ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಎತ್ತಿನಹೊಳೆ, ಯೋಜನೆಗೆ 3 ಸಾವಿರ ಕೋಟಿ ಬಜೆಟ್ನಲ್ಲಿ ಇಟ್ಟಿರುವುದು ಸ್ವಾಗತಾರ್ಹವಾದರೂ ಜಿಲ್ಲೆಯಲ್ಲಿ ಮಾವು ಸಂಸ್ಕರಣೆ ಘಟಕ ಸ್ಥಾಪನೆಯನ್ನು ನಿರೀಕ್ಷಿಸಿದ್ದ ಮಾವು ಬೆಳೆಗಾರರ ಹಿತ ರಕ್ಷಣೆಗೆ ಮುಂದಾಗಿಲ್ಲ ಎಂದು ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಬೇಸರ ವ್ಯಕ್ತಪಡಿಸಿದ್ದಾರೆ.ಬಜೆಟ್ ಕುರಿತು ಪ್ರತಿಕ್ರಿಯಿಸಿರುವ ಅವರು, ಕೆಸಿವ್ಯಾಲಿ 2ನೇ ಹಂತದ ಯೋಜನೆಗೆ 450 ಕೋಟಿ ನಿಗಧಿ ಶ್ಲಾಘನೀಯ ಕಾರ್ಯವಾಗಿದ್ದು, ತಾಂತ್ರಿಕ ತೊಂದರೆ ನಿವಾರಿಸಿಕೊಂಡು ಅತಿ ಶೀಘ್ರ ಎತ್ತಿನಹೊಳೆ, ಕೆಸಿ ವ್ಯಾಲಿ ನೀರು ಹರಿಸಲು ಕಾಮಗಾರಿಯ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ದಳಸನೂರು ಗ್ರಾಮದ ಕೆರೆ ಗಡಿ ಗುರ್ತಿಸುವಲ್ಲಿ ಕಂದಾಯ ಇಲಾಖೆ ವಿಳಂಬ ಧೋರಣೆ ಅನುಸರಿಸುತ್ತಿದೆ. ಇದರಿಂದಾಗಿ ಕೆರೆ ಅಭಿವೃದ್ಧಿ ಕಾರ್ಯ ಅರ್ಧದಲ್ಲಿ ನಿಂತಿದೆ ಎಂದು ಕೆರೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ಹಾಗೂ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ಮಾಜಿ ಅಧ್ಯಕ್ಷ ಎಲ್.ಗೋಪಾಲಕೃಷ್ಣ ಹೇಳಿದರು.ತಾಲ್ಲೂಕಿನ ದಳಸನೂರು ಗ್ರಾಮದ ವೀರಭದ್ರಸ್ವಾಮಿ ದೇವಾಲಯದ ಆವರಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಕೆರೆ ಅಭಿವೃದ್ಧಿ ಸಮಿತಿ ಸದಸ್ಯರು ಹಾಗೂ ಗ್ರಾಮಸ್ಥರ ಸಭೆಯಲ್ಲಿ ಮಾತನಾಡಿಸರ್ವೆ ನಂಬರ್ 42 ರಲ್ಲಿ 12 […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಮುಳಬಾಗಿಲು,ಮಾ.03: ಟಿ.ಕುರುಬರಹಳ್ಳಿ ಕುರಿಗಾಯಿಗಳಿಗೆ ಮೀಸಲಿಟ್ಟಿರುವ ಗೋಮಾಳ ಸ.ನಂ. 37, 36 ರ 65 ಎಕರೆ ಜಮೀನನ್ನು ಕುರಿಗಾಯಿಗಳಿಗೆ ಮೀಸಲಿಟ್ಟಿರುವ ಜಮೀನಿನಲ್ಲಿ ಯಾವುದೇ ಕಾರಣಕ್ಕೂ ಬೇರೆ ಯಾರಿಗೂ ಮಂಜೂರು ಮಾಡಬಾರದೆಂದು ಒತ್ತಾಯಿಸಿ ಅಪರ ಜಿಲ್ಲಾಧಿಕಾರಿಗಳಾದ ಸ್ನೇಹರವರಿಗೆ ಮನವಿ ನಿಡಿ ಅಗ್ರಹಿಸಲಾಯಿತುಟಿ.