ಶ್ರೀನಿವಾಸಪುರ : ಅಖಿಲ ಭಾರತ ಸಾರ್ವತ್ರಿಕ ಮುಷ್ಕರದ ಭಾಗವಾಗಿ ಗುರುವಾರ ಶ್ರೀನಿವಾಸಪುರದ ಸರ್ಕಾರಿ ಬಾಲಕಿಯರ ಕಾಲೇಜಿನ ಆವರಣದಿಂದ ಪ್ರಾರಂಭವಾದ ಕಾರ್ಮಿಕ ಮತ್ತು ರೈತರ ರ್ಯಾಲಿ ಎಂಜಿ ರಸ್ತೆ , ಸಂತೆ ಮೈದಾನ, ರಾಜಾಜಿ ರಸ್ತೆ ಮತ್ತು ಜೆ.ಸಿ ರಸ್ತೆಯ ಮೂಲಕ ಮೆರವಣಿಗೆ ನಡೆಸಿ ತಾಲೂಕು ಕಚೇರಿ ಆವರಣದಲ್ಲಿ ಮುಷ್ಕರದ ಬಹಿರಂಗ ಸಭೆಯನ್ನು ಯಶಸ್ವಿಯಾಗಿ ನಡೆಸಲಾಯಿತು.ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಗಳಾದ ಕಾರ್ಮಿಕ ವಿರೋಧಿ ನಾಲ್ಕು ಸಂಹಿತೆಗಳ ವಾಪಸ್ಸಿಗಾಗಿ, ಕಾರ್ಮಿಕರ ರಕ್ಷಣೆ, ಸಾಮಾಜಿಕ ಭದ್ರತೆ, ಹೋರಾಟದ ಹಕ್ಕಿಗಾಗಿ ಹಿಂದಿನ […]
ಶ್ರೀನಿವಾಸಪುರ : ತಾಲೂಕಿನ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಗಳ ಇಕೋ ಕ್ಲಬ್ ವತಿಯಿಂದ ವಿದ್ಯಾರ್ಥಿಗಳಿಗೆ ಏಕದಿನ ಶೈಕ್ಷಣಿಕ ಹಾಗೂ ಪರಿಸರ ಜಾಗೃತಿ ಪ್ರವಾಸವನ್ನು ಹಮ್ಮಿಕೊಳ್ಳಲಾಯಿತು. ಯದರೂರು ಗ್ರಾಮದ ಸರ್ಕಾರಿ ಉರ್ದು ಹೆಚ್.ಪಿ.ಎಸ್., ಚಿಂತಮಕನಪಳ್ಳಿ ಗ್ರಾಮದ ಸರ್ಕಾರಿ ಉರ್ದು ಎಲ್.ಪಿ.ಎಸ್. ಹಾಗೂ ಎಸ್. ವಡಿಗೇಪಳ್ಳಿ ಗ್ರಾಮದ ಸರ್ಕಾರಿ ಉರ್ದು ಎಲ್.ಪಿ.ಎಸ್. ಶಾಲೆಗಳ ವಿದ್ಯಾರ್ಥಿಗಳು ಪ್ರವಾಸದಲ್ಲಿ ಭಾಗವಹಿಸಿ ಪರಿಸರ ಸಂರಕ್ಷಣೆ ಕುರಿತಾಗಿ ಪ್ರಾಯೋಗಿಕ ಅರಿವು ಪಡೆದರು. ಕಾರ್ಯಕ್ರಮದ ಮುಖ್ಯ ಉದ್ದೇಶ ವಿದ್ಯಾರ್ಥಿಗಳಲ್ಲಿ ಪ್ರಕೃತಿ ಪ್ರೇಮ ಹಾಗೂ ಪರಿಸರ ಜಾಗೃತಿ ಬೆಳೆಸುವುದು […]
ಶ್ರೀನಿವಾಸಪುರ : ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ 25 ಗ್ರಾಮ ಪಂಚಾಯಿತಿಗಳ ಐದು ವರ್ಷದ ಅವಧಿ ಫೆಬ್ರವರಿ 2026ರಲ್ಲಿ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಮುಂದಿನ ಸಾರ್ವತ್ರಿಕ ಚುನಾವಣೆ ನಡೆಯದ ಕಾರಣಕ್ಕೆ ಅವುಗಳಿಗೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡಿ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಪ್ರಕರಣ 41 ಮತ್ತು 42ರಂತೆ ಹಾಗೂ ಪ್ರಕರಣ 8(1)(ಬಿ)(ii)ರಡಿ ನೀಡಲಾದ ಅಧಿಕಾರವನ್ನು ಚಲಾಯಿಸಿ ಈ ಕ್ರಮ ಕೈಗೊಳ್ಳಲಾಗಿದೆ. ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು […]
