ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕಿನ ದ್ವಾರಸಂದ್ರ ಹಾಲು ಉತ್ಪಾದಕರ ಸಂಘದ ನಿರ್ದೇಶಕರ ಆಯ್ಕೆಗೆ ಶುಕ್ರವಾರ ನಡೆದ ಚುನಾವಣೆಯಲ್ಲಿ 11 ಮಂದಿ ಆಯ್ಕೆಯಾಗಿದ್ದಾರೆ. ಒಟ್ಟು 21 ಮಂದಿ ಚುನಾಣೆಯಲ್ಲಿ ಸ್ಪರ್ಧಿಸಿದ್ದರು.ಮುನಿವೆಂಕಟಪ್ಪ, ಡಿ.ಎನ್.ಚಂದ್ರಾರೆಡ್ಡಿ, ಪ್ರಕಾಶ್, ಎಂ.ಶ್ರೀನಿವಾಸಪ್ಪ ಡಿ.ವಿ.ಸದಾಶಿವರೆಡ್ಡಿ, ಕೆ.ಶ್ರೀನಿವಾಸರೆಡ್ಡಿ, ಡಿ.ವಿ.ವೆಂಕಟೇಶರೆಡ್ಡಿ, ವೆಂಕಟೇಶಪ್ಪ, ಡಿ.ಇ.ಶ್ರೀನಿವಾಸರೆಡ್ಡಿ, ಜಿ.ಮಂಜುಳ, ವೆಂಕಟಲಕ್ಷ್ಮಮ್ಮ ಸಂಘದ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.ಚುನಾವಣಾಧಿಕಾರಿ ಎಂ.ಶಂಕರಪ್ಪ, ಸ್ಥಳೀಯ ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ವೆಂಕಟರಾಮರೆಡ್ಡಿ ಇದ್ದರು.

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಜನತಾ ಜಲಧಾರೆ ಕಾರ್ಯಕ್ರಮದ ಯಶಸ್ಸಿಗೆ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಸಾಂಘಿಕ ಪ್ರಯತ್ನ ನಡೆಸಬೇಕು ಎಂದು ಜಿಲ್ಲಾ ಜೆಡಿಎಸ್ ಘಟಕದ ಅಧ್ಯಕ್ಷ ಹಾಗೂ ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಮನವಿ ಮಾಡಿದರು. ಪಟ್ಟಣದ ಜೆಡಿಎಸ್ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಜೆಡಿಎಸ್ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಏ.25 ರಂದು ಬೆಳಿಗ್ಗೆ 11.30ಕ್ಕೆ ಪಟ್ಟಣದ ಮುಖ್ಯ ರಸ್ತೆಗಳಲ್ಲಿ ಜನತಾ ಜಲಧಾರೆ ರಥ ಮೆರವಣಿಗೆ ಏರ್ಪಡಿಸಲಾಗಿದೆ. ಮೆರವಣಿಗೆ ಬಳಿಕ ಪಟ್ಟಣದ ಕನಕ ಭವನದ ಸಮೀಪ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿ ಅವರ ನಿಧನದಿಂದ ಸಮಾಜದ ಶೋಷಿತ ವರ್ಗಕ್ಕೆ ದೊಡ್ಡ ನಷ್ಟ ಉಂಟಾಗಿದೆ ಎಂದು ಜಿಲ್ಲಾ ಸಿಪಿಎಂ ಕಾರ್ಯದರ್ಶಿ ಮಂಡಳಿ ಸದಸ್ಯ ಪಿ.ಆರ್.ಸೂರ್ಯನಾರಾಯಣ ಹೇಳಿದರು.ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ, ಈಚೆಗೆ ನಿಧನರಾದ ಬಾಗೇಪಲ್ಲಿ ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿ ಅವರ ಗೌರವಾರ್ಥ ಗುರುವಾರ ಏರ್ಪಡಿಸಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದ ಅವರು, ಜಿ.ವಿ.