ಮುಳಬಾಗಿಲು-ಆ-18 ಕೋಲಾರ ಜಿಲ್ಲೆಯಲ್ಲಿ ಬರಪೀಡಿತ ಜಿಲ್ಲೆಯೆಂದು ಘೋಷಣೆ ಮಾಡಿ ಬರನಿರ್ವಹಣೆಗೆ ಸಾವಿರ ಕೋಟಿ ಅನುದಾನವನ್ನು ಬಿಡುಗಡೆ ಮಾಡಿ ಪ್ರತಿ ಪಂಚಾಯ್ತಿಗೊಂದು ಗೋಶಾಲೆ ತೆರೆಯಬೇಕೆಂದು ಮಾನ್ಯ ಮುಖ್ಯ ಮಂತ್ರಿಗಳನ್ನು ಒತ್ತಾಯಿಸಿ ಆ-21 ರ ಸೋಮವಾರ ಜಾನುವಾರುಗಳ ಸಮೇತ ರಾಜ್ಯ ಹೆದ್ದಾರಿ ವಡ್ಡಹಳ್ಳಿ ಕ್ರಾಸ್ ಬಂದ್ ಮಾಡಲು ಪ್ರವಾಸಿ ಮಂದಿರದಲ್ಲಿ ಕರೆದಿದ್ದ ರೈತ ಸಂಘದ ಸಭೆಯಲ್ಲಿ ತೀರ್ಮಾನಿಸಲಾಯಿತು.ಮುಂಗಾರು ಮಳೆ ನಿರೀಕ್ಷೆಯಲ್ಲಿದ್ದ ರೈತರು ಕೃಷಿ ಚಟುವಟಿಕೆಗೆ ಬಿತ್ತನೆ ಬೀಜ ರಸಗೊಬ್ಬರಗಳು ಖರೀದಿ ಮಾಡಿ ಕಾತುರದಿಂದ ಕಾಯುತ್ತಿರುವ ರೈತರ ಮೇಲೆ ವರುಣನ ಕೋಪ […]
ಕೋಲಾರ:- ಕೋಲಾರ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯ ಯುವಕರು ಸೇನೆಗೆ ಆಯ್ಕೆಯಾಗುವ ಮೂಲಕ ದೇಶ ಸೇವೆಗೆ ತೆರಳಬೇಕು ಎಂದುಕೋಲಾರ ಕ್ರೀಡಾ ಸಂಘದ ಅಧ್ಯಕ್ಷರೂ ಹಾಗೂ ದಿಶಾ ಸಮಿತಿ ಸದಸ್ಯರಾದ ಸಾಮಾ ಅನಿಲ್ ಕುಮಾರ್ ಕರೆ ನೀಡಿದರು.ಕೋಲಾರ ಕ್ರೀಡಾಸಂಘದಿಂದ ತರಬೇತಿ ಪಡೆದು ಸೈನ್ಯಕ್ಕೆ ಆಯ್ಕೆಯಾದ ಅಗ್ನಿವೀರರಿಗೆ ಆತ್ಮೀಯವಾಗಿ ಸನ್ಮಾನಿಸಿ ಮಾತಾಡಿದ ಅವರು, ಬೇರೆ ಜಿಲ್ಲೆಗಳಂತೆ ಇಂದು ಕೋಲಾರ ಜಿಲ್ಲೆಯಿಂದ ಹೆಚ್ಚು ಯುವಕರು ಸೈನ್ಯಕ್ಕೆ ಸೇರುತ್ತಿರುವುದು ನಮ್ಮ ಜಿಲ್ಲೆಗೆ ಹೆಮ್ಮೆಯ ಸಂಗತಿ. ಈಗ ಆಯ್ಕೆಯಾದ ಅಗ್ನಿವೀರರು ಜಿಲ್ಲೆಯ ಯುವ ಸಮುದಾಯಕ್ಕೆ ಮಾದರಿಯಾಗಬೇಕು […]
ಕೋಲಾರ:- ಶೈಕ್ಷಣಿಕ ಇತಿಹಾಸದಲ್ಲೇ ಮೊದಲ ಬಾರಿಗೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದ್ವಿತೀಯ ಪಿಯುಸಿಗೆ 2ನೇ ಪೂರಕ ಪರೀಕ್ಷೆ ನಡೆಸಲು ಸರ್ಕಾರ ಆದೇಶಿಸಿದ್ದು, ಅದರಂತೆ ಆ.21 ರಿಂದ ಜಿಲ್ಲೆಯ ಒಟ್ಟು 6 ಕೇಂದ್ರಗಳಲ್ಲಿ ಈ ಪರೀಕ್ಷೆ ನಡೆಯಲಿರುವುದರಿಂದ ಸಕಲ ಸಿದ್ದತೆ ನಡೆಸಲಾಗಿದೆ ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷಾ ತಿಳಿಸಿದ್ದಾರೆ.ಈ ಕುರಿತು ಮಾಹಿತಿ ನೀಡಿರುವ ಅವರು, ಕಳೆದ ಮಾರ್ಚ್ ವಾರ್ಷಿಕ ಪರೀಕ್ಷೆ, ಮೇ ಪೂರಕ ಪರೀಕ್ಷೆ ಹಾಗೂ ಹಿಂದಿನ ವರ್ಷಗಳಲ್ಲಿ ದ್ವಿತೀಯ ಪಿಯುಸಿ ಅನುತ್ತೀರ್ಣರಾದ ಅಭ್ಯರ್ಥಿಗಳು ಈ ಪರೀಕ್ಷೆ ಬರೆಯುತ್ತಿದ್ದು, ಕೋಲಾರ, […]
