
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ಕಾರ್ಯ ನಿರ್ವಹಿಸಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ಪಟ್ಟಣದ ತಾಲ್ಲೂಕು ಕಚೇರಿ ಆವರಣದಲ್ಲಿ ಕಂದಾಯ ಇಲಾಖೆ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ಕಂದಾಯ ಅದಾಲತ್ ಕಾರ್ಯಕ್ರಮದಲ್ಲಿ ಮಾತನಾಡಿ, ಅಧಿಕಾರಿಗಳು ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರು ಪೂರೈಕೆ ಹಾಗೂ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಹೇಳಿದರು.ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಸ ವಿಲೇವಾರಿಗೆ ಸೂಕ್ತವಾದ ಸ್ಥಳ ಗುರುತಿಸಿ, ಕಸ ವಿಲೇವಾರಿ ಕಾರ್ಯವನ್ನು ಶೀಘ್ರವಾಗಿ ಪ್ರಾರಂಭಿಸಬೇಕು. ಸ್ಮಶಾನ ಒತ್ತುವರಿಯನ್ನು ತೆರವುಗೊಳಿಸಿ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಮಾವಿನ ಹೂ ರಕ್ಷಣೆಗೆ ಮಾವು ಬೆಳೆಗಾರರು ವಿಶೇಷ ಕಾಳಜಿ ವಹಿಸಬೇಕು ಎಂದು ಹೊಗಳಗೆರೆ ತೋಟಗಾರಿಕಾ ಅಭಿವೃದ್ಧಿ ಹಾಗೂ ವಿಸ್ತರಣಾ ಕೇಂದ್ರದ ಮುಖ್ಯಸ್ಥ ಡಾ. ಆರ್.ಕೆ.ರಾಮಚಂದ್ರ ಹೇಳಿದರು.ದಳಸನೂರು ಗ್ರಾಮದ ಸಮೀಪ ರಾಜ್ಯ ಮಾವು ಅಭಿವೃದ್ಧಿ ಹಾಗೂ ಮಾರುಕಟ್ಟೆ ನಿಗಮದ ಮಾಜಿ ಅಧ್ಯಕ್ಷ ಎಲ್.ಗೋಪಾಲಕೃಷ್ಣ ಅವರ ಮಾವಿನ ತೊಟದಲ್ಲಿ ರೈತರನ್ನು ಉದ್ದೇಶಿಸಿ ಮಾತನಾಡಿ, ನೈಸರ್ಗಿಕ ವಿಕೋಪ ಸಂಭವಿಸಿದಾಗ, ಇರುವ ಫಸಲನ್ನು ಜೋಪಾನವಾಗಿ ನೋಡಿಕೊಂಡಲ್ಲಿ ನಷ್ಟದ ಪ್ರಮಾಣ ಕಡಿಮೆ ಮಾಡಿಕೊಳ್ಳಬಹುದಾಗಿದೆ ಎಂದು ಹೇಳಿದರು.ಮಾವಿನ ಹೀಚು […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಗ್ರಾಮ ಪಂಚಾಯಿತಿಗೆ ಆಯ್ಕೆಯಾಗಿರುವ ಪ್ರತಿಯೊಬ್ಬರು ಗ್ರಾಮಗಳ ಅಭಿವೃದ್ದಿಗೆ ಹೆಚ್ಚು ಒತ್ತು ನೀಡಬೇಕೆಂದು ಪಿ.ಎಲ್.ಡಿ. ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್ ತಿಳಿಸಿದರು.ತಾಲ್ಲೂಕಿನ ನೆಲವಂಕಿ ಗ್ರಾಮ ಪಂಚಾಯಿತಿಯ ನವೀಕೃತ ಕಟ್ಟಡದ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ದಿಂಬಾಲ ಅಶೋಕ್, ಚುನಾವಣೆಗಳಲ್ಲಿ ಗೆಲ್ಲುವ ಮುಂಚೆ ನಾನು ಆ ಪಕ್ಷ, ಈ ಪಕ್ಷ ಎಂದು ಇರಬೇಕು, ಚುನಾವಣೆಯಲ್ಲಿ ಗೆದ್ದ ನಂತರ ಎಲ್ಲಾ ಪಕ್ಷದ ಎಲ್ಲಾ ಸದಸ್ಯರು ಒಗ್ಗಾಟ್ಟಾಗಿ ಗ್ರಾಮಗಳ ಅಭಿವೃದ್ದಿಗೆ ಹೆಚ್ಚು ಆಧ್ಯತೆ ನೀಡಿ ಗ್ರಾಮಗಳ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಬೇಸಿಗೆ ಸಮೀಪಿಸುತ್ತಿದ್ದು, ಸಾರ್ವಜನಿಕರಿಗೆ ಕುಡಿಯುವ ನೀರು ಸ್ವಚ್ಚತೆ, ಬೀದಿ ದೀಪ, ನರೇಗಾ ಕಾಮಗಾರಿಗಳು, ಪಂಚಾಯಿತಿ ಎಲ್ಲಾ ಹಳ್ಳಿಗಳಿಗೆ ಪಕ್ಷ ಬೆದವನ್ನು ಮರೆತುಮೂಲಭೂತ ಸೌಲಭ್ಯಗಳಿಗೆ ಅಧ್ಯತೆ ನೀಡೋಣ ಎಂದು ನೆಲವಂಕಿ ಗ್ರಾಮ ಪಂಚಾಯಿತಿ ಅಧ್ಯಕ್ಷಿಣಿ ಗೌತಮಿ ಮುನಿರಾಜು ತಿಳಿಸಿದರು.ತಾಲ್ಲೂಕಿನ ನೆಲವೆಂಕಿ ಗ್ರಾಮ ಪಂಚಾಯಿತಿ ಕಛೇರಿಯಲ್ಲಿ ಅಧ್ಯಕ್ಷಣಿ ಗೌತಮಿ ಮುನಿರಾಜ್ ಅಧ್ಯಕ್ಷತೆಯಲ್ಲಿ ಮೊದಲ ಸಾಮಾನ್ಯ ಸಭೆಯನ್ನು ಉದ್ಘಾಟಿಸಿ ಮಾತನಾಡಿ, ಗ್ರಾಮಗಳಲ್ಲಿ ಕುಡಿಯುವ ನೀರು ತೊಂದರೆಯಾಗದಂತೆ ಎಲ್ಲಾ ಗ್ರಾಮಗಳಿಗೂ ಒದಗಿಸೋಣ. ಸ್ವಚ್ಚತೆ, ಹಾಗೂ ಪಂಚಾಯಿತಿ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಆಶಾ ಕಾರ್ಯಕರ್ತೆಯರು ಕಿವಿ ಆರೋಗ್ಯ ಕುರಿತು ಜನರಲ್ಲಿ ಅರಿವು ಮೂಡಿಸಬೇಕು ಎಂದು ಜಿಲ್ಲಾ ಕಿವಿ, ಮೂಗು ಹಾಗೂ ಗಂಟಲು ತಜ್ಞೆ ಡಾ. ಪುಷ್ಪಲತಾ ಹೇಳಿದರು.ಪಟ್ಟಣದ ವಾಸವಿ ಕಲ್ಯಾಣ ಮಂಟಪದಲ್ಲಿ ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಮತ್ತು ನಿರ್ಮೂಲನಾ ಯೋಜನೆಯಡಿ ಬುಧವಾರ ಆಶಾ ಕಾರ್ಯಕರ್ತೆಯರಿಗೆ ಏರ್ಪಡಿಸಿದ್ದ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಿವಿ ಮಾನವನ ಒಂದು ಪ್ರಮುಖ ಅಂಗ. ಶ್ರವಣ ದೋಷ ಇದ್ದಲ್ಲಿ ಹಲವು ಸಮಸ್ಯೆಗಳು ಉದ್ಭವಿಸುತ್ತವೆ ಎಂದು ಹೇಳಿದರು.ಗ್ರಾಮೀಣ ಪ್ರದೇಶದಲ್ಲಿ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕಿನ ಯಲವಹಳ್ಳಿ ಗ್ರಾಮದ ಮುನಿಯಮ್ಮ (95) ಮಂಗಳವಾರ ತಮ್ಮ ಸ್ವಗೃಹದಲ್ಲಿ ನಿಧನರಾದರು.ಮೃತರು ಪತ್ರಕರ್ತ ಎನ್.ಮುನಿವೆಂಕಟೇಗೌಡ ಸೇರಿದಂತೆ ಮೂವರು ಗಂಡು ಮಕ್ಕಳು ಹಾಗೂ ಮೂವರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.ಮುನಿಯಮ್ಮ ಅವರ ಅಂತ್ಯ ಸಂಸ್ಕಾರವನ್ನು ಗ್ರಾಮದ ಹೊರಗಿನ ಸ್ಮಶಾನದಲ್ಲಿ ಬುಧವಾರ ನೆರವೇರಿಸಲಾಯಿತು.

