
ಕೋಲಾರ,ಜು.15: ಏಡ್ಸ್ ಎಂಬ ವ್ಯಾದಿಯನ್ನು ಸಮಾಜದಿಂದ ಸಂಪೂರ್ಣ ಸಂಹಾರ ಮಾಡುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಬದ್ಧತೆಯಿಂದ ಕಾರ್ಯನಿರ್ವಹಿಸಬೇಕೆಂದು, ರಾಜ್ಯ ಏಡ್ಸ್ ನಿಯಂತ್ರಣ ಸಂಘದ ಯೋಜನಾ ನಿರ್ದೇಶಕರು ಆಗಿರುವ ಐ.ಎ.ಎಸ್.ಅಧಿಕಾರಿ ಎನ್.ಎಂ.ನಾಗರಾಜ ಅವರು ಸೂಚಿಸಿದರು.ನಗರದ ಎಸ್.ಎನ್.ಆರ್.ಆಸ್ಪತ್ರೆಗೆ ದಿಢೀರ್ ಭೇಟಿನೀಡಿ ಇಲ್ಲಿನ ಏಡ್ಸ್ ನಿಯಂತ್ರಣ ವಿಭಾಗ, ಎ.ಆರ್.ಟಿ.ಕೇಂದ್ರ, ಬ್ಲಡ್ ಬ್ಯಾಂಕ್ ಮತ್ತು ಪಿ.ಪಿ.ಟಿ.ಸಿ ಕೇಂದ್ರಗಳನ್ನು ಪರಿಶೀಲಿಸಿ, ದಾಖಲೆಗಳನ್ನು ವೀಕ್ಷಿಸಿ, ವೈದ್ಯಾಧಿಕಾರಿಗಳು, ತಜ್ಞ ಸಿಬ್ಬಂದಿ ಹಾಗೂ ನೌಕರರೊಡನೆ ಸಮಾಲೋಚನೆ ನಡೆಸಿದರು.ಜಿಲ್ಲೆಯಲ್ಲಿ ಏಡ್ಸ್ ಹಬ್ಬುವಿಕೆಯಲ್ಲಿ ಗಣನೀಯವಾಗಿ ಇಳಿಕೆಯಾಗಿದ್ದು, ಇದನ್ನು ಕೆಲವೇ ವರ್ಷಗಳಲ್ಲಿ ಶೂನ್ಯಕ್ಕೆ […]

ಶ್ರೀನಿವಾಸಪುರ 1 : ದೇಶಕ್ಕೆ ಬೆನ್ನೆಲುಬಾದ ಆರೋಗ್ಯವಂತ ಯುವಕರೇ ದೇಶದ ಆಸ್ತಿ , ದೇಶವು ಪ್ರಗತಿಯತ್ತಾ ಸಾಗಲು ಯುವ ಜನತೆ ಸತ್ಪ್ರಜೆಗಳಾದ ಮಾತ್ರ ಸಾಧ್ಯ . ಆದ್ದರಿಂದ ಆರೋಗ್ಯವಂತ ಸಮಾಜಕ್ಕೆ ಯುವ ಸಮುದಾಯ ಇರಲೇಬೇಕು ಎಂದು ಪಿಡಿಒ ನರೇಂದ್ರಬಾಬು ಹೇಳಿದರು.ರಾಯಲ್ಪಾಡು ಪ್ರೌಡಶಾಲೆಯಲ್ಲಿ ಗುರುವಾರ ಹೋಬಳಿಯ ಮಟ್ಟದ 2023-24 ನೇ ಸಾಲಿನ 6 ದಿನಗಳ ಕ್ರೀಡಾಕೂಟದ ಪೂರ್ವಭಾವಿ ಸಭೆಯನ್ನು ಉದ್ಗಾಟಿಸಿ ಮಾತನಾಡಿದರು.ಮಕ್ಕಳಿಗೆ ಶಿಕ್ಷಣದ ಜೊತೆಗೆ ಕ್ರೀಡೆಯು ಒಂದು ಅವಿಬಾಜ್ಯ ಅಂಗ ಕ್ರೀಡೆಯಲ್ಲಿ ಪಾಲ್ಗೂಳ್ಳುವುದರಿಂದ ವಿದ್ಯಾರ್ಥಿಗಳಿಗೆ ಓದುವುದಕ್ಕೆ ಮನಸ್ಸು ಉಲ್ಲಾಸವಾಗಿ […]