ಶ್ರೀರಾಮರೆಡ್ಡಿ ಬಡವರ ಸಮಸ್ಯೆಗಳನ್ನು ಎತ್ತಿಗೊಂಡು ಹೋರಾಟ ಮಾಡುತ್ತಿದ್ದರು. ತಮ್ಮ ಬದುಕನ್ನು ಬಡವರ ಸೇವೆಗಾಗಿ ಮೀಸಲಿಟ್ಟಿದ್ದರು ಎಂದು ಹೇಳಿದರು.ರೋಟರಿ ಶ್ರೀನಿವಾಸಪುರ ಸೆಂಟ್ರಲ್ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಏ.21 ರಂದು ಶ್ರೀನಿವಾಸಪುರ 66\11 ಕೆವಿ ಉಪ ಕೇಂದ್ರದ ಎಫ್.13 ಕಿರುವಾರ ಮಾರ್ಗದ ಬ್ರೇಕರ್ ದುರಸ್ತಿ ಕಾಮಗಾರಿ ಕೈಗೊಳ್ಳುವುದರಿಂದ ಆ ಮಾರ್ಗಕ್ಕೆ ಅಡ್ಡಲಾಗಿ ಚಲಿಸುವ ನಂಬಿಹಳ್ಳಿ, ಆಲವಟ್ಟ, ನಾರಮಾಕಲಹಳ್ಳಿ, ಶ್ರೀನಿವಾಸಪುರ, ಎಪಿಎಂಸಿ ಮಾರ್ಗಗಳಿಗೆ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆ ವರೆಗೆ ವಿದ್ಯುತ್ ಕಡಿತವಾಗಿರುತ್ತದೆ ಎಂದು ಬೆಸ್ಕಾಂ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ರಾಮತೀರ್ಥ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪಟ್ಟಣದಲ್ಲಿ ಏ.25 ರಂದು ನಡೆಯಲಿರುವ ತಾಲ್ಲೂಕು ಮಟ್ಟದ ಆರೋಗ್ಯ ಮೇಳದ ಯಶಸ್ಸಗೆ ಎಲ್ಲ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಶ್ರಮಿಸಬೇಕು ಎಂದು ತಹಶೀಲ್ದಾರ್ ಶಿರಿನ್ ತಾಜ್ ಹೇಳಿದರು.ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಆಯುಷ್ಮಾನ್ ಭಾರತ್ ಆರೋಗ್ಯ ಹಾಗೂ ಕ್ಷೇಮ ಕೇಂದ್ರಗಳನ್ನು ಬಲಪಡಿಸಲು. ಜನರಲ್ಲಿ ವಿವಿಧ ಆರೋಗ್ಯ ಕಾರ್ಯಕ್ರಮಗಳ ಅರಿವು ಮೂಡಿಸಲು, ಪ್ರಾಥಮಿಕ ಹಂತದಲ್ಲಿ ಆರೋಗ್ಯ ತಪಾಸಣೆ ನಡೆಸಿ ಚಿಕಿತ್ಸೆ ನೀಡುವ ಉದ್ದೇಶದಿಂದ ಆರೋಗ್ಯ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಕೆಜಿಎಫ್ ಸಿನಿಮಾ ಮೂಲಕ ನಟಿ ಅರ್ಚನಾ ಜೋಯಿಸ್ ಅವರು ಇಡೀ ದೇಶಾದ್ಯಂತ ಮನೆ ಮಾತಾಗಿದ್ದಾರೆ. ಕೆಜಿಎಫ್ ಚಾಫ್ಟರ್ 1 ಮತ್ತು ಚಾಫ್ಟರ್ 2 ಸಿನಿಮಾದಲ್ಲಿ ಕಥಾನಾಯಕ ರಾಕಿಂಗ್ ಸ್ಟಾರ್ ಯಶ್ ಅವರ ತಾಯಿಯ ಪಾತ್ರದಲ್ಲಿ ಮಿಂಚಿದ ಕೋಲಾರ ಜಿಲ್ಲೆಯವರಾದ ಅರ್ಚನಾ ಜೋಯಿಸ್ ಜಿಲ್ಲೆಯ ಕೀರ್ತಿಯನ್ನು ಬೆಳಗಿದ್ದಾರೆ ಎಂದು ನಗರಸಭಾ ಸದಸ್ಯ ಮುರಳಿಗೌಡ ಅಭಿನಂದಿಸಿದರು.ನಗರದ ಜಯನಗರದ ಸಫಲಮ್ಮ ದೇವಾಲಯ ಸಮಿತಿ ವತಿಯಿಂದ ಅವರನ್ನು ಸನ್ಮಾನಿಸಿ ಮಾತನಾಡುತ್ತಿದ್ದರು.ಈ ಸಂದರ್ಭದಲ್ಲಿ ಮಾತನಾಡಿದ ಮುರಳಿಗೌಡ, ಅರ್ಚನಾ ಜೋಯಿಸ್ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ : ಪಟ್ಟಣದ ಜಾಮಿಯಾ ಮಸೀದಿಯಲ್ಲಿ ಹಾಗೂ ಜಾಕೀರ್ ಹುಸೇನ್ ಮೊಹಲ್ಲಾದ ಮಾರಿಯಮ್ ಮಸೀದಿಯಲ್ಲಿ ಇಫ್ತಾರ್ ಸಂದರ್ಭದಲ್ಲಿ ಹಿಂದೂ ಭಾಂದವರು ಸಹ ಭಾಗಿಯಾಗಿ ಆಚರಿಸುವ ಮೂಲಕ ಸೌಹಾರ್ದ ಮೆರೆದಿದ್ದಾರೆ .