
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ,ಏ.28: ದೇಶದಲ್ಲಿ ಕೊರೊನಾದ ಎರಡನೇ ಅಲೆಯ ಸೋಂಕಿನ ಭೀತಿ ಹೆಚ್ಚಿದ್ದು, ಜಿಲ್ಲೆಯಲ್ಲಿಯೂ ಸೋಂಕು ಹರಡುವಿಕೆ ತಡೆಗೆ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲಾಗುತ್ತಿದೆ ಜನರ ಆರೋಗ್ಯದ ದೃಷ್ಟಿಯಿಂದ ಸಾರ್ವಜನಿಕರು ಸಹಕರಿಸಬೇಕು ಎಂದು ಎಪಿಎಂಸಿ ಮಾಜಿ ಅಧ್ಯಕ್ಷೆ ಕುರ್ಕಿ ರಾಜರಾಜೇಶ್ವರಿ ಹರೀಶ್ಗೌಡ ಮನವಿ ಮಾಡಿದರು.ತಾಲೂಕಿನ ನರಸಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬುಧವಾರ ಸಾರ್ವಜನಿಕರಿಗೆ ಮಾಸ್ಕ್, ಗ್ಲೂಕೋಸ್, ಎನರ್ಜಿ ಡ್ರಿಂಕ್ ವಿತರಿಸಿ ಮಾತನಾಡಿದ ಅವರು ದೇಶಾದ್ಯಂತ ಕರೋನಾ ಹರಡುತ್ತಿರುವ ಇಂತಹ ಸಂದರ್ಭದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸುವ ಆಹಾರ ಸೇವನೆ […]

ವರದಿ; ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ಕೋಲಾರ ಜಿಲ್ಲೆಯಲ್ಲಿ ಪ್ರತಿ ಮಂಗಳವಾರ ಕೋವಿಡ್ -19 ಪ್ರಗತಿ ಪರಿಶೀಲನಾ ಸಭೆಯನ್ನು ವೀಡಿಯೋ ಕಾನ್ಸರೆನ್ಸ್ ಮೂಲಕ ಕೋವಿಡ್ ನಿರ್ವಹಣೆಯ ಪರಿಶೀಲನೆ ನಡೆಸಲಾಗುವುದು . ಕೋವಿಡ್ ಸೋಂಕಿತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸೂಕ್ತ ಬೆಡ್ , ಆಕ್ಸಿಜನ್ , ತ್ವರಿತವಾಗಿ ಚಿಕಿತ್ಸೆ , ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವದು ಎಂದು ಉಪ ಮುಖ್ಯಮಂತ್ರಿಗಳಾದ ಡಾ || ಅಶ್ವಥ್ ನಾರಾಯಣ ಸಿ.ಎನ್ . ಅವರು ತಿಳಿಸಿದರು . ಇಂದು ಜಿಲ್ಲಾಧಿಕಾರಿಗಳ ಕಛೇರಿಯ ನ್ಯಾಯಾಂಗಂಣದಲ್ಲಿ […]

ವರದಿ ;ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಲು ಆಸ್ಪತ್ರೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗುವುದು .ಕೋವಿಡ್ ಪರೀಕ್ಷೆ ನಡೆಸಿದ 24 ಗಂಟೆಗಳ ಒಳಗೆ ಫಲಿತಾಂಶ ನೀಡಬೇಕು . ಪಾಸಿಟಿವ್ ಬಂದ ತಕ್ಷಣ ಚಿಕಿತ್ಸೆಯನ್ನು ಪ್ರಾರಂಭ ಮಾಡಿ ವೇಗವಾಗಿ ಕೋವಿಡ್ ನಿಯಂತ್ರಣ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿಗಳಾದ ಡಾ || ಅಶ್ವಥ್ ನಾರಾಯಣ ಸಿ.