
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಪರೀಕ್ಷೆ ಕುರಿತು ಭಯ ಬೇಡ, ಮಾಸ್ಕ್,ಸ್ಯಾನಿಟೈಸರ್ ಬಳಸಿ, ಸಾಮಾಜಿಕ ಅಂತರ ಪಾಲಿಸಿ ಆತ್ಮಸ್ಥೈರ್ಯದಿಂದ ಅಭ್ಯಾಸ ಮುಂದುವರೆಸಿ, ನಿಮ್ಮ ಸುರಕ್ಷತೆಗೆ ನಿಮ್ಮ ಪೋಷಕರು,ಶಿಕ್ಷಕರು ಮಾತ್ರವಲ್ಲ ಇಡೀ ಸರ್ಕಾರವೇ ಇದೆ ಎಂದು ರಾಜ್ಯ ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್‍ಕುಮಾರ್ ಮಕ್ಕಳಿಗೆ ಧೈರ್ಯ ತುಂಬಿದರು.ಮುಳಬಾಗಿಲಿಗೆ ಭೇಟಿ ನೀಡಿದ ನಂತರ ಕೋಲಾರ ತಾಲ್ಲೂಕಿನ ಹುತ್ತೂರು ಸರ್ಕಾರಿ ಪ್ರೌಢಶಾಲೆಗೆ ಆಗಮಿಸಿ ಮಕ್ಕಳೊಂದಿಗೆ ಸಂವಾದ ನಡೆಸಿದ ಅವರು, ಮಕ್ಕಳನ್ನು ಕೇಳಿದ ಮೊದಲ ಪ್ರಶ್ನೆ ನಿಮಗೆ ಪರೀಕ್ಷೆ ಬೇಕೋ,ಬೇಡವೋ’ ಎಂದು. […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಮಕ್ಕಳನ್ನು ಪೋಷಕರು ಹೆಣ್ಣು ಗಂಡು ಮಗು ತಾರತಮ್ಯ ಇಲ್ಲದಂತೆ ಸಮಾನತೆಯಿಂದ ಬೆಳೆಸಿ ಆತ್ಮವಿಶ್ವಾಸ ತುಂಬಬೇಕೆಂದು ಉಪವಿಭಾಗಾಧಿಕಾರಿ ಸೋಮಶೇಖರ್ ಹೇಳಿದರು.ದಲಿತ ಸಂಘರ್ಷ ಸಮಿತಿ ಕರ್ನಾಟಕ, ದಲಿತ ಮಹಿಳಾ ಒಕ್ಕೂಟ ಕರ್ನಾಟಕ ಆಶ್ರಯದಲ್ಲಿ ಕಾರಂಜಿಕಟ್ಟೆ ಬಡಾವಣೆಯ ಧರ್ಮರಾಯಸ್ವಾಮಿ ಸಮುದಾಯ ಭವನದಲ್ಲಿ ಗುರುವಾರ ಆಯೋಜಿಸಲಾಗಿದ್ದ ಮಹಿಳಾ ಹಕ್ಕುಗಳ ಮತ್ತು ಸಂವಿಧಾನ ಉಳಿವಿಗಾಗಿ ಹಮ್ಮಿಕೊಂಡಿದ್ದ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.ಭಾರತೀಯ ಪ್ರಾಚೀನ ಯುಗದಲ್ಲಿ ಮಹಿಳೆಯರಿಗೆ ಸಮಾನವಾದ ಅವಕಾಶಗಳಿದ್ದವು ಆದರೆ ಮಧ್ಯಯುಗದ ಸಂದರ್ಭದಲ್ಲಿ ಮಹಿಳೆಯರ ಸ್ಥಿತಿ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪಟ್ಟಣದ ತಾಲ್ಲೂಕು ಕಚೇರಿ ಮುಂದೆ, ತಾಲ್ಲೂಕು ದಲಿತ ಸಂಘಟನೆಗಳ ಒಕ್ಕೂಟದ ಸದಸ್ಯರು ಬುಧವಾರ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.ಸರ್ಕಾರ ಪಿಟಿಸಿಎಲ್ ಕಾಯ್ದೆಯನ್ನು ಅನುಷ್ಠಾನಗೊಳಿಸಲು ಇರುವ ತೊಡಕುಗಳನ್ನು ನಿವಾರಿಸಬೇಕು. ದಲಿತರ ಭೂಮಿ ಹಕ್ಕನ್ನು ರಕ್ಷಿಸಬೇಕು. ಭೂ ಪರಭಾರೆ ಮೊಷೇಧ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ಜಿಲ್ಲಾಧಿಕಾರಿಗಳು ಉಪ ವಿಭಾಗಾಧಿಕಾರಿಗಳಿಗೆ ಸೂಚಿಸಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.ತಮ್ಮ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವನ್ನು ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಅವರಿಗೆ ನೀಡಲಾಯಿತು.ವಿವಿಧ ದಲಿತ ಪರ ಸಂಘಟನೆಗಳ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರದ ಪುರಸಭೆ ಕಚೇರಿಯಲ್ಲಿ ಸೋಮವಾರ, ಬೇರೆಡೆಗೆ ವರ್ಗವಾದ ಪುರಸಭೆ ಮುಖ್ಯಾಧಿಕಾರಿ ವಿ.ಮೋಹನ್ ಕುಮಾರ್ ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು.

