ಶ್ರೀನಿವಾಸಪುರ : ಪಟ್ಟಣದ ಚಿಂತಾಮಣಿ ರಸ್ತೆಯಲ್ಲಿರುವ ಸರ್ಕಾರಿ ಉರ್ದು ಇಂಗ್ಲಿಷ್ ಮಾಧ್ಯಮ ಬಾಲಕಿಯರ ಶಾಲಾ ಆವರಣದಲ್ಲಿ ಉರ್ದು ಸಿಆರ್‌ಸಿ ಜಾಕೀರ್ ಹುಸೇನ್ ಮೊಹಲ್ಲಾ ವತಿಯಿಂದ ಕಲಿಕಾ ಹಬ್ಬ (ಎಫ್‌ಎಲ್‌ಎನ್) ಕಾರ್ಯಕ್ರಮವನ್ನು ಸಂಭ್ರಮದಿಂದ ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬಿಆರ್‌ಸಿ ಸಂಯೋಜಕ ವಸಂತ್, ಪ್ರಾಥಮಿಕ ಹಂತದಲ್ಲೇ ಮಕ್ಕಳಲ್ಲಿ ಓದು, ಬರವಣಿಗೆ ಮತ್ತು ಗಣಿತದ ಮೂಲಭೂತ ಕೌಶಲ್ಯಗಳನ್ನು ಬಲಪಡಿಸುವುದೇ ಎಫ್‌ಎಲ್‌ಎನ್ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದರು. ಇಂತಹ ಕಲಿಕಾ ಹಬ್ಬಗಳು ಮಕ್ಕಳಲ್ಲಿ ಕಲಿಕೆಗೆ ಆಸಕ್ತಿ ಮೂಡಿಸಲು ಸಹಕಾರಿಯಾಗುತ್ತವೆ. ಶಿಕ್ಷಕರ ನವೀನ […]
ಶ್ರೀನಿವಾಸಪುರ ಹೊರವಲಯದ ಎಎಸ್‌ಆರ್ ಪ್ಯಾಲೇಸ್‌ನಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ದೈಹಿಕ ಶಿಕ್ಷಣ ಶಿಕ್ಷಕರ 13ನೇ ಶೈಕ್ಷಣಿಕ ಕಾರ್ಯಾಗಾರವನ್ನು ಲೋಕಸಭಾ ಸದಸ್ಯ ಮಲ್ಲೇಶ್ ಬಾಬು ಉದ್ಘಾಟಿಸಿದರು.ಶ್ರೀನಿವಾಸಪುರ: ದೈಹಿಕ ಶಿಕ್ಷಕರು ಗ್ರಾಮೀಣ ಪ್ರದೇಶದ ಕ್ರೀಡಾ ಪ್ರತಿಭೆಗಳನ್ನು ಗುರ್ತಿಸಿ ಪ್ರೋತ್ಸಾಹಿಸಬೇಕು. ಅವರಿಗೆ ಪೂರಕವಾದ ತರಬೇತಿ ನೀಡಬೇಕು ಎಂದು ಲೋಕಸಭಾ ಸದಸ್ಯ ಮಲ್ಲೇಶ್ ಬಾಬು ಹೇಳಿದರು. ಪಟ್ಟಣದ ಹೊರವಲಯದ ಎಎಸ್‌ಆರ್ ಪ್ಯಾಲೇಸ್‌ನಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ದೈಹಿಕ ಶಿಕ್ಷಣ ಶಿಕ್ಷಕರ 13ನೇ ಶೈಕ್ಷಣಿಕ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೈಹಿಕ […]