ಎನ್ . ಅವರು ತಿಳಿಸಿದರು . ಇಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿಯ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಕೊರೋನಾ ಸೋಂಕಿತರಿಗೆ ಅಗತ್ಯವಾದ ಆಕ್ಸಿಜನ್ ಸರಬರಾಜು ಹಾಗೂ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಂ.ಎಲ್.ರಘುನಾಥ್, ಈ ಸಂಬಂಧ ರೋಗಿಗಳು ನ್ಯಾಯಾಲಯ ಒದಗಿಸಿರುವ ಸಹಾಯವಾಣಿ ಸೌಲಭ್ಯ ಪಡೆಯಲು ಸೂಚನೆ ನೀಡಿದರು.ತಮ್ಮ ಕಚೇರಿ ಸಭಾಂಗಣದಲ್ಲಿ ಆರೋಗ್ಯ ಇಲಾಖೆ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಅವರು, ಕೋವಿಡ್ 2ನೇ ಅಲೆಯಿಂದ ಸೋಂಕಿತರ ಸಾವಿನ ಪ್ರಮಾಣ ಹೆಚ್ಚುತ್ತಿದೆ ಈ ಹಿನ್ನಲೆಯಲ್ಲಿ ನ್ಯಾಯಾಂಗ ಮಧ್ಯೆ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪಟ್ಟಣದ ಸರ್ಕಾರಿ ಆಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗುವುದು. ಗರ್ಭಿಣಿಯರಿಗೆ ಕೋಲಾರದ ಎಸ್ಎಸ್ಎನ್ ಆರ್ ಆಸ್ಪತ್ರೆಯಲ್ಲಿ ಹೆರಿಗೆ ಸೌಲಭ್ಯ ಕಲ್ಪಿಸಲಾಗುವುದು ಎಂದು ಉಪ ಮುಖ್ಯ ಮಂತ್ರಿ ಡಾ. ಅಶ್ವತ್ಥನಾರಾಯಣ ಹೇಳಿದರು.ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಮಂಗಳವಾರ ಭೇಟಿ ನೀಡಿ ಕೋವಿಡ್ ರೋಗಿಗಳಿಗೆ ಒದಗಿಸಲಾಗಿರುವ ಚಿಕಿತ್ಸೆ ಹಾಗು ಸೌಲಭ್ಯಗಳನ್ನು ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ಆಸ್ಪತ್ರೆ ಸುಸಜ್ಜಿತವಾಗಿದ್ದು, ಪ್ರಸ್ತುತ ಕೋವಿಡ್ ರೋಗಿಗಳಿಗೆ 40 ಹಾಸಿಗೆಗಳನ್ನು ಮಾತ್ರ ಮೀಸಲಿಡಲಾಗಿದೆ. ಆದರೆ ಎರಡನೇ ಅಲೆ ಗಂಭೀರವಾಗಿದ್ದು, […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪಟ್ಟಣದ ಅಂಗಡಿಗಳ ಮೇಲೆ ಪುರಸಭೆ ಅಧಿಕಾರಿಗಳು ದಾಳಿ ನಡೆಸಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.ಸೋಮವಾರ ಬೆಳಿಗ್ಗೆ ಪುರಸಭೆ ಅಧಿಕಾರಿಗಳು ತಮ್ಮ ಸಿಬ್ಬಂದಿಯೊಂದಿಗೆ ಅನಿರೀಕ್ಷಿತ ದಾಳಿ ನಡೆಸಿ ಎಂಜಿ ರಸ್ತೆ ಸೇರಿದಂತೆ ಸೇರಿದಂತೆ ಪಟ್ಟಣದ ಹಲವು ಅಂಗಡಿಗಳನ್ನು ಜಾಲಾಡಿ ಕಾನೂನು ಬಾಹಿರ ಗಾತ್ರದ ಪ್ಲಾಸ್ಟಿಕ್ ಕವರ್, ಮಾರಾಟಕ್ಕೆ ಇಟ್ಟಿದ್ದ ಪ್ಲಾಸ್ಟಿಕ್ ಲೋಟ, ಚಮಚ, ಚಿತ್ರಪಟಗಳು ಸೇರಿದಂತೆ ಹಲವು ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಂಡು ರೂ.5 ಸಾವಿರ ದಂಡ ವಿಧಿಸಿದರು.ಪುರಸಭೆ ಮುಖ್ಯಾಧಿಕಾರಿ ಡಿ.