ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ : ಮಾರಕ ಕೀಟವಾಗಿರುವ ಸೊಳ್ಳೆಯಿಂದ ಹರಡುವಂತಹ ಡೆಂಗೀ , ಚಿಕುಂಗುನ್ಯಾ , ಮಲೇರಿಯಾ , ಮೆದುಳುಜ್ವರ , ಆನೆಕಾಲುರೋಗ ಮತ್ತು ಇತರೆ ಮಾರಣಾಂತಿಕ ಖಾಯಿಲೆಗಳನ್ನು ನಿಯಂತ್ರಣ ಮಾಡಬೇಕಾದರೆ ಸೊಳ್ಳೆಗಳ ಉತ್ಪತ್ತಿಯನ್ನು ನಿಯಂತ್ರಿಸಲು ಸಮುದಾಯದ ಸಹಭಾಗಿತ್ವ ಮುಖ್ಯ ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳಾದ ಡಾ || ಕಮಲ.ಎಂ ಅವರು ತಿಳಿಸಿದ್ದಾರೆ . ಡೆಂಗ್ಯೂ , ಚಿಕುನ್ ಸಹ ಒಂದು ಸಾಂಕ್ರಮಿಕರೋಗವಾಗಿದ್ದು , ಈಡೀಸ್ ಈಜಿಪ್ಟ್ ಸೊಳ್ಳೆಯ ಕಚ್ಚುವಿಕೆಯಿಂದ ಒಬ್ಬರಿಂದ ಒಬ್ಬರಿಗೆ […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ: ಕರ್ನಾಟಕ ವಿಧಾನ ಪರಿಷತ್ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಚುನಾವಣೆಗೆ ನವೆಂಬರ್ 16 ರಿಂದ ನಾಮಪತ್ರಗಳನ್ನು ಸಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಗಲಿದ್ದು , ಚುನಾವಣೆ ಸುಸಜ್ಜಿತವಾಗಿ ಯಾವುದೇ ತೊಂದರೆಯಾಗದಂತೆ ನಡೆಯಬೇಕು . ಚುನಾವಣೆ ನೀತಿ ಸಂಹಿತೆಯನ್ನು ಯಾರಾದರು ಉಲ್ಲಂಘಿಸಿದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳಾದ ಡಾ || ಆರ್.ಸೆಲ್ವಮಣಿ ಅವರು ತಿಳಿಸಿದರು .ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಚುನಾವಣಾ ಮಾದರಿ ನೀತಿ ಸಂಹಿತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು . ಚುನಾವಣಾ […]
ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ರಾಷ್ಟ್ರೀಯ ಶಿಕ್ಷಣ ನೀತಿಯ ಮೂಲಕ ಸಂಗೀತವನ್ನು ಒಂದರಿಂದ ಹತ್ತನೇ ತರಗತಿಯ ಪಠ್ಯಭಾಗವಾಗಿಸಿ ಕಡ್ಡಾಯವಾಗಿ ಪ್ರತಿಯೊಬ್ಬ ವಿದ್ಯಾರ್ಥಿಯೂ ಕಲಿಯುವಂತೆ ಮಾಡಲು ಸರಕಾರ ಕ್ರಮ ಕೈಗೊಳ್ಳಬೇಕು ಎಂದು ಭಾರತ ಸೇವಾದಳ ಜಿಲ್ಲಾಧ್ಯಕ್ಷ ಹಾಗೂ ಕೋಲಾರ ಮತ್ತು ಚಿಕ್ಕಬಳ್ಳಾಪುರ ಕಾರ್ಯನಿರತ ಪತ್ರಕರ್ತರ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷಕೆ.ಎಸ್.