
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ನಿಯಮ ಬಾಹಿರವಾಗಿ ವ್ಯಾಪಾರ ವಹಿವಾಟು ನಡೆಸುತ್ತಿದ್ದ 6 ಅಂಗಡಿಗಳ ಮೇಲೆ ಕಂದಾಯ ಹಾಗೂ ಪುರಸಭೆ ಅಧಿಕಾರಿಗಳು ದಾಳಿ ನಡೆಸಿ ಬೀಗ ಮುದ್ರೆ ಹಾಕಿದರು.ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಮಾತನಾಡಿ, ಕೊರೊನಾ ಸಂಕಷ್ಟದಿಂದ ಜನರನ್ನು ಪಾರುಮಾಡಲು ಸರ್ಕಾರ ಹಲವು ಕ್ರಮ ಕೈಗೊಂಡಿದೆ. ಜನತಾ ಕಫ್ರ್ಯೂ ನಿಯಮಗಳನ್ನು ಗಾಳಿಗೆ ತೂರಿ ವ್ಯವಹರಿಸುವ ವ್ಯಾಪಾರಿಗಳು ಹಾಗೂ ಸಾರ್ವಜನಿರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.ಪುರಸಭೆ ಮುಖ್ಯಾಧಿಕಾರಿ ಡಿ.ಶೇಖರ್ ರೆಡ್ಡಿ ಮಾತನಾಡಿ, ಕಫ್ರ್ಯೂ ಸಂದರ್ಭದಲ್ಲಿ ಸಮಯ ಪಾಲನೆ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಕೊರೊನಾ ವಾರಿಯರ್ಸ್ ಆಗಿ ಗುತ್ತಿಗೆ, ಹೊರ ಗುತ್ತಿಗೆ ಆಧಾರ ಮೇಲೆ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರಿಗೆ ಕೊರೊನಾ ನಿಯಮಾನುಸಾರ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಗುತ್ತಿಗೆ ಪೌರ ಕಾರ್ಮಿಕರು ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.ಗುತ್ತಿಗೆ ಹಾಗೂ ಹೊರ ಗುತ್ತಿಗೆ ಆಧಾರ ಮೇಲೆ ಪೌರ ಕಾರ್ಮಿಕರಾಗಿ ಕಾರ್ಯನಿರ್ವಹಿಸುತ್ತಿದ್ದ ಮೂವರು ಈಚೆಗೆ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಆದರೆ ಅವರ ಕುಟುಂಬಗಳಿಗೆ ಯಾವುದೇ ಪರಿಹಾರ ನೀಡಿಲ್ಲ. ಇದರಿಂದ ದುಡಿಯುವ ವ್ಯಕ್ತಿಗಳನ್ನು ಕಳೆದುಕೊಂಡ ಅವರ ಕುಟುಂಬಗಳು […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳನ್ನು ಆನ್ಲೈನ್ ಮತ್ತು ದೂರವಾಣಿ ಮೂಲಕ ಸಂಪರ್ಕಿಸಿ ನಿರಂತರವಾಗಿ ಅವರ ಶೈಕ್ಷಣಿಕ ಪ್ರಗತಿಯ ಪರಿಶೀಲನೆ ನಡೆಸುವಂತೆ ಪ್ರೌಢಶಾಲಾ ಶಿಕ್ಷಕರು ಹಾಗೂ ಮುಖ್ಯಶಿಕ್ಷಕರಿಗೆ ಡಿಡಿಪಿಐ ಕೃಷ್ಣಮೂರ್ತಿ ಕರೆ ನೀಡಿದರು.