ಕೋಲಾರ:- ಸರ್ವರಿಗೂ ಶಿಕ್ಷಣ ನೀಡುವ ಸರ್ಕಾರಿ ಶಾಲೆಗಳ ಅಭಿವೃದ್ದಿ ಮತ್ತು ಅನ್ನ ನೀಡುವ ರೈತರ ಬಾಳು ಹಸನಾಗಿಸುವ ಸಂಕಲ್ಪದೊಂದಿಗೆ ನಾನು ಶಾಸಕನಾಗಿ ಬದ್ದತೆಯಿಂದ ಕೆಲಸ ಮಾಡುವೆ ಎಂದು ನೂತನ ಶಾಸಕ ಕೊತ್ತೂರು ಡಾ.ಜಿ.ಮಂಜುನಾಥ್ ಘೋಷಿಸಿದರು.ತಾಲ್ಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ತಾಲ್ಲೂಕು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಶ್ರಯದಲ್ಲಿ 2023-24ನೇ ಸಾಲಿನ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿ, ಮಕ್ಕಳಿಗೆ ಸ್ವತಃ ಸಿಹಿ ತಿನ್ನಿಸಿ, ಶಿಕ್ಷಕರಿಗೂ ಸಿಹಿ ವಿತರಿಸಿ ಅವರು ಮಾತನಾಡುತ್ತಿದ್ದರು. ಸರ್ಕಾರಿ ಶಾಲೆಗಳನ್ನು ಉಳಿಸಿಕೊಂಡರೆ ಮಾತ್ರವೇ […]
ಕೋಲಾರ,ಮೇ.30: ಟೊಮೋಟೋ ಗೆ ಬಾಧಿಸುತ್ತಿರುವ ಬಿಂಗಿ (ಎಲೆ ಮುದುಡು) ರೋಗ ನಿಯಂತ್ರಣಕ್ಕೆ ವಿಶೇಷ ವಿಜ್ಞಾನಿಗಳ ತಂಡ ರಚನೆ ಮಾಡಿ ಕಳಪೆ ಬಿತ್ತನೆ ಬೀಜ ಕೀಟ ನಾಶಕ ವಿತರಣೆ ಮಾಡುವ ಕಂಪನಿಗಳ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡುವಂತೆ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಮುಂದೆ ನಷ್ಟ ಬೆಳೆ ಸಮೇತ ಹೋರಾಟ ಮಾಡಿ ಉಪ ನಿರ್ದೇಶಕರಾದ ಕುಮಾರಸ್ವಾಮಿರವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.ಜಿಲ್ಲೆಗೆ ನೂತನವಾಗಿ ಆಯ್ಕೆ ಆಗಿರುವ 6 ಶಾಸಕರು ರೈತರ ಮೇಲೆ ಕಾಳಜಿ ಇದ್ದರೆ ಸರ್ಕಾರದ ಮೇಲೆ ಒತ್ತಡ […]
ಶ್ರೀನಿವಾಸಪುರ: ಮನಸ್ಸು ಮತ್ತು ಆಹಾರ ನಿಯಂತ್ರಣದ ಮೂಲಕ ಕಾಯಿಲೆ ನಿಯಂತ್ರಣ ಸಾಧ್ಯ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಪ್ರಯತ್ನಿಸಬೇಕು ಎಂದು ವೆಂಕಟೇಶ್ವರ ಗ್ರಾಮೀಣ ಆರೋಗ್ಯ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ. ವೈ.ವಿ.ವೆಂಕಟಾಚಲ ಹೇಳಿದರು.ಪಟ್ಟಣದ ಎಸ್ವಿ ಪ್ಯಾರಾ ಮೆಡಿಕಲ್ ಕಾಲೇಜು ಸಭಾಂಗಣದಲ್ಲಿ ಭಾನುವಾರ ಏರ್ಪಡಿಸಿದ್ದ ಮಧುಮೇಹ ಜಾಗೃತಿ ಶಿಬಿರದಲ್ಲಿ ಮಾತನಾಡಿದ ಅವರು, ಪ್ರಾರಂಭದ ಹಂತದಲ್ಲಿ ಎಚ್ಚರಕೆ ವಹಿಸಿದರೆ ಮಧುಮೇಹ ನಿಯಂತ್ರಣ ಸುಲಭಸಾಧ್ಯ ಎಂದು ಹೇಳಿದರು.ಆರೋಗ್ಯ ಕಾಳಜಿ ಕಡಿಮೆ ಇರುವ ಗ್ರಾಮೀಣ ಪ್ರದೇಶದಲ್ಲಿ ಮಧುಮೇಹಿಗಳ ಸಂಖ್ಯೆ ಹೆಚ್ಚುತ್ತಿದೆ. ಎಷ್ಟೋ ಜನಕ್ಕೆ ತಾವು […]