ಗಣೇಶ್ ಹೇಳಿದರು . ಗಾಯಿತಿ ಸಂಗೀತ ಕಲಾ ನಿಕೇತನ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ನಗರದ ಥಿಯೋಸಫಿಕಲ್ ಸೊಸೈಟಿಯಲ್ಲಿ ಭಾನುವಾರ ಮಧ್ಯಾಹ್ನ ಆಯೋಜಿಸಿದ್ದ ಕರ್ನಾಟಕ ಸಂಗೀತ ಕಾರ್ಯಕ್ರಮವನ್ನು ಉದ್ಘಾಟಿಸಿ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ-15, ಕೋಲಾರಮ್ಮನ ಕೆರೆಯಲ್ಲಿನ ನಿರುಪಯುಕ್ತ ಗಿಡಗಳನ್ನು ತೆರವುಗೊಳಿಸಿ ಶಿಥಿಲಗೊಂಡಿರುವ ಕೆರೆ ಕಟ್ಟೆಯನ್ನು ಅಭಿವೃದ್ದಿ ಪಡಿಸಬೇಕೆಂದು ರೈತ ಸಂಘದಿಂದ ಕೆರೆ ಕಟ್ಟೆ ಮುಂಭಾಗ ಹೋರಾಟ ಮಾಡಿ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಮತ್ತು ತಹಸೀಲ್ದಾರ್ ಮುಖಾಂತರ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿ ಒತ್ತಾಯಿಸಲಾಯಿತು.ಅಂಗೈಯಲ್ಲಿ ಬೆಣ್ಣೆ ಇಟ್ಟುಕೊಂಡು ತುಪಕ್ಕಾಗಿ ಊರೆಲ್ಲ ಸುತ್ತಿದರೆಂಬ ಗಾದೆಯಂತೆ ದೇವರ ಕೃಪೆಯಿಂದ ವರುಣನ ಆರ್ಭಟಕ್ಕೆ ತುಂಬಿ ತುಳುಕುತ್ತಿರುವ ಕೋಲಾರಮ್ಮನ ಕೆರೆಯನ್ನು ನಿರುಪಯುಕ್ತ ಗಿಡಗಳಿಂದ ಮುಕ್ತಿಗೊಳಿಸಲು ಜನ ಪ್ರತಿನಿಧಿಗಳು ಮತ್ತು ಜಿಲ್ಲಾಡಳಿತ ವಿಫಲವಾಗಿದೆ ಎಂದು […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಸಾಹಿತ್ಯಕ್ಕೆ ಎಲ್ಲೆಗಳ ಹಂಗಿಲ್ಲ. ಸಾಹಿತ್ಯ ಸಾಮಾಜಿಕ ಬದಲಾವಣೆಯ ವಾಹಕ ಎಂದು ಮೈಸೂರಿನ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರ, ಭಾರತೀಯ ಭಾಷಾ ಸಂಸ್ಥಾನದ ಸಂಶೋಧಕ ಹಾಗೂ ಸಾಹಿತಿ ಡಾ. ಕುಪ್ಪನಹಳ್ಳಿ ಎಂ.ಬೈರಪ್ಪ ಹೇಳಿದರು.ತಾಲ್ಲೂಕಿನ ನಂಬಿಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಶನಿವಾರ ಏರ್ಪಡಿಸಿದ್ದ ಕವಿ ಬಿ.ವಿ.ವೆಂಕಟೇಶ್ ಅವರ ತಾಯಿಯ ಋಣ ಎಂಬ ಕವನ ಸಂಕಲನ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿ, ಗ್ರಾಮೀಣ ಪ್ರದೇಶದ ಯುವ ಕವಿಗಳು, ರೈತ ಸಮುದಾಯದ ಬದುಕು, […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಬ್ಯಾಂಕ್ ವಿರುದ್ದ ಕೆಲವರು ನಿರಂತರವಾಗಿ ಷಡ್ಯಂತ್ರ ನಡೆಸುತ್ತಿದ್ದು, ರೈತರು,ಮಹಿಳೆಯರ ಕಷ್ಟಕ್ಕೆ ಸ್ಪಂದಿಸುವ ನಿಮ್ಮ ಪ್ರಾಮಾಣಿಕ ಕೆಲಸದ ಮೂಲಕ ಅದಕ್ಕೆ ತಕ್ಕ ಉತ್ತರ ನೀಡಿ ಎಂದು ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಸಿಬ್ಬಂದಿಗೆ ತಾಕೀತು ಮಾಡಿದರು.ಬ್ಯಾಂಕಿನ ಸಭಾಂಗಣದಲ್ಲಿ ಶನಿವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೆಲವರು ಬ್ಯಾಂಕ್ ವಿರುದ್ದ ಷಡ್ಯಂತ್ರ ನಿರಂತರವಾಗಿ ಮುಂದುವರೆಸಿದ್ದಾರೆ, ರಾಜಕೀಯವಾಗಿ ನಡೆಸುತ್ತಿರುವ ಇಂತಹ ಪ್ರಯತ್ನಗಳು ಸಫಲವಾಗದು ಎಂದರು.