
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ ಏ.17 : ಹಿಂದುಳಿದವರಿಗೆ ಸರ್ಕಾರಿ ಸೌಲತ್ತು ಸಿಗಬೇಕಾದರೆ ಜಿಲ್ಲೆಯ ಎಲ್ಲಾ ಹಿಂದುಳಿದ ವರ್ಗದವರು ಸಂಘಟಿತರಾಗಬೇಕೆಂದು ಕೋಲಾರ ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷ ಎ.ಪ್ರಸಾದ್ಬಾಬು ಕರೆ ನೀಡಿದರು.ಅವರು ಮುಳಬಗಿಲು ಪಟ್ಟಣದ ಪ್ರಸಿದ್ಧ ಆಂಜನೇಯಸ್ವಾಮಿ ದೇವಾಲಯದ ಆವರಣದಲ್ಲಿ ಮುಳಬಾಗಿಲು ತಾಲ್ಲೂಕು ಮಟ್ಟದ ಹಿಂದುಳಿದ ವರ್ಗಗಳ ಎಲ್ಲಾ ಸಮುದಾಯಗಳ ಮುಖಂಡರ ಸಭೆಯಲ್ಲಿ ಮಾತನಾಡುತ್ತಿದ್ದರು. ತಾಲ್ಲೂಕಿನಲ್ಲಿ 30ಕ್ಕೂ ಹೆಚ್ಚು ಹಿಂದುಳಿದ ವರ್ಗಗಳಿಗೆ ಸೇರಿದ ವಿವಿಧ ಜಾತಿಗಳ ಸಮುದಾಯಗಳಿದ್ದು, ಇವರ ಅನೇಕ ಸಮಸ್ಯೆಗಳು ಸರ್ಕಾರಿ ಸೌಲಭ್ಯದಿಂದ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ; ಕೋವಿಡ್ 2ನೇ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಜಿಲ್ಲೆಯ ಸರ್ಕಾರಿ ಖಾಸಗಿ ಆಸ್ಪತ್ರೆಗಳಲ್ಲಿ ವೆಂಟಿಲೇಟರ್ ವ್ಯವಸ್ಥೆಯಿಲ್ಲದೆ ತೀವ್ರ ಸಮಸ್ಯೆಯಾಗಿದ್ದು, ಕೂಡಲೇ ಆಸ್ಪತ್ರೆಗಳ ಮುಖ್ಯಸ್ಥರ ಸಭೆ ಕರೆದು ಕ್ರಮಕೈಗೊಳ್ಳಬೇಕಾಗಿ ಆಗ್ರಹಿಸಿ ರೈತಸಂಘದಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.ಮನವಿ ಸಲ್ಲಿಸಿ ಮಾತನಾಡಿದ ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಕೊರೊನಾ ಮೊದಲನೇ ಅಲೆಯಿಂದಲೇ ಸಾಕಷ್ಟು ತತ್ತರಿಸಿ ಅನೇಕ ಮಂದಿ ಪ್ರಾಣ ಕಳೆದುಕೊಂಡಿರುವ ಬೆನ್ನಲ್ಲಿಯೇ 2ನೇ ಅಲೆಯು ಆವರಿಸಿದ್ದು, ಜನತೆಯು ಮತ್ತಷ್ಟು ಆತಂಕ್ಕೆ ಒಳಗಾಗುವಂತಾಗಿದೆ.ದೇಶದಲ್ಲಿ ಪ್ರತಿನಿತ್ಯ ಸರಾಸರಿ 2 […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ ಏ.17.: ಜೀವನ ಹಾಗೂ ಸಮಯ ಈ ವಿಶ್ವದ ಬಹುದೊಡ್ಡ ಶಿಕ್ಷಕರು. ಶಿಕ್ಷಣ ಮಾನವನಿಗೆ ಉತ್ತಮ ಮೌಲ್ಯಗಳನ್ನು, ಕೌಶಲ್ಯಗಳನ್ನು ಮತ್ತು ಅನುಭವಗಳೊಂದಿಗೆ ಕಲಿಸುತ್ತಾ ಹೋಗುತ್ತದೆ. ನಮ್ಮ ವ್ಯಕ್ತಿತ್ವ ಹೊಳೆಯಲು ಶಿಕ್ಷಕರು ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ಸಿ ಆರ್ ಅಶೋಕ್ ತಿಳಿಸಿದರು.ನಗರದ ಪಿ.ಸಿ ಬಡಾವಣೆಯಲ್ಲಿಂದು ಜಿಲ್ಲಾ ಯುವ ಬರಹಗಾರರ ವೇದಿಕೆ ಏರ್ಪಡಿಸಿದ್ದ ಡಾ.