ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ ಜೂ.25 : ಸ್ಪರ್ಧಾತ್ಮಕ ಯುಗದಲ್ಲಿ ಆಂಗ್ಲ ಭಾಷೆಯ ಅನಿವಾರ್ಯತೆ ಇದ್ದು, ಬಡ ಕುಟುಂಬದ ಪ್ರತಿಯೊಬ್ಬ ಮಕ್ಕಳಿಗೂ ಗುಣಾತ್ಮಕ ಶಿಕ್ಷಣ ಒದಗಿಸುವ ಉದ್ದೇಶದಿಂದ ಜಿಲ್ಲೆಯಲ್ಲಿನ 44 ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ವಿಭಾಗ ತೆರೆಯಲಾಗಿದ್ದು, ಈ ಮೂಲಕ ಒಂದನೇ ತರಗತಿಗೆ ದಾಖಲಾತಿ ಆರಂಭವಾಗಿದೆ ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ಸಿ.ಆರ್. ಅಶೋಕ್ ತಿಳಿಸಿದರು.ತಾಲ್ಲೂಕಿನ ಹರಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿಂದು ಏರ್ಪಡಿಸಿದ್ದ ಒಂದನೇ ತರಗತಿಗೆ ಆಂಗ್ಲ ಮಾಧ್ಯಮ ಆರಂಭ ಕಾರ್ಯಕ್ರಮಕ್ಕೆ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಕೋವಿಡ್ ಸೋಂಕಿನ ಆತಂಕದಲ್ಲೂ ನ್ಯಾಯ ವಿಲೇವಾರಿ ವಿಳಂಬವಾಗದಂತೆ ವೀಡಿಯೋ ಕಾನ್ಫರೆನ್ಸ್ ಮೂಲಕ ಪ್ರಕರಣಗಳ ವಿಚಾರಣೆ ನಡೆಸುತ್ತಿದ್ದು, ಇದರ ಸದುಪಯೋಗ ಪಡೆದುಕೊಳ್ಳುವಂತೆ ಒಂದನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಡಿ.ಪವನೇಶ್ ಕರೆ ನೀಡಿದರು.ಶುಕ್ರವಾರ ನಗರದ ಜಿಲ್ಲಾ ಕಾರಗೃಹದಲ್ಲಿ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಕಾರಾಗೃಹ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ವಿಚಾರಣಾಧೀನ ಖೈದಿಗಳಿಗಾಗಿ ಹಮ್ಮಿಕೊಂಡಿದ್ದ ಕೋವಿಡ್ ಮಾರ್ಗಸೂಚಿಗಳಡಿ ಪಾಲಿಸಬೇಕಾದ ನಿಯಮಗಳ ಕುರಿತ ಕಾನೂನು ಅರಿವು-ನೆರವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಎಲ್ಲರೂ ಕೋವಿಡ್ ವಿರುದ್ಧ ಸಲಿಕೆ ಹಾಕಿಸಿಕೊಳ್ಳಬೇಕು. ವಿಶೇಷವಾಗಿ ಶಿಕ್ಷಕ ಸಮುದಾಯ ಕೋವಿಡ್ ಸೋಂಕು ಹರಡದಂತೆ ಅಗತ್ಯ ಎಚ್ಚರಿಕೆ ವಹಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಾ. ವೈ.ಎ.ನಾರಾಯಣಸ್ವಾಮಿ ಹೇಳಿದರು.ಪಟ್ಟಣದ ಹೊರವಲಯದ ವಿಐಪಿ ಶಾಲೆ ಆವರಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ತಾಲ್ಲೂಕಿನ ಅನುದಾನ ರಹಿತ ಶಾಲಾ ಶಿಕ್ಷಕರು ಹಾಗೂ ಸಿಬ್ಬಂದಿಗೆ ದಿನಸಿ ಕಿಟ್ ವಿತರಿಸಿ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೈಗೊಂಡ ಸಕಾಲಿಕ ಕ್ರಮಗಳಿಂದಾಗಿ ಕೊರೊನಾ ನಿಯಂತ್ರಣದಲ್ಲಿದೆ. ಕೊರೊನಾ ಕಾಲದಲ್ಲಿ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ:- ಕೊರೋನಾ ರೋಗಿಗಳನ್ನು ಆರೈಕೆ ಮಾಡುವಲ್ಲಿ ದಾದಿಯರ ಪಾತ್ರ ಬಹಳ ದೊಡ್ಡದು ಅವರ ಕಾರ್ಯವನ್ನು ಸಮಾಜ ಗುರುತಿಸಬೇಕಾದ ಅವಶ್ಯಕತೆ ಇದೆ, ಕೋವಿಡ್ ರೋಗಿಗಳು ಬಳಸುವಂತ ವಸ್ತುಗಳನ್ನು ಹೊರ ಹಾಕಿ ಕೋಠಡಿಗಳನ್ನು ಸ್ವಚ್ಚಮಾಡುವಂತ ದಾದಿಯರು ಮಾತೃ ಸ್ವರೂಪಿಗಳು ನಿಷ್ಕಳಂಕರಾಗಿ ರೋಗಿಗಳ ಆರೈಕೆಯಲ್ಲಿ ತೊಡಗುವ ಅವರ ಸೇವೆ ಅನನ್ಯ ಎಂದು ಎಸ್.ಎಸ್.ವಿ.ಎಸ್ ಟ್ರಸ್ಟ್ ಕಾರ್ಯದರ್ಶಿ ಶ್ರೀನಿವಾಸಮೂರ್ತಿ ಹೇಳಿದರು ಅವರು ಮ್ಯಾಂಗೋಸ್ ಹೇವೆನ್ ವ್ಯಾಟ್ಸಾಪ್ ಗ್ರೂಪ್ ಸದಸ್ಯರು ಎಸ್.ಎಸ್.ವಿ.ಎಸ್ ಟ್ರಸ್ಟ್ ಸಹಯೋಗದೊಂದಿಗೆ ಶ್ರೀನಿವಾಸಪುರದ ಸರ್ಕಾರಿ ಆಸ್ಪತ್ರೆಯಲ್ಲಿ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ರಾಯಲ್ಪಾಡು 1 : ಮಲೇರಿಯಾ ಸೊಳ್ಳೆಗಳಿಂದ ಹರಡುವ ಸಾಂಕ್ರಾಮಿಕ ರೋಗವಾಗಿದ್ದು, ನಮ್ಮ ಸುತ್ತಮುತ್ತಲ ಪರಿಸರದಲ್ಲಿ ಸ್ವಚ್ಚತೆಯನ್ನು ಕಾಪಾಡಿಕೊಂಡರೆ ನಮ್ಮ ಆರೋಗ್ಯ ತಂತಾನೆ ವೃದ್ದಿಸುತ್ತದೆ ಎಂದು ಡಾ|| ಶಂಕರ್ ಪ್ರಸಾದ್ ತಿಳಿಸಿದರು.ರಾಯಲ್ಪಾಡಿನ ಗ್ರಾಮಪಂಚಾಯಿತಿ ಕಚೇರಿಯಲ್ಲಿ ಬುಧವಾರ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಗ್ರಾ.ಪಂ. ಸಂಯುಕ್ತಾಶ್ರಯದಲ್ಲಿ ಮಲೇರಿಯಾ ಮಾಸಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.ಪಿಡಿಒ ಕೆ.ವಿ.ನರೇಂದ್ರಬಾಬು ಮಾತನಾಡಿ ಮಾನವನ ದಿನ ನಿತ್ಯ ಬಳಕೆಯ ಆಹಾರ ಪದ್ದತಿ ಹಾಗೂ ಆರೋಗ್ಯ ಕಾಳಜಿ ನಿರ್ಲಕ್ಷ್ಯತೆ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯ ಸದುಪಯೋಗ ಪಡಿಸಿಕೊಂಡು ಶೈಕ್ಷಣಿಕ ಅಭಿವೃಧ್ಧಿ ಹೊಂದಬೇಕು. ಗುಣ ಮಟ್ಟದ ಫಲಿತಾಂಶ ಪಡೆದು ಉತ್ತಮ ಬದುಕು ಕಟ್ಟಿಕೊಳ್ಳಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಸಮಗ್ರ ಕಲಿಕಾ ಯೋಜನೆಯಡಿ, ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟ್ಯಾಪ್ ವಿತರಿಸಿ ಮಾತನಾಡಿ, ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾಥಿಗಳು, ಖಾಸಗಿ ಸಂಸ್ಥೆಗಳ ವಿದ್ಯಾರ್ಥಿಗಳಿಗಿಂತ ಯಾವುದೇ ರೀತಿಯಲ್ಲಿ ಕಡಿಮೆಯಿಲ್ಲ. ಸರ್ಕಾರಿ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಅಧಿಕಾರಿಗಳು ಕೃಷಿ ಇಲಾಖೆಯಿಂದ ಸಿಗುವ ಸೌಲಭ್ಯ ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ಪಟ್ಟಣದ ಪ್ರಥಮ ದರ್ಜೆ ಕಾಲೇಜು ಮೈದಾನದಲ್ಲಿ ಕೃಷಿ ಇಲಾಖೆಯಿಂದ ಕೃಷಿ ಅಭಿಯಾನ ಕಾರ್ಯಕ್ರಮದಡಿ ಬುಧವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ರೈತರಿಗೆ ತೊಗರಿ ಕಿರು ಚೀಲ ವಿತರಿಸಿ ಮಾತನಾಡಿzರು.ಬೇರೆ ಬೇರೆ ಕಾರಣಗಳಿಂದ ಇಂದು ಕೃಷಿ ನಷ್ಟದ ಕಸುಬಾಗಿ ಪರಿಣಮಿಸಿದೆ. ಕೃಷಿ ಹಾಗೂ ತೋಟಗಾರಿಕಾ ಉತ್ಪನ್ನಗಳಿಗೆ ಬೆಲೆ ಕುಸಿತ ಸಾಮಾನ್ಯವಾಗಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ. ಸಾಲ ಸೋಲ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಬ್ಯಾಂಕಿಂಗ್ ಸೇವೆ ತಲುಪಿಸುವ ಸಂಕಲ್ಪದೊಂದಿಗೆ ಡಿಜಟಲೀಕರಣದ ಮೂಲಕ ಮೊಬೈಲ್ ಬ್ಯಾಂಕಿಂಗ್ ಸೇವೆಗೆ ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಮುನ್ನುಡಿ ಬರೆದಿದೆ ಎಂದು ಬ್ಯಾಂಕಿನ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ತಿಳಿಸಿದರು.ಬುಧವಾರ ಬ್ಯಾಂಕಿನ ಸಭಾಂಗಣದಲ್ಲಿ ಭಾರತೀಯ ರಿಸರ್ವ್ ಬ್ಯಾಂಕಿನಿಂದ ಮಂಜೂರಾಗಿರುವ ಮೊಬೈಲ್ ಬ್ಯಾಂಕಿಂಗ್ ವ್ಯವಸ್ಥೆಯನ್ನು ಅನಾವರಣಗೊಳಿಸಿ ಅವರು ಮಾತನಾಡಿ, ವಾಣಿಜ್ಯ ಬ್ಯಾಂಕುಗಳಿಗಿಂತ ಅತ್ಯುತ್ತಮ ಸೌಲಭ್ಯಗಳನ್ನು ಗ್ರಾಹಕರಿಗೆ ಒದಗಿಸುವ ಧ್ಯೇಯ ನಮ್ಮದಾಗಿದ್ದು, ಗ್ರಾಹಕರು ಠೇವಣಿ ಇಡುವ ಮೂಲಕ ಬ್ಯಾಂಕಿಗೆ ಶಕ್ತಿ ತುಂಬಬೇಕು […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಜನ ಪ್ರತಿನಿಧಿಗಳು ನಾಗರಿಕರ ಮನವೊಲಿಸಿ ಕೊರೊನಾ ವಿರುದ್ಧ ಲಸಿಕೆ ಹಾಕಿಸಬೇಕು ಎಂದು ಲೋಕಸಭಾ ಸದಸ್ಯ ಎಸ್.ಮುನಿಸ್ವಾಮಿ ಹೇಳಿದರು.ತಾಲ್ಲೂಕಿನ ಯಲ್ದೂರು ಗ್ರಾಮದಲ್ಲಿ ಮಂಗಳವಾರ ಬಡವರಿಗೆ ದಿನಸಿ ಕಿಟ್ ವಿತರಿಸಿ ಮಾತನಾಡಿ, ಜನರು ಕೊರೊನಾ ಲಸಿಕೆ ಕುರಿತು ಕೆಲವರು ಮಾಡುತ್ತಿರುವ ಅಪ ಪ್ರಚಾರಕ್ಕೆ ಕಿವಿಗೊಡಬಾರದು. ಲಸಿಕೆ ಬಗ್ಗೆ ಆತಂಕ ಬೇಡ. ಮೂಢ ನಂಬಿಕೆ ಹಾಗೂ ಅಪಪ್ರಚಾರವನ್ನು ನೆಚ್ಚಿಕೊಂಡಲ್ಲಿ ಹೆಚ್ಚಿನ ಅನಾಹುತ ಸಂಭವಿಸುವ ಸಾಧ್ಯತೆ ಇರುತ್ತದೆ ಎಂಬುದನ್ನು ಮನಗಾಣಬೇಕು ಎಂದು ಹೇಳಿದರು.ಕಿಸಾನ್ ರೈಲು ಸೇವೆ […]