ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ : ಆರ್‌ಟಿಐ ಅರ್ಜಿಗೆ ಸಕಾಲದಲ್ಲಿ ಮಾಹಿತಿ ನೀಡದ ತಾಲೂಕಿನ ದಳಸನೂರು ಗ್ರಾಮಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ಸಂತೋಶ್ ಅವರಿಗೆ ರಾಜ್ಯ ಮಾಹಿತಿ ಹಕ್ಕು ಆಯೋಗ 10 ಸಾವಿರ ರೂ.ಗಳ ದಂಡ ವಿಧಿಸಿದೆ .ಗ್ರಾಮ ಪಂಚಾಯಿತಿಗೆ ಸಂಬಂಧಿಸಿದ 14 ನೇ ಹಣಕಾಸು ಯೋಜನೆಯಡಿಯಲ್ಲಿ ಬಿಡುಗಡೆಯಾಗಿರುವ ಅನುದಾನದ ಮಾಹಿತಿಯನ್ನು ನೀಡುವಂತೆ ಶ್ರೀನಿವಾಸಪುರದಮಾಹಿತಿ ಹಕ್ಕು ಕಾರ್ಯಕರ್ತ ಶಬ್ಬೀರ್ ಅಹ್ಮದ್ ದಿನಾಂಕ 08/11/2017 ರಲ್ಲಿ ಮಾಹಿತಿ ಹಕ್ಕು ಕಾಯ್ದೆಯ ಕಲಂ 6(1)ರ ಅಡಿಯಲ್ಲಿ ಆರ್ಜಿ ಸಲ್ಲಿಸಿದ್ದರು .ಆದರೆ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ : ಕೇಂದ್ರ ಮತ್ತು ರಾಜ್ಯ ಸರ್ಕಾರವು ಅಲ್ಪಸಂಖ್ಯಾತರ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು , ಈ ಯೋಜನೆಗಳು ಅರ್ಹ ಅಲ್ಪಸಂಖ್ಯಾತ ಫಲಾನುಭವಿಗಳಿಗೆ ದೊರಕಬೇಕು ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಅಬ್ದುಲ್ ಅಜೀಮ್ ಅವರು ತಿಳಿಸಿದರು . ಇಂದು ಜಿಲ್ಲಾಧಿಕಾರಿಗಳ ಕಛೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ , ಪ್ರಧಾನ ಮಂತ್ರಿಗಳ 15 ಅಂಶಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು . ಸರ್ಕಾರವು […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಜನರು ಹಲ್ಲಿನ ಆರೋಗ್ಯಕ್ಕೆ ಆದ್ಯತೆ ನೀಡಬೇಕು ಎಂದು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಜಿ.ಎಸ್.ಶ್ರೀನಿವಾಸ್ ಹೇಳಿದರು.ಪಟ್ಟಣದ ಸರ್ಕಾರಿ ಸಾರ್ವಜನಿಕ ಅಸ್ಪತ್ರೆಯಲ್ಲಿ ರಾಷ್ಟ್ರೀಯ ಓರಲ್ ಹೆಲ್ತ್ ಪಾಲಿಸಿ ಹಾಗೂ ದಂತ ಆರೋಗ್ಯ ಕಾರ್ಯಕ್ರಮದಡಿ, ಸ್ಥಳೀಯ ಸರ್ಕಾರಿ ಆಸ್ಪತ್ರೆ ಹಾಗೂ ಬೆಂಗಳೂರಿನ ವೈದೇಹಿ ಆಸ್ಪತ್ರೆ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ದಂತ ಜೋಡಣೆ ಮತ್ತು ದಂತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿ, ಹಲ್ಲು ಆಹಾರವನ್ನು ಅಗಿಯಲು ಮಾತ್ರವಲ್ಲದೆ ಮುಖಕ್ಕೆ ಅಂದವನ್ನೂ ಕೊಡುತ್ತದೆ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರದಲ್ಲಿ ಸೋಮವಾರ ತಾಲ್ಲೂಕು ಸರ್ಕಾರಿ ನೌಕರರ ಸಂಘ ಹೊರ ತಂದಿರುವ ಹೊಸ ವರ್ಷದ ಕ್ಯಾಲೆಂಡರನ್ನು ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಬಿಡುಗಡೆ ಮಾಡಿದರು. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್, ಬಿಇಒ ವಿ.ಉಮಾದೇವಿ, ಕೋಚಿಮುಲ್ ಸದಸ್ಯ ಎನ್.ಹನುಮೇಶ್, ಶಿರಸ್ತೇದಾರ್ ಬಿ.ಆರ್.ಮುನಿವೆಂಕಟಪ್ಪ. ಸಂಘದ ಮುಖಮಡರಾದ ಎನ್.ಶ್ರೀನಿವಾಸಯ್ಯ, ಎಂ.ನಾಗರಾಜ್, ಮಂಜುನಾಥರೆಡ್ಡಿ, ಜನಾರ್ಧನ್ ಇದ್ದರು.