ಶ್ರೀನಿವಾಸಪುರ: ತಾಲ್ಲೂಕಿನ ಜೆ.ತಿಮ್ಮಸಂದ್ರ ಗ್ರಾಮ ಪಂಚಾಯಿತಿಗೆ ಬುಧವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಟಿ.ವಿ.ನಾಗೇಶ್‌ರೆಡ್ಡಿ ಹಾಗೂ ಉಪಾಧ್ಯಕ್ಷರಾಗಿ ಭಾರತಮ್ಮ ಆಯ್ಕೆಯಾಗಿದ್ದಾರೆ. ಗ್ರಾಮ ಪಂಚಾಯಿತಿ ಒಟ್ಟು ಸದಸ್ಯರ ಸಂಖ್ಯೆ 17 ಆಗಿದ್ದು ಇಬ್ಬರು ಅಭ್ಯರ್ಥಿಗಳು ಗೈರಾಗಿದ್ದರು. ಹಾಗಾಗಿ ಟಿ.ವಿ.ನಾಗೇಶ್‌ರೆಡ್ಡಿ 11 ಮತ ಪಡೆದು ಗೆಲುವು ಸಾಧಿಸಿದರು. ಅವರ ಪ್ರತಿಸ್ಪರ್ಧಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸುಮಂಗಳ 4 ಮತ ಪಡೆದಿದ್ದಾರೆ. ಭಾರತಮ್ಮ 11 ಮತ ಪಡೆದು ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಬೆಂಬಲಿತ ಶಿಲ್ಪ 4 ಮತ […]
ಕೋಲಾರ : ಜಿಲ್ಲೆಯಲ್ಲಿ ಅಕ್ರಮ ಭೂ ಮಂಜೂರಾತಿ ಮಾಡಿರುವ ಪ್ರಕರಣಗಳನ್ನು ಪರಿಶೀಲಿಸಲು 14 ಜನರ ತಂಡದ ಸಮಿತಿಯನ್ನು ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅಕ್ರಂಪಾಷ ಅವರು ತಿಳಿಸಿದರು. ಇಂದು ಚಿಕ್ಕಮಗಳೂರು ಜಿಲ್ಲಾಧಿಕಾರಿಗಳು ಹಾಗೂ ಕೋಲಾರ ಜಿಲ್ಲೆಯ ಎಲ್ಲಾ ತಹಶೀಲ್ದಾರ್ ಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ನಂತರ ಪತ್ರಕರ್ತರೊಂದಿಗೆ ಅವರು ಮಾತನಾಡಿದರು. ಭೂಮಿ ಮಾನಿಟರಿಂಗ್ ಸೆಲ್‌ನಿಂದ ಕಳೆದ 10 ವರ್ಷಗಳಿಂದ ಸರ್ಕಾರದಿಂದ ಮಂಜೂರು ಮಾಡಲ್ಪಟ್ಟ ಜಾಗಗಳ ಸಮೂಲಾಗ್ರ ಮಾಹಿತಿಯನ್ನು ಸಮಿತಿಗೆ ನೀಡಲಿದೆ . ಸಮಿತಿಯು ಭೂ ಲಭ್ಯತಾ ಪಟ್ಟಿ ಅನುಸಾರ […]
ಕೋಲಾರ:- ಸ್ಫರ್ಧಾತ್ಮಕ ಪರೀಕ್ಷೆಗಳಲ್ಲಿ ಗುರಿ ಸಾಧನೆಗೆ ಕಲಿಕೆಯ ಹಸಿವು, ಛಲ, ಸತತ ಪರಿಶ್ರಮ, ಶ್ರದ್ಧೆ ಅಗತ್ಯವಾಗಿದ್ದು, ಸಂಕಲ್ಪದೊಂದಿಗೆ ಅಭ್ಯಾಸ ಮುಂದುವರೆಸಬೇಕು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಕೆ.ಶ್ರೀನಿವಾಸ್ ಕಿವಿಮಾತು ಹೇಳಿದರು.