ಶ್ರೀನಿವಾಸಪುರ : ಬೆಂಗಳೂರಿನ ವಿಜಯ ಮೈನ್ಸ್ ಕಾಲೇಜುವತಿಯಿಂದ ಗುರುವಾರ ನಡೆದ ಸೈನ್ಸ್ ಕ್ಲೇ ಸ್ಪರ್ಧೆಯಲ್ಲಿ ಹಾಗು ಸೈನ್ಸ್ ಡಂಬ್ಷರಾಡ್ಸ್ ನಲ್ಲಿ ಪ್ರಥಮ ಬಹುಮಾನವನ್ನು ರಾಯಲ್ಪಾಡಿನ ಸಿ.ವಿ.ಸವಿತಾ ನೇತೃತ್ವದ ತಂಡ ಹರ್ಷಿತಾ, ಕೃಪಾವತಿ, ನೇತ್ರಾವತಿ, ಕಿರಣ್ಕುಮಾರ್ ರವರಿಗೆ ಪ್ರಾಂಶುಪಾಲರಾದ ಕೆ.ಎಸ್.ಶೈಲಜಾ ಬಹುಮಾನವನ್ನು ನೀಡಿ ಶುಭಕೋರಿದರು . ಉಪನ್ಯಾಸಕರಾದ ಡಾ. ಸುರೇಶ್, ಮೇಘನಾ, ಪ್ರಿಯದರ್ಶಿನಿ , ಜ್ಯೋತಿ, ಚೈತ್ರ , ಜೈಬಾ ಇದ್ದರು.

ವಿಕಲಚೇತನರಿಗಿಂತ ಹೆಚ್ಚಾಗಿ ಸಭ್ಯ ಸಮಾಜಕ್ಕೆ ಸುಲಭಲಭ್ಯತೆಯ ಕುರಿತು ಬೋಧಿಸಬೇಕಾದ ಅಗತ್ಯತೆ ಇದೆ: ಸಿ.ಎಸ್ ದ್ವಾರಕಾನಾಥ್ ‘ಸೇ ಎಸ್ ಟು ಆಕ್ಸೆಸ್’ ಅಭಿಯಾನದ ಪೋಸ್ಟರ್ ಬಿಡುಗಡೆ ‘ಎಪಿಡಿ’ಯಿಂದ ಮೂರು ದಿನಗಳ ರಾಜ್ಯಮಟ್ಟದ ಆಕ್ಸೆಸಿಬಿಲಿಟಿ ಕಾರ್ಯಾಗಾರಕ್ಕೆ ಚಾಲನೆ ಬೆಂಗಳೂರು: ವಿಕಲಚೇತನರ ಊನತೆಗಳನ್ನೇ ಕುಂಟ, ಕುರುಡ ಎಂದು ಬೈಗುಳಗಳನ್ನಾಗಿ ಪರಿವರ್ತಿಸಿಕೊಂಡಿರುವ ಸಭ್ಯ ಸಮಾಜಕ್ಕೆ ಇವತ್ತು ಸುಲಭ ಲಭ್ಯತೆಯ ಕುರಿತು ತಿಳಿ ಹೇಳಬೇಕಾದ ಅಗತ್ಯತೆ ಇದೆ ಎಂದು ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರಾದ ಡಾ. ಸಿ.ಎಸ್. ದ್ವಾರಕಾನಾಥ್ರವರು ಹೇಳಿದರು. ಅವರು ಬೆಂಗಳೂರಿನ […]