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಕನ್ನಡ ಪರ ಹಾಗೂ ಇತರ ಸಂಘ ಸಂಸ್ಥೆಗಳು ಶ್ರಮಿಸಬೇಕು ಎಂದು ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಹೇಳಿದರು.ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವ ಸಂಬಂಧ ಸೋಮವಾರ ಏರ್ಪಡಿಸಿದ್ದ ವಿವಿಧ ಸಂಘ ಸಂಸ್ಥೆಗಳ ಸಭೆಯಲ್ಲಿ ಮಾತನಾಡಿದ ಅವರು, ಸಮ್ಮೇಳನ ಜ.16 ರಂದು ರೋಣೂರು ಗ್ರಾಮದಲ್ಲಿ ನಡೆದರೂ, ಅದು ಅರ್ಥಪೂರ್ಣವಾಗಿರಬೇಕು. ಯಾವುದೇ ಕುಂದು ಕೊರತೆ ಇರದಂತೆ ಸಂಘಟಕರು ನೋಡಿಕೊಳ್ಳಬೇಕು ಎಂದು ಹೇಳಿದರು.ತಾಲ್ಲೂಕು ಕನ್ನಡ […]
JANANUDI.COM NETWORK ಕುಂದಾಪುರ : ಜನವರಿ 9 2021 ಹೋಟೆಲ್ ಶರೋನ್ ಬಳಿ ಇರುವ ಆಯುಷ್ ಧಾಮ ಆರ್ಥೋ ನ್ಯೂರೋ ಆಸ್ಪತ್ರೆ, ಹಿರಿಯ ನಾಗರಿಕರ ವೇದಿಕೆ ಮತ್ತು ನಿವೃತ್ತ ಸರಕಾರಿ ನೌಕರರ ಸಂಘ ಕುಂದಾಪುರ, ಇವರ ಜಂಟಿ ಆಶ್ರಯದಲ್ಲಿ ಉಚಿತ ಆರೋಗ್ಯ ಶಿಬಿರ ಆಯೋಜಿಸಿದ್ದು, ಕುಂದಾಪುರ ಸಹಾಯಕ ಆಯುಕ್ತ ಶ್ರೀ ಕೆ. ರಾಜು ಶಿಬಿರವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.ಕೋವಿಡ್ 19 ಇದರ ನಿರ್ವಹಣೆಯಲ್ಲಿ ಆಯುಷ್ ಚಿಕಿತ್ಸಾ ಪದ್ಧತಿ ಪರಿಣಾಮಕಾರಿಯಾಗಿದ್ದು ಈಗೀಗ ಹೆಚ್ಛೆಚ್ಚು ಜನರು ಅದರ ಸದುಪಯೋಗ ಮನಗಂಡಿದ್ದಾರೆ. […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಸಹಕಾರ ತತ್ವದಡಿ ನಂಬಿಕೆಯಿಟ್ಟು ಕೆಲಸ ಮಾಡೋಣ ಸಂಘದಲ್ಲಿ ಭ್ರಷ್ಟತೆ ಇಣುಕಿ ನೋಡದಂತೆ ಎಚ್ಚರವಹಿಸುವ ಮೂಲಕ ಸದೃಢಗೊಳಿಸೋಣ ಎಂದು ಗೋಲ್ಡ್‍ಪೀಲ್ಡ್ ಸೌಹಾರ್ದ ಕ್ರೆಡಿಟ್ ಕೋ-ಆಪರೇಟೀವ್ ಸೊಸೈಟಿ ಅಧ್ಯಕ್ಷ ಕೆ.ಬಿ.ಗೋಪಾಲಕೃಷ್ಣ ತಿಳಿಸಿದರು.ಸೊಸೈಟಿಯಲ್ಲಿ ನಡೆದ ಆಡಳಿತ ಮಂಡಳಿಯ ಮಾಸಿಕ ಸಭೆಯಲ್ಲಿ ಸಂಘದ ನಿರ್ದೇಶಕರೂ ಆಗಿದ್ದು, ಇದೀಗ ಅರಾಭಿಕೊತ್ತನೂರು ಗ್ರಾ.