ಶ್ರೀನಿವಾಸಪುರ: ಆಧುನಿಕ ಶಿಕ್ಷಣ ಪದ್ಧತಿಗೆ ತಕ್ಕಂತೆ ಶಿಕ್ಷಣ ಇಲಾಖೆಯಿಂದ ನೀಡಲಾಗುತ್ತಿರುವ ತರಬೇತಿಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ಶಾಲೆಗಳಲ್ಲಿ ಬೋಧನಾ ವಿಧಾನವನ್ನು ಸುಧಾರಿಸಿ, ಮಕ್ಕಳ ಸಮಗ್ರ ಕಲಿಕೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಕ್ಷೇತ್ರಶಿಕ್ಷಣಾಧಿಕಾರಿ ಬಿ.ಸಿ. ಮುನಿಲಕ್ಷ್ಮಯ್ಯ ಕರೆ ನೀಡಿದರು. ಶ್ರೀನಿವಾಸಪುರ ಪಟ್ಟಣದ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗೆ ಪಿಎಬಿ ಅನುಮೋದಿತ ಸೇವಾ ನಿರತ ಶಿಕ್ಷಕರ ತರಬೇತಿ ಕಾರ್ಯಾಗಾರ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮುನಿಲಕ್ಷ್ಮಯ್ಯ, ಸರ್ಕಾರ ಒದಗಿಸುತ್ತಿರುವ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಮಕ್ಕಳಿಗೆ ಗುಣಮಟ್ಟದ […]
ಶ್ರೀನಿವಾಸಪುರ : ಪ್ರತಿ ವರ್ಷ ಅವರೇಕಾಯಿ ಋತುಮಾನ ಆರಂಭವಾಗುವ ಮೊದಲೇ ಅಧಿಕಾರಿಗಳು ತಲೆ ಕೆಡಿಸಿಕೊಳ್ಳದೆ ವ್ಯಾಪಾರ ವಹಿವಾಟು ಸಾರ್ವಜನಿಕ ಸ್ಥಳದಲ್ಲಿ ನಡೆಯುವಾಗ ಟ್ರಾಪಿಕ್ ಸಮಸ್ಯೆ ಜೊತೆಗೆ ಹರಾಜು ಪಕ್ರಿಯೆ ಮೂರೇ ನಿಮಿಷದಲ್ಲಿ ಮುಗಿಸಿ 100 ರೂ ಬೆಲೆ ಇದ್ದರೆ 50 ರೂ ಗೆ ಮಾರಾಟ ಮಾಡಿ ವ್ಯಾಪಾರಸ್ಥರ ಜೊತೆ ಮಂಡಿ ಮಾಲೀಕರು ಒಳ ಒಪ್ಪಂದ ಮಾಡಿಕೊಂಡು ರೈತರಿಗೆ ಮೋಸ ಮಾಡುತ್ತಿದ್ದಾರೆಂದು ರೈತ ಸಂಘದ ರಾಜ್ಯ ಸಂಚಾಲಕ ಬಂಗವಾದಿ ನಾಗರಾಜಗೌಡ ಅಸಮಾಧಾನ ವ್ಯಕ್ತಪಡಿಸಿದರು.ಮಂಗಳವಾರ ಪಟ್ಟಣದಲ್ಲಿ ಪತ್ರಿಕೆಯೊಂದಿಗೆ ಮಾತನಾಡಿ ಕೃಷಿ […]
ಶ್ರೀನಿವಾಸಪುರ: ಜೀವನದಲ್ಲಿ ಬರುವ ನೋವು–ನಲಿವುಗಳಿಗೆ ತಾಳ್ಮೆ ಮತ್ತು ಸಂಯಮವೇ ಆಧಾರ. ಹರುಷಕ್ಕೆ ಹಿಗ್ಗದೆ, ಸಂಕಷ್ಟಕ್ಕೆ ಕುಗ್ಗದೆ ಬದುಕಿದರೆ ಜೀವನದ ಮೌಲ್ಯತೆ ಹೆಚ್ಚುತ್ತದೆ. ಇಂತಹ ಮೌಲ್ಯಗಳನ್ನು ಅಳವಡಿಸಿಕೊಂಡಿರುವ ವಿರೇಂದ್ರ ಹೆಗ್ಗಡೆರವರ ಜೀವನ ನಿಜಕ್ಕೂ ಸಾರ್ಥಕ ಎಂದು ಜಿಲ್ಲಾ ಜನಜಾಗೃತಿ ಸಮಿತಿಯ ಸದಸ್ಯೆ ಮಾಯಾ ಬಾಲಚಂದ್ರ ಹೊಗಳಿದರು. ತಾಲೂಕಿನ ಎನಮೇರಿಪಳ್ಳಿ ಗ್ರಾಮದ ಪಂಚಮುಖಿ ಆಂಜನೇಯಸ್ವಾಮಿ ದೇವಾಲಯದಲ್ಲಿ ಮಂಗಳವಾರ ವಿರೇಂದ್ರ ಹೆಗ್ಗಡೆರವರ ಜನ್ಮದಿನದ ಅಂಗವಾಗಿ ತಾಲೂಕಿನ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ವತಿಯಿಂದ ವಿಶೇಷ ಪೂಜಾಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಬಳಿಕ ನಡೆದ ಸಭೆಯಲ್ಲಿ ಅವರು […]
ಶ್ರೀನಿವಾಸಪುರ: ತಾಲ್ಲೂಕಿನ ಯಲ್ದೂರು ಗ್ರಾಮದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ₹5 ಲಕ್ಷ ಬಿಡುಗಡೆ ಮಾಡುವುದಾಗಿ ಶಾಸಕ ಜಿ.ಕೆ. ವೆಂಕಟಶಿವಾರೆಡ್ಡಿ ಘೋಷಿಸಿದರು. ಅವರು ಶುಕ್ರವಾರ ನ್ಯಾಷನಲ್ ಹೈಸ್ಕೂಲ್ ಆವರಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಯಲ್ದೂರು ಹೋಬಳಿ ಘಟಕಗಳ ವತಿಯಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.ಕನ್ನಡ ವ್ಯವಹಾರಿಕ ಭಾಷೆಯಾಗಬೇಕುಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ವೆಂಕಟಶಿವಾರೆಡ್ಡಿ, ತಾಲ್ಲೂಕಿನಲ್ಲಿ ಭಾಷಾ ಬಾಂಧವ್ಯ ಮಾದರಿಯಾಗಿದೆ. ಕನ್ನಡ ಮನದ ಮಾತಾಗುವುದಷ್ಟೇ […]
ಶ್ರೀನಿವಾಸಪುರ : ಗ್ಯಾರಂಟಿ ಯೋಜನೆಗಳು ತಾಲ್ಲೂಕಿನ ನಾಗರಿಕರಿಗೆ ಯಾವ ಮಟ್ಟಿನಲ್ಲಿ ತಲುಪುತ್ತಿವೆ ಹಾಗೂ ಜಾರಿಯ ಸ್ಥಿತಿ ಹೇಗಿದೆ ಎಂಬುದನ್ನು ಪರಿಶೀಲಿಸಲು ಈ ಸಭೆಯನ್ನು ಕರೆಯಲಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಎ.ವಿ. ಮನೋರ್ ಹೇಳಿದರು. ಬುಧವಾರ ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ತಾಲ್ಲೂಕು ಮಟ್ಟದ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರದಿಂದ ಬಿಡುಗಡೆಗೊಳ್ಳುವ ಅನುದಾನ ಯಾವುದೇ ಕಾರಣಕ್ಕೂ ದುರಪಯೋಗವಾಗದಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು. ಸಭೆಯಲ್ಲಿ ಮಾತನಾಡಿದ ಮನೋರ್, ನ್ಯಾಯಬೆಲೆ ಅಂಗಡಿಗಳಲ್ಲಿ […]
ಶ್ರೀನಿವಾಸಪುರ: ಗ್ರಾಮಸ್ಥರಿಗೆ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಹಾಗೂ ಸಾಂಕ್ರಾಮಿಕ ರೋಗಗಳ ಹರಡುವಿಕೆಯನ್ನು ತಡೆಯುವ ನಿಟ್ಟಿನಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದು ಗ್ರಾಮ ಪಂಚಾಯಿತಿಯ ಮೂಲ ಕರ್ತವ್ಯವಾಗಿದೆ ಎಂದು ಯಲ್ಡೂರು