ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ: ತಾಲೂಕು ಕಚೇರಿ ಅವ್ಯವಸ್ಥೆಯನ್ನು ಸರಿಪಡಿಸಿ ಸರ್ಕಾರಿ ಆಸ್ತಿಗಳಿಗೆ ಅಕ್ರಮ ದಾಖಲಾತಿ ಸೃಷ್ಠಿ ಮಾಡುವ ಕಂದಾಯ ಅಧಿಕಾರಿಗಳ ವಿರುದ್ಧ ಕ್ರಮಕೈಗೊಂಡು ಇಲಾಖೆಯಲ್ಲಿ ದಲ್ಲಾಳಿಗಳ ಹಾವಳಿಗೆ ಕಡಿವಾಣ ಹಾಕಬೇಕೆಂದು ರೈತಸಂಘದಿಂದ ತಾಲೂಕು ಕಚೇರಿಯೆದುರು ಪ್ರತಿಭಟನೆ ನಡೆಸಿ, ತಹಸೀಲ್ದಾರ್ ಹನ್ಸಾಮರಿಯಾ ರವರಿಗೆ ಮನವಿ ನೀಡಿ ಆಗ್ರಹಿಸಲಾಯಿತು.ತಾಲೂಕು ಕಚೇರಿ ಅವ್ಯವಸ್ಥೆಗಳ ಹಾಗೂ ದಲ್ಲಾಳಿಗಳ ಇಲಾಖೆಯಾಗಿ ಮಾರ್ಪಟ್ಟಿದೆ. ಜನಸಾಮಾನ್ಯರು ಪ್ರತಿ ದಾಖಲೆಗೂ ತಿಂಗಳಾನುಗಟ್ಟಲೇ ಕಚೇರಿಗೆ ಅಲೆದಾಡಬೇಕಾದ ಪರಿಸ್ಥಿತಿ ಜೊತೆಗೆ ಅಧಿಕಾರಿಗಳನ್ನು ಸಂರ್ಪಕ ಮಾಡಬೇಕಾದರೆ ದಲ್ಲಾಳಿಗಳ ನೆರಳಿಲ್ಲದೆ ಇಲಾಖೆಯ ಬಾಗಿಲಿಗೂ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಮೇಡಿತಂಬಿಹಳ್ಳಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಉದ್ಘಾಟಿಸಿದ ಕೋಚಿಮುಲ್ ನಿರ್ದೇಶಕ ಡಿ.ವಿ.ಹರೀಶ್, ನೂತನ ಕಟ್ಟಡ ನಿರ್ಮಾಣಕ್ಕೆ ಕೋಚಿಮುಲ್‍ನಿಂದ 13.5 ಲಕ್ಷ ರೂ ಬಿಡುಗಡೆ ಮಾಡಿಸುವುದಾಗಿಯೂ ಮತ್ತು ಗಣಕಯಂತ್ರ ಸೌಲಭ್ಯ ಒದಗಿಸುವುದಾಗಿಯೂ ಭರವಸೆ ನೀಡಿದರು.ತಾಲ್ಲೂಕಿನ ಮೇಡಿತಂಬಿಹಳ್ಳಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹೈನೋದ್ಯಮದಲ್ಲಿ ಪರಿಶ್ರಮ ಮಹಿಳೆಯರದ್ದೇ ಆಗಿದೆ, ಇಂದು ಕೋಲಾರ ಜಿಲ್ಲೆಯ ಹೈನೋದ್ಯಮದ ಸಾಧನೆಗೆ ತಾಯಂದಿರೇ ಕಾರಣ ಎಂದರು.ಸಹಕಾರ ರಂಗದಲ್ಲಿ ಮಹಿಳೆಯರು ಎಲೆಮರೆಯ ಕಾಯಂತೆ ಪರಿಶ್ರಮ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಸರ್ಕಾರಿ ಶಾಲೆಗಳ ಬಲವರ್ಧನೆಗೆ ಸದಾ ಶ್ರಮಿಸುತ್ತಿರುವ ಶಿಕ್ಷಕ ಗೆಳೆಯರ ಬಳಗ ತನ್ನ ಕಾಯಕ ನಿರಂತರವಾಗಿ ಮುಂದುವರೆಸಿ, ಮತ್ತಷ್ಟು ಶಾಲೆಗಳ ಸಮಗ್ರ ಅಭಿವೃದ್ದಿಗೆ ಕಾರಣವಾಗಲಿ ಎಂದು ಕೋಲಾರ ಪ್ರಭಾರ ಬಿಇಒ ಆಗಿದ್ದು, ಈಗ ಮಾಲೂರು ಬಾಲಕರ ಪಿಯು ಕಾಲೇಜು ಉಪಪ್ರಾಂಶುಪಾಲರಾಗಿ ವರ್ಗಾವಣೆಯಾಗಿರುವ ರಾಮಕೃ ಷ್ಣಪ್ಪ ಕರೆ ನೀಡಿದರು.