ವರದಿ :ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ಒಬ್ಬ ವ್ಯಕ್ತಿ ಮರಣ ಹೊಂದಿದ ನಂತರ ತನ್ನ ಕಣ್ಣುಗಳನ್ನು ದಾನ ಮಾಡುವುದರಿಂದ ಇಬ್ಬರು ವ್ಯಕ್ತಿಗಳ ಜೀವನಕ್ಕೆ ಬೆಳಕನ್ನು ನೀಡಬಹುದು . ಆದ್ದರಿಂದ ಕಣ್ಣುಗಳ ರಕ್ಷಣೆ ಮತ್ತು ನೇತ್ರದಾನದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ || ಆರ್.ಸೆಲ್ವಮಣಿ ಅವರು ತಿಳಿಸಿದರು . ಇಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ ಆವರಣದಲ್ಲಿ ಜಿಲ್ಲಾಡಳಿತ , ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ : ಜನರು ಮಾನಸಿಕ ಆರೋಗ್ಯ ರಕ್ಷಣೆಗೆ ಮೊದಲು ಆದ್ಯತೆ ನೀಡಬೇಕು ಎಂದು ಜೆಎಂಎಫ್‌ಸಿ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶ ಎಚ್.ಆರ್.ದೇವರಾಜ್ ಹೇಳಿದರು . ತಾಲ್ಲೂಕಿನ ಗೌನಿಪಲ್ಲಿ ಗ್ರಾಮದದಲ್ಲಿ ಕಾನೂನು ಸೇವಾ ಪ್ರಾಧಿಕಾರ ಹಾಗೂ ಸ್ಥಳೀಯ ಗ್ರಾಮ ಪಂಚಾಯಿತಿ ವತಿಯಿಂದ ಭಾನುವಾರ ಏರ್ಪಡಿಸಿದ್ದ ಮಾನಸಿಕ ಆರೋಗ್ಯ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು , ಜನರು ಬೇರೆ ಬೇರೆ ಕಾರಣಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗುತ್ತಿದ್ದಾರೆ . ಅದು ಕೆಲವು ಸಲ ಅಪಾಯಕಾರಿ ಆಗುವ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೆ.ಜಿ.ಎಫ್; ಆರ್ಥಿಕ ಹೊರೆ ನೆಪದಲ್ಲಿ ಕೆ.ಜಿ.ಎಪ್ ಜಿಲ್ಲಾ ಪೊಲೀಸ್ ಕಛೇರಿಯನ್ನು ವಿಜಯನಗರ ಜಿಲ್ಲೆಗೆ ವರ್ಗಾವಣೆ ಮಾಡುವ ಆದೇಶವನ್ನು ಕೂಡಲೇ ವಾಪಸ್ಸು ಪಡೆದು ಹದೆಗೆಡುವ ಕಾನೂನು ಸುವ್ಯವಸ್ಥೆಯನ್ನು ಕಾಪಾಡಬೇಕೆಂದು ರೈತ ಸಂಘದಿಂದ ಸೂರಜ್‍ಮಾಲ್ ಸರ್ಕಲ್‍ನಲ್ಲಿ ತಲೆಯ ಮೇಲೆ ಕಲ್ಲು ಇಟ್ಟುಕೊಂಡು ಹೋರಾಟ ಮಾಡಿ ಉಪ ತಹಸೀಲ್ದಾರ್ ಸುರೇಶ್‍ರವರ ಮುಖಾಂತರ ಮುಖ್ಯ ಮಂತ್ರಿಗಳಿಗೆ ಮನವಿ ನೀಡಿ ಆಗ್ರಹಿಸಲಾಯಿತು.ಕೆ.ಜಿ.ಎಫ್ ಪೊಲೀಸ್ ಜಿಲ್ಲಾ ಕಚೇರಿಯ ಆದೇಶವನ್ನು ವಾಪಸ್ಸು ಪಡೆಯದೇ ಹೋದರೆ ಸಾವಿರಾರು ಟ್ರಾಕ್ಟರ್ ಜಾನುವಾರುಗಳೊಂದಿಗೆ ವಿಧಾನಸೌಧ ಮುತ್ತಿಗೆ ಹಾಕುವ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ : ಜನರು ಆರೋಗ್ಯ ಕೇಂದ್ರದ ಪ್ರಯೋಜನ ಪಡೆದು , ತಮ್ಮ ಆರೋಗ್ಯ ಸುಧಾರಿಸಿಕೊಳ್ಳಬೇಕು ಎಂದು ಶಾಸಕ ಕೆ.