ಗ್ರಾಮ ಪಂಚಾಯಿತಿ ಪಿಡಿಒ ಶಂಕರ್ ಹೇಳಿದ್ದಾರೆ. ಯಲ್ಡೂರು ಗ್ರಾಮ ಪಂಚಾಯಿತಿಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ಪಂಚಾಯಿತಿ ಸದಸ್ಯರ ಸಹಕಾರದೊಂದಿಗೆ ಗ್ರಾಮಗಳಲ್ಲಿನ ಸಮಸ್ಯೆಗಳನ್ನು ಹಂತ ಹಂತವಾಗಿ ಪರಿಹರಿಸಲು ಸಮಗ್ರ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು. ಚರಂಡಿ ಮತ್ತು ಕುಡಿಯುವ ನೀರು–ಮೂಲಭೂತ ಸೌಕರ್ಯಗಳಿಗೆ ಆದ್ಯತೆ ಗ್ರಾಮದ […]
ಕೋಲಾರ: ಜಿಲ್ಲೆಯ ಕ್ರಿಶ್ಚಿಯನ್ ಸಮುದಾಯದ ಸಾಮಾಜಿಕ ಆರ್ಥಿಕ ಸಬಲೀಕರಣದ ನಿಟ್ಟಿನಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಕೋಲಾರ ಘಟಕ ಭಾನುವಾರ ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಿತು. ಜಿಲ್ಲಾ ವ್ಯವಸ್ಥಾಪಕಿ ಶಿರೀನ್ ತಾಜ್ ಅವರ ನೇತೃತ್ವದಲ್ಲಿ ಕೋಲಾರ ನಗರದ ಇಮ್ಮಾಕ್ಯುಲೇಟ್ ಹಾರ್ಟ್ ಆಫ್ ಮೇರಿ ಚರ್ಚ್ ಆವರಣದಲ್ಲಿ ಬೆಳಿಗ್ಗೆ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ನಿಗಮದ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ಘಟಕದಡಿ ಲಭ್ಯವಿರುವ ವಿವಿಧ ಯೋಜನೆಗಳಾದಂತಹ ಅರಿವು ಶೈಕ್ಷಣಿಕ ಸಾಲ, ಶ್ರಮಶಕ್ತಿ, ಶ್ರಮಶಕ್ತಿ ವಿಶೇಷ ಮಹಿಳಾ, ವೃತ್ತಿಪೋತ್ಸಹ, ಸ್ವಾವಲಂಬಿ ಸಾರಥಿ, […]
ಬೆಂಗಳೂರು : ಕರ್ನಾಟಕ ಸರ್ಕಾರವು ಆಡಳಿತಾತ್ಮಕ ಹಿತದೃಷ್ಟಿಯಿಂದ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಅಪರ ಮುಖ್ಯ ಕಾರ್ಯನಿರ್ವಹಣಾಧಿಕಾರಿ (Additional CEO) ಹುದ್ದೆಗೆ ಹೊಸ ಹೆಚ್ಚುವರಿ ಪ್ರಭಾರ ನೀಡಿದೆ. ಈ ಕುರಿತ ಅಧಿಸೂಚನೆಯನ್ನು ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಸ್ ಇಲಾಖೆ ಪ್ರಕಟಿಸಿದೆ. ಸರ್ಕಾರದ ಅಧಿಸೂಚನೆ ಸಂಖ್ಯೆ MWD-WES/20/2025, ದಿನಾಂಕ 16.08.2025ರ ಮೂಲಕ ವಕ್ಫ್ ಮಂಡಳಿಯ ಅಪರ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಹೆಚ್ಚುವರಿ ಪ್ರಭಾರದಲ್ಲಿದ್ದ ಮನ್ಸೂರ್ ಬಾಷ, ಉಪ ನಿರ್ದೇಶಕರು, ಅಲ್ಪಸಂಖ್ಯಾತರ ನಿರ್ದೇಶನಾಲಯ, ಇವರ ಬದಲಿಗೆ ಇದೀಗ ಹೊಸ ಬದಲಾವಣೆ […]