ಬ್ಯಾಂಕನ್ನು ನಂಬಿರುವ ರೈತರು,ಮಹಿಳೆಯರ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ : ಶಿಕ್ಷಕರು ವಿದ್ಯಾರ್ಥಿಗಳು ಮತ್ತು ಜನ ಸಮುದಾಯದಲ್ಲಿ ಮೌಡ್ಯಾಚರಣೆ ವಿರುದ್ಧ ಜನ ಜಾಗೃತಿ ಮೂಡಿಸುವ ಮೂಲಕ ಅವರಲ್ಲಿ ವೈಜ್ಞಾನಿಕ ಪ್ರಜ್ಞೆ ಬೆಳೆಸುವಂತೆ ಸಂಕಲ್ಪ ತೊಡಬೇಕೆಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಸ್.ಜಿ.ನಾಗೇಶ್ ತಿಳಿಸಿದರು . ನಗರದ ಪತ್ರಕರ್ತರ ಭವನದಲ್ಲಿಂದು ಜಿಲ್ಲಾ ಜ್ಞಾನ ವಿಜ್ಞಾನ ಸಮಿತಿ , ಜಿಲ್ಲಾ ಪ್ರಾಥಮಿಕ ಶಾಲಾ ಮುಖ್ಯೋಪಾದ್ಯಾಯರ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ಪವಾಢ ಶಿಕ್ಷಕ ಡಾ.ಕೆ ಶ್ರೀನಿವಾಸ್‌ರವರ ಅಭಿನಂದನಾ ಸಮಾರಂಭ ಉದ್ಘಾಟಿಸಿ ಅವರು […]
ಶ್ರೀನಿವಾಸಪುರ: ಸಹಜ ಮಳೆ ಸುರಿದಾಗ ಮಾತ್ರ ಕೆಸಿ ವ್ಯಾಲಿ ನೀರಿನ ಅಪಾಯದಿಂದ ಪಾರಾಗಲು ಸಾಧ್ಯ ಎಂದು ಸಾಹಿತಿ ಹಾಗೂ ಕೃಷಿ ಸಂಸ್ಕøತಿ ಕೇಂದ್ರದ ಅಧ್ಯಕ್ಷ ಕೋಟಿಗಾನಹಳ್ಳಿ ಕೆ.ರಾಮಯ್ಯ ಹೇಳಿದರು.ಪಟ್ಟಣದಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಬುಧವಾರ ಏರ್ಪಡಿಸಿದ್ದ ಸೇನೆಯ ತಾಲ್ಲೂಕು ಘಟಕದ ಉದ್ಘಾಟನೆ ಹಾಗೂ ಕಚೇರಿ ಪ್ರಾರಂಭೋತ್ಸವ ಸಮಾರಂಭದಲ್ಲಿ, ನೂತನ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಈಗ ಸುರಿಯುತ್ತಿರುವ ಭಾರಿ ಮಳೆಯಿಂದ, ಜಿಲ್ಲೆ ಮಲೆನಾಡು ಆಗುತ್ತದೆ ಎಂದು ಕೆಲವರು ಹೇಳುತ್ತಿರುವುದು ಪೂರ್ಣ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಮಾದಿಗ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕೆ ಸಾಂಘಿಕ ಪ್ರಯತ್ನ ನಡೆಸಬೇಕು ಎಂದು ಮಾದಿದ ದಂಡೋರ ರಾಜ್ಯ ಘಟಕದ ಅಧ್ಯಕ್ಷ ಬಿ.ನರಸಪ್ಪ ದಂಡೋರ ಹೇಳಿದರು.ತಾಲ್ಲೂಕಿನ ಆವಲಕುಪ್ಪ ಗ್ರಾಮದಲ್ಲಿ ಬುಧವಾರ ಮಾದಿಗ ದಂಡೋರ ತಾಲ್ಲೂಕು ಘಟಕದ ವತಿಯಿಂದ ಸ್ಥಾಪಿಸಲಾದ ಡಾ. ಬಿ.ಆರ್.ಅಂಬೇಡ್ಕರ್ ಭಾವ ಚಿತ್ರ ಅನಾವರಣಗೊಳಿಸಿ ಮಾತನಾಡಿದ ಅವರು, ಸಾಮಾಜಿಕ ನ್ಯಾಯದ ಹರಿಕಾರ ಡಾ. ಬಿ.ಆರ್.ಅಂಬೇಡ್ಕರ್ ಅವರ ತತ್ವಾದರ್ಶ ಪಾಲನೆ ಇಂದಿನ ಅಗತ್ಯವಾಗಿದೆ. ಮಾದಿಗ ಸಮುದಾಯಕ್ಕೆ ಸೇರಿದ ಮನೆಗಳ ಮೇಲೆ ಸಂಘಟನೆಯ ಬಾವುಟ ಹಾರಿಸಬೇಕು. […]