
ಕೋಲಾರ : ಸ್ವಾತಂತ್ರ್ಯ ದಿನದ ಅಂಗವಾಗಿ ಆ.15ರ ನಗರದ ಸರ್ ಎಂ ವಿಶ್ವೇಶ್ವರಯ್ಯ ಜಿಲ್ಲಾ ಆಟದ ಮೈದಾನದಲ್ಲಿ ಮಾನ್ಯ ನಗರಾಧಿವೃದ್ಧಿ ಮತ್ತು ನಗರ ಯೋಜನೆ ಸಚಿವರು ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ಎಸ್. ಸುರೇಶ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ಸಂದೇಶ ನೀಡಿದರು. ಸರ್ಕಾರ ಜನರಿಗೆ ನೀಡಿದ ಭರವಸೆಯ ಪಂಚ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಲಾಗಿದೆ. ಕೋಲಾರ ಜಿಲ್ಲೆಗೆ ಭರಪೂರ ಅನುದಾನ ಒದಗಿಸಲು ಶ್ರಮ ವಹಿಸಲಾಗಿದೆ. ಒಳಚರಂಡಿ ಜಾಲ, […]

ಶ್ರೀನಿವಾಸಪುರ :- ತಾಲ್ಲೂಕಿನ ಹೊದಲಿ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿದ್ದ ಗೋಪಾಲ್ ರೆಡ್ಡಿ ರಾಜೀನಾಮೆ ನೀಡಿ ತೆರವಾಗಿದಂತಹ ಸ್ಥಾನಕ್ಕೆ ಆಗಸ್ಟ್ 13ರಂದು ಚುನಾವಣೆ ನಡೆದಿದ್ದು ನೂತನ ಅಧ್ಯಕ್ಷರಾಗಿ ಮಂಜುಳಾರವರು ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ಶ್ರೀನಿವಾಸನ್ ತಿಳಿಸಿದರು ಚುನಾವಣಾಧಿಕಾರಿ ಶ್ರೀನಿವಾಸನ್ ಮಾತನಾಡಿ ಹೊದಲಿ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು 18 ಸದಸ್ಯರಿದ್ದು ಅಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆದಂತಹ ಸಂದರ್ಭದಲ್ಲಿ ಅಧ್ಯಕ್ಷರ ಸ್ಥಾನಕ್ಕೆ ಎರಡು ನಾಮಪತ್ರಗಳು ಸಲ್ಲಿಕೆಯಾಗಿದ್ದು ಮಂಜುಳಾ ಹಾಗೂ ಲಕ್ಷ್ಮೀದೇವಮ್ಮ ಎಂಬವರು ನಾಮಪತ್ರ ಸಲ್ಲಿಕೆ ಮಾಡಿದ್ದು ಚುನಾವಣಾ ಪ್ರಕ್ರಿಯೆಂತೆ ಗೌಪ್ಯ ಮತದಾನ ಮಾಡಲಾಗಿ […]

ಕೋಲಾರ,ಆ.13: ಹವೇಲಿ ಮೊಹಲ್ಲಾದ ನಿವಾಸಿ ಅಂಜದ್ ಪಾಷರನ್ನು ಬಿನ್ ಅಬ್ದುಲ್ ಬಷೀರ್ ಕರ್ನಾಟಕ ದಲಿತ ಪ್ರಜಾ ಸೇನೆ (ಅ) ಕೋಲಾರ ನಗರ ಘಟಕದ ಅಲ್ಪ ಸಂಖ್ಯಾತರ ವಿಭಾಗಕ್ಕೆ ಅಧ್ಯಕ್ಷರಾಗಿ ನೇಮಕ ಮಾಡಿ ಆದೇಶ ಪ್ರತಿಯನ್ನು ನೀಡಲಾಗಿದೆ ಎಂದು ಸಂಸ್ಥಾಪಕ ಅಧ್ಯಕ್ಷ ಮತ್ತು ಜಾಗೃತಿ ಸಮಿತಿ ಸದಸ್ಯ ಡಾ.ಎಂ.ಮುನಿರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ತಾವು ಜವಾಬ್ದಾರಿಯನ್ನು ವಹಿಸಿಕೊಂಡು ಸಂಘಟನೆಯ ನೀತಿ ನಿಯಮಗಳನ್ನು ಮೈಗೂಡಿಸಿಕೊಂಡು ನಗರದ ತಳಸಮುದಾಯಗಳ ಮತ್ತು ಶೋಷಣೆಗೆ ಒಳಪಟ್ಟ ಸಮುದಾಯಗಳ ಪರ ಹೋರಾಟಗಳನ್ನು ರೂಪಿಸುವ ಮೂಲಕ ಪ್ರಾಮಾಣಿಕವಾಗಿ ಪರಿಹಾರ ಕಂಡುಕೊಡುವ […]

