
ಶ್ರೀನಿವಾಸಪುರ 1 : ಗ್ರಾಮೀಣ ಭಾಗದಲ್ಲಿನ ಕಲಾವಿದರು ಪುರಾತನ ಕಲೆಗಳಿಗೆ ಜೀವ ತುಂಬಿ ಬೆಳಸುತ್ತಿದ್ದಾರೆ ಎಂದು ಹಿರಿಯ ಕಲಾವಿದ ಪಿ.ಮುನಿರೆಡ್ಡಿ ಹೇಳಿದರು.ತಾಲೂಕಿನ ಆರಮಾಕನ ಶೆಟ್ಟಿಹಳ್ಳಿ ಗ್ರಾಮದ ಶ್ರೀ ವೇಣುಗೋಪಾಲಸ್ವಾಮಿ ದೇವಾಲಯದ ಆವರಣದಲ್ಲಿ ಗುರುವಾರ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕೋಲಾರ. ಸಂಯುಕ್ತಾಶ್ರಯದಲ್ಲಿ ಗಿರಿಜನ ಯೋಜನೆಯಡಿ ಗ್ರಾಮದ ಶ್ರೀ ವಾಲ್ಮೀಕಿ ಸಂಘದ ವತಿಯಿಂದ ಜಾನಪದ ಗೀತೆ, ತತ್ವಪದಗಳ ಸಾಂಸ್ಕøತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ವಾಟ್ಸ್‍ಪ್, ಫೇಸ್‍ಬುಕ್ ಹಾಗು ಟಿವಿ ಸೀರಿಯಲ್ ಗಳ ಮಧ್ಯೆ ಜಾನಪದ, ತತ್ವಪದಗಳ ಪುರಾತನ ಕಲೆಗಳನ್ನು ಉಳಿಸಿ […]

ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ವತಿಯಿಂದ ಇತ್ತೀಚಿಗೆ ಪಟ್ಟಣದ ಕಸ್ತೂರಿಬಾ ಜ್ಞಾನವಿಕಾಶ ಕೇಂದ್ರದಲ್ಲಿ ಕೇಂದ್ರದ ಸದಸ್ಯರಿಗೆ ನಿಮೂನೀಯಾ ರೋಗದ ಲಕ್ಷಣಗಳ ಬಗ್ಗೆ ಹಾಗೂ ರೋಗ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಜ್ಞಾನ ವಿಕಾಶ ಕೇಂದ್ರದ ಸಮನ್ವಯಾಧಿಕಾರಿ ಈರಮ್ಮ ನಾಗನಾಳ ವಿವರಿಸಿದರು. ಸೇವಾಪ್ರತಿನಿದಿ ಉಮಾ ಹಾಗೂ ಸದಸ್ಯರು ಇದ್ದರು

ಶ್ರೀನಿವಾಸಪುರ 1 : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಗ್ರಾಮದ ಪ್ರತಿಯೊಂದು ಕುಟುಂಬದವರು ಹಾಗು ಗ್ರಾಮಸ್ಥರು ಬಳಸಿಕೊಂಡು ಅಭಿವೃದ್ಧಿಯಾಗಬೇಕು ಎಂದು ಕೋಲಾರ ಜಿಲ್ಲಾ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ನಿರ್ದೇಶಕ ಕೆ.ಮುರಳಿಧರಶೆಟ್ಟಿ ಹೇಳಿದರು.ತಾಲೂಕಿನ ದೊಡಮಲದೊಡ್ಡಿ ಗ್ರಾಮದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದ ಜೀರ್ಣೋಧ್ಧಾರಕ್ಕಾಗಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘವತಿಯಿಂದ 2.50 ಲಕ್ಷ ರೂ ಗಳ ಡಿಡಿಯನ್ನು ದೇವಸ್ಥಾನದ ಆಡಳಿತ ಮಂಡಲಿಗೆ ಬುಧವಾರ ಹಸ್ತಾಂತರಿಸಿದರು.ತಾಲೂಕು ಯೋಜನಾಧಿಕಾರಿ ಎಸ್.ಸುರೇಶ್‍ಗೌಡ, ದೇವಸ್ಥಾನ ಕಮಿಟಿ ಅಧ್ಯಕ್ಷ ಎಂ.ಶ್ರೀನಿವಾಸಪ್ಪ, ಉಪಾಧ್ಯಕ್ಷ ಮುನಿರಾಜು, ಹಾಗೂ […]

