ಶ್ರೀನಿವಾಸಪುರ: ಮತದಾರರು, ಸಂವಿಧಾನದಲ್ಲಿ ನಂಬಿಕೆಯುಳ್ಳ ಹಾಗೂ ಪ್ರಜಾಪ್ರಭುತ್ವ ಸಿದ್ಧಾಂತಕ್ಕೆ ಬದ್ಧವಾಗಿರುವ ಕಾಂಗ್ರೆಸ್ ಅಧಿಕಾರಕ್ಕೆ ತರಬೇಕು ಎಂದು ಮಾಜಿ ಸಚಿವ ಸೋಮಶೇಖರ್ ಹೇಳಿದರು.ತಾಲ್ಲೂಕಿನ ಶಿವಪುರದಲ್ಲಿ ಮಂಗಳವಾರ ಏರ್ಪಡಿಸಿದ್ದ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಸಮಾಜದಲ್ಲಿ ಧರ್ಮಾಂಧತೆ ಹಾಗೂ ಕೋಮುವಾದ ಬೆಳೆಸುತ್ತಿದೆ. ಸಾಮಾಜಿಕ ಸಾಮರಸ್ಯ ಹಾಳು ಮಾಡುತ್ತಿದೆ ಎಂದು ಆಪಾದಿಸಿದರು.ಬಿಜೆಪಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದುರ್ಬಲಗೊಳಿಸಲು ಪ್ರಯತ್ನಿಸುತ್ತಿದೆ. ಆದರೆ ಅದನ್ನು ಒಮ್ಮೆಗೇ ಮಾಡಲು ಸಾಧ್ಯವಾಗುತ್ತಿಲ್ಲ. ಆದ್ಧರಿಂದ ಸ್ವಲ್ಪ ಸ್ವಲ್ಪ ಹಾನಿಗೊಳಿಸಿ, ಪೂರ್ಣ ಪ್ರಮಾಣದಲ್ಲಿ ಉರುಳಿಸುವ […]
ಶ್ರೀನಿವಾಸಪುರ 3 : ರೈಲ್ವೆ ಕೋಚ್ , ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಕ್ಯಾನ್ಸರ್ ಆಸ್ಪತ್ರೆ ಸುಳ್ಳ ಅಶ್ವಾಸನೆ ನೀಡಿ ಕ್ಷೇತ್ರ ಜನತೆಗೆ ಮೋಸ ಮಾಡುತ್ತಿದ್ದಾರೆ ಎಂದು ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಟೀಕಿಸಿದರು.ತಾಲೂಕಿನ ಸೋಮಯಾಜಪಲ್ಲಿ ಗ್ರಾಮದಲ್ಲಿ ಮಂಗಳವಾರ ಜೆಡಿಎಸ್ ಪಕ್ಷದಿಂದ ರೋಡ್‍ಶೋ ಮುಖಾಂತರ ಮತಯಾಚನೆ ಮಾಡಿ ಮಾತನಾಡಿದರು.ಪಂಚರತ್ನ ಯೋಜನೆ ಮುಖಾಂತರ ಗ್ರಾಮೀಣ ಭಾಗದಲ್ಲಿ ಹೈಟೆಕ್ ಆಸ್ಪತ್ರೆ, ಉಚಿತ ಶಿಕ್ಷಣ , ರೈತರ ಒಂದು ಎಕರೆ ಭೂಮಿಗೆ 10 ಸಾವಿರದಂತೆ 10 ಎಕರೆಗೆ 1 ಲಕ್ಷ ಹಣವನ್ನು ಮುಂಗಡವಾಗಿ ನೀಡಲಾಗುವುದು. […]