ನಗರದ ಸ್ಕೌಟ್ಸ್‍ಗೈಡ್ಸ್ ಭವನದಲ್ಲಿ ಶಿಕ್ಷಕ ಗೆಳೆಯರ ಬಳಗ ನೀಡಿದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಇಡೀ ತಾಲ್ಲೂಕಿನ ಎಲ್ಲಾ ಸರ್ಕಾರಿ ಶಾಲಾ ಮಕ್ಕಳಿಗೆ ಕಳೆದ 10 […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ 1 : ವಿದ್ಯೆಯು ಕದಿಯಲಾಗದ ಸಂಪತ್ತು , ಪೋಷಕರು ತಮ್ಮ ಮಕ್ಕಳಿಗೆ ಆಸ್ತಿ , ಅಂತಸ್ತು ಮಾಡುವುದರ ಬದಲು ವಿದ್ಯೆ ಎಂಬ ಸಂಪತ್ತನ್ನು ಮಾಡಿಕೊಡಿ ಎಂದು ಇಒ ಎಸ್.ಆನಂದ್ ಕರೆ ನೀಡಿದರು.ಪಟ್ಟಣದ ನೌಕರರ ಭವನದಲ್ಲಿ ಶನಿವಾರ ಸ್ನೇಹ ಸಂಗಮ ಸೇವಾ ಟ್ರಸ್ಟ್ ವತಿಯಿಂದ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ವಿದ್ಯೆಯಂಬದನ್ನು ಸಹೋದರರೊಂದಿಗೆ ಆಗಲಿ, ಕಳ್ಳರಿಂದಾಗಲಿ, ರಾಜನಿಂದಗಾಲಿ ಹಂಚಿಕೊಳ್ಳಲು ಸಾಧ್ಯವಿಲ್ಲ. […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಜೆಡಿಎಸ್‍ನಿಂದ ನನ್ನನ್ನು 7 ತಿಂಗಳ ಹಿಂದೆಯೇ ಉಚ್ಛಾಟನೆ ಮಾಡಿರುವುದಾಗಿ ಸಂಸದ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ. ಹೀಗಿರುವಾಗ ರಾಜ್ಯಸಭೆ ಚುನಾವಣೆಯಲ್ಲಿ ನಾನು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿದ್ದೇನೆ, ನಾನು ಯಾರಿಗೆ ಮತ ಹಾಕಿದರೆ ಅವರಿಗೇನು? ನನ್ನನ್ನು ಕೇಳಲು ಕುಮಾರಸ್ವಾಮಿ ಮತ್ತು ಜೆಡಿಎಸ್ ಮುಖಂಡರಿಗೆ ಯಾವ ಹಕ್ಕಿದೆ ಎಂದು ಶಾಸಕ ಕೆ.ಶ್ರೀನಿವಾಸಗೌಡ ಪ್ರಶ್ನಿಸಿದರು.ಶನಿವಾರ ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜೆಡಿಎಸ್ ಪಕ್ಷದಿಂದ ಉಚ್ಛಾಟನೆ ಮಾಡಿರುವುದಾಗಿ ಅವರೇ ಹೇಳಿಕೊಂಡಿದ್ದಾರೆ. ಹೀಗಿರುವಾಗ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ,ಜೂ,10: ನಗರದ ಬಿ.ಎಂ.ಎಸ್ ಶಾಲೆಯ ವಿದ್ಯಾರ್ಥಿನಿ ಮಸೀಹ ಅಮೀನ್ ಪ್ರಸಕ್ತ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಯ ಮರು ಮೌಲ್ಯಮಾಪನದಲ್ಲಿ 614 ಅಂಕ ಗಳಿಸುವ ಮೂಲಕ ಬೆಂಗಳೂರು ಮಾಂಟೆಸ್ಸರಿ ಶಾಲೆಗೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ.ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಾಗ ವಿದ್ಯಾರ್ಥಿನಿ ಮಸೀಹ ಅಮೀನ್ 596 ಅಂಕಗಳಿಸಿದ್ದು, ವಿದ್ಯಾರ್ಥಿನಿ ಮರುಮೌಲ್ಯಮಾಪನದಲ್ಲಿ ಹೆಚ್ಚುವರಿ 18 ಅಂಕಗಳನ್ನು ಗಳಿಸಿ ಒಟ್ಟರೆಯಾಗಿ 614 ಅಂಕ ಗಳಿಸುವ ಮೂಲಕ ಬೆಂಗಳೂರು ಮಾಂಟೆಸ್ಸರಿ ಶಾಲೆಗೆ ಟಾಪರ್ ಆಗಿ ಹೊರಹೊಮ್ಮಿದ್ದು, ಶಾಲಾ ಆಡಳಿತ ಮಂಡಳಿಯಿಂದ ವಿದ್ಯಾರ್ಥಿಯನ್ನು […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ,ಜೂ.9: ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕುವ ಮೂಲಕ ಶಾಸಕ ಕೆ.