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ ತಾಲ್ಲೂಕಿನ ಗೌಡಹಳ್ಳಿ ಗ್ರಾಮದಲ್ಲಿ ಸೋಮವಾರ, ಕುಡಿಯುವ ನೀರು ಸಮಸ್ಯೆ ನಿವಾರಣೆ ಕುರಿತು ಗ್ರಾಮ ಪಂಚಾಯಿತಿ ಅಧ್ಯಕ್ಷ ಬಂಗವಾದಿ ರವಿಕುಮಾರ್ ಚರ್ಚಿಸಿದರು.

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರದಲ್ಲಿ, ಕಸಬಾ ರೇಷ್ಮೆ ಬೆಳೆಗಾರರ ಸಹಕಾರ ಸಂಘಕ್ಕೆ ಭಾನುವಾರ ನಡೆದ ಚುನಾವಣೆಯಲ್ಲಿ ಷಬ್ಬೀರ್ ಅಹ್ಮದ್ ಪಾಷ ಚುನಾಯಿತರಾಗಿದ್ದಾರೆ.

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪಟ್ಟಣದ ವರದ ಬಾಲಾಂಜನೇಯಸ್ವಾಮಿ ದೇವಾಲಯದ ಪ್ರಧಾನ ಅರ್ಚಕ ನಾಗರಾಜ ಶರ್ಮ (71) ಸೊಮವಾರ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ನಿಧನರಾದರು. ದೇವಾಲಯದ ಅಭಿವೃದ್ಧಿಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದ ಅವರು, ಕೆಲವು ದಿನಗಳಿಂದ ಅನಾರೋಗ್ಯ ಪೀಡತರಾಗಿದ್ದರು.ಮೃತರಿಗೆ ಪತ್ನಿ ಹಾಗೂ ಇಬ್ಬರು ಪುತ್ರರು ಇದ್ದಾರೆ.ಸೋಮವಾರ ಅಂತ್ಯ ಸಂಸ್ಕಾರ ನಡೆಸಲಾಯಿತು.

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪಟ್ಟಣದಲ್ಲಿ ಮಾ.28 ರಂದು ನಡೆಸಲು ಉದ್ದೇಶಿಸಲಾಗಿದ್ದ್ದ ವರದ ಬಾಲಾಂಜನೇಯಸ್ವಾಮಿ ಬ್ರಹ್ಮರಥೋತ್ಸವವನ್ನು, ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರದ್ದುಪಡಿಸಲಾಗಿದೆ ಎಂದು ವರದ ಬಾಲಾಂಜನೇಯಸ್ವಾಮಿ ಸೇವಾ ಟ್ರಸ್ಟ್ ಅಧ್ಯಕ್ಷ ವೈ.ಆರ್.ಶಿವಪ್ರಕಾಶ್ ಹೇಳಿದರು.ಪಟ್ಟಣದಲ್ಲಿ ಸೋಮವಾರ ಏರ್ಪಡಿಸಿದ್ದ ವರದ ಬಾಲಾಂಜನೇಯಸ್ವಾಮಿ ಸೇವಾ ಟ್ರಸ್ಟ್ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿ, ತಹಶೀಲ್ದಾರ್ ಹಾಗೂ ಜಿಲ್ಲಾಧಿಕಾರಿಗಳ ಅನುಮತಿ ಪಡೆದು ಕೊರೊನಾ ನಿಯಮಗಳನ್ನು ಅನುಸರಿಸಿ ದೇವರಿಗೆ ವಿಶೇಷ ಪೂಜೆ ನೆರವೇರಿಸಲು ಉದ್ದೇಶಿಸಲಾಗಿತ್ತು. ನಿಗದಿತ ದಿನಾಂಕವನ್ನು ಪ್ರಕಟಿಸಿ ಆಹ್ವಾನ ಪತ್ರಿಕೆ ಹಂಚಲಾಗಿತ್ತು. ಆದರೆ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ : ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಅಲೆಯಬೇಕಾದ ಕೆಲಸಗಳನ್ನು ಒಂದೇ ದಿನದಲ್ಲಿ ಪರಿಹಾರ ನೀಡುವ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಜನಪರ ಕಾಳಜಿಯನ್ನು ಹೊಂದಿದೆ . ಜನರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕೋಲಾರ ತಾಲ್ಲೂಕು ತಹಸೀಲ್ದಾರರಾದ ಶೋಭಿತಾ ಅವರು ತಿಳಿಸಿದರು . ಇಂದು ನಗರದ ವಕ್ಕಲೇರಿ ಹೋಬಳಿಯ ಶೆಟ್ಟಿಗಾನಹಳ್ಳಿ ಗ್ರಾಮದಲ್ಲಿ ತಾಲ್ಲೂಕು ಆಡಳಿತ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಗ್ರಾಮವಾಸ್ತವ್ಯ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು . 15 […]