ಶ್ರೀನಿವಾಸಪುರ-ಮೇ-2, ರೈತ ಪ್ರಣಾಳಿಕೆಗೆ ಬದ್ದವಾಗಿರುವ ಜೊತೆಗೆ, ಆರೋಗ್ಯ, ಶಿಕ್ಷಣ, ಉದ್ಯೋಗ ಸೃಷ್ಟ ಮಾಡುವ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಗುಂಜೂರು ಆರ್.ಶ್ರೀನಿವಾಸರೆಡ್ಡಿಗೆ ರೈತ ಸಂಘದ ಬೆಂಬಲ ನೀಡಲು ರೈತ ಸಂಘದ ಸಭೆಯಲ್ಲಿ ತೀರ್ಮಾನಿಸಲಾಯಿತು.ನಮ್ಮ ಮತ ಪಡೆದು ನಮ್ಮ ಮಕ್ಕಳಿಗೆ ಉದ್ಯೋಗ ಸ್ಥಳೀಯವಾಗಿ ಸೃಷ್ಟಿ ಮಾಡುವಲ್ಲಿ ರೆಡ್ಡಿ-ಸ್ವಾಮಿ ರವರು ವಿಫಲವಾಗಿದ್ದಾರೆ. ಪ್ರತಿಭಾವಂತ ಯುವಕರು ಉದ್ಯೋಗವನ್ನು ಅರಿಸಿ ಬೆಂಗಳೂರಿಗೆ ವಲಸೆ ಹೋಗವ ಜೊತೆಗೆ ರೈತರ ರಕ್ತ ಹೀರುವ ನಕಲಿ ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕಗಳ ಹಾವಳಿಗೆ ಕಡಿವಾಣ ಹಾಕುವಲ್ಲಿ ವಿಫಲವಾಗಿರುವ ಪಕ್ಷಗಳನ್ನು […]
ಕೋಲಾರ:- `ಚಿನ್ನದ ನಾಡು ಕೋಲಾರದ ಜನತೆಗೆ ನನ್ನ ನಮಸ್ಕಾರಗಳು’ ಎಂದು ಕನ್ನಡದಲ್ಲಿ ಮಾತು ಆರಂಭಿಸಿದ ಮೋದಿಯವರ ಭಾಷಣದಲ್ಲಿ ಮುಳಬಾಗಿಲು ದೋಸೆಯ ಸ್ವಾದದ ಬಗ್ಗೆಯೂ ಪ್ರಸ್ತಾಪಿಸಿ ಗಮನ ಸೆಳೆದಿದ್ದು, ಮೋದಿ ಮೋದಿ ಜೈಕಾರ ಇಡೀ ಕಾರ್ಯಕ್ರಮದಲ್ಲಿ ಮುಗಿಲು ಮುಟ್ಟಿತು.ಭಾನುವಾರ ತಾಲ್ಲೂಕಿನ ಕೆಂದಟ್ಟಿ ಸಮೀಪ ನಡೆದ ಬಿಜೆಪಿಯ ಬೃಹತ್ ರ್ಯಾಲಿಯಲ್ಲಿ ಮಾತನಾಡಿದ ಮೋದಿ, ಚೆನ್ನೈ-ಬೆಂಗಳೂರು ಎಕ್ಸ್‍ಪ್ರೆಸ್ ಹೈವೆ ಕಾಮಗಾರಿಯ ಪ್ರಗತಿಯ ಕುರಿತು ಮಾತನಾಡುವಾಗ ಮುಳಬಾಗಿಲು ದೋಸೆಯ ಸ್ವಾದ ಇಂದು ಉತ್ತಮ ಸಂಪರ್ಕ ವ್ಯವಸ್ಥೆಯಿಂದ ದೂರದೂರಕ್ಕೆ ತಲುಪುವಂತಾಗಿದೆ ಎಂದರು.ಡಬಲ್ ಇಂಜಿನ್ ಸರಕಾರ […]
ಕೋಲಾರ:- ಭಾರತದ ಜನರ ನಂಬಿಕೆ ಕಳೆದುಕೊಳ್ಳುತ್ತಿರುವ ಕಾಂಗ್ರೆಸ್ ಶೇ.85 ಕಮೀಷನ್ ಸರಕಾರವಾಗಿತ್ತು ಎಂಬುದನ್ನು ಆಪಕ್ಷದಿಂದ ಪ್ರಧಾನಿಯಾಗಿದ್ದ ನೇತಾರರೇ ಒಪ್ಪಿಕೊಂಡಿದ್ದಾರೆ. ಕರ್ನಾಟಕದ ವಿಕಾಸಕ್ಕೆ ಕಂಟಕವಾದ ಕಾಂಗ್ರೆಸ್, ಜೆಡಿಎಸ್‍ನಿಂದ ಕರ್ನಾಟಕದ ಉದ್ಧಾರ ಅಸಾಧ್ಯ ಆದ್ದರಿಂದಲೇ ಈ ಬಾರಿಯ ನಿರ್ಧಾರ ಬಹುಮತದ ಬಿಜೆಪಿ ಸರ್ಕಾರ ಆಗಿರಲಿ ಎಂದು ಜನತೆಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದರು.ಭಾನುವಾರ ಕೋಲಾರ ತಾಲ್ಲೂಕಿನ ಕೆಂದಟ್ಟಿ ಸಮೀಪ ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 13 ವಿಧಾನಸಭಾ ಕ್ಷೇತ್ರಗಳ ಪ್ರಚಾರಕ್ಕಾಗಿ 150 ಎಕರೆ ಪ್ರದೇಶದಲ್ಲಿ ನಡೆದ […]
ಕೋಲಾರ:- ಪ್ರಧಾನಿ ನರೇಂದ್ರಮೋದಿಯವರ ಆಗಮನಕ್ಕಾಗಿ ಸುಮಾರು 150 ಎಕರೆ ಪ್ರದೇಶದಲ್ಲಿ ಬೃಹತ್ ವೇದಿಕೆ ಸಿದ್ದವಾಗಿದ್ದು, ಕೋಲಾರ,ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಹಾಗೂ ದೇವನಹಳ್ಳಿ ವಿಧಾನಸಭಾ ಕ್ಷೇತ್ರಗಳ 2 ಲಕ್ಷಕ್ಕೂ ಅಧಿಕ ಮಂದಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ಭದ್ರತೆ ದೃಷ್ಟಿಯಿಂದ ಎಸ್‍ಪಿಜಿ ಕಮಾಂಡೋಗಳು ನಿಗಾ ವಹಿಸಿದ್ದಾರೆ ಎಂದು ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು.ಕಾರ್ಯಕ್ರಮದ ಮುನ್ನಾದಿನವಾದ ಶನಿವಾರ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ ಕೆಂದಟ್ಟಿ ಸಮೀಪ ಏ.30ರ ಪ್ರಧಾನಿಯವರ ರ್ಯಾಲಿಯ ಪೂರ್ವಸಿದ್ದತೆಗಳನ್ನು ಪರಿಶೀಲಿಸಿ ಅಂತಿಮ ಹಂತದ ಸಿದ್ದತೆಗಳ ನೇತೃತ್ವ ವಹಿಸಿದ್ದ ಅವರು, ಕಾರ್ಯಕ್ರಮದ […]
ಶ್ರೀನಿವಾಸಪುರ 2 : ಕೆಸಿ ವ್ಯಾಲಿ ನೀರುನಿಂದಾಗಿ ಈ ಭಾಗದ ಜನರಿಗೆ ವರದವಾಗಲಿದೆ ಎಂದು ಶಾಸಕ ಕೆ.ಆರ್.ರಮೇಶ್‍ಕುಮಾರ್ ಹೇಳಿದರು.ತಾಲೂಕಿನ ವೆಲಗಲಬುರ್ರೆ ಗ್ರಾಮದಲ್ಲಿ ಗುರುವಾರ ಕಾಂಗ್ರೆಸ್ ಪಕ್ಷದವತಿಯಿಂದ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದರು.ಈ ಹಿಂದೆ ಜಿಲ್ಲೆಯಲ್ಲಿ ನೀರಿನ ಮಟ್ಟವು 1400 ಅಡಿಗಳಷ್ಟು ಆಳಕ್ಕೆ ದಾಟಿತ್ತು, ಆದರೆ ಇಂದು ನೀರಿನ ಮಟ್ಟವು 600 ಕ್ಕೆ ಬಂದಿರುವುದು ಸಂತಸದ ವಿಚಾರ ಎನಿಸಿದೆ. ಕಾಂಗ್ರೆಸ್ ಪಕ್ಷವು ಆಡಳಿತಕ್ಕೆ ಬಂದರೆ ಸ್ತ್ರೀ ಶಕ್ತಿ ಸಂಘಗಳ ಸಾಲ ವಿತರಣೆ 50 ಸಾವಿರದಿಂದ 1 ಲಕ್ಷಕ್ಕೆ ಏರಿಸಲಾಗುವುದು. […]
