
ಶ್ರೀನಿವಾಸಪುರ: ಮತದಾರ ಯಾವುದೇ ಆಮಿಷಕ್ಕೆ ಒಳಗಾಗದೆ, ಜವಾಬ್ದಾರಿಯುತವಾಗಿ ಮತದಾನದ ಹಕ್ಕು ಚಲಾಯಿಸುವುದರ ಮೂಲಕ ಬದಲಾವಣೆ ತರಬೇಕು ಎಂದು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಅರಳಿ ನಾಗರಾಜ ಹೇಳಿದರು.ಪಟ್ಟಣದ ವೆಂಕಟೇಶ್ವರ ನರ್ಸಿಂಗ್ ಹೋಂ ಸಭಾಂಗಣದಲ್ಲಿ ತಾಲ್ಲೂಕು ಎಎಪಿ ಘಟಕದ ವತಿಯಿಂದ ಏರ್ಪಡಿಸಿದ್ದ ಕುವೆಂಪು ಜನ್ಮ ದಿನಾಚರಣೆ ಹಾಗೂ ಪರಿವರ್ತನೆ ಕ್ಯಾಲೆಂಡರ್ ಬಿಡುಗಡೆ ಸಮಾರಂಭದಲ್ಲಿ, ಕ್ಯಾಲೆಂಡರ್ ಬಿಡುಗಡೆ ಮಾಡಿ ಅವರು ಮಾತನಾಡಿದರು.ಜನ ಪ್ರತಿನಿಧಿಗಳಿಗೆ ಋಣ ಮುಕ್ತತೆ ಪರಿಕಲ್ಪನೆ ಇರಬೇಕು. ಅವರು ಸಮಾಜದ ಋಣ ತೀರಿಸಲು ಪ್ರಯತ್ನಿಸಬೇಕು. ಆದರೆ ಮತದಾರರಲ್ಲಿ ಋಣ ಮುಕ್ತತೆ […]

ಕೋಲಾರ: ನಗರಸಭೆ ಪೌರಾಯುಕ್ತರ ಸರ್ವಾಧಿಕಾರಿ ಧೋರಣೆಯಿಂದ ಅಭಿವೃದ್ಧಿಗೆ ಹಿನ್ನಡೆಯಾಗುತ್ತಿದ್ದು ಕೂಡಲೇ ಅಧಿಕಾರಿಯನ್ನು ಎತ್ತಂಗಡಿ ಮಾಡಬೇಕೆಂದು ಆಗ್ರಹಿಸಿ ಅಧ್ಯಕ್ಷರು-ಉಪಾಧ್ಯಕ್ಷರ ಜತೆಗೂಡಿ ಸದಸ್ಯರು ಪ್ರತಿಭಟನೆ ನಡೆಸಿದರು. ನಗರಸಭೆ ಸಾಮಾನ್ಯ ಸಭೆಯಲ್ಲಿ ಚರ್ಚಿಸಬೇಕಾದ ವಿಷಯಗಳ ಕುರಿತು ಅಧ್ಯಕ್ಷೆ ಶ್ವೇತಾ ಆರ್. ಶಬರೀಶ್ ಅವರು ಟಿಪ್ಪಣಿಯನ್ನು ಕೊಡಲು ಮುಂದಾದಾಗ ಪೌರಾಯುಕ್ತರಾದ ಸುಮ ಅವರು ಪಟ್ಟಿಯನ್ನು ಪಡೆದುಕೊಳ್ಳಲು ನಿರಾಕರಿಸಿದ್ದು ಆಡಳಿತಾತ್ಮಕ ವಿಷಯಗಳನ್ನು ಮಾತ್ರವೇ ಮಂಡಿಸುವುದಾಗಿ ಹೇಳಿದಾಗ ಇಬ್ಬರ ನಡುವೆ ಅಸಮಾಧಾನ ಉಂಟಾಗಿತ್ತು. ಮಂಗಳವಾರ ಸಭೆ ಆರಂಭ ಆಗುತ್ತಿದ್ದಂತೆಯೇ ಅಧ್ಯಕ್ಷರು ಸಮಸ್ಯೆಗಳನ್ನು ಮುಂದಿಟ್ಟಾಗ ಚರ್ಚೆ ಮಾಡಲು […]

