
ಕೋಲಾರ,ನ.10: ತೊಟ್ಲಿ ಗ್ರಾಮ ಪಂಚಾಯತಿಯಲ್ಲಿ ಅರ್ಹ ಫಲಾನುಭವಿಗಳಿಗೆ ಮನೆಯನ್ನ ನೀಡದೆ ವಂಚಿಸಿರುವ ಪಂಚಾಯತಿ ಅಧ್ಯಕ್ಷರು, ಅಧ್ಯಕ್ಷರ ಪತಿ ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಗ್ರಾಮಸ್ಥರು ಮತ್ತು ಗ್ರಾಮ ಪಂಚಾಯತಿ ಸದಸ್ಯರು ಮನವಿ ಸಲ್ಲಿಸಿದ್ದಾರೆ.ತಾಲೂಕಿನ ತೊಟ್ಲಿ ಗ್ರಾಮ ಪಂಚಾಯಿತಿಯಲ್ಲಿ ಸುಮಾರು 4 ವರ್ಷಗಳಿಂದ ದಲಿತ ಕುಟುಂಬಕ್ಕೆ ಸೇರಿದ ನಾಗವೇಣಿ ಕೋಂ ಮೇಘನಾಥ್ ಎಂಬ ದಲಿತ ಕುಟುಂಬವು ಗುಡಿಸಿಲಿನಲ್ಲಿ ವಾಸವಾಗಿದ್ದು, ಮಳೆ ಗಾಳಿ ಬಂದ ಸಂದರ್ಭದಲ್ಲಿ ಅಂಬೇಡ್ಕರ್ ಭವನದ […]

ಮುಳಬಾಗಿಲು ನ-10, ಜಿಲ್ಲಾದ್ಯಂತ ರೈತರಿಗೆ ವಂಚನೆ ಮಾಡಿರುವ ಪಸಲ್ ಭೀಮ ವಿಮೆ ಕಂಪನಿ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಿ ಮುಂಗಾರು ಮಳೆ ಬೆಳೆ ನಷ್ಟ ಪರಿಹಾರ ಬಿಡುಗಡೆ ಮಾಡುವಂತೆ ರೈತ ಸಂಘದಿಂದ ವಡ್ಡಹಳ್ಳಿ ರಾಜ್ಯ ಹೆದ್ದಾರಿಯನ್ನು ನಷ್ಟ ಬೆಳೆ ಸಮೇತ ಬಂದ್ ಮಾಡಿ ತೋಟಗಾರಿಕೆ ಹಾಗೂ ಕೃಷಿ ಅಧಿಕಾರಿಗಳು ರವಿಕುಮಾರ್ ರವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.ಕೃಷಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ವಿಮಾ ಕಂಪನಿಗಳೊಂದಿಗೆ ಶಾಮೀಲಾಗಿ ರೈತರು ಕತ್ತು ಹಿಸುಕುವ ಕೆಲಸ ಮಾಡುತ್ತಿದ್ದಾರೆ. ಇದೊಂದು ರೀತಿಯಲ್ಲಿ […]

ಕೋಲಾರ : – ರಾಜ್ಯ ಸರ್ಕಾರಿ ನೌಕರರ ಸಂಘದ ಕ್ರಿಯಾಶೀಲ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಅವರ ಪ್ರಯತ್ನದಿಂದಾಗಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಮುಖ್ಯ ಮಂತ್ರಿಗಳು ನೀಡಿದ ಭರವಸೆಯಂತೆ ಸುಮಾರು ೧೫೦೦ ಪಿಡಿಒಗಳ ಹುದ್ದೆಗಳನ್ನು ಗ್ರೂಪ್ ‘ ಬಿ ‘ ವೃಂದದ ಗ್ರೇಡ್ -೧ ಪಿಡಿಒ ಹುದ್ದೆಗೆ ಮೇಲ್ದರ್ಜೆಗೇರಿಸುವ ಕಡತಕ್ಕೆ ಮುಖ್ಯಮಂತ್ರಿಗಳು ಅನುಮೋದನೆ ನೀಡಿದ್ದಾರೆ ಎಂದು ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಜಿ.ಸುರೇಶ್ಬಾಬು ತಿಳಿಸಿದ್ದಾರೆ . ಈ ಕುರಿತು ಮಾಹಿತಿ ನೀಡಿರುವ ಅವರು , ವಿವಿಧ […]

