ಕೋಲಾರ : ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಹುದ್ದೆಯನ್ನು ರಾಜ್ಯದ ಪತ್ರಿಕೋದ್ಯಮ ಮತ್ತು ಪತ್ರಕರ್ತರ ಒಳಿತಿಗಾಗಿ ಶ್ರಮಿಸುವ ಅವಕಾಶ ಎಂದು ಭಾವಿಸಿ ಕಾರ್ಯನಿರ್ವಹಿಸುವುದಾಗಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ನುಡಿದರು. ಬುಧವಾರ ಸಂಜೆ ಬೆಂಗಳೂರಿನ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ತಮಗೆ ನೀಡಿದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಪತ್ರಕರ್ತರು ಯಾವುದೇ ಸಂದರ್ಭದಲ್ಲಿ ವೃತ್ತಿಯ ಮೌಲ್ಯಗಳಿಗೆ ಕಳಂಕ ಬಾರದಂತೆ ನಡೆದುಕೊಳ್ಳಬೇಕು ಎಂದು ಹೇಳಿದರು. ಮುಖ್ಯಮಂತ್ರಿಗಳಿಗೆ ರಾಜಕೀಯ ಸಲಹೆಗಾರ, ಮುಖ್ಯಮಂತ್ರಿಗಳ ವಿಶೇಷ ಅಧಿಕಾರಿಯಾಗುವ ಅವಕಾಶ ಇದ್ದರೂ ಸಹ ತಮ್ಮನ್ನು ಇದುವರೆಗೂ […]

Read More

ಶನಿವಾರ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದಲ್ಲಿಯೂ ಕೋಲಾರ ಜಿಲ್ಲೆಯ ಯಾವುದೇ ಶಾಸಕ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿಲ್ಲ . ಬೆಂಗಳೂರು ಗ್ರಾಮಾಂತರ ದೇವನಹಳ್ಳಿ ಕ್ಷೇತ್ರದಿಂದ ಗೆದ್ದು ಶಾಸಕರಾಗಿಗೆದ್ದ ಕೆ.ಎಚ್. ಮುನಿಯಪ್ಪ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವುದೇ ಸದ್ಯ ಕೋಲಾರ ಜಿಲ್ಲೆಯ ಜನರ ಸಮಾಧಾನಕ್ಕೆ ಕಾರಣವಾಗಿದ್ದು , ಇವರೇ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರೂ ಆಗುವ ಸಾಧ್ಯತೆ ಇದೆ ಎಂಬುದು ಕಾಂಗ್ರೆಸ್ ಕಾರ್ಯಕರ್ತರ ಸಂತಸಕ್ಕೆ ಕಾರಣವಾಗಿದೆ . ಕೋಲಾರ ಜಿಲ್ಲೆಯ ಉಸ್ತುವಾರಿ ಮಂತ್ರಿಗಳಾಗಿ ದಿವಂಗತ ಸಿ.ಬೈರೇಗೌಡ […]

Read More

ಶ್ರೀನಿವಾಸಪುರ: ತಹಶೀಲ್ದಾರ್ ಶಿರಿನ್ ತಾಜ್ ಅವರ ನೇತೃತ್ವದಲ್ಲಿ ಸೋಮವಾರ ಕಂದಾಯ, ತೊಟಗಾರಿಕೆ ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಬೆಳೆ ಹಾನಿ ಸಂಭವಿಸಿರುವ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಸಿದರು.ತೋಟಗಾರಿಕಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಎಂ.ಶ್ರೀನಿವಾಸನ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಕೆ.ಸಿ.ಮಂಜುನಾಥ್, ಹಿರಿಯ ಕಂದಾಯ ನಿರೀಕ್ಷಕ ಬಿ.ವಿ.ಮುನಿರೆಡ್ಡಿ, ತೋಟಗಾರಿಕಾ ಅಧಿಕಾರಿಗಳಾದ ಹರೀಶ್, ಎನ್.ಮಂಜುನಾಥ್, ಎಂ.ಎಸ್.ರಾಜೀವ್ ಇದ್ದರು.ತಾಲ್ಲೂಕಿನಲ್ಲಿ ಈ ಮುಂಗಾರಿನಲ್ಲಿ 2939 ಹೆಕ್ಟೇರ್‍ನಲ್ಲಿ ಬೆಳೆಯಲಾಗಿದ್ದ ತೋಟದ ಬೆಳೆಗೆ ಹಾನಿ ಉಂಟಾಗಿದೆ. ಆಪೈಕಿ 2500 ಹೆಕ್ಟೇರ್‍ನಲ್ಲಿ ಬೆಳೆಯಲಾಗಿದ್ದ ಮಾವಿನ ಫಸಲಿಗೆ […]

