ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಶೃಂಗೇರಿ ಶ್ರೀಶಾರದ ಪೀಠದ ಜಗದ್ಗುರು ಶ್ರೀವಿಧುಶೇಖರ ಭಾರತೀ ಮಹಾಸ್ವಾಮಿಗಳ ವಿಜಯ ಯಾತ್ರೆ ಕೋಲಾರ ನಗರಕ್ಕೆ ಜೂ.10 ರ ಶುಕ್ರವಾರ ಆಗಮಿಸಲಿದ್ದು, ಪೂರ್ವ ಸಿದ್ದತೆಗಳ ಕುರಿತು ಚರ್ಚಿಸಲು ಎರಡನೇ ಸುತ್ತಿನ ವಿವಿಧ ಸಂಘ/ಸಂಸ್ಥೆಗಳ, ಮುಖಂಡರ ಸಭೆಯನ್ನು ಮೇ 29ರ ಭಾನುವಾರ ಬೆಳಗ್ಗೆ 11.00 ಗಂಟೆಗೆ ಏರ್ಪಡಿಸಲಾಗಿದೆ.ತಾಲ್ಲೂಕಿನ ಎಲ್ಲಾ ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರು ತಪ್ಪದೇ ಸಭೆಗೆ ಬಂದು ವಿಜಯಯಾತ್ರೆಯನ್ನು ಯಶಸ್ವಿಗೊಳಿಸಲು ಶ್ರೀಶಂಕರ ಸೇವಾ ಟ್ರಸ್ಟ್ ಅಧ್ಯಕ್ಷ ಕಾರ್ತಿಕ್ ಕೃಷ್ಣಮೂರ್ತಿ ಮತ್ತು ಕೋಲಾರ ಶೃಂಗೇರಿ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ: ಜಿಲ್ಲಾ ಹಿಂದಿ ಶಿಕ್ಷಕರ ಸಂಘದ ಸಭೆಯನ್ನು ಕೋಲಾರದಲ್ಲಿ ಆಯೋಜಿಸಲಾಗಿತ್ತು. ಸಭೆಯಲ್ಲಿ ಹಿಂದಿ ಶಿಕ್ಷಕರ ಕುಂದು ಕೊರತೆಗಳ ಬಗ್ಗೆ ಚರ್ಚಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಕೋಲಾರ ಜಿಲ್ಲಾ ಹಿಂದಿ ಶಿಕ್ಷಕರ ಸಂಘದ ಅಧ್ಯಕ್ಷರಾದ ರಾಮಕೃಷ್ಣಪ್ಪ. ವಿ. ವಿ ವಹಿಸಿದ್ದರು ಹಾಗೂ ಕಾರ್ಯದರ್ಶಿಗಳಾದ ನರಸಿಂಹಮೂರ್ತಿ. ಎಲ್, ಮುನಿವೆಂಕಟಸ್ವಾಮಿ, ಜಯಣ್ಣ, ಸೋಮಶೇಖರ್, ತೊರ್ನಹಳ್ಳಿ ವೇಣು ಇತರರು ಹಾಜರಿದ್ದರು.
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಜಿಲ್ಲೆಯಾದ್ಯಂತ ಇರುವ ಸರ್ಕಾರಿ ಶಾಲೆಗಳ ಕಟ್ಟಡಗಳು ಬಹುತೇಕ ಅತಿವೃಷ್ಟಿ ಮಳೆಯಿಂದ ಶಿಥಿಲಗೊಂಡಿರುವುದು ಜಿಲ್ಲಾಡಳಿತಕ್ಕೆ ಮತ್ತು ಜನಪ್ರತಿನಿಧಿಗಳಿಗೆ ಗೊತ್ತಿದ್ದು ಈ ಸಂಬಂಧ ಇವುಗಳಿಗೆ ಪರ್ಯಾಯವಾಗಿ ರಿಪೇರಿ ಹೊಸ ಕಟ್ಟಡ ನಿರ್ಮಾಣಕ್ಕೆ ಕ್ರಿಯಾಯೋಜನೆಯನ್ನು ತಯಾರಿಸಿ ಸರ್ಕಾರಕ್ಕೆ ಸಲ್ಲಿಸಿದ್ದು ಆದಷ್ಟು ಬೇಗ ಈ ಕಾರ್ಯಗಳನ್ನು ಕೈಗೆತ್ತಿಕೊಂಡು ಪೂರ್ಣಗೊಳಿಸಲಾಗುವುದು ಎಂದು ವಿಧಾನಪರಿಷತ್ ಸದಸ್ಯರಾದ ಇಂಚರ ಗೋವಿಂದರಾಜು ತಿಳಿಸಿದರು.ಅವರು ಶನಿವಾರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸೀಪುರು ಇಲ್ಲಿಗೆ ಭೇಟಿ ನೀಡಿ ಒಂದೇ ಕಟ್ಟಡದಲ್ಲಿ ಬಹುತೇಕ ತರಗತಿಗಳು ನಡೆಯುತ್ತಿರುವುದನ್ನು […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ರೈತರು,ಸಾರ್ವಜನಿಕರು ಸ್ವತಃ ತಾವೇ ತಮ್ಮ ಜಮೀನನ್ನು ಪೋಡಿ ಮತ್ತು ಭೂಪರಿವರ್ತನೆಗಾಗಿ ನಕ್ಷೆ ತಯಾರಿಸಲು ಸರ್ಕಾರ `ಸ್ವಾವಲಂಬಿ ಯೋಜನೆ’ಯನ್ನು ಆರಂಭಿಸಿದ್ದು, ಇದರ ಪ್ರಯೋಜನ ಪಡೆದುಕೊಳ್ಳುವಂತೆ ಭೂಮಾಪನಾ ಇಲಾಖೆ ಜಿಲ್ಲಾ ಉಪನಿರ್ದೇಶಕಿ ಬಿ.