ಬುಧವಾರ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯಲ್ಲಿ ಸ್ಟಡೀ ಸರ್ಕಲ್ ಯೋಜನೆಯಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅಧಿಸೂಚಿತವಾಗಿರುವ ಹಲವು ಹುದ್ದೆಗಳ ಆಯ್ಕೆಗೆ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವಭಾವಿ ತಯಾರಿಗಾಗಿ ನಡೆಸಲಾದ ತರಬೇತಿಗೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧನೆಗೆ ದೈನಂದಿನ ವೃತ್ತಪತ್ರಿಕೆಗಳಲ್ಲಿ ಸಿಗುವ ಸಾಮಾನ್ಯ ಜ್ಞಾನ ನಿಮ್ಮದಾಗಿಸಿಕೊಳ್ಳಿ, […]
ಕೋಲಾರ ತಾಲ್ಲೂಕು ಅರಾಭಿಕೊತ್ತನೂರು ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಸ್ವಾತಂತ್ರ್ಯಹೋತ್ಸವದ ಹಿನ್ನಲೆಯಲ್ಲಿ ಭಾರತೀಯ ಯೋಧ ಆನಂದ್ ಕುಟುಂಬದವರು ಶಾಲೆಯ ಎಸ್ಸೆಸ್ಸೆಲ್ಸಿ ಸಾಧಕ ಕೆ.ಆರ್.ರಾಘವೇಂದ್ರ ಅವರಿಗೆ 5 ಸಾವಿರ ನಗದು ಪುರಸ್ಕಾರ ನೀಡಿ ಸನ್ಮಾನಿಸಿದರು. ಸಹೋದರರಾದ ಶಂಕರ್,ಆನಂದ್,ಶೇಖರ್, ಮೂರ್ತಿ,ಅಶೋಕ್, ಗೋವಿಂದರಾಜು, ಎಸ್‍ಡಿಎಂಸಿ ಸದಸ್ಯ ರಾಮಚಂದ್ರಪ್ಪ ಹಾಜರಿದ್ದರು.
ಕೋಲಾರ ತಾಲೂಕು ಮಾರ್ಜೇನಹಳ್ಳಿ ಗ್ರಾಮ ಪಂಚಾಯ್ತಿಯಲ್ಲಿ 77 ನೇ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ವಿದ್ಯಾಶ್ರೀ ಧ್ವಜಾರೋಹಣ ನೆರವೇರಿಸಿ ಕಾರ್ಯಕ್ರಮದ ಸ್ಮರಣೆಗಾಗಿ ಪಂಚಾಯ್ತಿ ಆವರಣದಲ್ಲಿ ಸಸಿ ನೆಟ್ಟರು. ಪಿಡಿಒ ನಾರಾಯಣಸ್ವಾಮಿ ಇತರೇ ಸದಸ್ಯರು ಹಾಜರಿದ್ದರು.
ಕೋಲಾರ:- ದೇಶವನ್ನು ಗುಲಾಮಗಿರಿಯಿಂದ ಮುಕ್ತಗೊಳಿಸಲು ಶ್ರಮಿಸಿದ ಮಹನೀಯರ ತ್ಯಾಗ,ಬಲಿದಾನ ಮಾಡಿದ್ದಾರೆ ಅವರ ತ್ಯಾಗ ವ್ಯರ್ಥವಾಗದಂತೆ ನಾವೆಲ್ಲಾ ದೇಶದ ಘನತೆ ಹೆಚ್ಚಿಸೋಣ, ದೇಶಕ್ಕಾಗಿ ನಾವು ಎಂದು ಸಾರೋಣ ಎಂದು ತಾಲ್ಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢಶಾಲೆ ಎಸ್‍ಡಿಎಂಸಿ ಅಧ್ಯಕ್ಷ ಎ.ಮಹೇಂದ್ರ ಕರೆ ನೀಡಿದರು.ತಾಲ್ಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಿದ ನಂತರ ಮಾತನಾಡಿದ ಅವರು, ಗಾಂಧೀಜಿ,ಪಟೇಲ್,ನೆಹರು,ತಿಲಕ್,ನೇತಾಜಿ,ಅಜಾದ್,ಭಗತ್‍ಸಿಂಗ್ ಮತ್ತಿತರ ಸಾವಿರಾರು ಮಂದಿ ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಿದ್ದಾರೆ, ಅವರ ತ್ಯಾಗ,ಬಲಿದಾನದಿಂದ ನಾವಿಂದು ಸಂಭ್ರಮಿಸುತ್ತಿದ್ದೇವೆ ಎಂದರು.ಪರಕೀಯರ ದಾಳಿಯಿಂದ ಬಿಡುಗಡೆಯಾದ ಈ ದಿನವನ್ನು ನಾವು […]