ಪಟ್ಟಣದ ಜಾಕೀರ್ ಹುಸೇನ್ ಮೊಹಲ್ಲಾದ ಮಾರಿಯಮ್ ಮಸೀದಿ ಬಳಿ ನಡೆದ ಪವಿತ್ರ ರಂಜಾನ್ ಮಾಯ ಇಫ್ತಾರ್ ಕಾರ್ಯಕ್ರಮದಲ್ಲಿ ಹಿಂದೂ ಬಾಂಧವರಿಗೆ ಮಸೀದಿನಲ್ಲಿ ಇಫ್ತಾರ್ ಮಾಡಿಸುವ ಮೂಲಕ ಹಿಂದೂ ಮುಸ್ಲಿಂ ಸೌಹಾರ್ದತೆಯಿಂದ ಇದ್ದಿವಿ ಎಂಬ ಮನೋಭಾವ ತೋರಿಸಿದರು . ಈ ಇಫ್ತಾರ್ ಕಾರ್ಯಕ್ರಮದಲ್ಲಿ ಶ್ರೀನಿವಾಸಪುರ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ: ಜಿಲ್ಲೆಯ ಕೆಜಿಎಫ್ ನಗರ ವ್ಯಾಪ್ತಿಯಲ್ಲಿ ನಗರೋತ್ಥೋನಾ ಹಾಗೂ ಅಮೃತ ಯೋಜನೆಯಡಿ ಕೈಗೊಳ್ಳಲಾಗಿರುವ ಕಾಮಗಾರಿಗಳು ಸಕಾಲಕ್ಕೆ ಪೂರ್ಣಗೊಂಡಿಲ್ಲ. ಜೊತೆಗೆ ಕಾಮಗಾರಿ ಕಳೆಪೆಯಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಗಮನಹರಿಸಿ ಗುತ್ತಿಗೆದಾರರ ವಿರುದ್ಧ ಸೂಕ್ತ ಕ್ರಮಜರುಗಿಸಬೇಕು ಎಂದು ಶಾಸಕ ರೂಪಕಲಾ ಶಶಿಧರ್ ಒತ್ತಾಯಿಸಿದರು.ನಗರದ ಜಿಲ್ಲಾಡಳಿತ ಭವನದಲ್ಲಿ ಕೆಜಿಎಫ್ ಕ್ಷೇತ್ರದ ಅಭಿವೃದ್ಧಿ ಕುರಿತು ಮಂಗಳವಾರ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು, ನಗರಸಭೆ ವ್ಯಾಪ್ತಿಯಲ್ಲಿನ ಟೆಂಡರ್‍ಗಳನ್ನು ಹೊರ ರಾಜ್ಯದ ಗುತ್ತಿಗೆದಾರರು ಟೆಂಡರ್ ಪಡೆದುಕೊಂಡಿದ್ದಾರೆ. ಅವರು ಮಾಡಿರುವ ಕಳಪೆ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ,ಏ.18: ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರ ಜವಾಬ್ದಾರಿಯನ್ನು ಮೂರನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿರುಬಿ.ವಿ.ಗೋಪಿನಾಥ್ ಸೋಮವಾರ ಬೆಳಗ್ಗೆ ವಹಿಸಿಕೊಂಡರು.ನಿಕಟಪೂರ್ವ ಅಧ್ಯಕ್ಷ ವಿ.ಮುನಿರಾಜು ಸಂಘದ ನಿರ್ಣಯ ಪುಸ್ತಕ ಹಾಗೂ ಇತರೆ ದಾಖಲಾತಿಗಳನ್ನು ಹಸ್ತಾಂತರಿಸುವ ಮೂಲಕ ಹೊಸ ಅಧ್ಯಕ್ಷರಿಗೆ ಜವಾಬ್ದಾರಿ ವಹಿಸಿಕೊಟ್ಟರು.ಇದೇ ವೇಳೆ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಕೆ.ಎಸ್. ಗಣೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಎಸ್.ಕೆ. ಚಂದ್ರಶೇಖರ್ ಹಾಗೂ ಖಜಾಂಚಿಯಾಗಿ ಎ.ಜಿ.ಸುರೇಶ್‍ಕುಮಾರ್ ಸಹ ಜವಾಬ್ದಾರಿಯನ್ನು ವಹಿಸಿಕೊಂಡರು.ಇದಕ್ಕೂ ಮುನ್ನಾ ಜಿಲ್ಲಾ ಚುನಾವಣಾಧಿಕಾರಿಯಾಗಿದ್ದ ಪಾ.ಶ್ರೀ.ಅನಂತರಾಮ್ ನೂತನ […]

Read More