ಶ್ರೀನಿವಾಸಪುರ ೧ : ಮತದಾನವೆಂದರೆ ನಮ್ಮ ದೇಶದ ಸಂವಿಧಾನದ ಪ್ರಕಾರ ೧೮ ವರ್ಷ ತುಂಬಿದ ಪ್ರಾಯದ ಪ್ರತಿಯೊಬ್ಬರು ಆ ಪವಿತ್ರ ಹಕ್ಕನ್ನು ಚಾಲಾಯಿಸಲೇಬೇಕು. ನಮ್ಮ ಮತ ಬಹಳ ಪವಿತ್ರವಾದದ್ದು, ಅದು ನಮ್ಮ ಹಕ್ಕು ಅದರ ಜೊತೆಗೆ ನಮ್ಮ ಕರ್ತವ್ಯವೂ ಇದೆ. ಎಂದು ಸ್ವೀಪ್ ಸಮಿತಿ ಅಧ್ಯಕ್ಷ ಹಾಗು ತಾ.ಪಂ.ಇಒ ಜಿ.ಎಸ್.ಸತೀಶ್‌ಕುಮಾರ್ ಹೇಳಿದರು.ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ತಾಲೂಕು ಸ್ವೀಪ್ ಸಮಿತಿಯಿಂದ ಶುಕ್ರವಾರ ವಿದ್ಯಾರ್ಥಿಗಳಿಗೆ ಹಾಗೂ ಬಸ್ ಚಾಲಕರಿಗೆ ಪ್ರಯಾಣಿಕರಿಗೆ ಮತದಾನದ ಅರಿವು ಕರಪತ್ರಗಳನ್ನು ನೀಡುವುದರ ಮೂಲಕ ಮಾತದಾನದ […]
ಶ್ರೀನಿವಾಸಪುರ: ಪಟ್ಟಣದಲ್ಲಿ ಸ್ವೀಪ್ ಸಮಿತಿ ವತಿಯಿಂದ ಮಂಗಳವಾರ ರಾತ್ರಿ ಮತದಾರರ ಜಾಗೃತಿ ಕಾರ್ಯಕ್ರಮದ ಅಂಗವಾಗಿ ಪಂಜಿನ ಮೆರವಣಿಗೆ ನಡೆಯಿತು.ತಹಶೀಲ್ದಾರ್ ಶಿರಿನ್ ತಾಜ್ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿ, ಪ್ರತಿ ಮತದಾರನೂ ತಪ್ಪದೆ ಮತದಾನ ಮಾಡಬೇಕು. ಮತದಾನ ಪವಿತ್ರ ಹಕ್ಕು ಹಾಗೂ ಕರ್ತವ್ಯವಾಗಿದ್ದು, ಯಾವುದೇ ಆಮಿಷಕ್ಕೆ ಒಳಗಾಗಬಾರದು. ಪ್ರಜಾಪ್ರಭುತ್ವ ರಕ್ಷಣೆ ನಿಸ್ವಾರ್ಥ ಮತದಾರರಿಂದ ಮಾತ್ರ ಸಾಧ್ಯ ಎಂದು ಹೇಳಿದರು.ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೃಷ್ಣಪ್ಪ, ಪೊಲೀಸ್ ಇನ್ಸ್‍ಪೆಕ್ಟರ್ ಜೆ.ಸಿ.ನಾರಾಯಣಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಉಮಾದೇವಿ, ಪುರಸಭೆ ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ ಮಾತನಾಡಿ ಮತದಾರರು […]