ಶ್ರೀನಿವಾಸಪುರ 2 : ಕ್ಷೇತ್ರದ ಅಭಿವೃದ್ದಿಯೇ ನನ್ನ ಮೂಲ ಮಂತ್ರ, ನನಗೆ ಮತ ಹಾಕಿದ ಜನತೆಯ ಅಭಿವೃದ್ದಿಯೇ ನನ್ನ ಗುರಿ ಎಂದು ಶಾಸಕ ಕೆ.ಆರ್.ರಮೇಶ್‍ಕುಮಾರ್ ಹೇಳಿದರು.ತಾಲೂಕಿನ ನಂಬಿಹಳ್ಳಿ ಗ್ರಾಮದಲ್ಲಿ ಗುರುವಾರ ನಡೆದ ಪ್ರಗತಿ ಪರಿಶೀಲನಾ ಸಭೆ ಹಾಗು ಕುಂದ ಕೊರತೆ ಸಭೆಗೆ ಚಾಲನೆ ನೀಡಿ ಮಾತನಾಡಿದರು.ನನ್ನ ಕ್ಷೇತ್ರಕ್ಕೆ ಸಂಬಂದಿಸಿದ ಗ್ರಾಮಗಳಲ್ಲಿ ಬಡಕುಟುಂಬಗಳ ಸಂಖ್ಯೆಯೇ ಹೆಚ್ಚಾಗಿದ್ದು , ಅವರ ಅಭಿವೃದ್ದಿಯೇ ನನ್ನ ಗುರಿ . ಅವರಿಗೆ ಸರ್ಕಾರದ ಯೋಜನೆಗಳಿಂದ ಸಿಗುವ ಸವಲತ್ತುಗಳನ್ನು ಪಕ್ಷಾತೀತವಾಗಿ ಮನೆಯ ಬಾಗಿಲಿಗೆ ನೀಡಿ, ಮತದಾರನ […]

ಶ್ರೀನಿವಾಸಪುರ 1 : ತಾಲೂಕಿನ ದಳಸನೂರು ಗ್ರಾಮಪಂಚಾಯಿತಿ ಉಪಾಧ್ಯಕ್ಷರ ಚುನಾವಣೆಯಲ್ಲಿ ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಕೊಡಿಚೆರುವು ಶಿವಾರೆಡ್ಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ದಳಸನೂರು ಗ್ರಾಮಪಂಚಾಯತಿಗೆ ಸಂಬಂದಿಸಿದಂತೆ ಒಟ್ಟು 16 ಸದಸ್ಯರಿದ್ದು, ಕಾಂಗ್ರೆಸ್ ಬೆಂಬಲಿತ 11 ಸದಸ್ಯರಿದ್ದು, ಜೆಡಿಎಸ್ ಬೆಂಬಲಿತ 5 ಸದಸ್ಯರು ಇದ್ದಾರೆ. ಈ ಹಿಂದೆ ಇದ್ದ ಉಪಾಧ್ಯಕ್ಷರಾಗಿ ವಿ.ಜಗದೀಶ್ ಕಾರ್ಯನಿರ್ವಹಿಸಿ ರಾಜಿನಾಮೆಯಿಂದ ತೆರವುಗೊಂಡಿದ್ದ ಉಪಾಧ್ಯಕ ಸ್ಥಾನಕ್ಕೆ ಬುಧವಾರ ನಡೆದ ಚುನಾವಣೆಗೆ ಕೊಡಿಚೆರುವು ಶಿವಾರೆಡ್ಡಿ ಏಕೈಕ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಉಪಾಧ್ಯಕ್ಷರಾಗಿ ಶಿವಾರೆಡ್ಡಿ ಆಯ್ಕೆಯಾಗಿದ್ದಾರೆಂದು ಚುನಾವಣಾ ಅಧಿಕಾರಿ ರೇಷ್ಮೆ ಇಲಾಖೆ […]

