ಶ್ರೀನಿವಾಸಪುರ : ಪಟ್ಟಣದ ಗಫಾರ್ ಖಾನ್ ಮೊಹಲ್ಲಾದಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಚುರುಕಾಗಿ ನಡೆಯುತ್ತಿದೆ. ಸಮೀಕ್ಷಾ ಕಾರ್ಯಕ್ಕಾಗಿ ನೇಮಕಗೊಂಡಿರುವ ಸಿಬ್ಬಂದಿ ರೂಹೀ ನಾಸ್ ರವರು ಮನೆಮನೆಗೆ ತೆರಳಿ ನಾಗರಿಕರಿಂದ ಅಗತ್ಯ ಮಾಹಿತಿಯನ್ನು ಸಂಗ್ರಹಿಸುತ್ತಿದ್ದು, ಪ್ರತಿ ಪ್ರಶ್ನೆಗೆ ಸರಿಯಾದ ಉತ್ತರ ಪಡೆದು ನೋಂದಣಿ ಮಾಡುವ ಕಾರ್ಯವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿದ್ದಾರೆ. ಸಮೀಕ್ಷೆಯ ಪ್ರಗತಿ ಕುರಿತು ಮಾಹಿತಿ ನೀಡಿದ ರೂಹೀ ನಾಸ್ ರವರು, ಸಮೀಕ್ಷೆ ನಿಖರವಾಗಿ ಹಾಗೂ ಸುಗಮವಾಗಿ ನಡೆಯುತ್ತಿದೆ. ಇಂದು ಯಾವುದೇ […]
ಕೋಲಾರ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಕೋಲಾರ ಘಟಕವು ಪ್ರಸಕ್ತ ಸಾಲಿನಲ್ಲಿ ವಿವಿಧ ಯೋಜನೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಶ್ರಮ ಶಕ್ತಿ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ವೃತ್ತಿ ಪ್ರೋತ್ಸಾಹ ಯೋಜನೆ, ವಿದೇಶಿ ವ್ಯಾಸಂಗ ಸಾಲ ಯೋಜನೆ, ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮ ಪ್ರೋತ್ಸಾಹ ಯೋಜನೆ, ಸಾಂತ್ವಾನ ಯೋಜನೆ ಹಾಗೂ ವ್ಯಾಪಾರ/ಉದ್ಯಮಗಳಿಗೆ ನೇರಸಾಲ ಯೋಜನೆಗಳಲ್ಲಿ ಅಲ್ಪಸಂಖ್ಯಾತ ಸಮುದಾಯದ ಅರ್ಹರು ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು ಆನ್‌ಲೈನ್ ಮೂಲಕ www.kmdconline.karnataka.gov.in ವೆಬ್‌ಸೈಟ್‌ನಲ್ಲಿ ಅಕ್ಟೋಬರ್ 16ರೊಳಗೆ ಸಲ್ಲಿಸಬೇಕಾಗಿದೆ. ಅರ್ಜಿದಾರರು ರಾಜ್ಯದ ಖಾಯಂ […]
ಕೋಲಾರ : ಕನಿಷ್ಠ ಬೆಂಬಲ ಬೆಲೆ ಯಡಿ ರೈತರಿಂದ ರಾಗಿ ಖರೀದಿಸಲು ಅಕ್ಟೋಬರ್ 1ರಿಂದ ನೋಂದಣಿ ಪ್ರಕ್ರಿಯೆ ಶುರುವಾಗಲಿದ್ದು, ನೋಂದಣಿ ಪ್ರಕ್ರಿಯೆಗೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಮತ್ತು ತೂಕ ಮತ್ತು ಗುಣಮಟ್ಟದಲ್ಲಿ ಲೋಪ ಆಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಅವರು ಸೂಚಿಸಿದರು.ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ ರೈತರಿಂದ ರಾಗಿ ಖರೀದಿಸಲು ಪೂರ್ವ ಸಿದ್ಧತಾ ಕ್ರಮಗಳ ಮೊದಲನೆಯ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರತಿ […]
ಶ್ರೀನಿವಾಸಪುರ: ಪಟ್ಟಣದ ಪುರಸಭೆ ಕಚೇರಿಯಲ್ಲಿ ಸೋಮವಾರ ಜಿಲ್ಲಾ ಲೀಡ್ ಬ್ಯಾಂಕ್ ವತಿಯಿಂದ ಪೌರಕಾರ್ಮಿಕರಿಗಾಗಿ ವಿಮೆ ಯೋಜನೆಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ದೊರೆಯಿತು.ನಗರಾಭಿವೃದ್ಧಿ ಪ್ರಾಧಿಕಾರ ಯೋಜನೆ ನಿರ್ದೇಶಕಿ ಎಸ್. ಅಂಬಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, “ಪೌರಕಾರ್ಮಿಕರು ಕುಟುಂಬದ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಪ್ರತಿಯೊಬ್ಬರೂ ವಿಮೆ ಮಾಡಿಸಿಕೊಳ್ಳಬೇಕು. ಇದರಿಂದ ಅನಿರೀಕ್ಷಿತ ಆರ್ಥಿಕ ಸವಾಲುಗಳನ್ನು ಎದುರಿಸಲು ಸಾಧ್ಯವಾಗುತ್ತದೆ” ಎಂದು ಸಲಹೆ ನೀಡಿದರು.ಅವರು ಪುರಸಭೆ ಆವರಣದಲ್ಲಿರುವ ಪುಡ್ ಕೋರ್ಟ್ ಹಾಗೂ ಪೌರಕಾರ್ಮಿಕರ ವಿಶ್ರಾಂತಿ ಕೊಠಡಿಯನ್ನು ವೀಕ್ಷಿಸಿ, ಕಾರ್ಮಿಕರಿಗೆ ಗ್ಲೌಸ್ ಸೇರಿದಂತೆ ಅಗತ್ಯ […]
ಕೋಲಾರ : ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸಾಗಾಣಿಕೆ, ಮಾರಾಟ ಹಾಗೂ ಅವುಗಳ ಬಳಕೆಯಾಗುವುದನ್ನು ಸಂಪೂರ್ಣವಾಗಿ ನಿಯಂತ್ರಿಸಲು ಎಲ್ಲಾ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿ ಸಬೇಕೆಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಎನ್.ಸಿ.ಓ.ಆರ್.ಡಿ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಇತ್ತೀಚೆಗೆ ಜಿಲ್ಲೆಯ ಕೈಗಾರಿಕ ಪ್ರದೇಶಗಳಲ್ಲಿ ಹೆಚ್ಚು ಮಾದಕ ವಸ್ತುಗಳ ಬಳಕೆ ಮತ್ತು ಮಾರಾಟ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಮ್ಮ ಜಿಲ್ಲೆಯಲ್ಲಿರುವ ಎಲ್ಲಾ ಕೈಗಾರಿಕೆಗಳ ಮುಖ್ಯಸ್ಥರನ್ನು ಕರೆಸಿ ಸಭೆಯನ್ನು […]
ಶ್ರೀನಿವಾಸಪುರ, ಸೆಪ್ಟೆಂಬರ್ 22 : ರಾಜ್ಯದ ಅಭಿವೃದ್ಧಿಯ ಪಥದಲ್ಲಿ ಸರ್ಕಾರ ಇಡಬೇಕಾದ ಹೆಜ್ಜೆಗಳನ್ನು ಗುರುತಿಸುವಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮಹತ್ವದ ಪಾತ್ರವಹಿಸಲಿದ್ದು, ರಾಜ್ಯದ ಮುಂದಿನ ಪೀಳಿಗೆಯ ಒಳಿತಿಗಾಗಿ ಸಮೀಕ್ಷೆಯನ್ನು ಯಶಸ್ವಿಗೊಳಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ತಹಶೀಲ್ದಾರ್ ಜಿ.ಎನ್. ಸುದೀಂದ್ರ ಹೇಳಿದರು. ಪಟ್ಟಣದ ಜಾಕೀರ್ ಹುಸೇನ್ ಮೊಹಲ್ಲಾ ಬಡಾವಣೆಯಲ್ಲಿ ಸೋಮವಾರ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಹಮ್ಮಿಕೊಂಡಿದ್ದ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಗೆ ಚಾಲನೆ ನೀಡಿ ಅವರು ಮಾತನಾಡಿದರು. “ಈ ಸಮೀಕ್ಷೆಯ ಉದ್ದೇಶ ರಾಜ್ಯದ ಜನರ […]