ಶ್ರೀನಿವಾಸಪುರ: ಭಾರತೀಯ ಜೀವ ವಿಮಾ ನಿಗಮದ ಪ್ರತಿನಿಧಿಗಳು ಜನರಲ್ಲಿ ಜೀವ ವಿಮೆ ಅಗತ್ಯ ಕುರಿತು ಅರಿವು ಮೂಡಿಸಬೇಕು. ವಿಮೆ ಮಾಡಿಸುವಂತೆ ಪ್ರೇರೇಪಿಸಬೇಕು ಎಂದು ಜಿಲ್ಲಾ ಎಲ್ಐಸಿ ಶಾಖೆ ವ್ಯಸ್ಥಾಪಕ ಸಿದ್ದೇಶ್ ಹೇಳಿದರು.ಪಟ್ಟಣದ ಎಲ್ಐಸಿ ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಎಲ್ಐಸಿ ಪ್ರತಿನಿಧಿಗಳ ಮಾತನಾಡಿದ ಅವರು, ಆರೋಗ್ಯ ವಿಮಾ ಸೌಲಭ್ಯ ಜನಾರೋಗ್ಯ ಕ್ಷೇತ್ರದಲ್ಲಿ ಮಹತ್ವ ಪಡೆದಿದೆ ಎಂದು ಹೇಳಿದರು.ಗ್ರಾಮೀಣ ಪ್ರದೇಶದಲ್ಲಿ ಜೀವ ವಿಮೆ ಮಾಡಿಸುವ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕಾದ ಅಗತ್ಯವಿದೆ. ಆರ್ಥಿಕ ಸಮಸ್ಯೆಗಳು ಗ್ರಾಮೀಣರನ್ನು […]

ಕೋಲಾರ;ನ.8: ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ತಾಯಿ-ಮಕ್ಕಳ ಸಾವಿಗೆ ಕಾರಣರಾಗಿರುವ ವೈದ್ಯ-ಸಿಬ್ಬಂದಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಿ, ಆಸ್ಪತ್ರೆಗಳಲ್ಲಿ ಮುಂದೆ ಇಂತಹ ಅಹಿತಕರ ಘಟನೆ ನಡೆಯದಂತೆ ಜಾಗೃತಿವಹಿಸಬೇಕೆಂದು ಆಗ್ರಹಿಸಿ ರೈತಸಂಘದಿಂದ ಆರೋಗ್ಯಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.ಮನವಿ ಸಲ್ಲಿಸಿ ಮಾತನಾಡಿದ ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಜನತೆಯ ಹಣದಿಂದ ನಡೆಯುವ ಸರ್ಕಾರಿ ಆಸ್ಪತ್ರೆಗಳಿರುವುದು ಬಡವರಿಗಾಗಿ ಆದರೆ, ಅದೇ ಸರ್ಕಾರಿ ಆಸ್ಪತ್ರೆಗಳಿಂದ ಜಾಗತಿಕ ಮಟ್ಟದಲ್ಲಿ ಕರ್ನಾಟಕಕ್ಕೆ ಕೆಟ್ಟ ಹೆಸರು ಬರುತ್ತಿರುವುದು ಎಲ್ಲರೂ ತಳಮಳಪಡಬೇಕಾದ ಸಂಗತಿ ಬೇಸರ ವ್ಯಕ್ತಪಡಿಸಿದರು.ತುಮಕೂರಿನ ಸರ್ಕಾರಿ ಆಸ್ಪತ್ರೆಯಲ್ಲಿ […]

ಶ್ರೀನಿವಾಸಪುರ 1 : ಕಾಲು ಬಾಯಿ ಜ್ವರ ರೋಗವು ಒಂದು ಹಸುವಿನಿಂದ ಮೊತ್ತೊಂದು ಹಸುವಿಗೆ ರೋಗವನ್ನು ಹರಡವುದನ್ನು ತಡೆಯಬೇಕಾದಲ್ಲಿ ಕಡ್ಡಾಯವಾಗಿ ಲಸಿಕೆಯನ್ನು ಹಾಕಿಸಬೇಕು ಎಂದು ಕೋಮುಲ್ ನಿರ್ದೇಶಕ ಎನ್.ಹನುಮೇಶ್ ಸಲಹೆ ನೀಡಿದರು.ತಾಲೂಕಿನ ಗುಂಡಮನತ್ತ ಗ್ರಾಮದ ಹಾಲು ಉತ್ಪಾದಕರ ಸಹಾಕರ ಸಂಘದ ಆವರಣದಲ್ಲಿ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ, ಶ್ರೀನಿವಾಸಪುರ ಹಾಗೂ ಕೋಲಾರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ, ಶ್ರೀನಿವಾಸಪುರ ಇವರ ಸಂಯುಕ್ತಾಶ್ರಯದಲ್ಲಿ ಎನ್ಎಡಿಸಿಪಿ ಯೋಜನೆಯಲ್ಲಿ ಕಾಲುಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಮಂಗಳವಾರ […]

ಕೋಲಾರ : ೨೦೨೨-೨೩ನೇ ಸಾಲಿನ ಪದವೀಧರ ಪ್ರಾಥಮಿಕ ಶಾಲಾ ಹಾಗೂ ೬ ರಿಂದ ೮ ನೇ ತರಗತಿ ಪದವೀಧರ ಶಿಕ್ಷಕ ವೃಂದದ ಹುದ್ದೆಗಳ ನೇಮಕಕ್ಕೆ ಸಂಬಂಧಿಸಿದಂತೆ ಭಾನುವಾರ ನಗರದ ೨೩ ಕೇಂದ್ರಗಳಲ್ಲಿ ನಡೆದ ಶಿಕ್ಷಕರ ಅರ್ಹತಾ ಪರೀಕ್ಷೆ ಬಿಗಿ ಬಂದೋಬಸ್ತ್ ನಡುವೆ ಯಶಸ್ವಿಯಾಗಿ ನಡೆದಿದ್ದು , ಪರೀಕ್ಷೆಗೆ ನೋಂದಾಯಿಸಿದ್ದ ೮೩೨೬ ಮಂದಿ ಪೈಕಿ ೭೦೧ ಮಂದಿ ಗೈರಾಗಿದ್ದಾರೆ ಎಂದು ಪರೀಕ್ಷಾ ನೋಡಲ್ ಅಧಿಕಾರಿ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಕೃಷ್ಣಮೂರ್ತಿ ತಿಳಿಸಿದರು .ಈ […]

ಕೋಲಾರ : ೨೦೨೨-೨೩ನೇ ಸಾಲಿನ ಪದವೀಧರ ಪ್ರಾಥಮಿಕ ಶಾಲಾ ಹಾಗೂ ೬ ರಿಂದ ೮ ನೇ ತರಗತಿ ಪದವೀಧರ ಶಿಕ್ಷಕ ವೃಂದದ ಹುದ್ದೆಗಳ ನೇಮಕಕ್ಕೆ ಸಂಬಂಧಿಸಿದಂತೆ ಶಿಕ್ಷಕರ ಅರ್ಹತಾ ಪರೀಕ್ಷೆ ಭಾನುವಾರ ನಡೆಯುತ್ತಿದ್ದು , ಕೇಂದ್ರದೊಳಕ್ಕೆ ಶೂ , ಬೆಲ್ಟ್ ಗೂ ನಿಷೇಧ ಹಾಕಲಾಗಿದೆ ಎಂದು ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಕೃಷ್ಣಮೂರ್ತಿ ತಿಳಿಸಿದರು. ಶಿಕ್ಷಕರ ಅರ್ಹತಾ ಪರೀಕ್ಷೆಗೆ ಸಂಬಂಧಿಸಿದಂತೆ ಕೇಂದ್ರಗಳಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಪರಿಶೀಲನೆ ನಡೆಸಿದ ನಂತರ ಮಾಧ್ಯಮದೊಂದಿಗೆ ಮಾತನಾಡಿದ […]

ಶ್ರೀನಿವಾಸಪುರ: ಮಾವು ಬೆಳೆಗಾರರಿಗೆ ಫಸಲ್ ಬಿಮಾ ಯೋಜನೆಯಡಿ ಪರಿಹಾರ ಕೊಡಿಸುವಂತೆ ಆಗ್ರಹಿಸಿ ನ.9 ರಂದು ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಹಾಕಲಾಗುವುದು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಪಾತಕೋಟ ನವೀನ್ ಕುಮಾರ್ ಹೇಳಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಏರ್ಪಡಿಸಿದ್ದ ಜಿಲ್ಲಾ ಮಾವು ಬೆಳೆಗಾರರ ಹೋರಾಟ ಸಮಿತಿ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಮಾವಿನ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಅನ್ಯಾಯ ಮಾಡಲಾಗುತ್ತಿದೆ. ಬೆಳೆಗಾರರು ಕಡಿಮೆ ಸಂಖ್ಯೆಯಲ್ಲಿ ಇರುವ ಕಡೆ ಮಾತ್ರ ಬೆಳೆ […]