ಶೇಖರರೆಡ್ಡಿ, […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಕರ್ನಾಟಕ ಪ್ರಾಂತ ರೈತ ಸಂಘದ ಸದಸ್ಯರು ಕೋವಿಡ್ ಹರಡುವಿಕೆಯನ್ನು ತಡೆಯಲು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಸಿ ತಾಲ್ಲೂಕು ಕಚೇರಿ ಎದುರು ಧರಣಿ ನಡೆಸಿದರು.ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಧರಣಿ ನಿರತರನ್ನು ಉದ್ದೇಶಿಸಿ ಮಾತನಾಡಿ, ಸರ್ಕಾರ ಕೋವಿಡ್ ಪೀಡಿತರಿಗೆ ಉಚಿತ ಚಿಕಿತ್ಸೆ ನೀಡಬೇಕು. ಖಾಸಗಿ ಆಸ್ಪತ್ರೆಗಳನ್ನು ತಾತ್ಕಾಲಿಕವಾಗಿ ಸರ್ಕಾರದ ವಶಕ್ಕೆ ಪಡೆದುಕೊಳ್ಳಬೇಕು. ಆದಾಯ ತೆರಿಗೆ ವ್ಯಾಪ್ತಿಗೆ ಬರದ ಕುಟುಂಬಗಳಿಗೆ ಮಾಸಿಕತಮ್ಮ ಬೇಡಿಕೆಗಳನ್ನು ಒಳಗೊಂಡ ಮನವಿ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಕೋವಿಡ್ ಗ್ರಾಮೀಣ ಪ್ರದೇಶದಲ್ಲೂ ವ್ಯಾಪಕವಾರಿ ಹರಡುತ್ತಿದ್ದು, ಜನತೆ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ತಾಲ್ಲೂಕಿನ ನಾಗಲಾಪುರ ಗ್ರಾಮ ಪಂಚಾಯಿತಿ ಸದಸ್ಯೆ ಎಸ್.ಎಂ.ರೂಪ ಕರೆ ನೀಡಿದರು.ಗ್ರಾಮದಲ್ಲಿ ನಿನ್ನೆ ಸಂಜೆ ಗ್ರಾಮದ ಎಲ್ಲಾ ಜನತೆಗೂ ಮಾಸ್ಕ್ ವಿತರಿಸಿ, ಕೋವಿಡ್ ಜಾಗೃತಿ ಮೂಡಿಸಿ ಅವರು ಮಾತನಾಡಿ, ಕೋವಿಡ್ ಮಾರಿಗೆ ಹಳ್ಳಿ,ನಗರವೆಂಬ ಬೇಧವಿಲ್ಲ, ಬಡವರು,ಶ್ರೀಮಂತರು ಎಂಬ ತಾರತಮ್ಯವೂ ಇಲ್ಲ, ನಮ್ಮ ಎಚ್ಚರಿಕೆಯಲ್ಲಿ ನಾವು ಇರಬೇಕು ಎಂದರು.ಕೋವಿಡ್ 2ನೇ ಅಲೆ ಕೋಲಾರ ಜಿಲ್ಲೆಯಲ್ಲಿ ವ್ಯಾಪಕವಾಗಿ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕಿನ ಚಲ್ದಿಗಾನಹಳ್ಳಿ ಗ್ರಾಮದ ಹೊರವಲಯದಲ್ಲಿನ ಕಿತ್ತೂರು ರಾಣಿ ಚೆನ್ನಮ್ಮ ಶಾಲೆಯಲ್ಲಿ 100 ಹಾಸಿಗೆ ಸಾಮಥ್ರ್ಯದ ಕೊರೊನಾ ಚಿಕಿತ್ಸಾ ಕೇಂದ್ರ ತೆರೆಯಲಾಗುವುದು ಎಂದು ಉಪ ವಿಭಾಗಾಧಿಕಾರಿ ವಿ.ಸೋಮಶೇಖರ್ ಹೇಳಿದರು.ತಾಲ್ಲೂಕಿನ ಚಲ್ದಿಗಾನಹಳ್ಳಿ ಗ್ರಾಮದ ಹೊರವಲಯದಲ್ಲಿನ ಕಿತ್ತೂರು ರಾಣಿ ಚೆನ್ನಮ್ಮ ಶಾಲೆಗೆ ಶನಿವಾರ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾತನಾಡಿ, ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಚಿಕಿತ್ಸಾ ಕೇಂದ್ರಗಳ ಮೇಲೆ ಹೆಚ್ಚಿನ ಒತ್ತಡ ಉಂಟಾಗಿದೆ. ಆದ್ದರಿಂದ ಹೆಚ್ಚಿನ ಸಂಖ್ಯೆಯ ರೋಗಿಗಳಿಗೆ […]