ಭಾಗ್ಯಮ್ಮ ತಿಳಿಸಿದ್ದಾರೆ.ಈ ಕುರಿತು ಮಾಹಿತಿ ನೀಡಿರುವ ಅವರು, ರೈತರು ಮತ್ತು ಸಾರ್ವಜನಿಕರು ತಮ್ಮ ಜಮೀನಿನ 11ಇ ಅಥವಾ ಪೋಡಿ ಅಥವಾ ಭೂಪರಿವರ್ತನೆ ಪೂರ್ವ ನಕ್ಷೆಯನ್ನು ತಾವೇ ತಯಾರಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.ಈ ಯೋಜನೆಯಡಿ ನಾಗರೀಕರು ತಮ್ಮ ಗುರುತನ್ನು ದೃಢೀಖರಿಸುವ ಮೂಲಕ ತಮ್ಮ ಸರ್ವೆ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಸ್ವಾತಂತ್ರ್ಯ ಯೋಧರ ಸ್ಮರಣೆಯೊಂದಿಗೆ ದೇಶ ಕಟ್ಟುವ ಕಾರ್ಯ ನಡೆಯಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಹೇಳಿದರು.ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಆಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಶನಿವಾರ ಏರ್ಪಡಿಸಿದ್ದ ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹೊಸ ತಲೆಮಾರು, ಭಾರತೀಯ ಸಂಸ್ಕøತಿಯಿಂದ ದೂರ ಸರಿಯುತ್ತಿದೆಎಂದು ಹೇಳಿದರು.ಇಂದು ನಾವು ಅನುಭವಿಸುತ್ತಿರುವ ಸ್ವಾತಂತ್ರ್ಯ ನಮ್ಮ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ : ಗ್ರಾಮಗಳಲ್ಲಿ ಗ್ರಾಮಸ್ಥರು ಪ್ಲಾಸ್ಟಿಕ್ನ್ನು ಹೆಚ್ಚಾಗಿ ಬಳಸುತ್ತಿರುವುದರಿಂದ ಜನರಿಗೆ ಹಾಗೂ ಜಾನುವಾರುಗಳ ಆರೋಗ್ಯದಲ್ಲಿ ಏರು – ಪೇರಾಗುತ್ತದೆ . ಆದ್ದರಿಂದ ಜಿಲ್ಲೆಯ ಪ್ರತಿ ಗ್ರಾಮವನ್ನು ಪ್ಲಾಸ್ಟಿಕ್ ಮುಕ್ತ ಗ್ರಾಮವನ್ನಾಗಿಸೋಣ ಎಂದು ಜಿಲ್ಲಾಧಿಕಾರಿಗಳಾದ ವೆಂಕಟ್ ರಾಜಾ ಅವರು ತಿಳಿಸಿದರು . ಇಂದು ಶ್ರೀನಿವಾಸಪುರ ತಾಲ್ಲೂಕಿನ ಯಲ್ಲೂರು ಹೋಬಳಿಯ ನೆರ್ನಹಳ್ಳಿ ಗ್ರಾಮದಲ್ಲಿ ಕಂದಾಯ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ “ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ” – ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ 1 : ಗ್ರಾಮಪಂಚಾಯಿತಿಯೊಂದಿಗೆ ಸ್ವಚ್ಚತೆ ಕಾಪಾಡಲು ಗ್ರಾಮಸ್ಥರು ಸಹಕಾರ ನೀಡಬೇಕು. ಗ್ರಾಮದಲ್ಲಿ ಪ್ಲಾಸ್ಟಿಕ್ ಕವರ್ಗಳು ಹರಿಡಿದ್ದು , ಗ್ರಾಮವನ್ನು ಪ್ಲಾಸ್ಟಿಕ್ ಮುಕ್ತ 15ದಿನಗಳೊಗೆ ಮಾಡುವಂತೆ ಇಒ,ಪಿಡಿಒ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟರಾಜು ಸೂಚಿಸಿದರು.