ಶ್ರೀನಿವಾಸಪುರ : ಪಟ್ಟಣದ ಅವರೆಕಾಯಿ ಮಾರುಕಟ್ಟೆ ಸ್ಥಳಾಂತರ ವಿಚಾರಕ್ಕೆ ಸಂಬಂಧಿಸಿದಂತೆ ಉಂಟಾಗಿರುವ ವಿವಾದದ ನಡುವೆ, ಕಾಂಗ್ರೆಸ್ ಮುಖಂಡ ಬಿ.ಎಲ್. ಪ್ರಕಾಶ್ ಸುದ್ದಿಗೋಷ್ಠಿ ನಡೆಸಿ ತಮ್ಮ ಮೇಲಿನ ಆರೋಪಗಳನ್ನು ತಳ್ಳಿಹಾಕಿದರು. ಕಳೆದ ೪೦–೫೦ ವರ್ಷಗಳಿಂದ ರೈತರು ಇದೇ ಸ್ಥಳದಲ್ಲಿ ಅವರೆಕಾಯಿ ವ್ಯಾಪಾರ ನಡೆಸಿಕೊಂಡು ಬರುತ್ತಿದ್ದಾರೆ. ಆದರೆ ಇತ್ತೀಚೆಗೆ ಕೆಲವು ಮುಖಂಡರು ಹಾಗೂ ಸಂಘಟನೆಗಳು ಮಾರುಕಟ್ಟೆಗೆ ಬಂದು ಹಣಕ್ಕಾಗಿ ಬೇಡಿಕೆ ಇಡುತ್ತಿದ್ದಾರೆ. ಹಣ ನೀಡದಿದ್ದರೆ ಹೋರಾಟ ನಡೆಸುವುದಾಗಿ ರೈತರಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಅವರು ಆರೋಪಿಸಿದರು. ಮಾರುಕಟ್ಟೆಯನ್ನು ಬೇರೆಡೆಗೆ ವರ್ಗಾಯಿಸಿದರೆ […]
ಶ್ರೀನಿವಾಸಪುರ: ರಕ್ಷಣಾವೇದಿಕೆ ಹಾಗೂ ಕೆಲ ರೈತ ಸಂಘಟನೆಗಳು ಕಾನೂನು ಕೈಗೆ ತೆಗೆದುಕೊಳ್ಳಬಾರದು. ಯಾರೇ ಆಗಲಿ ಕಾನೂನು ಕೈಗೆ ತೆಗೆದುಕೊಂಡರೆ ಪರಿಸ್ಥಿತಿ ಕೈಮೀರಲಿದೆ. ಅದರ ಪರಿಣಾಮಗಳು ಗಂಭೀರವಾಗಿರುತ್ತವೆ. ಈ ಕುರಿತು ಎಲ್ಲರೂ ಎಚ್ಚರಿಕೆಯಿಂದ ನಡೆದುಕೊಳ್ಳಬೇಕು ಎಂದು ಮಾಜಿ ಶಾಸಕ ಕೆ.ಆರ್. ರಮೇಶ್ ಕುಮಾರ್ ಎಚ್ಚರಿಸಿದರು. ಪಟ್ಟಣದ ಎಂ.ಜಿ. ರಸ್ತೆಯ ಮಾರ್ಕೆಟ್ ವೃತ್ತದಲ್ಲಿ ಶುಕ್ರವಾರ ಕಾಯಿ ವ್ಯಾಪಾರಸ್ಥರ ಸಮಸ್ಯೆಗಳನ್ನು ಆಲಿಸಿ ಮಾತನಾಡಿದ ಅವರು, ಇತ್ತೀಚೆಗೆ ನಡೆದ ಪ್ರತಿಭಟನೆಯ ವೇಳೆ ವ್ಯಾಪಾರ ವಹಿವಾಟು ನಿಲ್ಲಿಸುವಂತೆ ಕೆಲವರು ಒತ್ತಡ ಹೇರಿರುವುದು ಹಾಗೂ ಪುರಸಭೆ […]
ಸಿದ್ದರಾಮಯ್ಯ ನಂತರ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗುವುದು ನಿಶ್ಚಿತ – ಸಚಿವ ಬಿ.ಝೆಡ್. ಜಮೀರ್ ಅಹ್ಮದ್ ಖಾನ್ಶ್ರೀನಿವಾಸಪುರ: ಕಾಂಗ್ರೆಸ್ ಪಕ್ಷವು ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಂತರ ಡಿ.ಕೆ.ಶಿವಕುಮಾರ್ ಅವರೇ ರಾಜ್ಯದ ಮುಖ್ಯಮಂತ್ರಿಯಾಗುವುದು ನಿಶ್ಚಿತ ಎಂದು ವಸತಿ ಸಚಿವ ಬಿ.