ಶ್ರೀನಿವಾಸಪುರ: ಗ್ರಾಮೀಣ ಪ್ರದೇಶದ ಮಹಿಳೆಯರು ಸಾಲ ಸೌಲಭ್ಯ ಸದುಪಯೋಗ ಪಡಿಸಿಕೊಂಡು ಆರ್ಥಿಕಾಭಿವೃದ್ಧಿ ಸಾಧಿಸಬೇಕು. ಸ್ವಾವಲಂಬಿ ಜೀವನ ಸಾಗಿಸಬೇಕು ಎಂದು ಯರ್ರಂವಾರಿಪಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ವೈ.ಆರ್.ಶ್ರೀನಿವಾಸರೆಡ್ಡಿ ಹೇಳಿದರು.ಗ್ರಾಮದಲ್ಲಿ ಸಂಜೀವನಿ ಒಕ್ಕೂಟದ ವತಿಯಿಂದ ಒಕ್ಕೂಟದ ಮಹಿಳಾ ಸದಸ್ಯರಿಗೆ ಶನಿವಾರ ಏರ್ಪಡಿಸಿದ್ದ ಸಾಲವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿ, ಮಹಿಳೆಯರು ಪಡೆದ ಸಾಲ ಸಮಯಕ್ಕೆ ಸರಿಯಾಗಿ ಮರುಪಾವತಿ ಮಾಡಬೇಕು. ಹಾಗೆ ಮರುಪಾವತಿ ಮಾಡಿದ ಸದಸ್ಯರಿಗೆ ಮತ್ತೆ ಸಾಲ ನೀಡಲಾಗುವುದು ಎಂದು ಹೇಳಿದರು.ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 70 ಸಂಜೀವಿನಿ ಒಕ್ಕೂಟಗಳಿದ್ದು, ಮೊದಲ ಹಂತದಲ್ಲಿ […]
ಶ್ರೀನಿವಾಸಪುರ: ವಿದ್ಯಾರ್ಥಿಗಳು ಗುಣಾತ್ಮಕ ಫಲಿತಾಂಶ ಪಡೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ ಹೇಳಿದರು.ಪಟ್ಟಣದ ಹೊರವಲಯದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಕೋಲಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ 8,9,10ನೇ ತರಗತಿ ವಿದ್ಯಾರ್ಥಿಗಳಿಗೆ ವಿಜ್ಞಾನ, ಗಣಿತ ಹಾಗೂ ಇಂಗ್ಲೀಷ್ ವಿಷಯಗಳ ಬುನಾದಿ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.ವಿದ್ಯಾರ್ಥಿಗಳು ಮೊಬೈಲ್ ಬಳಕೆ ಕಡಿಮೆ ಮಾಡಬೇಕು. ಅನಗತ್ಯವಾಗಿ […]
ಶ್ರೀನಿವಾಸಪುರ: ಅಧಿಕಾರಿಗಳು ಮುಂಗಾರು ಮಳೆ ಸೃಷ್ಟಿಸಬಹುದಾದ ಅವಾಂತರ ಎದುರಿಸಲು ಸರ್ವ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಅಧಿಕಾರಿಗಳು ಅತಿವೃಷ್ಟಿಯಿಂದ ಹಾನಿಗೊಳಗಾದ ಕುಟುಂಬಗಳಿಗೆ ಪರಿಹಾರ ವಿತರಣೆ ಮಾಡಬೇಕು. ಸಂಭವನೀಯ ವಿಪತ್ತಿನ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು. ಕೃಷಿ ಇಲಾಖೆ ಬಿತ್ತನೆಗೆ ಅಗತ್ಯವಾದ ಎಲ್ಲ ಸೌಲಭ್ಯ ಒದಗಿಸಬೇಕು. ಜಾನುವಾರು ಮೇವು ಸಂಗ್ರಹ ಹಾಗೂ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಮುಂದಾಗಬೇಕು ಎಂದು ಹೇಳಿದರು.ಪಟ್ಟಣದ […]