ರಾಧಾಕೃಷ್ಣನ್ ರವರ ಪುಣ್ಯಸ್ಮರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು .ದೇಶ ಅಭಿವೃದ್ಧಿ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ : ಸಂವಿಧಾನ ರಚನೆಯಾಗಿ ಸುಮಾರು 70 ವರ್ಷಗಳು ಕಳೆದರೂ ಇಂದಿಗೂ ಸಮಾಜದಲ್ಲಿ ಅಸ್ಪೃಶ್ಯತೆ , ಅಸಮಾನತೆ ಹಾಗೂ ಅಪಮಾನಗಳು ಶೋಷಿತ ವರ್ಗದವರಿಗೆ ನಿರಂತರವಾಗಿ ನಡೆಯುತ್ತಿವೆ ಇದನ್ನು ಹೋಗಲಾಡಿಸಲು ವಿದ್ಯಾವಂತ ಯುವ ಪೀಳಿಗೆ ಮುಂದಾಗಬೇಕು ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಗೌತಮಿ ಮುನಿರಾಜು ಕರೆ ನೀಡಿದರು . ನೆಲವಂಕಿ ಗ್ರಾಮ ಪಂಚಾಯಿತಿಯಲ್ಲಿ ಸಂವಿಧಾನ ಶಿಲ್ಪಿ ಡಾ // ಬಿ.ಆರ್ . ಅಂಬೇಡ್ಕರ್ ರವರ 130 ನೇ ಜಯಂತಿ ಹಾಗೂ ನಿವೃತ್ತ ಜಲಗಾರರಿಗೆ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ರಾಸು ವಿಮೆ ಪಡೆದುಕೊಂಡ ಫಲಾನುಭವಿಗಳು ಮತ್ತು ರಾಸು ಖರೀದಿಸಿ ಕ್ಷೀರೋತ್ಪಾದನೆಯಲ್ಲಿ ತೊಡಗಬೇಕು ಎಂದು ಕೋಚಿಮುಲ್ ನಿರ್ದೇಶಕ ಎನ್.ಹನುಮೇಶ್ ಹೇಳಿದರು.ಪಟ್ಟಣದ ಶಿಬಿರ ಕಚೇರಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಮೃತಪಟ್ಟ ರಾಸುಗಳ ಮಾಲೀಕರಿಗೆ ರಾಸು ವಿಮಾ ಚೆಕ್ ವಿತರಿಸಿ ಮಾತನಾಡಿ, ಹಾಲು ಉತ್ಪಾದಕರಿಗೆ ರಾಸು ವಿಮೆ ವರದಾನವಾಗಿದೆ ಎಂದು ಹೇಳಿದರು.ಹಸುಗಳಿಗೆ ಅವುಗಳಿಗೆ ಉತ್ತಮ ಗುಣಮಟ್ಟದ ಆಹಾರ ನೀಡುವುದರ ಮೂಲಕ ಗುಣಮಟ್ಟದ ಹಾಲು ಉತ್ಪಾದನೆ ಮಾಡಬೇಕು. ಇಲ್ಲವಾದರೆ ದುಡಿತಕ್ಕೆ ಫಲ ಸಿಗುವುದಿಲ್ಲ ಎಂದು […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಡಾ. ಬಿ.ಆರ್.ಅಂಬೇಡ್ಕರ್ ಅವರ ಆದರ್ಶ ಪಾಲನೆ ಇಂದಿನ ಅಗತ್ಯವಾಗಿದೆ ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬುಧವಾರ ಏರ್ಪಡಿಸಿದ್ದ ಅಂಬೇಡ್ಕರ್ ಜಯಂತಿ ಸಮಾರಂಭದಲ್ಲಿ ಅಂಬೇಡ್ಕರ್ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿ, ಅಂಬೇಡ್ಕರ್ ಜೀವನ ಶ್ರದ್ಧೆಯನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.