ರಾಯಲ್ಪಾಡು ಹೋಬಳಿಯ ಕೊರಕೋನಪಲ್ಲಿ ಗ್ರಾಮದ ಸಮೀಪ ಮಂಗಳವಾರ ಜಿಂಕೆಯೊಂದನ್ನ ನುಂಗಿ ಪರದಾಡುತ್ತಿದ್ದ ಸಮಯದಲ್ಲಿ ಬೃಹತ್ ಗಾತ್ರದ ಹೆಬ್ಬಾವುನಿಂದ .ಜಿಂಕೆಯನ್ನು ರಕ್ಷಣೆ ಮಾಡಲು ಮುಂದಾದ ವ್ಯಕ್ತಿಯ ಮೇಲೆ ದಾಳಿ ನಡೆಸಿದ ಹೆಬ್ಬಾವು. ಸುಮಾರು 20 ಅಡಿ ಉದ್ದದ 50 ಕೆಜಿ ತೂಕದ ಹೆಬ್ಬಾವು. ಹೆಬ್ಬಾವಿನಿಂದ ಜಿಂಕೆ ರಕ್ಷಣೆ ಮಾಡಲು ಪ್ರಯತ್ನಿಸಿದ ಗ್ರಾಮಸ್ಥರು. ದರೆ ಹೆಬ್ಬಾವಿನ ಹೊಟ್ಟೆಯಲ್ಲಿ ಜಿಂಕೆ ಮೃತವಾಗಿರುವ ಬಗ್ಗೆ ಮಾಹಿತಿ ಲಭಿಸಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಬೇಟಿ ಪರಿಶೀಲನೆ ಮಾಡಿದರು.

ಶ್ರೀನಿವಾಸಪುರ: ರಾಜ್ಯದ ಸರ್ವತೋಮು ಅಭಿವೃದ್ಧಿಗೆ ಪ್ರಾದೇಶಿಕ ಪಕ್ಷವಾದ ಜೆಡಿಎಸ್‍ನ್ನು ಬೆಂಬಲಿಸಬೇಕು ಎಂದು ರಾಜ್ಯ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮನವಿ ಮಾಡಿದರು. ಪಟ್ಟಣದ ವಿವೇಕಾನಂದ ವೃತ್ತದಲ್ಲಿ ಚೈತನ್ಯ ಜನ ಜಾಗೃತಿ ವೇದಿಕೆ ವತಿಯಿಂದ ರಾಜ್ಯೋತ್ಸವದ ಅಂಗವಾಗಿ ಏರ್ಪಡಿಸಿದ್ದ ರಸ ಸಂಜೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕಾಂಗ್ರೆಸ್ ಆಡಳಿತದಲ್ಲಿ ದೇಶ ಅಥವಾ ರಾಜ್ಯ ಅಭಿವೃದ್ಧಿ ಕಂಡಿಲ್ಲ. ಬಿಜೆಪಿ ಮತೀಯ ಭಾವನೆ ಕೆರಳಿಸುವುದರಲ್ಲಿ ನಿರತವಾಗಿದೆ. ಆಡಳಿತ ನಡೆಸಿದ ಕಾಂಗ್ರೆಸ್ ಮುಖಂಡರು ಮೂರು ತಲೆಮಾರಿಗೆ ಸಾಕಾಗುಷ್ಟು ಸಂಪತ್ತು ಗಳಿಸಿದ್ದಾರೆ. […]