ಶ್ರೀನಿವಾಸಪುರ : ಬೇರೆ ದೇಶಗಳಲ್ಲಿ ಇಂತಹ ಕೃತ್ಯಗಳು ನಡೆದರೆ ನಮ್ಮ ದೇಶದ ಬುದ್ದಿಜೀವಗಳು ಮಾತನಾಡುತ್ತಾರೆ. ಆದರೆ ದೇಶದಲ್ಲಿನ ಬುದ್ದಿಜೀವಿಗಳು ಈ ಘಟನೆಯ ಬಗ್ಗೆ ಚಕಾರವೆತ್ತದಿರುವುದು ಖಂಡನೀಯ ಎಂದು ವಿಶ್ವ ಹಿಂದು ಪರಿಷತ್ ತಾಲೂಕು ಅಧ್ಯಕ್ಷ ವೇಮಣ್ಣ ಬೇಸರ ವ್ಯಕ್ತಪಡಿಸಿದರು.ಪಟ್ಟಣದ ಇಂದಿರಾಭವನ ವೃತ್ತದಲ್ಲಿ ಸೋಮವಾರ ಹಿಂದು ಸಂಘ ಪರಿವಾರದಿಂದ ಬಾಂಗ್ಲದೇಶದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ಖಂಡಿಸಿ ಮಾನವ ಸರಪಳಿ ನಿರ್ಮಿಸಿ ಮಾತನಾಡಿದರು.ಈ ವಿಚಾರವಾಗಿ ಹಿಂದು ಯುವ ಪೀಳಿಗೆ ಜಾಗೃತರಾಗಿ ಎಚ್ಚೆತ್ತಿಕೊಳ್ಳಬೇಕಾಗಿದೆ. ಸರ್ಕಾರವು ಈ ವಿಷಯದ ಬಗ್ಗೆ ಗಂಭೀರವಾಗಿ ತಮ್ಮ […]

ಕೋಲಾರ:- ರಾಜ್ಯದಲ್ಲಿ ಸುಪ್ರೀಂಕೋರ್ಟ್ ತೀರ್ಪಿನಂತೆ ಒಳ ಮೀಸಲಾತಿಯನ್ನು ಶೀಘ್ರ ಜಾರಿಗೊಳಿಸಲು ಕಾಂಗ್ರೆಸ್ ವರಿಷ್ಠರಿಗೆ ರಾಜ್ಯ ಆಹಾರ ಸಚಿವ ಕೆಹೆಚ್.ಮುನಿಯಪ್ಪ ಮನವಿ ಮಾಡಿದರು.ಈ ಸಂಬಂಧ ದೆಹಲಿಯಲ್ಲಿ ಅವರನ್ನು ಭೇಟಿ ಮಾಡಿದ ಅವರು, ದೇಶದಲ್ಲಿ ನಡೆದ 30 ವರ್ಷಗಳ ಒಳ ಮೀಸಲಾತಿ ಹೋರಾಟಕ್ಕೆ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರು ಸೇರಿ ಏಳು ಜನ ನ್ಯಾಯಾಧೀಶರ ಒಳಗೊಂಡ ಪೀಠ ಮಹತ್ವದ ತೀರ್ಪು ನೀಡಿದ್ದು ಎಸ್ಸಿ ಎಸ್ಟಿ ಒಳಮೀಸಲಾತಿ ಜನಸಂಖ್ಯೆ ಆಧಾರದ ಮೇಲೆ ಅವರಿಗೆ ಆರ್ಥಿಕ, ಶೈಕ್ಷಣಿಕ,ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ಈ ತೀರ್ಮಾನ […]

ಕೋಲಾರ:- ಜಿಲ್ಲಾ ಕಾರ್ಯನಿರತ ಪತ್ರಕರ್ತರ ವಿವಿಧೋದ್ದೇಶ ಸಹಕಾರ ಸಂಘ ಅರ್ಜಿ ಸಲ್ಲಿಸಿದ 72 ಗಂಟೆಗಳಲ್ಲಿ ಸಾಲಸೌಲಭ್ಯ ಒದಗಿಸುವ ಶಕ್ತಿ ಹೊಂದಿರುವುದು ಸಂತಸದ ವಿಷಯವಾಗಿದ್ದು, 17 ವರ್ಷಗಳ ಸುಧೀರ್ಘ ಅವಧಿಯಲ್ಲಿ ಯಶಸ್ವಿ ಕಾರ್ಯನಿರ್ವಹಣೆ ಶ್ಲಾಘನೀಯವಾಗಿದೆ ಎಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್ ತಿಳಿಸಿದರು.ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಸಂಘದ 2024-25ನೇ ಸಾಲಿನ ಸರ್ವಸದಸ್ಯರ ಸಭೆಗೆ ಚಾಲನೆ ನೀಡಿ, ಯಶಸ್ವಿನಿ ಆರೋಗ್ಯ ವಿಮಾ ಕಾರ್ಡ್ ವಿತರಿಸಿ ಅವರು ಮಾತನಾಡುತ್ತಿದ್ದರು.ಸಹಕಾರ ಸಂಘ ಕಳೆದ ಐದು ವರ್ಷದಲ್ಲಿ ಸರಾಸರಿ ವರ್ಷಕ್ಕೆ […]