Read More

ಶ್ರೀನಿವಾಸಪುರ ಮೇ-20 : ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಮಾವಿಗೆ ಹೆಸರುವಾಸಿಯಾಗಿದೆ ಆದ್ದರಿಂದ ರೈತರು, ವರ್ತಕರು ಸಮನ್ವಯತೆಯಿಂದ ನಡೆದುಕೊಂಡು ಯಾವುದೇ ಅಡಚಣೆಗಳಿಲ್ಲದೆ ಮಾವಿನ ಸುಗ್ಗಿ ಪೂರ್ಣಗೊಳಿಸಬೇಕು ಎಂದು ಶಾಸಕ ಜಿ.ಕೆ. ವೆಂಕಟಶಿವಾರೆಡ್ಡಿ ಸೂಚಿಸಿದರು.ಎ.ಪಿ.ಎಂ.ಸಿ. ಪ್ರಾಂಗಣದಲ್ಲಿ ಶನಿವಾರ ಕರೆಯಲಾಗಿದ್ದ ವರ್ತಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ವಾರ್ಷಿಕ ಬೆಳೆ ಮಾವಿನ ಸುಗ್ಗಿ ಪ್ರಾರಂಭವಾಗಿದೆ ವರ್ತಕರು ರೈತರಿಗೆ ಯಾವುದೇ ತೊಂದರೆಯಾಗದಂತೆ ಪಾರದರ್ಶಕತೆಯನ್ನು ಕಾಪಾಡಬೇಕು ಕಾರ್ಮಿಕರಿಗೆ ಅಗತ್ಯವಾದ ಶುದ್ದ ಕುಡಿಯುವ ನೀರು, ವಿಶ್ರಾಂತಿಧಾಮ, ಶೌಚಾಲಯ ಸೇರಿದಂತೆ ಮೂಲಭೂತ ಸೌಕರ್ಯಗಳ ಕೊರತೆಯಾಗದಂತೆ […]

Read More

ಶ್ರೀನಿವಾಸಪುರ: ಕರ್ನಾಟಕ ರಾಜಕೀಯದ ಅತ್ಯಂತ ಹಿರಿಯ ರಾಜಕಾರಣಿಯಾದ ಕೆ.ಎಚ್ ಮುನಿಯಪ್ಪ ಅವರು ಸಿದ್ದರಾಮಯ್ಯ ಸರ್ಕಾರದ ಸಚಿವ ಸಂಪುಟದಲ್ಲಿ ಸ್ಥಾನ ಪಡೆದುಕೊಂಡಿದ್ದು , ಇಂದು ( ಮೇ 20 ) ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಕೆ.ಎಚ್ ಮುನಿಯಪ್ಪ ಅವರು 07 ಮಾಚ್ 1948 ರಂದು ಕೋಲಾರ ಜಿಲ್ಲೆಯ ಕಂಬದಹಳ್ಳಿ ಶ್ರೀ ಹನುಮಪ್ಪ ಹಾಗೂ ಶ್ರೀಮತಿ ವೆಂಕಟಮ್ಮ ದಂಪತಿಯ ಪುತ್ರನಾಗಿ ಜನಿಸಿದರು. ವೃತ್ತಿಯಲ್ಲಿ ವಕೀಲರಾಗಿರುವ ಕೆ.ಎಚ್ ಮುನಿಯಪ್ಪ ಸಮಾಜಿಕ ಕಾರ್ಯದಲ್ಲಿ ಹೆಚ್ಚು ತೊಡಗಿಸಿಕೊಂಡಿದ್ದರು. ನಾಗರತ್ನಮ್ಮ ಅವರನ್ನು ವಿವಾಹವಾಗಿರುವ ಕೆ.ಎಚ್ […]

Read More

ಶ್ರೀನಿವಾಸಪುರ 1 : ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿ ನಾಯಕತ್ವ , ನೈತಿಕತೆ , ಸಹಾನುಭೂತಿ, ಜವಾಬ್ದಾರಿ ನಿರ್ವಹಣೆ, ತಂಡ ನಿರ್ವಹಣೆ, ಸಾಮಾಜಿಕ ಹೊಂದಾಣಿಕೆ ಮತ್ತು ನಾಗರಿಕೆ ಪ್ರಜ್ಞೆ ವಿಷಯವಾಗಿ ವಿವಿಧ ಚಟುವಟಿಕೆಗಳನ್ನು ನಡೆಸುವುದೇ ಈ ಶಿಬಿರದ ಆಶಯವಾಗಿರುತ್ತದೆ ಎಂದು ಗ್ರಂಥಾಲಯ ಮೇಲ್ವಿಚಾರಕ ಎನ್.ನಾಗೇಂದ್ರ ಹೇಳಿದರು.ತಾಲೂಕಿನ ಲಕ್ಷ್ಮೀಪುರ ಗ್ರಂಥಾಲಯದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಗ್ರಾಮಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದಲ್ಲಿ ಶುಕ್ರವಾರ ಗ್ರಾಮೀಣ ಮಕ್ಕಳ 9 ದಿನಗಳ ಬೇಸಿಗೆ ಶಿಬಿರಕ್ಕೆ ಚಾಲನೆ ನೀಡಿ […]