ಅಂಬೇಡ್ಕರ್ ಬಡತನದಲ್ಲಿ ಬದುಕಿದರಾದರೂ, ಎಂದು ವೈಯಕ್ತಿಕ ಉಪಯೋಗಕ್ಕಾಗಿ ಕೈಯೊಡ್ಡಿದವರಲ್ಲ. ಅನ್ಯರ ಮುಂದೆ ಕೈಯೊಡ್ಡುವುದು […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಅಂಬೇಡ್ಕರ್ ವಿಶ್ವದ ಎಲ್ಲಾ ಧರ್ಮಗ್ರಂಥಗಳು ಹಾಗೂ ಸಂವಿಧಾನಗಳನ್ನು ಅಧ್ಯಯನ ಮಾಡಿ ಸರ್ವರಿಗೂ ಸಮಾನ ಅವಕಾಶಗಳುಳ್ಳ ಸಂವಿಧಾನವನ್ನು ನೀಡಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಎಸ್ಎಸಿ ಘಟಕದ ಅಧ್ಯಕ್ಷ ಕೆ.ಜಯದೇವ ತಿಳಿಸಿದರು.ನಗರದ ಭಾರತ ಸೇವಾದಳ ಕಚೇರಿಯಲ್ಲಿ ಬುಧವಾರ ಡಾ.ಬಿ.ಆರ್.ಅಂಬೇಡ್ಕರ್ ಅವರ 130 ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.ಮಾನವೀಯತೆ ಸೌಹಾರ್ದತೆ ಮತ್ತು ಭ್ರಾತೃತ್ವ, ಜಾತ್ಯತೀತ ಮನೋಧರ್ಮದ ತಳಹದಿಯಲ್ಲಿ ಭಾರತದ ಸಂವಿಧಾನ ರಚನೆಯಾಗಿದೆ, ಶೋಷಣೆ, ಅಸಮಾನತೆ ತೊಡೆದು ಹಾಕಲು ಭಾರತಕ್ಕೆ ಇದೇ […]

ವರದಿ ; ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ಡಾ | ಬಿ.ಆರ್ . ಅಂಬೇಡ್ಕರ್ ಅವರು ಬರೆದ ಸಂವಿಧಾನ ಮತ್ತು ಅವರ ಸಾಮಾಜಿಕ ಚಿಂತನೆ ಪ್ರಸ್ತುತ ಸಮಾಜದಲ್ಲಿ ಆಳ್ವಿಕೆಗೆ ಬಂದಿದೆ . ದೀನ ದಲಿತರಿಗೆ ಶಿಕ್ಷಣವನ್ನು ತಲುಪುವಂತೆ ಮಾಡಲು ಮತ್ತು ಅವರ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಅವರು ಒತ್ತು ನೀಡಿದರು . ಅಂಬೇಡ್ಕರ್ ಅವರು ದೇಶದ ಸಂವಿಧಾನಕ್ಕೆ ನೀಡಿರುವ ಕೊಡುಗೆ ಅಪಾರವಾಗಿದೆ ಎಂದು ಕೋಲಾರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಶ್ರೀನಿವಾಸಗೌಡ ಅವರು ತಿಳಿಸಿದರು . ಇಂದು […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕಿನ ಶ್ರೀನಿವಾಸಪುರ ಮದನಪಲ್ಲಿ ರಸ್ತೆಯಲ್ಲಿ ಭಾನುವಾರ ಬೆಳಿಗ್ಗೆ ಆಂಧ್ರಪ್ರದೇಶದ ಮದನಪಲ್ಲಿಗೆ ಟಾಟಾ ಸುಮೋ ವಾಹನದಲ್ಲಿಅಕ್ರಮವಾಗಿ ಮದ್ಯ ಸಾಗಾಣಿಕೆ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಬಂಧಿಸಿ, ರೂ.1.20 ಲಕ್ಷ ಮೌಲ್ಯದ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.ಅಕ್ರಮವಾಗಿ ಮದ್ಯ ಸಾಗಾಣಿಕೆ ಮಾಡುತ್ತಿದ್ದ ಆಂಧ್ರಪ್ರದೇಶದ ಎಸ್.ಮೌಲಾನಾ, ಎಂ.ಜಿ.ಬೀವುಲ್ಲಾ ಬೇಗ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.ಅಬಕಾರಿ ಸರ್ಕಲ್ ಇನ್ಸ್ಪೆಕ್ಟರ್ ಟಿ.ಎಸ್.ರೋಹಿತ್, ಸಬ್ ಇನ್ಸ್ಪೆಕ್ಟರ್ ಕೆ.ಸಿ.ಕೃಷ್ಣಪ್ಪ, ಸಿಬ್ಬಂದಿ ಕೆ.ಆರ್.ಮಂಜುನಾಥ್ ಎನ್.ರಾಘವೇಂದ್ರ ದಾಳಿಯಲ್ಲಿ ಭಾಗವಹಿಸಿದ್ದರು.