ಶ್ರೀನಿವಾಸಗೌಡ ಕ್ಷೇತ್ರದ ಜನರಿಗೆ ನಂಬಿಕೆ ದ್ರೋಹ ಮಾಡಿದ್ದಾರೆ. ಇವರಿಗೆ ನೈತಿಕತೆ ಇದ್ದರೆ ಈ ಕೂಡಲೇ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಬೇಕೆಂದು ತಾಲೂಕು ಜೆಡಿಎಸ್ ಅಧ್ಯಕ್ಷೆ ಕುರ್ಕಿರಾಜೇಶ್ವರಿ ಆಗ್ರಹಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ವಿರುದ್ದ ಕೆಲವು ಶಾಸಕರು ಮುನಿಸಿಕೊಂಡಿದ್ದರೂ ಕೂಡ ಅವರು ಜೆಡಿಎಸ್ ಅಭ್ಯರ್ಥಿಗೆ ಮತ ಚಲಾಯಿಸಿ ತಮ್ಮ ನಿಷ್ಠೆಯನ್ನ ತೋರ್ಪಡಿಸಿದ್ದಾರೆ. ಆದರೆ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಪಕ್ಷಾತೀತ ಹಾಗೂ ಜಾತ್ಯಾತೀತವಾಗಿ ಪ್ರತಿ ಹೆಣ್ಣು ಮಕ್ಕಳಿಗೂ ಬಡ್ಡಿ ರಹಿತ ಸಾಲ ಸೌಲಭ್ಯ ತಲುಪಿಸುವ ಸಂಕಲ್ಪ ಹೊಂದಿರುವ ಡಿಸಿಸಿ ಬ್ಯಾಂಕ್‍ಗೆ ಆಣೆ,ಪ್ರಮಾಣ ಮಾಡಿಸಿಕೊಂಡು ಸಾಲ ನೀಡುವ ದುಸ್ಥಿತಿ ಬಂದಿಲ್ಲ ಎಂದು ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿಗೋವಿಂದಗೌಡ ತಿಳಿಸಿದರು.ನಗರದ ಡಿಸಿಸಿ ಬ್ಯಾಂಕ್ ಶಾಖೆ ಆವರಣದಲ್ಲಿ ಕೋಲಾರ ನಗರದ ಹಲವಾರು ಸ್ತ್ರೀಶಕ್ತಿ ಸಂಘಗಳಿಗೆ ಬಡ್ಡಿರಹಿತ ಸಾಲ ವಿತರಿಸಿ ಅವರು ಮಾತನಾಡುತ್ತಿದ್ದರು.ಡಿಸಿಸಿ ಬ್ಯಾಂಕ್ ಸಾಲ ನೀಡುವಾಗ ಜಾತಿ, ಪಕ್ಷ ಯಾವುದು ಎಂದು ಕೇಳಿದ ನಿದರ್ಶನವಿದ್ದರೆ […]
JANANUDI.COM NETWORK ಕುಂದಾಪುರ: ದಿನಾಂಕ 9ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಪರಿಚಯ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವಿಶ್ವಸ್ಥ ಮಂಡಳಿಯ ಹಿರಿಯ ಸದಸ್ಯರಾದ ಶಾಂತಾರಾಮ್ ಪ್ರಭು ಮಾತನಾಡಿ ವಿದ್ಯಾರ್ಥಿಗಳು ಕನಸು ಕಟ್ಟಿಕೊಂಡು ಕಾಲೇಜಿಗೆ ಪ್ರವೇಶ ತೆಗೆದುಕೊಂಡಿದ್ದಾರೆ. ಉನ್ನತ ಗುರಿಯನ್ನು ಕಟ್ಟಿಕೊಂಡಿದ್ದಾರೆ. ವಿದ್ಯಾರ್ಥಿಗಳು ಇಲ್ಲಿನ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಉನ್ನತ ಸಾಧನೆ ಮಾಡುವತ್ತ ಹೆಜ್ಜೆ ಹಾಕಬೇಕು. ಮುಂದಿನ ದಿನಗಳಲ್ಲಿ ಪಿ.ಯು.ಸಿ ನಂತರ ಹೆಚ್ಚಿನ ಶಿಕ್ಷಣ ಪಡೆಯಲು ಅವಕಾಶವಿದೆ.ಸವಾಲುಗಳನ್ನು ಎದುರಿಸಲು ತಯಾರಾಗಿ. ಜೀವನದಲ್ಲಿ ಯಶಸ್ಸನ್ನು ಪಡೆಯುವುದರೊಂದಿಗೆ […]