ಆರ್‌.ರಮೇಶ್‌ ಕುಮಾರ್‌ ಹೇಳಿದರು . ತಾಲ್ಲೂಕಿನ ನೀಲ್ ಬಾಗ್ ಕ್ರಾಸ್ ಸಮೀಪ ಭಾನುವಾರ ಸತ್ಯಸಾಯಿ ಆರೋಗ್ಯ ಪ್ರತಿಷ್ಠಾನದ ವತಿಯಿಂದ ನಿರ್ಮಿಸಲಾಗಿರುವ ಸಾಂಕ್ರಾಮಿಕವಲ್ಲದ ರೋಗಗಳ ಗಾಮೀಣ ಆರೋಗ್ಯ ಕೇಂದ್ರ ಉದ್ಘಾಟಿಸಿ ಮಾತನಾಡಿ , ಗ್ರಾಮೀಣ ಪ್ರದೇಶದ ಜನರನ್ನು ಆರೋಗ್ಯ ಸಮಸ್ಯೆಗಳಿಂದ ಪಾರು ಮಾಡುವ ಉದ್ದೇಶದಿಂದ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಲಾಗಿದೆ . ಅವುಗಳ ಜತೆಗೆ ಈ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ : – ಸಹಕಾರಿ ಕ್ಷೇತ್ರದಿಂದ ರೈತರು , ಮಹಿಳೆಯರು , ಬಡವರು ಬದುಕು ರೂಪಿಸಿಕೊಳ್ಳಲು ಸಾಧ್ಯ ಎಂಬುದನ್ನು ಕೋಲಾರ – ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಇಡೀ ದೇಶಕ್ಕೆ ಸಾಧಿಸಿ ತೋರಿಸಿದೆ , ಜನ ಸ್ನೇಹಿಯಾಗಿ ಬೆಳೆಯುತ್ತಿರುವ ಈ ಸಂಸ್ಥೆಗೆ ರೈತರು , ತಾಯಂದಿರು ಆಧಾರ ಸ್ಥಂಭವಾಗಿ ನಿಲ್ಲಬೇಕು ಎಂದು ಮಾಜಿ ಶಾಸಕ ಕೆ.ಆರ್‌.ಶ್ರೀನಿವಾಸಯ್ಯ ಕರೆ ನೀಡಿದರು . ಕೋಲಾರ ಕಸಬಾ ದಕ್ಷಿಣ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದಿಂದ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಇಲ್ಲಿನ ಪುರಸಭೆಗೆ 2018 – 19ನೇ ಸಾಲಿನಲ್ಲಿ ಬೀದಿ ಬದಿ ವ್ಯಾಪಾರಿಗಳ ನಿರ್ವಹಣೆಗೆ ತೃತೀಯ ಬಹುಮಾನ ಬಂದಿದೆ.ಬೆಂಗಳೂರಿನ ವಿಕಾಸ ಸೌಧದಲ್ಲಿ ಕರ್ನಾಟಕ ಸಿಟಿ ಮ್ಯಾನೇಜರ್ ಅಸೋಸಿಯೇಷನ್ ಹಾಗೂ ಪೌರಾಡಳಿತ ನಿದೇಶನಾಲಯದ ಸಹಯೋಗದೊಂದಿಗೆ ಈಚೆಗೆ ಏರ್ಪಡಿಸಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್, ಸಣ್ಣ ಕೈಗಾರಿಕೆ ಸಚಿವ ಎಂ.ಟಿ.ಬಿ ನಾಗರಾಜ್ ಪ್ರಶಸ್ತಿ ಪ್ರದಾನ ಮಾಡಿದರು.