ಶುಕ್ರವಾರ ಬೆಳಗ್ಗೆ 11 ಗಂಟೆಗೆ ಜಿಲ್ಲೆಯ ಎಲ್ಲಾ ಸರ್ಕಾರಿ,ಅನುದಾನಿತ,ಖಾಸಗಿ ಪ್ರೌಢಶಾಲೆಗಳ ಮುಖ್ಯಶಿಕ್ಷಕರ ಆನ್ಲೈನ್ ಸಭೆ ನಡೆಸಿದ ಅವರು, ಸಾಧ್ಯವಾದಷ್ಟು ಮಕ್ಕಳ ಶೈಕ್ಷಣಿಕ ಪ್ರಗತಿ ಕುಂಠಿತವಾಗದಂತೆ ಕ್ರಮವಹಿಸಲು ಕಿವಿಮಾತು ಹೇಳಿದರು.ಕೋವಿಡ್ ಜನತಾ ಕಫ್ರ್ಯೂ ಹಿನ್ನಲೆಯಲ್ಲಿ ಹಾಗೂ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಆತಂಕದ ನಡುವೆ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ, ಸಾಮಾಜಿಕ ಕಾರ್ಯಗಳಿಂದ ಗುರುತಿಸಿಕೊಂಡಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆಕರೋನಾ ಬಿಕ್ಕಟ್ಟಿನ ಸಂದರ್ಭದಲ್ಲಿತನ್ನ ಸೇವೆಸಲ್ಲಿಸುತ್ತಿದೆಎಂದುಸಂಸ್ಥೆಯ ಶ್ರೀನಿವಾಸಪುರತಾಲೂಕು ಯೋಜನಾಧಿಕಾರಿಗಳಾದ ಸುರೇಶ್ಗೌಡ.ಎಸ್ಅಭಿಪ್ರಾಯಪಟ್ಟರು.ಸೋಂಕಿತರುಆಸ್ಟತ್ರೆಯಿಂದ ತೆರಳಲು ಅಥವಾಆಸ್ಟತ್ರೆಯಿಂದ ಹಿಂದಿರುಗಲು ಅನುಕೂಲವಾಗಲು ತುರ್ತು ವಾಹನಕ್ಕೆ ತಹಸೀಲ್ದಾರ್ ಮತ್ತುತಾಲೂಕುದಂಡಾಧಿಕಾರಿಕಛೇರಿಎದುರು ಚಾಲನೆ ನೀಡಿ, ರಾಜಾದ್ಯಂತಒಟ್ಟು 350 ವಾಹನಗಳನ್ನು ಪರಮ ಪೂಜ್ಯಧರ್ಮಾಧಿಕಾರಿಗಳಾದ ಡಾ||ವೀರೇಂದ್ರ ಹೆಗ್ಗಡೆರವರು ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆಯ ವತಿಯಿಂದ ವ್ಯವಸ್ಥೆಮಾಡಲಾಗಿದೆ. ಸಾಮಾನ್ಯ ವರ್ಗದವರನ್ನುಗಮನದಲ್ಲಿಟ್ಟುಕೊಂಡು ಈ ಯೋಜನೆಯನ್ನುಪ್ರಾರಂಭಿಸಲಾಗಿದೆಎಂದರು.ಈ ವೇಳೆ ತಹಸೀಲ್ದಾರ್ ಶ್ರೀನಿವಾಸ್ರವರುತಾಲೂಕು ಆರೋಗ್ಯಾಧಿಕಾರಿಗಳಾದ ಶ್ರೀಮತಿ ವಿಜಯರವರಿಗೆ ವಾಹನವನ್ನು ಹಸ್ತಾಂತರ ಮಾಡಿ ಮಾತನಾಡಿ, ನಿಜಕ್ಕೂಅತ್ಯಂತಉಪಯುಕ್ತ ಕೆಲಸ. ಇಲ್ಲಿನಕೋವಿಡ್ ಪರಿಸ್ಥಿತಿ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕಿನ ಎನಮರೇಪಲ್ಲಿ ಗ್ರಾಮದ ಪಂಚಮುಖಿ ಆಂಜನೇಯಸ್ವಾಮಿ ದೇವಾಲಯದ ಧರ್ಮಾಧಿಕಾರಿ ಎಸ್.ಮಂಜುನಾಥ್ (46) ಬುಧವಾರ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರು ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.ಮೃತರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಗ್ರಾಮದ ಹೊರ ವಲಯದ ಸ್ಮಶಾನದಲ್ಲಿ ಗುರುವಾರ ಅಂತ್ಯ ಸಂಸ್ಕಾರ ನಡೆಸಲಾಯಿತು.