ಶ್ರೀನಿವಾಸಪುರ : ಪಟ್ಟಣದ ಜಾಕೀರ್ ಹುಸೇನ್ ಮೊಹಲ್ಲಾ ಸರ್ಕಾರಿ ಉರ್ದು ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯನ್ನು ಕರ್ನಾಟಕ ಪಬ್ಲಿಕ್ ಶಾಲೆಯಾಗಿ (ಕೆಪಿಎಸ್) ಉನ್ನತೀಕರಿಸುವಂತೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಸಂಬಂಧದ ಆದೇಶ ಪ್ರತಿಯನ್ನು ಮಾಜಿ ವಿಧಾನಸಭಾ ಸ್ಪೀಕರ್ ಹಾಗೂ ಮಾಜಿ ಶಾಸಕ ಕೆ.ಆರ್. ರಮೇಶ್ ಕುಮಾರ್ ಅವರು ಎಪಿಜೆ ಅಬ್ದುಲ್ ಕಲಾಂ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಅಬ್ದುಲ್ ಮಜೀದ್ ಉರ್ ಅಪ್ಸರ್ ಪಾಷಾ ಅವರಿಗೆ ಹಸ್ತಾಂತರಿಸಿದರು. ಶಾಲಾ ಆವರಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ […]
ಶ್ರೀನಿವಾಸಪುರ : ಯಾವ ಮಕ್ಕಳು ಆನಾರೋಗ್ಯದಿಂದ ಇರುತ್ತಾರೋ ಅವರನ್ನ ಮಾತ್ರೆ ತೆಗೆದುಕೊಳ್ಳುವಂತೆ ಬಲವಂತ ಮಾಡಬೇಡಿ ಎಂದು ಟಿಎಚ್ಒ ಮಹ್ಮದ್ ಷರೀಪ್ ಮಾಹಿತಿ ನೀಡಿದರು.ಪಟ್ಟಣದ ಚಿಂತಾಮಣಿ ರಸ್ತೆ ಉರ್ದು ಶಾಲೆಯ ಆವರಣದಲ್ಲಿ ಮಂಗಳವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯ ಇಲಾಖೆ ಸಹಯೋಗದಲ್ಲಿ ನಮ್ಮ ಕ್ಲೀನಿಕ್ ವತಿಯಿಂದ ರಾಷ್ಟ್ರೀಯ ಜಂತುಹುಳ ನಿವಾರಣಾ ದಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಅಂತಹ ಮಕ್ಕಳಿಗೆ ಅರೋಗ್ಯವಂತರಾದ ಮೇಲೆ ವೈದ್ಯರ ಸಲಹೆಯನ್ನ ಪಡೆದು ಮಾತ್ರೆಯನ್ನು ಕೊಡುವಂತೆ ತಿಳಿಸಿದರು. ಅಪೌಷ್ಟಿಕತೆ […]
ಶ್ರೀನಿವಾಸಪುರ : ತಿಂಗಳಿಗೆ ಎರಡು ಬಾರಿ ಕುಂದುಕೊರತೆ ಸಭೆಗಳನ್ನು ಆಯೋಜಿಸಲಾಗುವುದು. ಒಂದನ್ನು ಪುರಸಭೆಗೆ ಸಂಬಂಧಿಸಿದಂತೆ ಹಾಗೂ ಮತ್ತೊಂದನ್ನು ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಡೆಸಲಾಗುವುದು ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು. ಪಟ್ಟಣದ ಪುರಸಭೆ ಕಚೇರಿಯಲ್ಲಿ ಮಂಗಳವಾರ ನಡೆದ ಕುಂದುಕೊರತೆ ಸಭೆಯಲ್ಲಿ ಅವರು ಮಾತನಾಡಿದರು. ಪಟ್ಟಣದ ಚಿಂತಾಮಣಿ ವೃತ್ತದಿಂದ ಮುಳಬಾಗಿಲು ವೃತ್ತದವರೆಗೆ ರಸ್ತೆ ಅಭಿವೃದ್ಧಿಗೆ ₹5 ಕೋಟಿ ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಪಟ್ಟಣದಲ್ಲಿನ ರಾಜಕಾಲುವೆಗಳು ಒತ್ತುವರಿಯಾಗಿರುವುದು ಗಮನಕ್ಕೆ ಬಂದಿದ್ದು, ಅವುಗಳನ್ನು ವಶಪಡಿಸಿಕೊಂಡು ಅಭಿವೃದ್ಧಿಪಡಿಸಲು […]
