
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ : ವಿದ್ಯಾರ್ಥಿನಿಯರು ಅವಿರತ ಪ್ರಯತ್ನದಿಂದ ನಿಗದಿತ ಗುರಿ ತಲುಪಬೇಕು ಎಂದು ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಆರ್.ಮಾಧವಿ ಹೇಳಿದರು. ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿನಿರ ಸಂಘದ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಕಳೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದ ವಿದ್ಯಾರ್ಥಿನಿಯರನ್ನು ಸನ್ಮಾನಿಸಿ ಮಾತನಾಡಿ, ವಿದ್ಯಾರ್ಥಿನಿಯರು ಓದುವ ಅವಧಿಯಲ್ಲಿ ಸುಖಕ್ಕೆ ಹಾತೊರೆಯದೆ ಶ್ರಮವಹಿಸಿ ಅಭ್ಯಾಸ ಮಾಡಬೇಕು ಎಂದು ಹೇಳಿದರು. […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ಹಾಲು ಉತ್ಪಾದಕರು ಗುಣಮಟ್ಟದ ಹಾಲು ಉತ್ಪಾದನೆ ಮಾಡುವುದರ ಮೂಲಕ ಹೆಚ್ಚಿನ ಆರ್ಥಿಕ ಲಾಭ ಪಡೆಯಬೇಕು ಎಂದು ಕೋಚಿಮುಲ್ ನಿರ್ದೇಶಕ ಎನ್.ಹನುಮೇಶ್ ಹೇಳಿದರು. ತಾಲ್ಲೂಕಿನ ಲಕ್ಷ್ಮೀಪುರ ಗ್ರಾಮದಲ್ಲಿ ಶುಕ್ರವಾರ ಏರ್ಪಡಿಸಿದ್ದ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿ, ಸ್ಥಳೀಯ ಹಾಲು ಉತ್ಪಾದಕರ ಸಹಕಾರ ಸಂಘ ಬಿಎಂಸಿ ಕೇಂದ್ರವಾಗಿದ್ದು, ಪ್ರತಿ ದಿನ 2500 ಲೀಟರ್ ಹಾಲು ಶೇಖರಣೆ ಮಾಡುತ್ತಿದೆ ಎಂದು ಹೇಳಿದರು. ಕೋಚಿಮುಲ್ ಉಪ ಕಚೇರಿಯ ಉಪ ವ್ಯವಸ್ಥಾಪಕ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ದೆಹಲಿಯಲ್ಲಿ ನಡೆದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರ ಕಚೇರಿ ಪೂಜಾ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯ ಡಾ.ವೈ.ಎ.ನಾರಾಯಣಸ್ವಾಮಿ ಭಾಗವಹಿಸಿದ್ದು, ಹೂಗುಚ್ಚ ನೀಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿಸೂರ್ಯ ಮತ್ತಿತರರು ಉಪಸ್ಥಿತರಿದ್ದರು.

