
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ ಜನವರಿ 5 : ಶಿಕ್ಷಣ ಕ್ಷೇತ್ರದ ಭದ್ರ ಬುನಾದಿಯಾದ ಉಪನ್ಯಾಸಕರನ್ನು ಈ ರೀತಿಯಾಗಿ ಬೀದಿಯಲ್ಲಿ ಕೂಡಿಸಿ ಅಸಭ್ಯವಾಗಿ ನಡೆಸಿಕೊಳ್ಳುವುದು ಸರಿಯಲ್ಲ ಹಾಗಾಗಿ ದೇಶಕ್ಕೆ ಉಪಸ್ಥಿತರಿರುವಂತೆ ಎಲ್ಲಾ ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡಬೇಕು ಎಂದು ಸಿಎಂಆರ್ ಶ್ರೀನಿವಾಸ್ ಶ್ರೀನಾಥ್ ತಿಳಿಸಿದರು.ಅವರು ನಗರದ ಅತಿಥಿ ಉಪನ್ಯಾಸಕರು ಧರಣಿ ಮಾಡುತ್ತಿರುವ ವೇದಿಕೆಯನ್ನು ಉದ್ದೇಶಿಸಿ ಮಾತಾನಾಡುತ್ತಿದ್ದರುಭಾರತಕ್ಕೆ ಒಂದೇ ಸಂವಿಧಾನ. ಸರ್ಕಾರ ನಡೆದು ಕೊಳ್ಳವ ರೀತಿ ನೀತಿಗಳು ಬೇರೆ ಬೇರೆ. ಅತಿಥಿ ಉಪನ್ಯಾಸಕರ ಮೇಲೆ ಅವರ ವ್ಯಕ್ತಿತ್ವವನ್ನು ಅವರ […]

ವರದಿ: ವಾಲ್ಟರ್ ಮೊಂತೇರೊ, ಬೆಳ್ಮಣ್ಣು ಕರ್ನಾಟಕ ರಾಜ್ಯ ಉಪ ವಲಯ ಅರಣ್ಯಾಧಿಕಾರಿಗಳ ಸಂಘ ಉಡುಪಿ ಜಿಲ್ಲೆಯ ನೇತೃತ್ವದಲ್ಲಿ ಉಡುಪಿಯ ಕಿದಿಯೂರು ಹೋಟೆಲ್‍ನ ರೂಫ್ ಟಾಪ್ ಸಭಾಂಗಣದಲ್ಲಿ ಆದಿತ್ಯವಾರ ಜರಗಿದ 22ನೇ ವರ್ಷದ ವಾರ್ಷಿಕ ಸಮಾರಂಭದಲ್ಲಿ ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಸಂಸ್ಥೆಯನ್ನು ಸನ್ಮಾನಿಸಿ ಗೌರವಿಸಿದರು. ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ಪರವಾಗಿ ಸಂಘದ ಅಧ್ಯಕ್ಷ ಪ್ರಶಾಂತ್ ಪೂಜಾರಿ ಅವರು ಸನ್ಮಾನ ಸ್ವೀಕರಿಸಿದರು. ಉಡುಪಿ ಜಿಲ್ಲಾ ಕರ್ನಾಟಕ […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ ಜನವರಿ 4 : ಡಾ. ಬಿ. ಆರ್ ಅಂಬೇಡ್ಕರ್ ನೀಡಿದ ಸಂವಿಧಾನದ ಹಕ್ಕುಗಳಾದ ಶಿಕ್ಷಣ ಸಂಘಟನೆ ಹೋರಾಟದ ಮೂಲಕ ನ್ಯಾಯ ಸಮ್ಮತ ಅನುಕೂಲಗಳನ್ನು ಪಡೆಯಲು ಅತಿಥಿ ಉಪನ್ಯಾಸಕರು ಸಮರ್ಥರಾಗಿದ್ದಾರೆ.ಅವರು ನಗರದ ನೀರಾವರಿ ವೇದಿಕೆಯಲ್ಲಿ ಅತಿಥಿ ಉಪನ್ಯಾಸಕರು ಹಮ್ಮಿಕೊಂಡಿದ್ದ ಪ್ರತಿಭಟನೆಯಲಿ ಭಾಗವಹಿಸಿ ಮಾತಾನಾಡುತ್ತಿದ್ದರುಆಡಳಿತ ರೂಢ ಸರ್ಕಾರಕ್ಕೆ ಕಣ್ಣು ಕಿವಿ ಬಾಯಿ ಇದೆಯೋ ಎಂಬ ಅನುಮಾನ ಕಾಡುತ್ತಿದೆ. ಏಕೆಂದರೆ ಡಿಸೆಂಬರ್ 10 ರಿಂದ ನಿರಂತರ ಹೋರಾಟದ ಮೂಲಕ ಸೇವಾ ವಿಲೀನತೆಗಾಗಿ ಅತಿಥಿ ಉಪನ್ಯಾಸಕರು ಧರಣಿ […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪೋಷಕರು ಮಕ್ಕಳಿಗೆ ಕಡ್ಡಾಯವಾಗಿ ಕೊರೊನಾ ವಿರುದ್ಧ ಲಸಿಕೆ ಕೊಡಿಸಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಸಾರ್ವಜನಿಕ ಆರೋಗ್ಯ ಇಲಾಖೆ ವತಿಯಿಂದ ಸೋಮವಾರ ಏರ್ಪಡಿಸಿದ್ದ ಸಮಾರಂಭದಲ್ಲಿ 15 ರಿಂದ 18 ವರ್ಷದ ಮಕ್ಕಳಿಗೆ ಕೊರೊನಾ ವಿರುದ್ಧ ಲಸಿಕೆ ನೀಡುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಕೋವಿಡ್ ಸಂದರ್ಭದಲ್ಲಿ ಕೊರೊನಾ ವಾರಿಯರ್ಸ್ ಸೇವೆ ಶ್ಲಾಘನೀಯ, ವೈದ್ಯರು, ವೈದ್ಯಕೀಯ ಸಿಬ್ಬಂದಿ, ವಿವಿಧ ಸೇವಾ ಸಂಘ ಸಂಸ್ಥೆಗಳ ಕಾರ್ಯಕರ್ತರು ಪ್ರಾಣದ […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಅಧಿಕಾರಿಗಳು ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಸಮಯದೊಳಗೆ ಪೂರ್ಣಗೊಳಿಸಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಅಭೆಯಲ್ಲಿ ಮಾತನಾಡಿದ ಅವರು, ಹೋಳೂರು, ಸುಗಟೂರು ಹೋಬಳಿಗಳು ಸೇರಿದಂತೆ ತಾಲ್ಲೂಕಿನ ಎಲ್ಲ ಸರ್ಕಾರಿ ಶಾಲೆಗಳಿಗೆ ಅಗತ್ಯವಾದ ಮೂಲ ಸೌಕರ್ಯ ಒದಗಿಸಲಾಗುವುದು ಎಂದು ಹೇಳಿದರು.ಅಗತ್ಯ ಇರುವ ಕಡೆ ಶಾಲಾ ಕಟ್ಟಡ ನಿರ್ಮಿಸಲಾಗುವುದು. ಶಾಲೆಗೆ ಅಗತ್ಯವಾದ ಗಂಥಾಲಯ, ಪ್ರಯೋಗ ಶಾಲೆ ಹಾಗೂ ಶುದ್ಧ ಕುಡಿಯುವ ನೀರು […]

ವರದಿ : ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ವಿದ್ಯಾರ್ಥಿಗಳು ಸರ್ಕಾರ ಹಾಗೂ ದಾನಿಗಳು ನೀಡುವ ಸೌಲಭ್ಯ ಪಡೆದುಕೊಂಡು ಶೈಕ್ಷಣಿಕ ಪ್ರಗತಿ ಸಾಧಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಉಮಾದೇವಿ ಹೇಳಿದರು.ತಾಲ್ಲೂಕಿನ ಗಾಂಡ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಥಳೀಯ ಚೌಡಮ್ಮ ಹಿರಣ್ಯಗೌಡ ಟ್ರಸ್ಟ್ ವತಿಯಿಂದ ಏರ್ಪಡಿಸಿದ್ದ ಸಮಾರಂಭದಲ್ಲಿ, ಗಾಂಡ್ಲಹಳ್ಳಿ ಹಾಗೂ ಕುಪ್ಪಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳ ೯೦ ಮಕ್ಕಳಿಗೆ ಟ್ರಾö್ಯಕ್ ಸೂಟ್ ವಿತರಿಸಿ ಮಾತನಾಡಿ, ಹಿರಣ್ಯಗೌಡರು ಮಾದರಿ ಶಿಕ್ಷಕರಾಗಿದ್ದರು. ಅವರ ಮಕ್ಕಳು ಐಎಎಸ್, ಐಪಿಎಸ್, ಐಎಫ್‌ಎಸ್ […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಆಧುನಿಕ ಯುಗದಲ್ಲಿ ಜನರು ದೈಹಿಕ ಶ್ರಮ ಇಲ್ಲದೆ ಕಾಯಿಲೆಗಳನ್ನು ಹಣ ಕೊಟ್ಟು ಸ್ವಾಗತಿಸುತ್ತಿದ್ದಾರೆ. ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಯೋಗಾಭ್ಯಾಸ ಎಲ್ಲರು ಕಲಿಯಬೇಕೆಂದು ಪ್ರಾಥಮಿಕ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ಆರ್.ರವಿಕುಮಾರ್ ಹೇಳಿದರು.ಪಟ್ಟಣದ ತ್ಯಾಗರಾಜ ಬಡಾವಣೆಯಲ್ಲಿನ ಶ್ರೀಪತಂಜಲಿ ಯೋಗ ಶಿಕ್ಷಣ ಸಮಿತಿ ಶ್ರೀನಿವಾಸಪುರ ಶಾಖೆಯಿಂದ ಯೋಗ ಮಂದಿರದಲ್ಲಿ ಏರ್ಪಡಿಸಿದ್ದ 86 ನೇ ಯೋಗಾಭ್ಯಾಸ ಮತ್ತು ಪ್ರಾಣಾಯಾಮ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.ಪೌಷ್ಟಿಕ ಆಹಾರದ ಕೊರತೆಯಿಂದ ಮಾನುಷ್ಯನಿಗೆ ನಾನಾ ಕಾಯಿಲೆಗಳು ಬರುತ್ತಿವೆ. ದೇಹಕ್ಕೆ ರೋಗ […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ ಡಿ 27 : ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯ ಮತ್ತು ಶಿಸ್ತು ಬೆಳೆಸುವ ಉದ್ದೇಶದಿಂದ ಜಿಲ್ಲೆಯ ಎಲ್ಲ ಪ್ರೌಢ ಶಾಲೆಗಳಲ್ಲಿ ಜೂನಿಯರ್ ರೆಡ್ ಕ್ರಾಸ್ ಘಟಕವನ್ನು ಆರಂಭಿಸಲಾಗುವುದು ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ರೇವಣಸಿದ್ದಪ್ಪ ತಿಳಿಸಿದರು.ತಮ್ಮ ಕಾರ್ಯಾಲಯದಲ್ಲಿಂದು ಜೂನಿಯರ್ ರೆಡ್ ಕ್ರಾಸ್ ಉಪ ಸಮಿತಿಯ ರಾಜ್ಯ ಸದಸ್ಯ ಜಿ.ಶ್ರೀನಿವಾಸ್ ನೇತೃತ್ವದ ನಿಯೋಗ ನೀಡಿದ ಮನವಿ ಸ್ವೀಕರಿಸಿ ಅವರು ಮಾತನಾಡುತ್ತಿದ್ದರು.ದೇಶ ಮತ್ತು ಪ್ರಪಂಚದಾದ್ಯಂತ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯು ತನ್ನದೇ ಆದ […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ ಡಿ.27 : ಈಗಿನ ಪೀಳಿಗೆಗೆ ಜಾನಪದದ ಸೊಗಡಿನ ಅರಿವು ಮೂಡಿಸುವುದು ಬಹಳ ಪ್ರಾಮುಖ್ಯವಾಗಿದೆ. ಅಲ್ಲದೆ ಇಂತಹ ಜಾನಪದ, ತತ್ವಪದ ಹಾಗೂ ಸಂಗೀತ ಕಾರ್ಯಕ್ರಮಗಳನ್ನು ಗ್ರಾಮಗಳಲ್ಲಿ ನಡೆಸುವುದರಿಂದ ಮನಸ್ಸಿಗೆ ನೆಮ್ಮದಿ ಹಾಗೂ ಯುವ ಜನಾಂಗದ ಒತ್ತಡಕ್ಕೆ ಕಡಿವಾಣ ಹಾಕಲು ಸಹಕಾರಿಯಾಗುತ್ತದೆ ಎಂದು ದೇವಾಲಯದ ಅರ್ಚಕರಾದ ಅನಂತ ಪದ್ಮನಾಭ ಸ್ವಾಮಿಗಳು ತಿಳಿಸಿದರು.ಕೋಲಾರ ತಾಲ್ಲೂಕು ನರಸಾಪುರ ಹೋಬಳಿ ಕುರ್ಕಿ ಗ್ರಾಮದಲ್ಲಿ ನೆಲೆಸಿರುವ ಶ್ರೀ ಪೆರುಪಾಳ್ಯ ಯಲ್ಲಮ್ಮ ದೇವಾಲಯದ ಆವರಣದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಮತ್ತು […]