ಶ್ರೀನಿವಾಸಪುರ : ಮಾಜಿ ಶಾಸಕ ಕೆ.ಆರ್. ರಮೇಶ್ಕುಮಾರ್ ಅವರ ಅಭಿಮಾನಿಗಳ ಬಳಗದ ವತಿಯಿಂದ ಪಟ್ಟಣದ ಸರ್ಕಾರಿ ಬಾಲಕೀಯರ ಪದವಿ ಪೂರ್ವ ಕಾಲೇಜು ಆಟದ ಮೈದಾನದಲ್ಲಿ ಹೊನಲು ಬೆಳಕಿನ ಅಂತರರಾಜ್ಯ ವಿಆರ್ಕೆ ವಾಲಿಬಾಲ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಪಂದ್ಯಾವಳಿ ಫೆಬ್ರವರಿ 14ರ ಶನಿವಾರ ಸಂಜೆ 5 ಗಂಟೆಗೆ ಆರಂಭವಾಗಲಿದ್ದು, 15ರ ಭಾನುವಾರ ಫೈನಲ್ ಪಂದ್ಯ ನಡೆಯಲಿದೆ. ಬೆಂಗಳೂರು, ಮಂಗಳೂರು ಸೇರಿದಂತೆ ಆಂಧ್ರ ಪ್ರದೇಶ ಹಾಗೂ ತಮಿಳುನಾಡಿನಿಂದ ತಂಡಗಳು ಭಾಗವಹಿಸಲಿವೆ. ಪಟ್ಟಣದ ಪಿಎಲ್ಡಿ ಬ್ಯಾಂಕ್ ಕಚೇರಿಯಲ್ಲಿ ಸೋಮವಾರ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ […]
ಕೋಲಾರ : ಸರ್ಕಾರದ ಸೌಲಭ್ಯಗಳು ವಿಳಂಬವಿಲ್ಲದೆ ಜನರಿಗೆ ತಲುಪಬೇಕು. ಸಾರ್ವಜನಿಕರ ಕೆಲಸಗಳಿಗೆ ಸ್ಪಂದಿಸದೆ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕಠಿಣ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್ ಅವರು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು. ಇಂದು ಕೆಜಿಎಫ್ ನಗರಸಭೆ ಆವರಣದಲ್ಲಿ ನಡೆದ ನಗರ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆಗಳ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಮಳೆಯ ಅಭಾವ ಇರುವ ಹಿನ್ನೆಲೆಯಲ್ಲಿ ಜಿಲ್ಲೆಯ ಯಾವುದೇ ಭಾಗದಲ್ಲೂ ಕುಡಿಯುವ ನೀರಿಗೆ ಹಾಹಾಕಾರ […]
ಶ್ರೀನಿವಾಸಪುರ : ತಾಲ್ಲೂಕಿನ ರೋಣುರು ಗ್ರಾಮಪಂಚಾಯಿತಿ ಅಧ್ಯಕ್ಷೆ, ಉಪಾಧ್ಯಕ್ಷರು ಹಾಗೂ ಸದಸ್ಯರ ಸಮನ್ವಯ ಮತ್ತು ಸಹಕಾರದಿಂದ ಪಂಚಾಯಿತಿಯ ವ್ಯಾಪ್ತಿಯ ಎಲ್ಲಾ ಹಳ್ಳಿಗಳ ಸಮಗ್ರ ಅಭಿವೃದ್ಧಿ ಸಾಧ್ಯವಾಗಿದೆ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಕೆ. ಮಹೇಶ್ ತಿಳಿಸಿದರು. ಸೋಮವಾರ ರೋಣುರು ಗ್ರಾಮಪಂಚಾಯಿತಿ ಕಚೇರಿಯಲ್ಲಿ ಅಧ್ಯಕ್ಷೆ, ಉಪಾಧ್ಯಕ್ಷರು ಹಾಗೂ ಸದಸ್ಯರಿಗೆ ಅಭಿನಂದನೆ ಸಲ್ಲಿಸಿ ಮಾತನಾಡಿದ ಅವರು, ನರೇಗಾ ಕಾಮಗಾರಿಗಳನ್ನು ಉತ್ತಮ ಗುಣಮಟ್ಟದಲ್ಲಿ ಅನುಷ್ಠಾನಗೊಳಿಸಿದ ಹಿನ್ನೆಲೆಯಲ್ಲಿ ರೋಣುರು ಗ್ರಾಮಪಂಚಾಯಿತಿ 2025–26 ಸಾಲಿನಲ್ಲಿ ಪ್ರಥಮ ಸ್ಥಾನ ಪಡೆದು ಉತ್ತಮ ಗ್ರಾಮ ಪಂಚಾಯಿತಿ […]