ಶ್ರೀನಿವಾಸಪುರ : ಅತಿಸಣ್ಣ, ಸಣ್ಣ ಕುಟುಂಬಗಳನ್ನು ಗಮನದಲ್ಲಿ ಇಟ್ಟುಕೊಂಡು ಕೆಂಪುಕೋಟೆಯಲ್ಲಿ ನಡೆದ ಸಭೆಯಲ್ಲಿ ದೇಶದ ಜನತೆಗೆ ಈ ಬಾರಿ ದಸರಾ ಹಬ್ಬಕ್ಕೆ ಒಳ್ಳೇಯ ಸುದ್ದಿಯನ್ನು ಕೊಡುತ್ತೇನೆ ಎಂದು ಹೇಳಿದ್ದರು ಅವರ ಮಾತಿನಂತೆ ನಡೆದುಕೊಂಡಿದ್ದು, ಅದರಂತೆ ಅಗತ್ಯ ವಸ್ತುಗಳ ಮೇಲೆ ಜಿಎಸ್‍ಟಿ ಸುಂಕವನ್ನು ಇಳಿಸಿರುವುದು ಸ್ವಾಗತರ್ಹ ಎಂದು ಸಂಸದ ಮಲ್ಲೇಶ್‍ಬಾಬು ಬಣ್ಣಿಸಿದರು.ಪಟ್ಟಣದಲ್ಲಿನ ಮುಳಬಾಗಿಲು ವೃತ್ತದಿಂದ ಕೆಎಸ್‍ಆರ್‍ಟಿ ಬಸ್ಸ್ ನಿಲ್ದಾಣದವರೆಗೂ ಮಂಗಳವಾರ ಬಿಜೆಪಿ , ಜೆಡಿಎಸ್ ಪಕ್ಷಗಳ ಮೈತ್ರಕೂಟದಿಂದ ಹಮ್ಮಿಕೊಳ್ಳಲಾದ ಉಳಿತಾಯ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು.ಸೆ.22 ರಂದು ಅಗತ್ಯ […]
ಶ್ರೀನಿವಾಸಪುರ : ಪಟ್ಟಣವನ್ನ ಅಭಿವೃದ್ಧಿಪಡಿಸಲು ಸದಸ್ಯರ ಸಹಕಾರದೊಂದಿಗೆ ಅನೇಕ ಕಾರ್ಯಕ್ರಮಗಳನ್ನ ರೂಪಿಸಲಾಗಿದೆ ಎಂದು ಪುರಸಭೆ ಅಧ್ಯಕ್ಷ ಬಿ.ಆರ್.ಭಾಸ್ಕರ್ ಹೇಳಿದರು.ಪಟ್ಟಣದ ಪುರಸಭೆ ಕಚೇರಿಯಲ್ಲಿ ಮಂಗಳವಾರ ಪೌರಕಾರ್ಮಿಕರ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದರು.ಪುರಸಭೆ ವತಿಯಿಂದ ಪೌರಕಾರ್ಮಿಕರಿಗೆ 30 ವಸತಿಗಳನ್ನು ನಿರ್ಮಿಸಲು ಭೂಮಿ ಮಂಜೂರು ಆಗಿತ್ತು . ಆ ಜಾಗಕ್ಕೆ ಸಂಬಂದಿಸಿದಂತೆ ತಕರಾರು ಎದ್ದಿದ್ದು, ಅದನ್ನ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಇದೇ ವಾರದಲ್ಲಿ ಟೆಂಡರ್ ಕರೆದು.ಸಾಧ್ಯವಾದಷ್ಟು ಬೇಗ ಭೂಮಿ ಪೂಜೆ ನಡೆಸಲಾಗುವುದು.ಪುರಸಭೆ ಮುಖ್ಯಾಧಿಕಾರಿ ವಿ.ನಾಗರಾಜ್ ಮಾತನಾಡಿ ಪೌರಕಾರ್ಮಿಕರು ದಿನ ಬೆಳಗಾದರೆ […]
ಕೋಲಾರ : ಹಿಂದುಳಿದ ವರ್ಗಗಳ ಆಯೋಗದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಇದೇ 22 ರಿಂದ ಅಕ್ಟೋಬರ್ 7 ರವರೆಗೆ ನಡೆಯಲಿದ್ದು, ಕೋಲಾರ ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸುವ ಅಂಗವಾಗಿ ವಾಕಥಾನ್ ಹಮ್ಮಿಕೊಳ್ಳಲಾಗಿತ್ತು. ವಾಕಥಾನ್‌ಗೆ ಕೋಲಾರ ಜಿಲ್ಲಾ ಶಾಸಕರಾದ ಡಾ. ಕೊತ್ತೂರು ಜಿ.ಮಂಜುನಾಥ್ ಹಾಗೂ ಜಿಲ್ಲಾಧಿಕಾರಿ ಡಾ.ಎಂ.ಆರ್ ರವಿ ಚಾಲನೆ ನೀಡಿದರು. ನಂತರ ಮಾತನಾಡಿದ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು, ಜಿಲ್ಲೆಯಲ್ಲಿ 4 ಲಕ್ಷದ 17 ಸಾವಿರ ಮನೆಗಳಿದ್ದು, ಸಮೀಕ್ಷೆಗೆ ಈಗಾಗಲೇ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಸ್ಕಾಂ ವತಿಯಿಂದ ಮನೆಗಳಿಗೆ […]