ಝೆಡ್. ಜಮೀರ್ ಅಹ್ಮದ್ ಖಾನ್ ಹೇಳಿದರು.ತಾಲೂಕಿನ ಲಕ್ಷ್ಮಿಪುರ ಗ್ರಾಮದಲ್ಲಿ ಶುಕ್ರವಾರ ನೂತನವಾಗಿ ನಿರ್ಮಾಣಗೊಂಡ ನೂರಾನಿ ಮಸೀದಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ನವೆಂಬರ್ ತಿಂಗಳಲ್ಲಿ ಕ್ರಾಂತಿ ಆಗಲಿದೆ ಎಂದು ಕೆಲವರು ವದಂತಿ ಹಬ್ಬಿಸಿದ್ದರು. […]
ಶ್ರೀನಿವಾಸಪುರ : ತಾಲೂಕಿನ ಕಸಬಾ ಹೋಬಳಿಯ ಚಲ್ದಿಗಾನಹಳ್ಳಿ ಗ್ರಾಮಪಂಚಾಯಿತಿಗೆ ಸಂಬಂಧಿಸಿದಂತೆ ಒಟ್ಟು 17 ಸದಸ್ಯರು ಇದ್ದು, 12 ಸದಸ್ಯರು ಡಿಸೆಂಬರ್ 20 ರಂದು ಪ್ರಸ್ತುತ ಇರುವ ಅಧ್ಯಕ್ಷರಾದ ಶ್ರೀನಿವಾಸ್ ವಿರುದ್ಧ ಅರ್ಜಿ ನೀಡಿ ಅವಿಶ್ವಾಸ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಬುಧವಾರ ಉಪವಿಭಾಗಧಿಕಾರಿ ಡಾ|| ಮೈತ್ರಿ ಗ್ರಾಮಪಂಚಾಯಿತಿ ಕಚೇರಿಗೆ ಬೇಟಿ ನೀಡಿ ಸದಸ್ಯರ ಅಭಿಪ್ರಾಯವನ್ನು ಸಂಗ್ರಹಿಸಲಾಗಿದೆ ಎಂದು ಮಾಹಿತಿ ನೀಡಿದರು.ಸಭೆಯಲ್ಲಿ ಅಧ್ಯಕ್ಷರ ವಿರುದ್ಧ 12 ಸದಸ್ಯರು ಕೈ ಎತ್ತುವ ಮೂಲಕ ಅವಿಶ್ವಾಸವನ್ನು ವ್ಯಕ್ತಪಡಿಸಲಾಗಿ ಸಭೆಯ ನಿರ್ಣಯವನ್ನು ಜಿಲ್ಲಾಚುನಾವಣಾಧಿರಿಗಳಿಗೆ ಮಾಹಿತಿ […]
ಶ್ರೀನಿವಾಸಪುರ : ಪಟ್ಟಣದ ಜಾಕಿರ್ ಹುಸೇನ್ ಮೊಹಲ್ಲಾದ ಸರ್ಕಾರಿ ಉರ್ದು ಹಾಗೂ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಎಲ್ಲ ರೀತಿಯ ಶೈಕ್ಷಣಿಕ ನೆರವು ನೀಡಲಾಗುವುದು ಎಂದು ಎಪಿಜೆ ಅಬ್ದುಲ್ ಕಲಾಂ ವೆಲ್‌ಫೇರ್ ಟ್ರಸ್ಟ್ ಅಧ್ಯಕ್ಷ ಹಾಗೂ ಎಂ.ಪಿ. ಫ್ರೂಟ್ಸ್ ಮಾಲಿಕ ಅಬ್ದುಲ್ ಮುಜೀದ್ ಭರವಸೆ ನೀಡಿದರು.ಶಾಲೆಯಲ್ಲಿ ಎಪಿಜೆ ಅಬ್ದುಲ್ ಕಲಾಂ ವೆಲ್‌ಫೇರ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಸಮಾರಂಭದಲ್ಲಿ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಿ ಮಾತನಾಡಿದ ಅವರು, ಉರ್ದು ಶಾಲೆಯ ವಿದ್ಯಾರ್ಥಿಗಳು ಗುಣಮಟ್ಟದ […]
