
ವರದಿ ; ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ: ಜಿಲ್ಲೆಯ ಪ್ರತಿ ಹಳ್ಳಿಹಳ್ಳಿಗೂ ಕನ್ನಡ ಸಾಹಿತ್ಯವನ್ನು ಪಸರಿಸುವ ಕೆಲಸ ಮಾಡುತ್ತೇನೆ. ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದು, ಮತದಾರರು ನನಗೆ ಮತ ನೀಡುವ ಮೂಲಕ ಅವಕಾಶ ಮಾಡಿಕೊಡಬೇಕು ಎಂದು ಜಿಲ್ಲಾಧ್ಯಕ್ಷ ಸ್ಥಾನದ ಅಕಾಂಕ್ಷಿ ಗೋಪಾಲಗೌಡ ಕೋರಿದರು.ನಗರದ ತಾಲ್ಲೂಕು ಕಚೇರಿಯಲ್ಲಿ ಬುಧವಾರ ಚುನಾವಣಾಧಿಕಾರಿ ಅವರಿಗೆ ನಾಮ ಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲೆಯಲ್ಲಿನ ಯುವ ಬರಹಗಾರರನ್ನು, ಕವಿಗಳನ್ನು, ಸಾಹಿತಿಗಳನ್ನು ಗುರುತಿಸಿ ಅವರಿಗೆ ಪೆÇ್ರೀತ್ಸಾಹಿಸುವ ಕೆಲಸ ಮಾಡುತ್ತೇನೆ.ಜಿಲ್ಲೆಯಲ್ಲಿ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ; ಶ್ರೀನಿವಾಸಪುರ ಕಸಬಾ ರೇಷ್ಮೆ ಬೆಳೆಗಾರರ ಸೇವಾ ಸಹಕಾರ ಸಂಘದ ಅಧ್ಯಕ್ಷರಾಗಿ ವಿ.ಅಯ್ಯಪ್ಪ, ಉಪಾಧ್ಯರಾಗಿ ಶಾಂತಮ್ಮ ಅವಿರೋಧ ಆಯ್ಕೆಯಾಗಿದ್ದಾರೆ.ಸಂಘದ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರನ್ನು ಆಯ್ಕೆ ಮಾಡಲು ಮಂಗಳವಾರ ಚುನಾವಣೆ ನಡೆಸಲು ಉದ್ದೇಶಿಸಲಾಗಿತ್ತು. ಆದರೆ ವಿ.ಅಯ್ಯಪ್ಪ, ಶಾಂತಮ್ಮ ಹೊರತುಪಡಿಸಿ ಬೇರೆಯವರು ನಾಮಪತ್ರ ಸಲ್ಲಿಸದ ಪರಿಣಾಮವಾಗಿ ಅವರನ್ನು ಕ್ರಮವಾಗಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರನ್ನಾಗಿ ಅವಿರೋಧ ಆಯ್ಕೆ ಮಾಡಲಾಯಿತು.ಬಿ.ಆರ್.ಶಿವಶಂಕರ್ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ಸಿಇಒ ಶಿವಾರೆಡ್ಡಿ, ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್, ಡಿಸಿಸಿ ಬ್ಯಾಂಕ್ ನಿರ್ದೇಶಕ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಬಾಬು ಜಗಜೀವನ ರಾಂ ಅವರು ದೇಶದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ. ಸಾಮಾಜಿಕ ಸಮಾನತೆ ಹಾಗೂ ಅಸ್ಪಶ್ಯತಾ ನಿವಾರಣೆಗಾಗಿ ಬಹಳಷ್ಟು ಶ್ರಮಿಸಿದ್ದಾರೆ ಎಂದು ಶಾಸಕ ಕೆ.ಆರ್.ರಮೇಶ್ ಕುಮರ್ ಹೇಳಿದರು.ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮತಿ ವತಿಯಿಂದ ಸೋಮವಾರ ಏರ್ಪಡಿಸಿದ್ದ ಜಗಜೀವನ ರಾಂ ಅವರ 114ನೇ ಜನ್ಮದಿನ ಸಮಾರಂಭದಲ್ಲಿ, ಜಗಜೀವನ ರಾಂ ಅವರ ಭಾವ ಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ದೇಶದ ಕೃಷಿ ಸಚಿವರಾಗಿ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪು ಶ್ರೀನಿವಾಸಪುರ: ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಸಂಘಟನೆ ಬಲಪಡಿಸಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ಪಟ್ಟಣದ ವೆಂಕಟೇಶಗೌಡ ಕಲ್ಯಾಣ ಮಂಟಪದಲ್ಲಿ ಸೋಮವಾರ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಬಡವರ ಮತ್ತು ರೈತರ ಸಮಸ್ಯೆಳ ಪರಿಹಾರ ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಾತ್ರ ಬಡವರ ಬವಣೆ ಕೊನೆಗೊಳ್ಳಲು ಸಾಧ್ಯ ಎಂಬ ವಿಷಯವನ್ನು ಜನರಿಗೆ ತಿಳಿಸಬೇಕು ಎಂದು ಹೇಳಿದರು.ಪ್ರಧಾನಿ ಮೋದಿ ಅವರು ಪಶ್ಚಿಮ ಬಂಗಾಳದ ಚುನಾವಣಾ ಪ್ರಚಾರದಲ್ಲಿ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ : ನೆಲವಂಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಟ್ಟುವಾರಿಪಲ್ಲಿ ಗ್ರಾಮದಲ್ಲಿ ಕಳೆದ 15 ವರ್ಷಗಳ ಹಿಂದೆ ಇದ್ದಂತಹ ಶಿಕ್ಷಕರ ಕರ್ತವ್ಯ ಲೋಪದಿಂದ ಮುಚ್ಚಲಾದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಖಾಸಗಿ ವ್ಯಕ್ತಿಗಳು ವಾಸ ಮಾಡುವ ಮೂಲಕ ಸರ್ಕಾರಿ ಶಾಲಾ ಕಟ್ಟಡವನ್ನು ತಮ್ಮ ಸ್ವಂತ ಆಸ್ತಿ ಎನ್ನುವಂತೆ ಜಾನುವಾರುಗಳ ಸಹಿತ ಕಾಲ ಕಳೆಯಲು ಮುಂದಾದರು.ಈ ಬಗ್ಗೆ ಹಲವು ಬಾರಿ ಶಿಕ್ಷಣಾಧಿಕಾರಿಗಳಿಗೆ ಗ್ರಾಮಸ್ಥರು ದೂರು ನೀಡಿದ್ದರು ಖಾಸಗಿ ವ್ಯಕ್ತಿಗಳನ್ನು ಕಟ್ಟಡದಿಂದ ಖಾಲಿ ಮಾಡಿಸುವ ಕೆಲಸ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಶಿಕ್ಷಕರು ಸರ್ಕಾರಿ ಶಾಲಾ ಮಕ್ಕಳ ಶೈಕ್ಷಣಿಕ ಪ್ರಗತಿಗೆ ವಿಶೇಷ ಗಮನ ನೀಡಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ಪಟ್ಟಣದ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಸರ್ಕಾರಿ ಶಾಲಾ ಕಾಲೇಜುಗಳ ಮುಖ್ಯಸ್ಥರ ಸಭೆಯಲ್ಲಿ ಮಾತನಾಡಿ, ಶಾಲಾ ಮುಖ್ಯಸ್ಥರು ಯಾವುದೇ ಕಾರಣಕ್ಕೂ ಮಕ್ಕಳು ಮೂಲ ಸೌಕರ್ಯದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು. ಶಾಲೆಯಲ್ಲಿ ಶುದ್ಧ ಕುಡಿಯುವ ನೀರು, ಶೌಚಾಲಯ, ಗ್ರಂಥಾಲಯ, ಪ್ರಯೋಗಾಲಯ, ತರಗತಿ ಕೊಠಟಿ ಹಾಗೂ ಶಿಕ್ಷಕರ ಕೊಠಡಿ ಹೊಂದಿರಬೇಕು ಎಂದು ಹೇಳಿದರು.