ಪಂ ಸದಸ್ಯರಾಗಿ ಆಯ್ಕೆಯಾಗಿರುವ ಎ.ಎಸ್.ನಂಜುಂಡಗೌಡರನ್ನು ಸನ್ಮಾನಿಸಿ ಅವರು ಮಾತನಾಡುತ್ತಿದ್ದರು.ನಮ್ಮ ಸಹಕಾರ ಸಂಘ ಇನ್ನೂ ಬೆಳೆಯುತ್ತಿರುವ ಕೂಸು, ಅದನ್ನು ಆರ್ಥಿಕವಾಗಿ ಸದೃಢಗೊಳಿಸುವ ಸಂಕಲ್ಪದೊಂದಿಗೆ ಎಲ್ಲರೂ ಕೆಲಸ ಮಾಡುತ್ತಿದ್ದೇವೆ, […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಬಿಎಸ್‍ಪಿ ಪದಾಧಿಕಾರಿಗಳು ಪಕ್ಷದ ಸಂಘಟನೆಗೆ ಮೊದಲ ಆದ್ಯತೆ ನೀಡಬೇಕು ಎಂದು ಪಕ್ಷದ ರಾಜ್ಯಾಧ್ಯಕ್ಷ ಎಂ.ಕೃಷ್ಣಮೂರ್ತಿ ಹೇಳಿದರು.ಪಟ್ಟಣದ ಬಿಎಸ್‍ಪಿ ಕಚೇರಿ ಆವರಣದಲ್ಲಿ ಶನಿವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಗ್ರಾಮ ಪಂಚಾಯಿತಿ ಸೇರಿದಂತೆ ವಿವಿಧ ಹಂತದ ಚುನಾವಣೆಗಳಲ್ಲಿ ಸ್ಪರ್ಧಿಸಿ ಗೆಲ್ಲುವುದು ಹಾಗೂ ರಾಜ್ಯದಲ್ಲಿ ಅಧಿಕಾರ ಸ್ಥಾನಕ್ಕೆ ಏರುವುದು ಪಕ್ಷದ ಉದ್ದೇಶವಾಗಿದೆ. ಅದಕ್ಕೆ ಪೂರಕವಾಗಿ ಕೆಲಸ ಮಾಡಬೇಕು ಎಂದು ಹೇಳಿದರು.ಸ್ವಾತಂತ್ರ್ಯ ಬಂದಾಗಿನಿಂದ ಅಧಿಕಾರ ನಡೆಸಿದ ಬೇರೆ ಬೇರೆ ಪಕ್ಷಗಳು ಬಡತನ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಯಾವುದೇ ಅಭಿವೃದ್ಧಿ ಕಾರ್ಯವನ್ನು ಅಡ್ಡಿಪಡಿಸಿಲ್ಲ್ಲ. ಅಡ್ಡಿಪಡಿಸಿರುವುದಾಗಿ ಶಾಸಕ ಕೆ.ಆರ್.ರಮೇಶ್ ಕುಮಾರ್ ಮಾಡಿರುವ ಆಪಾನೆಯಲಿಸತ್ಯಾಂಶವಿಲ್ಲ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ಪಟ್ಟಣದ ಜೆಡಿಎಸ್ ಕಚೇರಿ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ತಾಲ್ಲೂಕಿನ ಸೋಮಯಾಜಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳಿಗೆ ಹೆಚ್ಚು ಮತಗಳು ಬಂದಿರುವುದನ್ನು ಸಹಿಸಲಾಗದೆ, ಅಲ್ಲಿ ಏರ್ಪಡಿಸಲಾಗಿದ್ದ ಸಮಾರಂಭವೊಂದರಲ್ಲಿ ನನ್ನ ವಿರುದ್ಧ ಮಾತನಾಡಿದ್ದಾರೆ ಎಂದು ಹೇಳಿದರು.ಮತದಾರರಲ್ಲಿ ಮೌಲ್ಯ ಕುಸಿದಿದೆ ಎಂದು ಹೇಳುವುದರ […]