್ರೀಯುತ ಲೆಸ್ಲಿ ಆರೋಜರವರು ಹಾಜರಿದ್ದು ಕುಟುಂಬದಲ್ಲಿ ತಂದೆಗೆ ಇರುವ ಸ್ಥಾನಮಾನ […]

ವಿಶ್ವ ರಕ್ತಧಾನಿಗಳ ದಿನ: ಮೂಡ್ಲುಕಟ್ಟೆ ಕಾಲೇಜ್ ಆಫ್ ನರ್ಸಿಂಗ್ ಕಾಲೇಜಿನಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಇವರ ಸಹಯೋಗದೊಂದಿಗೆ ಕಾಲೇಜಿನ ಸಭಾಂಗಣದಲ್ಲಿ ವಿಶ್ವ ರಕ್ತಧಾನಿಗಳ ದಿನದ ಅಂಗವಾಗಿ ರಕ್ತದಾನ ಶಿಬಿರ ಜರಗಿತು. ಮುಖ್ಯ ಅತಿಥಿಯವರಾದ ಶ್ರೀಯುತ ವೈ .ಸೀತಾರಾಮ್ ಶೆಟ್ಟಿ (ಕಾರ್ಯದರ್ಶಿ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ) ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಒದ್ದಾಟಿಸಿ ,ವಿದ್ಯಾರ್ಥಿಗಳಿಗೆ ರಕ್ತದಾನದ ಮಹತ್ವವನ್ನು ತಿಳಿಸುತ್ತಾ ರಕ್ತ ಸಂಗ್ರಹಣೆ , ಪರಿಷ್ಕರಣೆಯ ಬಗ್ಗೆ ತಿಳಿಸಿ ಮುಖ್ಯ ಅತಿಥಿಯವರಾದ ಶ್ರೀಯುತ ವೈ .ಸೀತಾರಾಮ್ ಶೆಟ್ಟಿ (ಕಾರ್ಯದರ್ಶಿ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ) ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಒದ್ದಾಟಿಸಿ,ವಿದ್ಯಾರ್ಥಿಗಳಿಗೆ ರಕ್ತದಾನದ ಮಹತ್ವವನ್ನು ತಿಳಿಸುತ್ತಾ ರಕ್ತ ಸಂಗ್ರಹಣ, ಪರಿಷ್ಕರಣೆಯ ಬಗ್ಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಗೌರವ ಅತಿಥಿಯಾಗಿ ಶ್ರೀಯುತ ಶಿವರಾಮ ಶೆಟ್ಟಿ (ಕೋಶಾಧಿಕಾರಿ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ),ಪ್ರಾಂಶುಪಾಲೆಯವರಾದ ಜನಿಫರ್ ಫ್ರೀಡ ಮೆನೇಜಸ್, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಶರೀಲ್ ಸಾರಾ ಕಾರ್ಯಕ್ರಮವನ್ನು ನಿರೂಪಿಸಿದರು, ನಿತ್ಯ ಪಿ ಸ್ವಾಗತಿಸಿ, ಭಾಗ್ಯಶ್ರೀ ಕಾರ್ಯಕ್ರಮವನ್ನು ವಂದಿಸಿದರು.

ಕುಂದಾಪುರ ಜಾಮಿಯಾ ಮಸೀದಿಯಲ್ಲಿ ಈದುಲ್ ಅಝಆ ( ಬಕ್ರೀದ್) ಹಬ್ಬವನ್ನು ಆಚರಿಸಲಾಯಿತು. ಮಸೀದಿಯ ಇಮಾಮ್ ತಬ್ರೇಜ್ ಆಲಂ ಅವರು ಈದ್ ನಮಾಜ್ ನೆರವೇರಿಸಿದರು. ನಮಾಜ್ ನಂತರ ಈದ್ಗಾ ತನಕ ಮುಸ್ಲಿಂ ಬಾಂಧವರು ತಕಬೀರ್ ಹೇಳುತ್ತಾ ನಗರದ ಮುಖ್ಯ ಬೀದಿಗಳಲ್ಲಿ ಜುಲುಸ್ ನಡೆಸಿದರು.