ಕೋಲಾರ:- ರಾಜ್ಯದಲ್ಲಿನ ಅನುದಾನಿತ ಶಾಲೆಗಳಲ್ಲಿನ ಶಿಕ್ಷಕರ ಹುದ್ದೆ ಭರ್ತಿಗೆ ಸಂಬಂಧಿಸಿದಂತೆ ವಿಧಾನಪರಿಷತ್ ಸದಸ್ಯ ಡಾ.ವೈ.ಎ.ನಾರಾಯಣಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಹಾಲಿ ಖಾಲಿ ಇರುವ 5120 ಹುದ್ದೆಗಳ ಭರ್ತಿಗೆ ಅಗತ್ಯ ಕ್ರಮವಹಿಸುವುದಾಗಿ ಸದನದಲ್ಲಿ ಭರವಸೆ ನೀಡಿದರು.ಖಾಲಿ ಇರುವ 5120 ಹುದ್ದೆಗಳಲ್ಲಿ 3794 ಹುದ್ದೆಗಳಿಗೆ ಆರ್ಥಿಕ ಇಲಾಖೆ ಅನುಮತಿ ಬೇಕಾಗಿದ್ದು, ಶೀಘ್ರ ಅನುಮೋದನೆ ಪಡೆದು ಪ್ರಕ್ರಿಯೆ ಪ್ರಾರಂಭಿಸುವುದಾಗಿ ಭರವಸೆ ನೀಡಿದರು.ಸದನದಲ್ಲಿ ಡಾ.ವೈ.ಎ.ನಾರಾಯಣಸ್ವಾಮಿ ವಿಷಯ ಪ್ರಸ್ತಾಪಿಸಿ, ಅನುದಾನಿತ ಶಾಲೆಗಳಲಿಗೆ 1326 ಬೋಧಕ ಹುದ್ದೆಗಳ ಭರ್ತಿಗೆ ಕಳೆದ […]

ಕೋಲಾರ:- ಕೋಲಾರ ಜಿಲ್ಲಾ ಪಂಚಾಯಿತಿ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿರುವ ಪದ್ಮ ಬಸವಂತಪ್ಪ ಅವರನ್ನು ಜಿಲ್ಲಾ ಸರ್ಕಾರಿ ನೌಕರರ ಸಂಘದಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಜಿಪಂ ಸಿಇಒ ಅವರು, ಜಿಲ್ಲೆಯ ಗ್ರಾಮೀಣಾಭಿವೃದ್ದಿಗೆ ಸರ್ಕಾರಿ ನೌಕರರು ಸ್ಪಂದನೆ ನೀಡಿ, ಜಿಲ್ಲೆಯನ್ನು ಮಾದರಿಯಾಗಿಸಲು ಎಲ್ಲರೂ ಒಟ್ಟಾಗಿ ಕೆಲಸ ಮಾಡೋನ ಎಂದರು.ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವಲ್ಲಿ ನೌಕರರ ಪಾತ್ರ ಅತಿ ಮುಖ್ಯವಾಗಿದ್ದು, ಜಿಲ್ಲೆಯ ಸರ್ಕಾರಿ ನೌಕರರು ಈ ನಿಟ್ಟಿನಲ್ಲಿ ಅಭಿವೃದ್ದಿ ಕಾರ್ಯಗಳ ಪ್ರಗತಿಗೆ ಕೈಜೋಡಿಸಬೇಕು ಎಂದರು.ಜಿಲ್ಲಾ ನೌಕರರ ಸಂಘದ […]

