ಕಾಣೆಯಾದ ಶಾಸಕ ಹೆಚ್.ನಾಗೇಶ್‍ ಮುಳಬಾಗಿಲು, ಮಾ.11: ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಸ್ಪಂದಿಸದೆ ನಾಪತ್ತೆ ಆಗಿರುವ ಉಸ್ತುವಾರಿ ಸಚಿವರಾದ ಮುನಿರತ್ನ ಹಾಗೂ ಮುಳಬಾಗಿಲು ಕ್ಷೇತ್ರದ ಶಾಸಕರದಾದ ಹೆಚ್.ನಾಗೇಶ್‍ರು ನಾಪತ್ತೆಯಾಗಿದ್ದು ಹುಡುಕಿಕೊಡಬೇಕೆಂದು ರೈತ ಸಂಘದ ರಾಜ್ಯ ಉಪಾದ್ಯಕ್ಷ ಕೆ.ನಾರಾಯಣಗೌಡ ಮಾನ್ಯ ಮುಖ್ಯ ಮಂತ್ರಿಗಳನ್ನು ಪತ್ರಿಕಾ ಹೇಳಿಕೆ ಮುಖಾಂತರ ಒತ್ತಾಯಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ರವರು ಚುನಾವಣೆ ಇನ್ನೂ 2 ತಿಂಗಳು ಬಾಕಿ ಇರುವಾಗಲೇ ಮುಳುಬಾಗಿಲು ಕ್ಷೇತ್ರದ ಶಾಸಕರಾದ ಹೆಚ್.ನಾಗೇಶ್‍ರವರು ಜನ ಸಾಮಾನ್ಯರ ಕೈಗೆ ಸಿಗದೆ ನಾಪತ್ತೆ ಆಗಿದ್ದಾರೆ. ತಾಲ್ಲೂಕಿನಾದ್ಯಾಂದ […]

Read More

ಕೋಲಾರ, ಮಾ,9: ಮಹಿಳಾ ದಿನಾಚರಣೆಯಂದು ಮಹಿಳೆಯರಿಗೆ ಗೌರವ ಕೊಡಬೇಕಾದ ಜವಬ್ದಾರಿ ಸ್ಥಾನದಲ್ಲಿರುವ ಸಂಸದರು ಕುಂಕುಮ ವಿಚಾರದಲ್ಲಿ ಸಾರ್ವಜನಿಕವಾಗಿ ಗಂಡ ಬದುಕಿದ್ದಾನಾ? ಕಾಮನ್‍ಸೆನ್ಸ್ ಇಲ್ಲ ಹಣಕ್ಕಾಗಿ ಮತಾಂತರ ಮಾಡಿಕೊಳ್ಳುತ್ತೀರಾ ಎಂದು ಸಾರ್ವಜನಿಕರವಾಗಿ ಅವಮಾನ ಮಾಡಿರುವುದನ್ನು ರೈತ ಸಂಘದ ಮಹಿಳಾ ಜಿಲ್ಲಾದ್ಯಕ್ಷೆ ಎ.ನಳಿನಿಗೌಡ ಸಂಸದರ ಹೇಳಿಕೆಯನ್ನು ಪತ್ರಿಕಾ ಹೇಳಿಕೆ ಮುಖಾಂತರ ಸಂಸದರ ನಡೆ ಮಹಿಳಾ ವಿರೋದಿ ನಡೆಯಾಗಿದೆ ಎಂದು ಖಂಡಿಸಿದ್ದಾರೆ.

Read More

ಶ್ರೀನಿವಾಸಪುರ: ಇಲ್ಲಿ ಮಾ.12 ರಂದು ಸಂಜೆ 4.30 ಗಂಟೆಯಿಂದ 7 ಗಂಟೆ ವರೆಗೆ ಲೋಕಕಲ್ಯಾಣಾರ್ಥ ಶ್ರೀನಿವಾಸ ಕಲ್ಯಾಣೋತ್ಸವ ಏರ್ಪಡಿಸಲಾಗಿದೆ ಎಂದು ಎಪಿಎಂಸಿ ಮಾಜಿ ಅಧ್ಯಕ್ಷ ರಾಜೇಂದ್ರ ಪ್ರಸಾದ್ ಹೇಳಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾ.11 ರಂದು ಬೆಳಿಗ್ಗೆ 11 ಗಂಟೆಗೆ ಪಟ್ಟಣದ ರಥಬೀದಿಯಲ್ಲಿ ಉತ್ಸವ ಮೂರ್ತಿಗಳ ಮೆರವಣಿಗೆ ಏರ್ಪಡಿಸಲಾಗಿದೆ. ಮೆರವಣಿಗೆ ಬಳಿಕ ವಿವಿಧ ಧಾರ್ಮಿಕ ಕಾರ್ಯಗಳು ಮುಗಿದ ಬಳಿಕ, ಕನಕ ಮಂದಿರದ ಸಮೀಪ ನಿರ್ಮಿಸಲಾಗಿರುವ ವೇದಿಕೆಯಲ್ಲಿ ವಾದ್ಯಗೋಷ್ಠಿ ಏರ್ಪಡಿಸಲಾಗಿದೆ ಎಂದು ಹೇಳಿದರು.ಮಾ.12 […]