ತಾಲೂಕಿನ ಯಲ್ದೂರು ಹೋಬಳಿಯ ನೆರ್ನಹಳ್ಳಿ ಗ್ರಾಮದಲ್ಲಿ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಹಾಗೂ ಗ್ರಾಮವಾಸ್ತವ್ಯ ಕಾರ್ಯಕ್ರಮಕ್ಕೆ ಶುಕ್ರವಾರ ನಡೆದ ಗ್ರಾಮವಾಸ್ತವ್ಯ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಗ್ರಾಮದ ಸಮುದಾಯಭವನದಲ್ಲಿ ಅಂಗನವಾಡಿ ನಡೆಯುತ್ತಿರುವುದರ ಬಗ್ಗೆ ಗ್ರಾಮಸ್ಥರು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಅಲ್ಲಿಗೆ ಬೇಟಿ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಸಹಕಾರಿ ವ್ಯವಸ್ಥೆ ಉಳಿದರೆ ಮಾತ್ರ ಬಡವರು ಉಳಿವು, ಈ ವ್ಯವಸ್ಥೆಯ ಕುರಿತು ಇನ್ನೂ ಅರಿವು ಮೂಡದಿರುವುದು ದುರಂತವಾಗಿದ್ದು, ಪ್ರತಿ ಕುಟುಂಬಕ್ಕೂ ಸಹಕಾರಿ ಸದಸ್ಯತ್ವ ನೀಡುವ ಅಗತ್ಯವಿದೆ ಎಂದು ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ತಿಳಿಸಿದರು.ತಾಲ್ಲೂಕಿನ ಕಡಗಟ್ಟೂರು ಗ್ರಾಮದಲ್ಲಿ ಶುಕ್ರವಾರ ನಡೆದ ರೇಷ್ಮೆ ಬೆಳೆಗಾರರ ಹಾಗೂ ಸೇವಾ ಸಹಕಾರ ಸಂಘದ 2022-22ನೇ ಸಾಲಿ ಸರ್ವ ಸದಸ್ಯರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.ಸಹಕಾರಿ ವ್ಯವಸ್ಥೆಯ ಕುರಿತು ಇನ್ನೂ ಅನೇಕರಿಗೆ ಅರಿವಿಲ್ಲ, ಈ ವ್ಯವಸ್ಥೆಯಿಂದ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ನಗರಕ್ಕೆ ದಕ್ಷಿಣಾಮ್ನಾಯ ಶಂಗೇರಿ ಶ್ರೀಶಾರದ ಪೀಠದ ಜಗದ್ಗುರುಗಳಾದ ಶ್ರೀವಿಧುಶೇಖರ ಭಾರತೀ ಮಹಾಸ್ವಾಮಿಗಳವರು ಜೂ.10 ರ ಶುಕ್ರವಾರದಂದು ಮಧ್ಯಾಹ್ನ 3 ಗಂಟೆಗೆ ವಿಜಯಯಾತ್ರೆಯ ಮೂಲಕ ನಗರದ ಶಂಕರಮಠಕ್ಕೆ ಆಗಮಿಸಲಿದ್ದಾರೆ ಎಂದು ಕೋಲಾರ ಶೃಂಗೇರಿ ಮಠದ ಧರ್ಮಾಧಿಕಾರಿ ಜೆ.ಎನ್.ರಾಮಕೃಷ್ಣ ತಿಳಿಸಿದ್ದಾರೆ.ಈ ಕುರಿತು ಮಾಹಿತಿ ನೀಡಿರುವ ಅವರು, ಶ್ರೀಗಳು ಜೂ.10 ರ ಮಧ್ಯಾಹ್ನ 3 ಗಂಟೆಗೆ ನಗರದ ಸರ್ವಜ್ಞ ಪಾರ್ಕ್ ಸಮೀಪ ಸರ್ಕಾರಿ ಕಾಲೇಜು ಮುಂಭಾಗಕ್ಕೆ ಆಗಮಿಸುತ್ತಿದ್ದಂತೆ ಅವರನ್ನು ಶ್ರದ್ಧಾಭಕ್ತಿಗಳಿಂದ ಬರಮಾಡಿಕೊಂಡು ಸೋಮೇಶ್ವರ ದೇವಾಲಯದ ಹಾದಿಯ […]