ಕೋಲಾರ:- ಜಿಲ್ಲೆಯಲ್ಲಿ ಆರಂಭವಾಗಿರುವ ಬೃಹತ್ ಕಂಪನಿಗಳು ತಮ್ಮ ಸಿಎಸ್‍ಆರ್ ನಿಧಿಯಿಂದ ಸರ್ಕಾರಿ ಶಾಲೆಗಳ ಸಮಗ್ರ ಅಭಿವೃದ್ದಿಗೆ ಕೊಡುಗೆ ನೀಡಲು ಮುಂದೆ ಬರಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ದೇವರಾಜ್ ಮನವಿ ಮಾಡಿದರು.ತಾಲ್ಲೂಕಿನ ಕ್ಯಾಲನೂರು ಕರ್ನಾಟಕ ಪಬ್ಲಿಕ್ ಶಾಲೆಗೆ ವಿಸ್ಟ್ರಾನ್ ಕಂಪನಿ ಅಧಿಕಾರಿಗಳ ಮನವೊಲಿಸಿ ಶಾಲೆಗೆ ಕರೆತಂದಿದ್ದ ಎಸ್ಪಿಯವರು ಶಾಲೆ ಆವರಣದಲ್ಲಿ ಕಳೆದ ಬಾರಿ ಬಿದ್ದ ಮಳೆಗೆ ನೆಲಸಮವಾಗಿದ್ದ ಎರಡು ಕೊಠಡಿಗಳನ್ನು ತೋರಿಸಿ ಮಾತನಾಡುತ್ತಿದ್ದರು.ಸರ್ಕಾರಿ ಶಾಲೆಗಳಿಗೆ ಸರ್ಕಾರ ಸೌಲಭ್ಯ ನೀಡುತ್ತಿದೆ ಆದರೆ ಇಂದಿ ಸ್ಪರ್ಧಾತ್ಮಕ ಪೈಪೋಟಿಗೆ ಅನುಗುಣವಾಗಿ ಬಲವರ್ಧನೆಗೆ […]

ಶ್ರೀನಿವಾಸಪುರ: ರಾಜ್ಯದ ಅಭಿವೃದ್ಧಿಗಾಗಿ ಮತದಾರರು ರಾಷ್ಟ್ರೀಯ ಪಕ್ಷಗಳನ್ನು ತಿರಸ್ಕರಿಸಬೇಕು ಎಂದು ಮಾಜಿ ಮುಖ್ಯ ಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.ತಾಲ್ಲೂಕಿನ ರೋಜೇನಹಳ್ಳಿ ಕ್ರಾಸ್ ಸಮೀಪ ಜೆಡಿಎಸ್ ಪಂಚರತ್ನ ರಥಯಾತ್ರೆ ಪ್ರಯುಕ್ತ ಮಂಗಳವಾರ ಏರ್ಪಡಿಸಿದ್ದ ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡಿದ ಅವರು, ಜಿಲ್ಲೆಗೆ ಎತ್ತಿನ ಹೊಳೆ ನೀರಿಗೆ ಬದಲಾಗಿ, ಕೆಸಿ ವ್ಯಾಲಿ ಕೊಳಚೆ ನೀರು ಹರಿಸಲಾಗುತ್ತಿದೆ. ಅಂಥ ನೀರು ಬಳಸಿಕೊಂಡು ಬೆಳೆದ ಟೊಮೆಟೊ ತರಕಾರಿಗೆ ಬೆಲೆ ಸಿಗುತ್ತಿಲ್ಲ ಎಂದು ಹೇಳಿದರು.ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ರೈತರ ಮಕ್ಕಳು ಸ್ವಾಭಿಮಾನದಿಂದ ಬದುಕಲು ಪೂರಕವಾದ ಎಲ್ಲ […]