JANANUDI.COM NETWORK ಬೆಂಗಳೂರು:ತಮಗೆ ಸ್ಥಾನಮಾನ ನೀಡಿದ ಪಕ್ಷಕ್ಕೆ ದ್ರೋಹ ಬಗೆದು ಬಿಜೆಪಿ ಪಕ್ಷಕ್ಕೆ ಓಡಿ ಹೋಗಿ ಈಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ರಾಜ್ಯ ಸರ್ಕಾರದ ವಿರುದ್ಧ ಆಕ್ಷೇಪಾರ್ಹ ಟೀಕೆಗಳನ್ನು ಮಾಡಿರುವ ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ವಿರುದ್ಧ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ತೀವ್ರ ಆಕ್ರೋಶ ಗೊಂಡು ಅವರಿಗೆ ಮಂಗಳಾರತಿ ಮಾಡಿದ್ದಾರೆ. “ಬೇರೆ ಪಕ್ಷಕ್ಕೆ ರಾಜೀನಾಮೆ ನೀಡಿ ಬಂದ ನಿಮಗೆ ಚುನಾವಣೆಗೆ ಸ್ಪರ್ಧಿಸುವುದು ಬೇಡ ಎಂದು ಪಕ್ಷ ಹೇಳಿದ್ದರೂ ಹಠಕ್ಕೆ ಬಿದ್ದು ಸ್ಪರ್ಧಿಸಿ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಕೊರೊನಾ ಸೋಂಕಿತರು ಆತ್ಮ ವಿಶ್ವಾಸದಿಂದ ಚಿಕಿತ್ಸೆ ಪಡೆಯಬೇಕು. ಕೋವಿಡ್ ನಿಯಮಗಳಿಗೆ ಬದ್ಧರಾಗಿ ನಡೆದುಕೊಳ್ಳಬೇಕು ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್ ಹೇಳಿದರು.ತಾಲ್ಲೂಕಿನ ಚಲ್ದಿಗಾನಹಳ್ಳಿ ಗ್ರಾಮದ ಸಮೀಪ ಪ್ರಾರಂಭಿಸಲಾಗಿರುವ ಕೋವಿಡ್ ಚಿಕಿತ್ಸಾ ಕೇಂದ್ರಕ್ಕೆ ಬುಧವಾರ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾತನಾಡಿ, ಆತಂಕದ ನಡುವೆ ಬದುಕು ಭಾರವಾಗುತ್ತದೆ. ಅದಕ್ಕೆ ಅವಕಾಶ ನೀಡಬಾರದು. ಸಮಸ್ಯೆಯನ್ನು ಧೈರ್ಯವಾಗಿ ಎದುರಿಸಬೇಕು. ಅದಕ್ಕೆ ಪೂರಕವಾದ ಎಲ್ಲ ಸೌಲಭ್ಯ ಕಲ್ಪಿಸಲಾಗಿದೆ ಎಂದು ಹೇಳಿದರು.ಈ ಕೇಂದ್ರದಲ್ಲಿ ಬೇರೆ ಬೇರೆ ವಯೋಮಾನದ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಮೇ.04: ಮಾವು ಮಾರುಕಟ್ಟೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಕೊರೊನಾ ನಿಯಮಗಳನ್ನು ಪಾಲಿಸುವಂತೆ ಕರಪತ್ರಗಳ ಮೂಲಕ ಜಾಗೃತಿ ಮೂಡಿಸುವ ಜೊತೆಗೆ ವಿಶೇಷ ತಂಡ ರಚನೆ ಮಾಡಿ ಸಂಕಷ್ಟದಲ್ಲಿರುವ ಮಾವು ಬೆಳೆಗಾರರ ನೆರವಿಗೆ ಜಿಲ್ಲಾಡಳಿತ ಮುಂದಾಗಬೇಕೆಂದು ರೈತ ಸಂಘದಿಂದ ತಹಶೀಲ್ದಾರ್ ಶ್ರೀನಿವಾಸ್ರವರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿ ಒತ್ತಾಯಿಸಲಾಯಿತು.ಮನವಿ ನೀಡಿ ಮಾತನಾಡಿದ ರೈತ ಸಂಘದ ರಾಜ್ಯ ಉಪಾದ್ಯಕ್ಷ ಕೆ.ನಾರಾಯಣಗೌಡ ಕೃಷಿ ಉತ್ಪನ್ನ ಮಾರುಕಟ್ಟೆ ಅಧಿಕಾರಿಗಳು ಬರುವ ಅನುಧಾನಗಳಿಗೆ ನಕಲಿ ದಾಖಲೆಗಳನ್ನು ಸೃಷ್ಠಿ ಮಾಡಿ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪಟ್ಟಣದಲ್ಲಿ ನಾಗರಿಕರು ಕೊರೊನಾ ತಡೆ ನಿಯಮಗಳನ್ನು ಕಡ್ದಾಯವಾಗಿ ಪಾಲಿಸಬೇಕು. ಪಾಲಿಸದ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪುರಸಭೆ ಮುಖ್ಯಾಧಿಕಾರಿ ಡಿ.ಶೇಖರರೆಡ್ಡಿ ಹೇಳಿದರು.ಪಟ್ಟಣದ ಪುರಸಭೆ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ನಾಗರಿಕ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಕೊರೊನಾ ಸಂಕಷ್ಟದ ನಡುವೆ ನಾಗರಿಕರಿಗೆ ಉತ್ತಮ ಸೇವೆ ಕಲ್ಪಿಸಲು ಪುರಸಭೆ ಪ್ರಯತ್ನಿಸುತ್ತಿದೆ. ಕುಡಿಯುವ ನೀರು ಪೂರೈಕೆಗೆ ಮೊದಲ ಆದ್ಯತೆ ನೀಡಲಾಗಿದೆ. ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ಕೊಡಲಾಗಿದೆ ಎಂದು ಹೇಳಿದರು.ಪಟ್ಟಣದಲ್ಲಿ ಕೋವಿಡ್ […]