ಶ್ರೀನಿವಾಸಪುರ : ಪಟ್ಟಣದ ಗಫಾರ್ ಖಾನ್ ಮೊಹಲ್ಲಾದ ಖಾನ್ ಸಾಬ್ ಮಸೀದಿ ಸುತ್ತಮುತ್ತ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದ್ದು, ಸಾರ್ವಜನಿಕರ ದೈನಂದಿನ ಜೀವನವೇ ಅಸ್ತವ್ಯಸ್ತಗೊಂಡಿದೆ. ಇತ್ತೀಚೆಗೆ ಮೇಕಿಗಳ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿ ಸಾವನ್ನಪ್ಪಿರುವ ಘಟನೆ ನಡೆದ ಬಳಿಕ, ಪ್ರದೇಶದಲ್ಲಿ ಭಯಭೀತಿಯ ವಾತಾವರಣ ನಿರ್ಮಾಣವಾಗಿದೆ.ದಿನದಿಂದ ದಿನಕ್ಕೆ ಬೀದಿ ನಾಯಿಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಮಕ್ಕಳು, ಮಹಿಳೆಯರು ಹಾಗೂ ವೃದ್ಧರು ಮನೆಯಿಂದ ಹೊರಗೆ ಬರಲು ಕೂಡ ಹಿಂಜರಿಯುವ ಸ್ಥಿತಿ ಎದುರಾಗಿದೆ. ಪ್ರತಿ ದಿನ ಬೆಳಗ್ಗೆ ಹಾಗೂ ಸಂಜೆ […]
ಶ್ರೀನಿವಾಸಪುರ: ಪಟ್ಟಣದ ಅಲ್ಪಸಂಖ್ಯಾತರ ಮೌಲಾನ ಆಜಾದ್ ಮಾದರಿ ಶಾಲೆಗೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಮೈಲೇರಪ್ಪ ಅವರು ಮಂಗಳವಾರ ಭೇಟಿ ನೀಡಿ, ಶಾಲಾ ಆವರಣದಲ್ಲಿ ನಡೆಯುತ್ತಿರುವ ಹಾಗೂ ಪೂರ್ಣಗೊಂಡಿರುವ ಸಿವಿಲ್ ಕಾಮಗಾರಿಗಳನ್ನು ಪರಿಶೀಲಿಸಿ, ಕಾಮಗಾರಿಗಳ ಗುಣಮಟ್ಟವನ್ನು ಅವಲೋಕಿಸಿದರು. ಶಾಲೆಯ ಕಟ್ಟಡಗಳು, ತರಗತಿ ಕೋಣೆಗಳು, ಮೂಲಸೌಕರ್ಯಗಳು ಹಾಗೂ ವಿದ್ಯಾರ್ಥಿಗಳಿಗೆ ಒದಗಿಸಲಾಗಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದ ಜಿಲ್ಲಾ ಅಧಿಕಾರಿ, ಕಾಮಗಾರಿಗಳು ನಿಗದಿತ ಮಾನದಂಡಗಳಿಗೆ ಅನುಗುಣವಾಗಿ ನಡೆದಿರುವುದನ್ನು ಪರಿಶೀಲಿಸಿದರು. ಗುಣಮಟ್ಟದಲ್ಲಿ ಯಾವುದೇ ತಾರತಮ್ಯ ಇರಬಾರದು ಹಾಗೂ ವಿದ್ಯಾರ್ಥಿಗಳಿಗೆ […]