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪಟ್ಟಣದಲ್ಲಿ ಮಾರುತಿ ಸಭಾ ಭವನವನ್ನು ಮಾ.3 ರಂದು ಬೆಳಿಗ್ಗೆ 9.35 ಗಂಟೆಗೆ ಲೋಕಾರ್ಪಣೆ ಮಾಡಲಾಗುವುದು ಎಂದು ತಾಲ್ಲೂಕು ಆರ್ಯವೈಶ್ಯ ಮಂಡಳಿ ಟ್ರಸ್ಟ್ ಅಧ್ಯಕ್ಷ ವೈ.ಆರ್.ಶಿವಪ್ರಕಾಶ್ ಹೇಳಿದರು.ಪಟ್ಟಣದ ಮಾರುತಿ ಸಭಾ ಭವನದಲ್ಲಿ ಬುಧವಾರ ಏರ್ಪಡಿಸಿದ್ದ ಸಮಾರಂಭಲ್ಲಿ ಭವನ ಉದ್ಘಾಟನೆಯ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿದ ಅವರು, ಅದೇ ದಿನ ಬೆಳಿಗ್ಗೆ 10.30 ರಿಂದ ಸೀತಾರಾಮ ಕಲ್ಯಾಣೋತ್ಸವ ಏರ್ಪಡಿಸಲಾಗಿದೆ. ಇದರ ಅಂಗವಾಗಿ ಹಲವಾರು ಧಾರ್ಮಿಕ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಉತ್ತರ ಪ್ರದೇಶದಲ್ಲಿ ಪೊಲೀಸರು ಪಾಪ್ಯುಲರ್ ಫ್ರಂಟ್ ಕಾರ್ಯಕರ್ತರನ್ನು ಅಪಹರಿಸಿದ್ದಾರೆ ಎಂದು ಆರೋಪಿಸಿ, ಪಾಪ್ಯುಲರ್ ಫ್ರಂಟ್ಶ್ರೀನಿವಾಸಪುರ – ಚಿಂತಾಮಣಿ ರಸ್ತೆಯಲ್ಲಿ ಬ್ಯಾನರ್ ಹಿಡಿದು ಮೆರವಣಿಗೆ ನಡೆಸಿದ ಕಾರ್ಯಕರ್ತರು, ಉತ್ತರ ಪ್ರದೇಶದ ಪೊಲೀಸರ ಕೃತ್ಯವನ್ನು ಖಂಡಿಸಿದರು.ಮುಖಂಡರಾದ ಇಮ್ರಾನ್, ಜಬೀರ್, ಮಕ್‍ಮೂನ್ ಪ್ರತಿಭಟನೆ ನೇತೃತ್ವ ವಹಿಸಿದ್ದರು.

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕರೆದಿದ್ದ 2021-22ನೇ ಸಾಲಿನ ಆಯ-ವ್ಯಯ ಮಂಡನೆ ಸಂಬಂಧ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳೊಂದಿಗೆ ನಡೆಸಿದ ಪೂರ್ವಭಾವಿ ಸಭೆಯಲ್ಲಿ ಜಿಲ್ಲೆಯಿಂದ ರಾಜ್ಯ ಕಾರ್ಯದರ್ಶಿ ಹಾಗೂ ಜಿಲ್ಲಾಧ್ಯಕ್ಷರೂ ಆದ ಜಿ.ಸುರೇಶ್‍ಬಾಬು ಪಾಲ್ಗೊಂಡಿದ್ದರು.ಆಯ-ವ್ಯಯ ಮಂಡನೆ ಪೂರ್ವದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸುವ ಸಂಪ್ರದಾಯದಂತೆ ಈ ಸಭೆ ನಡೆದಿದ್ದು, ಈ ಸಂದರ್ಭದಲ್ಲಿ ಆಯವ್ಯಯದಲ್ಲಿ ಸರ್ಕಾರಿ ನೌಕರರ ವಿವಿಧ ಬೇಡಿಕೆಗಳ ಕುರಿತಂತೆ ಕ್ರಮವಹಿಸಲು ಮನವಿ ಮಾಡಲಗಿದ್ದು, […]