ಶ್ರೀನಿವಾಸಪುರ,ಮೇ.26: ಮಾವು ಮಾರುಕಟ್ಟೆಯಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಕಮೀಷನ್, ಬಿಳಿ ಚೀಟಿ ಹಾವಳಿ ತಡೆಗಟ್ಟಲು ವಿಶೇಷ ತಂಡ ರಚನೆ ಮಾಡಿ ರೈತರು ಹಾಗೂ ಕೂಲಿಕಾರ್ಮಿಕರ ಆರೋಗ್ಯ ರಕ್ಷಣೆ ಮಾಡಬೇಕೆಂದು ರೈತ ಸಂಘದಿಂದ ಕೊಳತೆ ಮಾವು ಸಮೇತ ಕೃಷಿ ಉತ್ಪನ್ನ ಮಾರುಕಟ್ಟೆ ಮುಂಬಾಗ ಹೋರಾಟ ಮಾಡಿ ಅಧಿಕಾರಿಗಳಿಗೆ ಮನವಿ ನೀಡಿ ಒತ್ತಾಯಿಸಲಾಯಿತು.ಮಾವಿಗೆ ಪ್ರಸಿದ್ದಿ ಆಗಿರುವ ತಾಲ್ಲೂಕಿನಲ್ಲಿ ಮಾವು ಮಾರುಕಟ್ಟೆಯ ಅಭಿವೃದ್ದಿಗೆ ಆದ್ಯತೆ ನೀಡುವಲ್ಲಿ 40 ವರ್ಷಗಳಿಂದ ರಾಜಕೀಯ ಮಾಡುತ್ತಿರುವ ರೆಡ್ಡಿ ಸ್ವಾಮಿರವರು ಸಂಪೂರ್ಣವಾಗಿ ವಿಪಲವಾಗಿದ್ದಾರೆಂದು ರೈತ ಸಂಘದ ರಾಜ್ಯ […]
ಶ್ರೀನಿವಾಸಪುರ: ಪಟ್ಟಣದಲ್ಲಿ ಸ್ಥಳೀಯ ಕೆಎಸ್ಆರ್ಟಿಸಿ ನೌಕರರ ಸಂಘದ ವತಿಯಿಂದ ಗುರುವಾರ ಅಂಬೇಡ್ಕರ್ ದಿನಾಚರಣೆ ಆಚರಿಸಲಾಯಿತು.ಅಂಬೇಡ್ಕರ್ ಜನ್ಮ ದಿನಾಚರಣೆ ಪ್ರಯುಕ್ತ ಉದ್ಯಾನದಲ್ಲಿನ ಬಾಬಾ ಸಾಹೇಬರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.ತಾಲ್ಲೂಕು ಕಚೇರಿ ಆವರಣದಲ್ಲಿ ಬೆಳ್ಳಿ ರಥದಲ್ಲಿ ಅಳವಡಿಸಲಾಗಿದ್ದ ಡಾ. ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದ ಬಳಿಕ, ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡಲಾಯಿತು. ಸಂಘದ ನೌಕರರು ಮೆರವಣಿಗೆ ಉದ್ದಕ್ಕೂ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಸಿಹಿ ಹಂಚಿ ಜಯಘೋಷ ಮಾಡಿದರು.
ಶ್ರೀನಿವಾಸಪುರ: ಸರ್ಕಾರ, ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆ ತಿದ್ದುಪಡಿ ಮಸೂದೆ ವಾಪಸ್ ಪಡೆಯಬೇಕು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯದರ್ಶಿ ವೀರಭದ್ರಸ್ವಾಮಿ ಆಗ್ರಹಪಡಿಸಿದರು.ಪಟ್ಟಣದ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಚೇರಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಸಂಘಟನೆ ತಾಲ್ಲೂಕು ಘಟಕದ ಸಭೆಯಲ್ಲಿ ಮಾತನಾಡಿದ ಅವರು, ರೈತರ ಪ್ರತಿಭಟನೆ ಪರಿಣಾಮವಾಗಿ ಕೇಂದ್ರ ಸರ್ಕಾರ ಕೃಷಿ ತಿದ್ದುಪಡಿ ಕಾಯ್ದೆ ವಾಪಸ್ ಪಡೆಯಿತು. ಆದರೆ ರಾಜ್ಯ ಬಿಜೆಪಿ ಸರ್ಕಾರ ಕಾಯ್ದೆ ಜಾರಿಗೊಳಿಸಿ ವಾಪಸ್ […]