ಖಾಸಗಿ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ,ಏ.1: ಕೋವಿಡ್‍ನಿಂದ ದೇಶದಲ್ಲಿ ಭಯದ ವಾತಾವರಣದಲ್ಲಿ ಇದ್ದಾಗ ತಮ್ಮ ಪ್ರಾಣವನ್ನು ಲೆಕ್ಕಿಸದೇ ಜನಕ್ಕೆ ಸುದ್ದಿ ಮುಟ್ಟಿಸುವಲ್ಲಿ ಪತ್ರಕರ್ತರ ಪಾತ್ರ ಮುಖ್ಯವಾಗಿತ್ತು ಎಂದು ಎಪಿಎಂಸಿ ಮಾಜಿ ಅಧ್ಯಕ್ಷೆ ಕುರ್ಕಿ ರಾಜರಾಜೇಶ್ವರಿ ತಿಳಿಸಿದರು.ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ಪತ್ರಕರ್ತರಿಗೆ ತಂಪು ಪಾನೀಯ ವಿತರಿಸಿ ಮಾತನಾಡಿದ ಅವರು, ಸಮಾಜವನ್ನು ತಿದ್ದುವರು ನೀವು ನಿಮ್ಮನ್ನು ಗೌರವಿಸುವ ನಿಟ್ಟನಲ್ಲಿ ನನ್ನದೊಂದು ಅಳಿಲುಸೇವೆ ಅಷ್ಟೇ ಸೇವೆಯ ಮನೋಭಾವದಿಂದ ಎಲ್ಲರಿಗೂ ಸಹಾಯ ಮಾಡುತ್ತಾ ಇದ್ದೇನೆ. 35 ಸಾವಿರ ತಂಪುಯ ಪಾನೀಯಗಳನ್ನು ತಗೆದಕೊಂಡು […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣದಿಂದ ವಂಚಿತರಾದ ಹಲವಾರು ಪೋಷಕರು ತಮ್ಮ ಮಕ್ಕಳ ಮೂಲಕ ಅಕ್ಷರದ ಬೆಳಕು ಕಾಣುವ ತವಕದಲ್ಲಿದ್ದಾರೆ, ಅವರ ಕನಸು ನನಸು ಮಾಡಲು ಶ್ರದ್ಧೆಯಿಂದ ಓದಿ, ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಕ್ಕೇ ಸಿಗುತ್ತದೆ ಎಂದು ಡಿಡಿಪಿಐ ಕೃಷ್ಣಮೂರ್ತಿ ಕರೆ ನೀಡಿದರು.ತಾಲ್ಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢಶಾಲೆಗೆ ಗುರುವಾರ ಭೇಟಿ ನೀಡಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ, ಮಕ್ಕಳ ಪ್ರಗತಿ ಪರಿಶೀಲಿಸಿದ ಅವರು, ಹಳ್ಳಿಗಾಡಿನಲ್ಲಿ ಅನೇಕ ಪೋಷಕರು ಶಿಕ್ಷಣದಿಂದ ವಂಚನೆಗೊಳಗಾಗಿ ಕೂಲಿ, ಕೃಷಿ ಕಾರ್ಯದಲ್ಲಿ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಜಿಲ್ಲೆಯ ವಿದ್ಯಾರ್ಥಿಗಳು ಶಿಕ್ಷಣದ ಮೂಲಕ ಬದುಕು ಕಟ್ಟಿಕೊಳ್ಳಬೇಕು ಎಂದು ಬುಧವಾರ ವಯೋನಿವೃತ್ತಿ ಹೊಂದಿದ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಎಲ್.ಕೆ.ಶ್ರೀನಿವಾಸಮೂರ್ತಿ ಹೇಳಿದರು.ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿಯಲ್ಲಿ ಇಲಾಖೆ ಸಿಬ್ಬಂದಿ ಹಾಗೂ ನಾಗರಿಕರಿಂದ ಬುಧವಾರ ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ, ಶಿಕ್ಷಣ ಹೊರತು ಪಡಿಸಿ ಬದುಕು ಸಾಧ್ಯವಿಲ್ಲ ಎಂಬ ಅರಿವು ಇದ್ದುದರಿಂದಾಗಿ ತಾಂತ್ರಿಕ ಶಿಕ್ಷಣ ಪಡೆದು ಎಂಜಿಯರ್ ಆಗಲು ಸಾಧ್ಯವಾಯಿತು ಎಂದು ಹೇಳಿದರು.ಈ ಸಂದರ್ಭದಲ್ಲಿ ತಮ್ಮ ಕಾರ್ಯಭಾರವನ್ನು […]