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರೈತ ಹಾಗೂ ಕಾರ್ಮಿಕ ವಿರೋಧಿ ನೀತಿ ವಿರುದ್ಧ ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ನೇತೃತ್ವದಲ್ಲಿ ಗುರುವಾರ ನೀಡಲಾಗಿದ್ದ ಬಂದ್ ಕರೆ ಯಶಸ್ವಿಯಾಯಿತು. ಪಟ್ಟಣದಲ್ಲಿ ಅಂಗಡಿ ಮುಂಗಟ್ಟು ಮುಚ್ಚಲ್ಪಟ್ಟಿತ್ತು. ವಾಹನಗಳು ರಸ್ತೆಗೆ ಇಳಿಯಲಿಲ್ಲ. ಸತತವಾಗಿ ಮಳೆ ಸುರಿಯುತ್ತಿದ್ದ ಪರಿಣಾಮವಾಗಿ ಜನ ಸಂದಣಿ ಸಹಜವಾಗಿಯೆ ಕಡಿಮೆ ಇತ್ತು. ಸರ್ಕಾರಿ ಕಚೇರಿಗಳು ತೆರೆದಿದ್ದವಾದರೂ ಜನರೇ ಇರಲಿಲ್ಲ. ಪಟ್ಟಣದ ಎಂಜಿ ರಸ್ತೆಯಲ್ಲಿ ವಿವಿಧ ಕಾರ್ಮಿಕ ಹಾಗೂ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ : ನಿವಾರ್ ಚಂಡಮಾರುತವು ಜಿಲ್ಲೆಯಾದ್ಯಂತ ಮುಂಬರುವ 3 ದಿನಗಳ ಕಾಲ ಬಿರುಗಾಳಿಯಿಂದ ಕೂಡಿದ ಅತಿ ಹೆಚ್ಚಿನ ಪ್ರಮಾಣದ ಮಳೆಯಾಗುವುದಾಗಿ ಭಾರತದ ಹವಮಾನ ಇಲಾಖೆ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಘಟಕದಿಂದ ತಿಳಿಸಿದ್ದು , ಈ ಸಂಬಂಧ ಜಿಲ್ಲೆಯಾದ್ಯಾಂತ ಮಳೆಯಿಂದ ಸಾರ್ವಜನಿಕ ಆಸ್ತಿ ಹಾಗೂ ಮಾನವ , ಜಾನುವಾರುಗಳ ಜೀವ ಹಾನಿಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಪ್ರತಿದಿನ ಹಾನಿಯ ಬಗ್ಗೆ ವರದಿಯನ್ನು ಜಿಲ್ಲಾಧಿಕಾರಿಗಳ ಕಛೇರಿಗೆ ಸಲ್ಲಿಸಬೇಕು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಬದುಕುವ ಆಸೆಯಿಂದ ಬ್ಯಾಂಕಿಗೆ ಬರುವ ಪ್ರತಿಬಡವನಿಗೂ ಸಾಲ ನೀಡುವಂತಾಗಲು ಡಿಸಿಸಿ ಬ್ಯಾಂಕ್ಅನ್ನು ಸದೃಢಗೊಳಿಸಿ, ರೈತರನ್ನು ನಂಬದೇ ಕಳ್ಳರಿಗೆ ಸಾಲ ನೀಡುವ ವಾಣಿಜ್ಯ ಬ್ಯಾಂಕುಗಳ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬೇಕು ಎಂದು ಮಾಜಿ ವಿಧಾನ ಸಭಾಧ್ಯಕ್ಷ ಹಾಗೂ ಶಾಸಕ ಕೆ.ಆರ್.ರಮೇಶ್ಕುಮಾರ್ ಆಶಿಸಿದರು.ಬುಧವಾರ ತಾಲ್ಲೂಕಿನ ಸುಗಟೂರು ಎಸ್ಎಫ್ಸಿಎಸ್ ಆಶ್ರಯದಲ್ಲಿ ಡಿಸಿಸಿ ಬ್ಯಾಂಕ್ ವತಿಯಿಂದ ಮಹಿಳಾ ಸ್ವಸಹಾಯ ಸಂಘಗಳಿಗೆ 1.74 ಕೋಟಿ ರೂ ಸಾಲ ವಿತರಿಸಿ, 32 ಕೋಟಿ ವಹಿವಾಟು ನಡೆಸುತ್ತಿರುವ ಸೊಸೈಟಿ ಮುಂದಿನ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ : ಕೋವಿಡ್ ಸಂದರ್ಭದಲ್ಲಿ ಗಮನಾರ್ಹ ಸೇವೆ ಸಲ್ಲಿಸಿರುವ ಜಿಲ್ಲಾಸ್ಪತ್ರೆಗೆ ಖನಿಜ ಪ್ರತಿಷ್ಠಾನ ನಿಧಿಗೆ ಸಂಗ್ರಹವಾಗಿರುವ ಮೊತ್ತದಲ್ಲಿ ಉನ್ನತ ಮಟ್ಟದಲ್ಲಿ ಮೂಲಭೂತ ಸೌಲಭ್ಯವನ್ನು ಕಲ್ಪಿಸಲಾಗುವುದು ಎಂದು ಅಬಕಾರಿ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್ ನಾಗೇಶ್ ಅವರು ತಿಳಿಸಿದರು . ಇಂದು ಜಿಲ್ಲಾಧಿಕಾರಿಗಳ ಕಛೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ , ಕೋಲಾರ ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿಗೆ ಸಂಗ್ರಹವಾಗಿರುವ ಮೊತ್ತವನ್ನು ಗಣಿ ಬಾದಿತ ಗ್ರಾಮಗಳಲ್ಲಿ ವಿನಿಯೋಗಿಸುವ ಸಭೆಯ ಅಧ್ಯಕ್ಷತೆ ವಹಿಸಿ ಅವರು […]

ವರದಿ : ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ : ತಾಲ್ಲೂಕಿನ ಗೌನಿಪಲ್ಲಿ ಗ್ರಾಮದ ದೊಡ್ಡ ಪ್ರಮಾಣದ ಪ್ರಾಥಮಿಕ ಕೃಷಿ ಪತ್ತಿನ ಸೇವಾ ಸಹಕಾರ ಸಂಘದ ಅಧ್ಯಕ್ಷರಾಗಿ ಶಂಕರ್ ಪ್ರಸಾದ್, ಉಪಾಧ್ಯಕ್ಷೆಯಾಗಿ ನಾಸಿರಾ ವೈ.ರಿಯಾಜ್ ಪಾಷ ಬುಧವಾರ ಅವಿರೋಧ ಆಯ್ಕೆಯಾದರು. ಆಯ್ಕೆ ಬಳಿಕ ಸಂಘದ ಅಧ್ಯಕ್ಷ ಶಂಕರ್ ಪ್ರಸಾದ್ ಮಾತನಾಡಿ, ‘ಸಹಕಾರ ಸಂಘ, ಹಾಗೂ ಫಲಾನುಭವಿಗಳ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಬಡ್ಡಿರಹಿತ ಸಾಲ ವ್ಯವಸ್ಥೆಯನ್ನು ಮುಂದುವರಿಸಿಕೊಂಡು ಹೋಗುತ್ತೇನೆ. ಸಹಕಾರ ಸಂಘದ ವ್ಯಾಪ್ತಿಗೆ ಬರುವ ಎಲ್ಲ ಗ್ರಾಮಗಳ ಫಲಾನುಭವಿಗಳಿಗೆ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಹಾಲು ಒಕ್ಕೂಟದ ವ್ಯಾಪ್ತಿಯ ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಹಾಕುವುದರ ಮೂಲಕ ವಿವಿಧ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದು ಕೋಚಿಮುಲ್ ನಿರ್ದೇಶಕ ಎನ್.ಹನುಮೇಶ್ ಹೇಳಿದರು. ತಾಲ್ಲೂಕಿನ ಮರಿಪಲ್ಲಿ ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಸಹಕಾರ ಸಂಘವನ್ನು ಉದ್ಘಾಟಿಸಿ ಮಾತನಾಡಿ, ಕೆಲವು ಹಾಲು ಉತ್ಪಾದಕರು ತಾವು ಉತ್ಪಾದಿಸಿದ ಹಾಲನ್ನು ಖಾಸಗಿ ಡೇರಿಗಳಿಗೆ ಹಾಕುವುದುದರ ಮೂಲಕ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ. ಸಹಕಾರ ಸಂಘದ ಆಡಳಿತ ಮಂಡಳಿ ಸದಸ್ಯರು ಹಾಗೂ ಸಿಬ್ಬಂದಿ ಹಾಲು ಉತ್ಪಾದಕರಿಗೆ […]