ಕುರುಬರಹಳ್ಳಿ ಗ್ರಾಮಸ್ಥರು ರಾಮಕೃಷ್ಣಪ್ಪ ಬಲಾಡ್ಯರ ವಿರುದ್ದ ಹತ್ತಾರು ವರ್ಷಗಳಿಂದ ಹೋರಾಟ ಮಾಡಿ ಜೈಲಿನ ವನವಾಸ ಮಾಡಿ ಸತತ ಹೋರಾಟದ ಪ್ರತಿಪಲವಾಗಿ 65 ಎಕರೆ ಸರ್ಕಾರಿ ಗೋಮಾಳ ಕುರಿಗಾಯಿಗಳಿಗಾಗಿ ಹಿಂದಿನ ತಹಸೀಲ್ದಾರ್ ಪ್ರಮೀಣ್ ರವರು ನಾಮಫಲಕ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ ಮಾ.1 : ಮೇಕೆದಾಟು ಯೋಜನೆಯ ವ್ಯಾಪ್ತಿಗೆ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳನ್ನು ಸೇರಿಸಿ ಕುಡಿಯುವ ನೀರನ್ನು ಸರಬರಾಜು ಮಾಡುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಸುಧಾಕರ್ ರವರಿಗೆ ಕೋಲಾರ ಜಿಲ್ಲಾಧಿಕಾರಿಗಳ ಮೂಲಕ ಸಾಮಾಜಿಕ ಕಾರ್ಯಕರ್ತ ಕೆ.ಎನ್. ರವೀಂದ್ರನಾಥ್ ಮನವಿ ಸಲ್ಲಿಸಿದರು.ಕಾವೇರಿ ನದಿಯ ನೀರಿನಲ್ಲಿ ಸುಮಾರು 100ಟಿಎಂಸಿ ಯಷ್ಟು ನೀರು ತಮಿಳುನಾಡಿನಿಂದ ವ್ಯರ್ಥವಾಗಿ ಹರಿದು ಸಮುದ್ರವನ್ನು ಸೇರಿ ಪೋಲಾಗುತ್ತಿದೆ. ಈ ರೀತಿ ವ್ಯರ್ಥವಾಗುವ ನೀರನ್ನು ಸದ್ಭಾಳಕ್ಕೆ ಮಾಡಿಕೊಳ್ಳುವ ಸದುದ್ದೇಶದಿಂದ ಕರ್ನಾಟಕ ಸರ್ಕಾರವು ರಾಮನಗರ ಜಿಲ್ಲೆ, […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಶಿಕ್ಷಕರು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಬೇಕು ಎಂದು ಡಯಟ್ ಪ್ರಾಂಶುಪಾಲ ಟಿ.ಕೆ.ರಾಘವೇಂದ್ರ ಹೇಳಿದರು.ಪಟ್ಟಣದ ಕರ್ನಾಟಕ ಸರ್ಕಾರಿ ಮಾದರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಅವರಣದಲ್ಲಿ ಸೋಮವಾರ ಏರ್ಪಡಿಸಿದ್ದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿ, ವಿಜ್ಞಾನ ಜನರ ಬದುಕಲ್ಲಿ ಹಾಸುಹೊಕ್ಕಾಗಿದೆ. ಅದನ್ನು ವಿವೇಚನೆಯಿಂದ ಬಳಸಬೇಕಾದ ಹೊಣೆ ಸಮಾಜದ ಮೇಲಿದೆ ಎಂದು ಹೇಳಿದರು.ಶಾಲೆಯ ಮುಖ್ಯ ಶಿಕ್ಷಕ ಎಂ.ಬೈರೇಗೌಡ ಮಾತನಾಡಿ, ವಿಜ್ಞಾನ ಮಾನವನ ಬದುಕನ್ನು ಸುಲಭ ಮಾಡಿದೆ. ಹಾಗೆಯೇ ವಿಜ್ಞಾನದ ಕೆಲವು ಆವಿಷ್ಕಾರಗಳು […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕು ಕಚೇರಿ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ಹಾಗೂ ಮಧ್ಯವರ್ತಿಗಳ ಹಾವಳಿ ನಿಲ್ಲಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲ್ಲೂಕು ಘಟಕದ ಕಾರ್ಯಕರ್ತರು ಸೋಮವಾರ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಘಟಕದ ಕಾರ್ಯದರ್ಶಿ ವೀರಭದ್ರಸ್ವಾಮಿ ಪ್ರತಿಭಟನೆ ನಿರತ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ, ತಾಲ್ಲೂಕು ಕಚೇರಿ, ತಾಲ್ಲೂಕು ಪಂಚಾಯಿತಿ ಕಚೇರಿ, ಕೃಷಿ, ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಯಲ್ಲಿ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ ಫೆ. 