Read More

ಶ್ರೀನಿವಾಸಪುರ: ಸಮಾಜದಲ್ಲಿ ಮಹಿಳೆಯರಿಗೆ ವಿಶೇಷ ಗೌರವವಿದೆ. ಆ ಸ್ಥಾನ ಉಳಿಸಿಕೊಂಡಿರುವುದು ಹೆಣ್ಣಿನ ಹೆಗ್ಗಳಿಕೆ ಎಂದು ಪುರಸಭೆ ಉಪಾಧ್ಯಕ್ಷೆ ಆಯಿಷಾ ನಯಾಜ್ ಹೇಳಿದರು. ಪಟ್ಟಣದ ಪುರಸಭಾ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ವಿಶ್ವ ಮಹಿಳಾ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು , ಮಹಿಳೆ ಶಕ್ತಿ ಸ್ವರೂಪಿಣಿ , ಪುರುಷರ ಸಾಧನೆ ಹಿಂದೆ ಮಹಿಳೆಯ ಬೆಂಬಲ ಇದ್ದೇ ಇರುತ್ತದೆ. ಅದು ತಾಯಿಯಾಗಿರಬಹುದು ,ಹೆಂಡತಿಯಾಗಿರಬಹುದು ಅಥವಾ ಬೇರೆ ಯಾರಾದರೂ ಆಗಿರಬಹುದು ಎಂದು ಅಭಿಪ್ರಾಯಪಟ್ಟರು.  ಪುರಸಭೆ ಮುಖ್ಯಾಧಿಕಾರಿ ವೈ.ಎನ್. ಸತ್ಯನಾರಾಯಣ ಮಾತನಾಡಿ , […]

Read More

ಶ್ರೀನಿವಾಸಪುರ : ಎಲ್ ಐ ಸಿ ಒಂದು ಜನ ಕ್ಷೇಮಾಭಿವೃದ್ಧಿ ಸಂಸ್ಥೆಯಾಗಿದ್ದು , ಏಜೆಂಟರು ಭವಿಷ್ಯದ ದೃಷ್ಟಿಯಿಂದ ಜೀವ ವಿಮೆ ಮಾಡಿಸುವಂತೆ ಜನರ ಮನವೊಲಿಸಬೇಕು ಎಂದು ತಾಲ್ಲೂಕು ಎಲ್‌ಐಸಿ ಉಪ ಶಾಖೆ ವ್ಯವಸ್ಥಾಪಕ ಎಸ್.ವಿ. ಪ್ರಸಾದ್ ಹೇಳಿದರು . ಪಟ್ಟಣದ ಎಲ್‌ಐಸಿ ಉಪ ಶಾಖೆಯಲ್ಲಿ  ಏರ್ಪಡಿಸಿದ್ದ ಎಲ್‌ಐಸಿ ಏಜೆಂಟರ ಸಭೆಯಲ್ಲಿ ಮಾತನಾಡಿದ ಅವರು , ಎಲ್‌ಐಸಿ ದೇಶದ ಜನರ ಭವಿಷ್ಯದಕಡೆ ಗಮನ ಹರಿಸುವ ಸಂಸ್ಥೆಯಾಗಿ ಮಾತ್ರ ಉಳಿದಿಲ್ಲ. ದೇಶದ ಅಭಿವೃದ್ಧಿಗೆ ಪೂರಕವಾಗಿ ಆರ್ಥಿಕ ನೆರವು ನೀಡುತ್ತಿದೆ , […]

Read More

ಕೋಲಾರ : ಪತ್ರಕರ್ತರು ಸ್ವಾಭಿಮಾನ ಮತ್ತು ನಿರ್ದಾಕ್ಷಿಣ್ಯ ಮನೋಭಾವ ಉಳಿಸಿ ಕೊಂಡು ವೃತ್ತಿ ಘನತೆಗೆ ಧಕ್ಕೆ ಬಾರದಂತೆ ನೋಡಿಕೊಳ್ಳಬೇಕು. ಆದರೆ , ಇಂದಿನ ಬಹುತೇಕ ಪತ್ರಕರ್ತರಲ್ಲಿ ಈ ಎರಡೂ ಗುಣಗಳ ಕೊರತೆ ಕಂಡುಬರುತ್ತಿದೆ ಎಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್ ವಿಷಾದಿಸಿದರು. ಕೆ ಯು ಡಬ್ಲ್ಯೂ ಜೆ ವಾರ್ಷಿಕ ದತ್ತಿ ಪ್ರಶಸ್ತಿಗೆ ಭಾಜನರಾಗಿರುವ ಹಿರಿಯ ಪತ್ರಕರ್ತ ಎಂ.ಜಿ. ಪ್ರಭಾಕರ್ ಅವರನ್ನು ಪತ್ರಕರ್ತರ ಭವನದಲ್ಲಿ ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಮಂಗಳವಾರ ಅಭಿನಂದಿಸಿ ಅವರು […]