ಕೋಲಾರ,ಡಿ.27: ಫ್ಲೋರೋಸಿಸ್ ಒಂದು ಮಹಾಮಾರಿಯಾಗಿ ಪರಿಣಮಿಸಿದೆ. ಫ್ಲೋರೋಸಿಸ್ ದಂತ ಹಾಗೂ ಮೂಳೆಯ ದುಷ್ಪರಿಣಾಮಗಳ ಜೊತೆ ಬಹು ಅಂಗಾಂಗಗಳ ಮೇಲೂ ಸಹ ಪ್ರಭಾವ ಬೀರುತ್ತದೆ. ಗರ್ಭವಾಸ್ಥೆಯನ್ನು ಸಹ ಫ್ಲೋರೋಸಿಸ್ ಹೊರೆತುಪಡಿಸಿಲ್ಲ. ಇದರ ಪ್ರಯುಕ್ತ ಬಹಳ ಸಂಶೋಧನೆಗಳು ಭಾರತ ಹಾಗೂ ಇತರ ರಾಷ್ಟ್ರಗಳಲ್ಲಿಯೂ ಸಹ ನಡೆಯುತ್ತಿದೆ.ಅಮೇರಿಕಾದ ಮಹಾವಿದ್ಯಾಲಯದ ಪ್ರಸೂತಿ ತಜ್ಞರು ಮತ್ತು ಸ್ತ್ರೀರೋಗ ತಜ್ಞರು ಗರ್ಭವಾಸ್ಥೆಯಲ್ಲಿ ಅಧಿಕ ರಕ್ತದೊತ್ತಡದಿಂದಾಗುವ ಹಾಗೂ ಸಂಬಂಧಿತ ಅಸ್ವಸ್ಥತೆಯನ್ನು ಪ್ರಿ-ಎಕ್ಲಾಂಪ್ಸಿಯಾ ಎಂದು ವ್ಯಾಖ್ಯಾನಿಸಿದ್ದಾರೆ. ಇದು ಸಾಮಾನ್ಯವಾಗಿ 20 ವಾರಗಳ ಗರ್ಭಾವಸ್ಥೆಯ ನಂತರ ಸಂಭವಿಸುತ್ತದೆ. ವಿಶೇಷವಾಗಿ ಅಭಿವೃದ್ಧಿಶೀಲ […]

ಶ್ರೀನಿವಾಸಪುರ: ಕಳಪೆ ಬಿತ್ತನೆ ಆಲೂಗಡ್ಡೆ ಹಾಗೂ ಮಾಂಡೋಸ್ ಚಂಡಮಾರುತದಿಂದ ನಷ್ಟವಾಗಿರುವ ಪ್ರತಿ ಎಕರೆಗೆ 2 ಲಕ್ಷರೂ ಪರಿಹಾರ ನೀಡಿ ನಾಪತ್ತೆಯಾಗಿರುವ ಬೆಳೆ ವಿಮೆ ಕಂಪನಿ ಮಾಲೀಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಬೇಕೆಂದು ರೈತಸಂಘದಿಂದ ತೋಟಗಾರಿಕೆ ಕಚೇರಿಯೆದುರು ನಷ್ಟ ಬೆಳೆ ಸಮೇತ ಹೋರಾಟ ಮಾಡಿ, ಸಹಾಯಕ ನಿರ್ದೇಶಕರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ನೀಡಿ ಆಗ್ರಹಿಸಲಾಯಿತು.ಮನವಿ ಸಲ್ಲಿಸಿ ಮಾತನಾಡಿದ ರಾಜ್ಯ ಸಂಚಾಲಕ ಬಂಗವಾದಿ ನಾಗರಾಜಗೌಡ, ಜಿಲ್ಲೆಯ ರೈತರ ಅಮಾಯಕತನವನ್ನೇ ಬಂಡವಾಳವಾಗಿಸಿಕೊಂಡಿರುವ ವಿಮೆ ಕಂಪನಿಗಳು ಅಧಿಕಾರಿಗಳ ಮೇಲೆ ಒತ್ತಡ ಹಾಕಿ […]