Read More

ಶ್ರೀನಿವಾಸಪುರ: ತಾಲ್ಲೂಕಿನಲ್ಲಿ ಹಾದುಹೋಗುವ ರೈಲು ರಸ್ತೆ ಕೆಳಗೆ ಅವೈಜ್ಞಾನಿಕವಾಗಿ ನಿರ್ಮಿಸಲಾಗಿರುವ ಅಂಡರ್ ಪಾಸ್‍ಗಳಿಂದಾಗಿ ಮಳೆಗಾಲದಲ್ಲಿ ನಾಗರಿಕ ಸಂಚಾರಕ್ಕೆ ತೊಂದರೆಯಾಗಿದೆ ಎಂದು ಜೆಡಿಎಸ್ ವಿಜೇತ ಅಭ್ಯರ್ಥಿ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ತಾಲ್ಲೂಕಿನ ದೊಡಮಲದೊಡ್ಡಿ ಗ್ರಾಮದ ಸಮೀಪ ಹಾಳಾಗಿರುವ ರೈಲ್ವೆ ಅಂಡರ್ ಪಾಸ್‍ಗೆ ಶುಕ್ರವಾರ ರೈಲ್ವೆ ಎಂಜಿನಿಯರ್‍ಗಳೊಂದಿಗೆ ಭೇಟಿಯಾಗಿ ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ನಾಗರಿಕರಿಗೆ ಅನುಕೂಲವಾಗಲೆಂದು ರೈಲ್ವೆ ಅಂಡರ್ ಪಾಸ್ ನಿರ್ಮಿಸಲಾಗಿದೆ. ಆದರೆ ಮಳೆ ನೀರು ಸರಾಗವಾಗಿ ಹರಿದು ಹೋಗಲು ಸಾಧ್ಯವಾಗದೆ. ಆರೇಳು ಅಡಿ ನೀರು ನಿಲ್ಲುತ್ತದೆ. ಅಂಥ ಸಂದರ್ಭದಲ್ಲಿ ವಾಹನ […]

Read More

ಕೋಲಾರ:- ಜಿಲ್ಲೆಯ 15 ಕೇಂದ್ರಗಳಲ್ಲಿ ಮೇ.20 ಹಾಗೂ 21 ರಂದು ಎರಡು ದಿನಗಳ ಕಾಲ ನಡೆಯುತ್ತಿರುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ 6384 ವಿದ್ಯಾರ್ಥಿಗಳು ನೋದಾಯಿಸಿದ್ದು, ಯಾವುದೇ ಗೊಂದಲಕ್ಕೆಡೆಯಿಲ್ಲದಂತೆ ಅಗತ್ಯಕ್ರಮವಹಿಸುವಂತೆ ಜಿಲ್ಲಾಧಿಕಾರಿ ವೆಂಕಟ್‍ರಾಜಾ ಸೂಚಿಸಿದರು.ತಮ್ಮ ಕಚೇರಿಯಲ್ಲಿ ನಡೆದ ಸಿಇಟಿ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೋಲಾರ ನಗರದ 13 ಹಾಗೂ ಕೆಜಿಎಫ್ ನಗರದ 2 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, ಅಗತ್ಯ ಸಿದ್ದತೆಗಳನ್ನು ನಡೆಸಲಾಗಿದ ಎಂದು ತಿಳಿಸಿದರು.ಪರೀಕ್ಷಾ ಕೊಠಡಿಗಳಲ್ಲಿ ಉತ್ತಮ ಗಾಳಿ,ಬೆಳಕು ಇರುವಂತೆ ನೋಡಿಕೊಳ್ಳಿ, ಶುದ್ದ […]

Read More

ಕೋಲಾರ:- ಖಾಸಗಿ ಶಾಲೆಗಳಿಗಿಂತ ಉತ್ತಮ ಸುಸಜ್ಜಿತ ಸೌಲಭ್ಯಗಳುಳ್ಳ ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲಿಸಿ ಅವರ ಭವಿಷ್ಯ ಉತ್ತಮ ಪಡಿಸಿ ಎಂದು ತಾಲ್ಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಸಿ.ಎನ್.ಪ್ರದೀಪ್‍ಕುಮಾರ್ ಮನವಿ ಮಾಡಿದರು.ತಾಲ್ಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢಶಾಲೆಯ ಸುತ್ತಮುತ್ತಲ ನಾಗಲಾಪುರ, ಚುಂಚುದೇನಹಳ್ಳಿ, ಚೆಲುವನಹಳ್ಳಿ ಮತ್ತಿತರ ಗ್ರಾಮಗಳಲ್ಲಿ ಶುಕ್ರವಾರ ದಾಖಲಾತಿ ಆಂದೋಲನದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು.ಸರ್ಕಾರಿ ಶಾಲೆಗಳೆಂದರೆ ಪೋಷಕರಲ್ಲಿ ಇರುವ ಕೀಳಿರಿಮೆ ತೊಡೆದು ಹಾಕುವ ಅಗತ್ಯವಿದೆ ಎಂದ ಅವರು, ನೀವು ಭಾವಿಸಿರುವಂತೆ ಇಂದು ಸರ್ಕಾರಿ ಶಾಲೆಗಳಿಲ್ಲ, ಅಲ್ಲಿ ಸುಸಜ್ಜಿತ […]

Read More