Read More

ಕೋಲಾರ; ಮಾ.4: ವೇಮಗಲ್ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಕ್ರಮ ಮಣ್ಣು ಹಾಗೂ ಕಲ್ಲುಗಣಿಗಾರಿಕೆಗೆ ಕಡಿವಾಣ ಹಾಕುವಲ್ಲಿ ಗಣಿ ಅಧಿಕಾರಿಗಳು ವಿಫಲರಾಗಿದ್ದಾರೆಂದು ರೈತ ಕೂಲಿಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ವೇಮಗಲ್ ನಟರಾಜ್ ಗಣಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಅಕ್ರಮ ಗಣಿಗಾರಿಕೆ ಹಾಗೂ ಮಣ್ಣು ಮಾಫಿಯಾ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ವೇಮಗಲ್‍ಗೆ ಕೂಗಳತೆ ದೂರದಲ್ಲಿರುವ 2 ಕಿಮೀ ವ್ಯಾಪ್ತಿಯ ಪೆರ್ಜೇನಹಳ್ಳಿ ಕಂದಾಯ ಸರ್ವೇ ನಂ.11ರ ಗೋಮಾಳ ಜಮೀನಿನಲ್ಲಿ ಪ್ರಭಾವಿ ರಾಜಕಾರಣಿಯೊಬ್ಬರ ಜಮೀನು ಸಮತಟ್ಟು ಮಾಡಲು ಗೋಮಾಳದಲ್ಲಿ ಮಣ್ಣು ತೆಗೆಯುತ್ತಿದ್ದರೂ […]

Read More

ಶ್ರೀನಿವಾಸಪುರ : ಕೋಲಾರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ , ಶ್ರೀನಿವಾಸಪುರ ಶಿಬಿರ ಕಛೇರಿಯಲ್ಲಿ ರಾಸು ವಿಮಾ ಪರಿಹಾರ ಚೆಕ್ , ಕೋಮುಲ್ ವಿಮೆ , ಅಗ್ನಿ ಅವಘಡದಲ್ಲಿ ಮೃತಪಟ್ಟ ರಾಸುವಿನ ಪರಿಹಾರ ಚೆಕ್ ಮತ್ತು ರಸಮೇವು ಘಟಕ ನಿರ್ಮಾಣದ ಅನುದಾನ ಚೆಕ್‌ಗಳ ವಿತರಣಾ ಕಾರ್ಯಕ್ರಮದಲ್ಲಿ ಒಕ್ಕೂಟದ ನಿರ್ದೇಶಕರಾದ ಎನ್. ಹನುಮೇಶ್ ರವರು ಮಾತನಾಡಿ , ಎಲ್ಲಾ ಹಾಲು ಉತ್ಪಾದಕರು ಕಡ್ಡಾಯವಾಗಿ ರಾಸುಗಳ ವಿಮೆ ಮಾಡಿಸಬೇಕು , ರಾಸು ವಿಮಾ ಪರಿಹಾರ ಚೆಕ್ […]

Read More

ಶ್ರೀನಿವಾಸಪುರ 2 : ಸಣ್ಣ ಪುಟ್ಟ ರೈತರಿಗೆ ಅರಣ್ಯ ಇಲಾಖೆ ಅಧಿಕಾರಿಗಳು ವಿನಾಕಾರಣ ತೊಂದರೆ ಕೊಡುತ್ತಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ರಾಜ್ಯ ಮುಖಂಡ ಕಾರ್ಯದರ್ಶಿ ವೀರಭದ್ರಸ್ವಾಮಿ ಅರಣ್ಯ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದರು.ಪಟ್ಟಣದ ಅರಣ್ಯ ಇಲಾಖೆ ಕಚೇರಿ ಮುಂಭಾಗ ಶನಿವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಧರಣಿ ನಡೆಸಿ ಪ್ರತಿಭಟಿಸಿ ಮಾತನಾಡಿದರು.ಐವತ್ತು ಆರವತ್ತು ವರ್ಷಗಳ ಹಿಂದೆ ಖರೀದಿ ಮಾಡಿ ಸಾಗುವಳಿ ಮಾಡುತ್ತಿರುವ ಸಣ್ಣ ಪುಟ್ಟ ರೈತರ ಜಮೀನಗಳನ್ನು […]

Read More