ಶ್ರೀನಿವಾಸಪುರ: ಕ್ಷಯ ರೋಗದ ಲಕ್ಷಣ ಕಂಡುಬಂದಲ್ಲಿ ತಕ್ಷಣ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಚಕಿತ್ಸೆ ಪಡೆಯಬೇಕು ಎಂದು ಹೋಳೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ, ಜಿ.ಎಸ್.ವಂದನಾ ಹೇಳಿದರು.ಹೋಳೂರು ಗ್ರಾಮದ ಗ್ರಾಮ ಪಂಚಾಯಿತಿ ಕಚೇರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಗ್ರಾಮ ಪಂಚಾಯಿತಿ ವತಿಯಿಂದ ಗುರುವಾರ ಏರ್ಪಡಿಸಿದ್ದ ಕ್ಷಯ ಮುಕ್ತ ಗ್ರಾಮ ಪಂಚಾಯಿತಿ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿ, ಸರ್ಕಾರ ಸಾಂಕ್ರಾಮಿಕ ರೋಗ ತಡೆಯಲು ವಿಶೇಷ ಕಾರ್ಯಕ್ರಮ […]

ಕೋಲಾರ : ಜಿಲ್ಲೆಯಲ್ಲಿ ಅನಧಿಕೃತವಾಗಿ ಸ್ಥಾಪಿಸಲಾಗಿರುವ ವೈದ್ಯಕೀಯ ಕ್ಲಿನಿಕ್ಗಳನ್ನು ಹಾಗೂ ಅನಧಿಕೃತ ಸ್ಕ್ಯಾನಿಂಗ್ ಕೇಂದ್ರಗಳನ್ನು ತಕ್ಷಣ ತೆರವುಗೊಳಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಆದೇಶಿಸಿದರು . ಇಂದು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಕೆ.ಪಿ.ಎಂ.ಇ ಜಿಲ್ಲಾ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ 106 ಅಕ್ರಮ ವೈದ್ಯಕೀಯ ಕ್ಲಿನಿಕ್ಗಳನ್ನು ಗುರುತಿಸಲಾಗಿದ್ದು , ಮುಂದಿನ 15 ದಿನಗಳೊಳಗೆ ಅನಧಿಕೃತ ಕ್ಲಿನಿಕ್ಗಳನ್ನು ತೆರವುಗೊಳಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ […]

ಬಂಗಾರಪೇಟೆ: ಸನ್ಮಾನ್ಯ ರಾಹುಲ್ ಗಾಂಧಿಯವರು ಭಾರತ್ ಜೋಡೊ ಯಾತ್ರೆಯ ಮೂಲಕ ದೇಶದಾದ್ಯಂತ ಜಾತಿ, ಮತ, ಧರ್ಮ, ಪಂಥದ ಎಲ್ಲೆಯನ್ನು ಮೀರಿ ಜನರ ಭಾವನೆಗಳಿಗೆ ಸ್ಪಂದಿಸಿದ್ದಾರೆ, ಇವರ ವರ್ಚಸ್ಸನ್ನು ಕಂಡ ಬಿಜೆಪಿ “ಮೋದಿಯವರ ವಿರುದ್ಧ ಪ್ರಚೋದನಕಾರಿ ಭಾಷಣ” ಎಂಬ ದೂರನ್ನು ದಾಖಲಿಸಿ ದ್ವೇಷ ರಾಜಕಾರಣಕ್ಕೆ ಮುನ್ನುಡಿ ಬರೆದಿದ್ದಾರೆ ಎಂದು ಶಾಸಕ ಎಸ್.ಎನ್.ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.ಪಟ್ಟಣದ ಕುವೆಂಪು ವೃತ್ತದಲ್ಲಿ ತಾಲೂಕು ಕಾಂಗ್ರೆಸ್ ಘಟಕದ ವತಿಯಿಂದ ಮೌನ ಪ್ರತಿಭಟನೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಕೋಲಾರದಲ್ಲಿ ನಡೆದ ಬೃಹತ್ ಚುನಾವಣಾ ಸಮಾವೇಶದಲ್ಲಿ […]