ಬಹುಮಾನವಾಗಿ ರೂ.50 ಸಾವಿರದ ಚೆಕ್, ಪ್ರಶಸ್ತಿ ಪತ್ರ ಹಾಗೂ ಪಾರಿತೋಷಕವನ್ನು ಪುರಸಭೆ ಮುಖ್ಯಾಧಿಕಾರಿ ಪುರಸಭೆ ಮುಖ್ಯಾಧಿಕಾರಿ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ : ದೇಶ ಭಕ್ತಿ ಮತ್ತು ದೇಶ ಪ್ರೇಮವನ್ನು ತಮ್ಮ ಉಸಿರನ್ನಾಗಿಸಿಕೊಂಡು ದೇಶಕ್ಕಾಗಿ ದುಡಿದು ಪ್ರಾಣ ತ್ಯಾಗ ಮಾಡಿದ ಸ್ವಾತಂತ್ರ್ಯ ಯೋಧರನ್ನು ಸ್ಮರಿಸಿ ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ಸಿ . ಆರ್‌ . ಅಶೋಕ್ ತಿಳಿಸಿದರು . ತಾಲೂಕಿನ ಬೆಗ್ಲಿಹೊಸಹಳ್ಳಿಯಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಕೆ . ಮುನಿಯಪ್ಪ ರವರ ಭಾವಚಿತ್ರಕ್ಕೆ ಪುಷ್ಪಾಂಜಲಿ ಸಲ್ಲಿಸಿ ಮಾತನಾಡಿದರು . ಭಾರತದ ಜನರು ಸಮೃದ್ಧಿ ಮತ್ತು ಸಾಧನಗಳ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ರಾಯಲ್ಪಾಡು : ರೈತರು ಕೃಷಿ ಜೊತೆಗೆ ಉಪ ಕಸುಬುಗಳನ್ನು ಕೈಗೊಂಡರೆ ರೈತರು ಆರ್ಥಿಕವಾಗಿ ಸ್ವಾವಲಂಭಿಗಳಾಗಬಹುದು ಎಂದು ಸಂಗಮ್ ಡೈರಿಯ ವ್ಯವಸ್ಥಾಪಕ ವೈ.ಜಿ.ನಾಗರಾಜು ಹೇಳಿದರು . ತಿಮ್ಮರಾಜಪಲ್ಲಿ ಗ್ರಾಮದ ಸಂಗಮ್ ಡೈರಿವತಿಯಿಂದ ಡೈರಿಯ ಪಲಾನುಭವಿಗಳಿಗೆ ಬೋನಸ್ ಚೆಕ್‌ನ್ನು ವಿತರಿಸಿ ಮಾತನಾಡಿದರು . ರೈತರು ಕೃಷಿ ಚಟುವಟಿಕೆಯೊಂದಿಗೆ ಪಶುಪಾಲನೆ ಕೈಗೊಂಡರೆ ಆದಾಯ ಇಮ್ಮಡಿಯಾಗುತ್ತದೆ . ಈ ನಿಟ್ಟಿನಲ್ಲಿ ಪಶುಪಾಲನೆ ಕಡೆಗೆ ವಿಶೇಷ ಗಮನ ಹರಿಸುವ ಜೊತೆಗೆ ಪಶುಗಳಲ್ಲಿ ಕಂಡು ಬರುವ ಕಾಲುಬಾಯಿ ರೋಗ , ಜಂತುಹುಳು […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ : ರಕ್ತದಾನದ ಮಹತ್ವದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು . ಸ್ವಯಂಪ್ರೇರಿತರಾಗಿ ಪ್ರತಿಯೊಬ್ಬರು ರಕ್ತದಾನ ಮಾಡುವುದರಿಂದ ಇನ್ನೊಬ್ಬರ ಜೀವ ಉಳಿಸುವುದರ ಮೂಲಕ ಸಮಾಜಕ್ಕೆ ಸಹಾಯ ಮಾಡಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ || ಆರ್.ಸೆಲ್ವಮಣಿ ಅವರು ತಿಳಿಸಿದರು . ಇಂದು ಜಿಲ್ಲಾಡಳಿತ , ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ , ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ ಹಾಗೂ ಇ.ಟಿ.ಸಿ.ಎಂ ನರ್ಸಿಂಗ್ ಕಾಲೇಜು , ಕೋಲಾರ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ […]

Read More