28 : ಗಡಿನಾಡು ಭಾಗಗಳಲ್ಲಿ ಜನರು ಬೇರೆ ಭಾಷಗಳ ಪ್ರಭಾವಕ್ಕೆ ಒಳಗಾಗದೆ ಕನ್ನಡ ಭಾμÉಯನ್ನು ಉಳಿಸಿ ಬೆಳೆಸವುದು ಪ್ರತಿಯೊಬ್ಬರ ಕರ್ತವ್ಯ. ಕನ್ನಡ ಭಾಷೆ ಮೇಲೆ ಅಭಿಮಾನ ಬೆಳಿಸಿಕೊಳ್ಳುವುದರಿಂದ ನಮ್ಮ ಅಭಿವೃದ್ಧಿ ಸಾಧ್ಯ. ಸ್ಥಳೀಯ ಪ್ರತಿಭೆಗಳು, ಹಿರಿಯ ಕಲಾವಿದರನ್ನು ಗುರುತಿಸುತ್ತಿರುವುದು ಶ್ಲಾಘನೀಯ ಎಂದು ಮಾಲೂರು ಶಾಸಕ ಕೆ.ವೈ. ನಂಜೇಗೌಡ ತಿಳಿಸಿದರು.ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ಹಾಗೂ ಗಾನಸುಧಾ ಸಾಂಸ್ಕøತಿಕ ಕಲಾ ಸಂಸ್ಥೆ ಜಯಮಂಗಲ ಮಾಲೂರು ತಾಲ್ಲೂಕು ಇವರ ಸಂಯುಕ್ತಾಶ್ರಯದಲ್ಲಿ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಕೋಲಾರ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾಗಿ ಮೂರಾಂಡಹಳ್ಳಿ ಗೋಪಾಲಪ್ಪ ಹಾಗೂ ಉಪಾಧ್ಯಕ್ಷರಾಗಿ ಟಿ.ಕೆ.ಬೈರೇಗೌಡ ಅವಿರೋಧವಾಗಿ ಆಯ್ಕೆಯಾದರು.ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ನೇತೃತ್ವದಲ್ಲಿ ನೀಡಿದ ಸೂತ್ರದಂತೆ ಎಲ್ಲರಿಗೂ ಅಧಿಕಾರ ಸಿಗಬೇಕೆಂಬ ಆಶಯದೊಂದಿಗೆ ಸಹಕಾರಿ ಯೂನಿಯನ್ಗೆ ತಲಾ 10 ತಿಂಗಳ ಅಧಿಕಾರದ ಸೂತ್ರದಡಿ ಅ.ಮು.ಲಕ್ಷ್ಮೀನಾರಾಯಣ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷಸ್ಥಾನದ 2ನೇ ಅವಧಿಗೆ ಮೂರಾಂಡಹಳ್ಳಿ ಗೋಪಾಲಪ್ಪ ಅವಿರೋಧವಾಗಿ ಆಯ್ಕೆಯಾದರು.ನೂತನ ಅಧ್ಯಕ್ಷರು,ಉಪಾಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿದ ಬ್ಯಾಲಹಳ್ಳಿ ಗೋವಿಂದಗೌಡ, ಅಧಿಕಾರ ಒಬ್ಬರಿಗಲ್ಲ ಎಲ್ಲರಿಗೂ ಅವಕಾಶ ಸಿಗಬೇಕು, ಯೂನಿಯನ್ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ನ್ಯಾಯಾಧೀಶರು ಹಾಗೂ ವಕೀಲರು ವಿಶೇಷ ಮುತಿವರ್ಜಿ ವಹಿಸಿ ನ್ಯಾಯಾಲಯದಲ್ಲಿನ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಬೇಕು ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷ ಬಿ.ವೀರಪ್ಪ ಹೇಳಿದರು.ಪಟ್ಟಣದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದ ಆವರಣದಲ್ಲಿ ಶನಿವಾರ ಏರ್ಪಡಿಸಿದ್ದ ಸಮಾರಂಭದಲ್ಲಿ, ನೂತನವಾಗಿ ಸೃಜಿಸಲ್ಪಟ್ಟ ಸಂಚಾರಿ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯ ಉದ್ಘಾಟಿಸಿ ಮಾತನಾಡಿದ ಅವರು, ಪಟ್ಟಣದ […]