ಶ್ರೀನಿವಾಸಪುರ: ವಿದ್ಯಾರ್ಥಿಗಳು ಗುಣಾತ್ಮಕ ಫಲಿತಾಂಶ ಪಡೆಯಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಉಮಾದೇವಿ ಹೇಳಿದರು.ಪಟ್ಟಣದ ಎಸ್‍ಎಫ್‍ಎಸ್ ಪ್ರೌಢ ಶಾಲೆಯಲ್ಲಿ ಬುಧವಾರ ಏರ್ಪಡಸಿದ್ದ ಶಾಲಾ ಬೆಳ್ಳಿ ಹಬ್ಬ ಹಾಗೂ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ತಾಲ್ಲೂಕು ಶೈಕ್ಷಣಿಕವಾಗಿ ಜಿಲ್ಲೆಯಲ್ಲಿ ಮುಂಚೂಣಿಯಲ್ಲಿದೆ. ಎಸ್‍ಎಫ್‍ಎಸ್ ಶಾಲೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತಾಲ್ಲೂಕಿಗೆ ಮೊದಲು ಬಂದಿದೆ ಎಂದು ಹೇಳಿದರು.ಉತ್ತಮ ಫಲಿತಾಂಶ ಬರಬೇಕಾದರೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ದೃಢ ನಿರ್ಧಾರ ಹಾಗೂ ಪರಿಶ್ರಮ ಇದ್ದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯ. ವಿದ್ಯಾರ್ಥಿಗಳು […]

ಶ್ರೀನಿವಾಸಪುರ : ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ಜಿಲ್ಲಾ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಮುಖ್ಯಸ್ಥ ಸುನಿಲ್ ಎಸ್.ಹೊಸಮನಿ ಭೇಟಿ ನೀಡಿ ಪರಿಶೀಲಿಸಿದರು . ಆಸ್ಪತ್ರೆಯ ವಿವಿಧ ಘಟಕಗಳು ಹಾಗೂ ಒಳ ರೋಗಿಗಳ ವಿಭಾಗಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾತನಾಡಿದ ಅವರು , ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ಆಸತ್ರೆಗೆ ಬರುವ ರೋಗಿಗಳಿಗೆ ಉತ್ತಮ ಸೇವೆ ಒದಗಿಸಬೇಕು . ರೋಗಿಗಳಿಗೆ ಚೆನ್ನಾಗಿ ಶುಚಿಗೊಳಿಸಿದ ಬಟ್ಟೆಗಳನ್ನು ನೀಡಬೇಕು ಎಂದು ಹೇಳಿದರು . […]

ಕೋಲಾರ:- ನಗರದ ಸಾಯಿಬಾಬಾ ಮಂದಿರದಲ್ಲಿ ಕಾಂಗ್ರೆಸ್ ಎಸ್ಸಿಘಟಕದ ಜಿಲ್ಲಾಧ್ಯಕ್ಷ ಕೆ.ಜಯದೇವ್ ಅವರ ಹುಟ್ಟುಹಬ್ಬದ ಅಂಗವಾಗಿ ಆಟೋ ಚಾಲಕರಿಗೆ ಸಮವಸ್ತ್ರವನ್ನು ಮಾಜಿ ಸಭಾಪತಿ ವಿ.ಆರ್.ಸುದರ್ಶನ್ ವಿತರಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ದೇಶಕ್ಕೆ ಉತ್ತಮ ಸಂವಿಧಾನನೀಡಿದ್ದಾರೆ, ಅದನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಿ, ಅವರು ನೀಡಿರುವ ಸಂವಿಧಾನದ ಅಡಿಯೇ ಮುನ್ನಡೆಯಬೇಕು ಎಂದರು.ಪ್ರತಿಯೊಬ್ಬ ನಾಗರೀಕರು, ತಮ್ಮ ಜೀವನದಲ್ಲಿ ಸಂವಿಧಾನದ ಅಂಶಗಳನ್ನು ಅಳವಡಿಸಿಕೊಂಡು ಅವರಿಗೆ ಗೌರವ ತರುವ ಕೆಲಸ ಮಾಡುವ ಸಂಕಲ್ಪ ಮಾಡಬೇಕು ಇದು ರಾಜಕೀಯ ಪಕ್ಷಗಳಿಗೆ ಮಾತ್ರವಲ್ಲ, […]