ಕೋಲಾರ,ಆ.12: ಕೋಲಾರ ಮತ್ತು ವೇಮಗಲ್ ಯೋಜನಾ ಕಛೇರಿ ವ್ಯಾಪ್ತಿಯ ಒಟ್ಟು 135 ವೃತಿಪರ ಕೋರ್ಸ್ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 2023-24ನೇ ಸಾಲಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ಮಂಜೂರಾದ ಸುಜ್ಞಾನನಿಧಿ ಶಿಷ್ಯವೇತನ ಮಂಜೂರಾತಿ ಪತ್ರವನ್ನು ವಿತರಣಾ ಕಾರ್ಯಕ್ರಮವನ್ನು ತಾಲ್ಲೂಕಿನ ಸ್ಕೌಡ್ಸ್ ಮತ್ತು ಗೈಡ್ಸ್ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಧರ್ಮಸ್ಥಳದ ಪೂಜ್ಯರ ಮಾರ್ಗದರ್ಶನದಲ್ಲಿ ಇಡೀ ರಾಜ್ಯದಾದ್ಯಂತ ನೂರಾರು ಸಮಾಜಮುಖಿ ಕಾರ್ಯಕ್ರಮಗಳು ನಡೆಯುತ್ತಿದ್ದು, ಇಂತಹ ಕಾರ್ಯಕ್ರಮದಲ್ಲಿ ಭಾಗವಹಿಸುವುದು […]

ಕೋಲಾರ,ಆ.12: ಜಿಲ್ಲೆಯ ವಸತಿ ಶಾಲೆಗಳಲ್ಲಿ ಒಂದಲ್ಲ ಒಂದು ರೀತಿಯ ಘಟನೆಗಳು ವಿದ್ಯಾರ್ಥಿಗಳ ಮೇಲೆ ನಡೆಯುತ್ತಲೇ ಇದ್ದು, ಜಿಲ್ಲಾಡಳಿತ ಮಾತ್ರ ಯಾವುದೇ ಕಟ್ಟುನಿಟ್ಟಿನ ಕ್ರಮವಿಲ್ಲದೆ ಇರುವುದು ಇಂತಹ ಘಟನೆಗಳು ಮರುಕಳಿಸಲು ಕಾರಣವಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಸೂಲಿಕುಂಟೆ ರಮೇಶ್ ದೂರಿದ್ದಾರೆ.ಪತ್ರಿಕಾ ಹೇಳಿಕೆ ನೀಡಿರುವ ಅವರು, ಇತ್ತೀಚಿನ ದಿನಗಳಲ್ಲಿ ವಸತಿ ಶಾಲೆಯ ವಿದ್ಯಾರ್ಥಿಗಳ ವಿಚಾರದಲ್ಲಿ ಸದ್ದು ಮಾಡುತ್ತಿದೆ. ಕಳೆದ ಕೆಲ ತಿಂಗಳ ಹಿಂದೆ ಜಿಲ್ಲೆಯ ಮಾಲೂರು ತಾಲೂಕಿನ ಟೇಕಲ್ ಹೋಬಳಿಯ ಯಲುವಹಳ್ಳಿ ಗ್ರಾಮದ […]

ಕೋಲಾರ, ಆ.12. ಡಿ.ಸಿ.ಸಿ ಬ್ಯಾಂಕ್ ಭ್ರಷ್ಟಾಚಾರವನ್ನು ಸಿ.ಬಿ.ಐ ಗೆ ಒಪ್ಪಿಸಿ ಬ್ಯಾಂಕಿನ ಚುನಾವಣೆ ನಡೆಸಿ ಮಹಿಳಾ ಸಂಘಗಳಿಗೆ ರೈತರಿಗೆ ಸಾಲವನ್ನು ವಿತರಣೆ ಮಾಡಿ ಖಾಸಗಿ ಪೈನಾನ್ಸ್ಗಳಿಂದ ಗ್ರಾಮೀಣ ಭಾಗದಲ್ಲಿ ಮಹಿಳೆಯರನ್ನು ಮತ್ತು ರೈತರನ್ನು ರಕ್ಷಣೆ ಮಾಡಿ ಲಕ್ಷಾಂತರ ರೈತರ ಜೀವನಾಡಿ ಆಗಿರುವ ಬ್ಯಾಂಕ್ನ್ನು ಉಳಿಸಬೇಕೆಂದು ರೈತ ಸಂಘದಿಂದ ಬ್ಯಾಂಕ್ ಮುಂದೆ ತಲೆ ಮೇಲೆ ಕಲ್ಲು ಹೊತ್ತುಕೊಂಡು ಹೋರಾಟ ಮಾಡಿ ಉಪ ವಿಭಾಗಧಿಕಾರಿಗಳ ಮುಖಾಂತರ ಸಹಕಾರ ಸಚಿವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.ಮಾನ್ಯ ಉಚ್ಚ ನ್ಯಾಯಾಲಯವೂ ಕೋಲಾರ ಚಿಕ್ಕಬಳ್ಳಾಪುರ ಸಹಕಾರ […]