ಕೋಲಾರ: ಜನರ ಚಳಿ ಬಿಡಿಸುತ್ತಿರುವ ಕೊರೊನಾ ಹೊಸ ತಳಿ ನಿಯಂತ್ರಣಕ್ಕೆ ಸರ್ಕಾರಿ ಆಸ್ಪತೆಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ ರೋಗ ಲಕ್ಷಣಗಳ ಬಗ್ಗೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರದ ಮೂಲಕ ಜಾಗೃತಿ ಮೂಡಿಸಬೇಕೆಂದು ರೈತಸಂಘದಿಂದ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಮನವಿ ನೀಡಿ ಆಗ್ರಹಿಸಲಾಯಿತು.ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ, ಕೊರೊನಾ 1ನೇ, 2ನೇ ಅಲೆಯ ಅವಧಿಯಲ್ಲಿ ಸೃಷ್ಠಿಸಿದ್ದ ಅವಾಂತರಗಳಿಂದ ಜನಸಾಮಾನ್ಯರು ಚೇತರಿಸಿಕೊಂಡು ಸಹಜ ಜೀವನದತ್ತ ಮುನ್ನಡೆಯುತ್ತಿರುವ ಸಮಯದಲ್ಲಿ ಮುಂಗಾರು ಮಳೆಯ ಆರ್ಭಟದ ನಂತರ ಈಗ ಮತ್ತೆ ಚೀನಾ ಮತ್ತಿತರರ ದೇಶಗಳಲ್ಲಿ ಹೆಚ್ಚುತ್ತಿರುವ […]

ಕೋಲಾರ:- ಡಿಸಿಸಿ ಬ್ಯಾಂಕ್ ಹಾಗೂ ಪ್ಯಾಕ್ಸ್‍ಗಳ ಮೂಲಕ ಯಶಸ್ವಿನಿ ಯೋಜನೆ ನೋಂದಣಿಯನ್ನು ಅಂದೋಲನವಾಗಿ ಮಾಡಿ, ಅವಿಭಜಿತ ಜಿಲ್ಲೆಯ 7 ಲಕ್ಷ ಮಹಿಳೆಯರ ಮನೆ ಬಾಗಿಲಿಗೆ ಆರೋಗ್ಯಭಾಗ್ಯದ ಸೌಲಭ್ಯ ತಲುಪಿಸಿ ಎಂದು ಬ್ಯಾಂಕ್ ಹಾಗೂ ಸೊಸೈಟಿ ಸಿಬ್ಬಂದಿಗೆ ಕೋಲಾರ ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಕರೆ ನೀಡಿದರು.ನಗರದ ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಯಶಸ್ವಿನಿ ಯೋಜನೆ ಅನುಷ್ಟಾನದ ಕುರಿತು ಪ್ಯಾಕ್ಸ್‍ಗಳು ಹಾಗೂ ಡಿಸಿಸಿ ಬ್ಯಾಂಕಿನ ಕೋಲಾರ,ಚಿಕ್ಕಬಳ್ಳಾಪುರ ಜಿಲ್ಲೆಯ ವಿವಿಧ ಶಾಖೆಗಳ ಸಿಬ್ಬಂದಿಯೊಂದಿಗೆ ಹಮ್ಮಿಕೊಂಡಿದ್ದ ಆನ್‍ಲೈನ್ ಸಭೆಯ ಅಧ್ಯಕ್ಷತೆ […]