ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಜಿಲ್ಲೆಯ 117 ಪರೀಕ್ಷಾ ಕೇಂದ್ರಗಳಲ್ಲಿ ಇಂದು ನಡೆದ ಎಸ್ಸೆಸ್ಸೆಲ್ಸಿ ಗಣಿತ,ವಿಜ್ಞಾನ,ಸಮಾಜವಿಜ್ಞಾನ ಪರೀಕ್ಷೆಗೆ ನೋಂದಾಯಿಸಿದ್ದ ಒಟ್ಟು 20472 ವಿದ್ಯಾರ್ಥಿಗಳ ಪೈಕಿ ಕೇವಲ 70 ಮಂದಿ ಗೈರಾಗಿದ್ದಾರೆ ಮತ್ತು ಅನಾರೋಗ್ಯದ ಕಾರಣದಿಂದ 3 ವಿದ್ಯಾರ್ಥಿಗಳು ವಿಶೇಷ ಕೊಠಡಿಯಲ್ಲಿ ಪರೀಕ್ಷೆ ಬರೆದಿದ್ದಾರೆ ಎಂದು ಪರೀಕ್ಷಾ ನೋಡಲ್ ಅಧಿಕಾರಿ ಎ.ಎನ್.ನಾಗೇಂದ್ರಪ್ರಸಾದ್ ತಿಳಿಸಿದ್ದಾರೆ.ಇಂದು ಪರೀಕ್ಷೆಗೆ ನೊಂದಾಯಿಸಿದ್ದ ಒಟ್ಟು 20472 ಮಂದಿ ಪೈಕಿ 20402 ಮಂದಿ ಹಾಜರಾಗಿದ್ದು, ಹಿಂದಿನ ಎಲ್ಲಾ ಪರೀಕ್ಷೆಗಳಿಗಿಂತ ಗೈರು ಹಾಜರಿ ಪ್ರಮಾಣ ಅತ್ಯಂತ ಕಡಿಮೆಯೆಂದು […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಎಸ್ಸೆಸ್ಸೆಲ್ಸಿ ಪರೀಕೆ ನಡೆಸಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಉಮಾದೇವಿ ಹೇಳಿದರು.ಪಟ್ಟಣದ ಬಿಇಒ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಲ್ಲೂಕಿನ 19 ಪರೀಕ್ಷಾ ಕೇಂದ್ರಗಳಲ್ಲಿ 2772 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ತಾಲ್ಲೂಕಿಗೆ ವಲಸೆ ಬಂದಿರುವ 12 ವಿದ್ಯಾರ್ಥಿಗಳು ಇಲ್ಲಿ ಪರೀಕ್ಷೆ ತೆಗೆದುಕೊಂಡಿದ್ದಾರೆ. ಎಲ್ಲ ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಸ್ ಮಾಡಲಾಗಿದೆ. ಕೋವಿಡ್ ನಿರೋಧಕ ಲಸಿಕೆ ಹಾಕಿಸಿಕೊಂಡಿರುವ ಸಿಬ್ಬಂದಿಯನ್ನು ಮಾತ್ರ ಪರೀಕ್ಷಾ ಕಾರ್ಯಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.ವಿದ್ಯಾರ್ಥಿಗಳಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೃಷಿ ವಿಜ್ಞಾನ ಕೇಂದ್ರ ಕೋಲಾರ ಹಾಗೂ ತೋಟಗಾರಿಕೆ ಇಲಾಖೆ ಕೋಲಾರ ಇವರ ಸಂಯುಕ್ತಾಶ್ರಯದಲ್ಲಿ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಮತ್ತು ನರ್ಸರಿ ಉತ್ಪಾದಕರಿಗೆ “ಆಲೂಗಡ್ಡೆ ಸಸಿಗಳಿಂದ ಬೀಜೋತ್ಪಾದನೆ” ಎಂಬ ತರಬೇತಿ ಕಾರ್ಯಕ್ರಮವನ್ನು ದಿನಾಂಕ 17.7.2021 ರಂದು ಕೃಷಿ ವಿಜ್ಞಾನ ಕೇಂದ್ರ ಕೋಲಾರದಲ್ಲಿ ಹಮ್ಮಿಕೊಳ್ಳಲಾಗಿತ್ತು.ಡಾ.ಜ್ಯೋತಿ ಕಟ್ಟೆಗೌಡರ, ವಿಜ್ಞಾನಿ (ತೋಟಗಾರಿಕೆ), ಕೃಷಿ ವಿಜ್ಞಾನ ಕೇಂದ್ರ ಇವರು ತಮ್ಮ ಪ್ರಾಸ್ತಾವಿಕ ನುಡಿಯಲ್ಲಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಲ್ಲಿ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟ ಹಾಗೂ ಅಂತರಾಷ್ಟ್ರೀಯ ಆಲೂಗಡ್ಡೆ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಚೆಕ್ ಪಡೆದುಕೊಂಡಿರುವ ಹಾಲು ಉತ್ಪಾದಕರು ಮತ್ತೆ ಕಡ್ಡಾಯವಾಗಿ ರಾಸುಗಳನ್ನು ಖರೀದಿಸಬೇಕು ಎಂದು ಕೋಚಿಮುಲ್ ನಿರ್ದೇಶಕ ಎನ್.ಹನುಮೇಶ್ ಹೇಳಿದರು.ಪಟ್ಟಣದ ಕೋಚಿಮುಲ್ ಶಿಬಿರ ಕಚೇರಿಯಲ್ಲಿ ಗುರುವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಹಾಲು ಉತ್ಪಾದಕರಿಗೆ ಮೃತ ರಾಸುಗಳ ವಿಮಾ ಪರಿಹಾರ ಚೆಕ್ ವಿತರಿಸಿ ಮಾತನಾಡಿ, ಬೇರೆ ಬೇರೆ ಕಾರಣಗಳಿಂದ ಹಸು ಕಳೆದುಕೊಂಡ 14 ಹಾಲು ಉತ್ಪಾದಕರಿಗೆ ರೂ.7.90 ಲಕ್ಷ ವಿಮಾ ಪರಿಹಾರ ನೀಡಲಾಗಿದೆ. ಕರ್ನಾಟಕ ಹಾಲು ಮಹಾ ಮಂಡಳಿ ವತಿಯಿಂದ ಕಟ್ಟಡ ನಿರ್ಮಾಣ ಅನುದಾನವಾಗಿ ಶೀಗಲಪಾಳ್ಯ, […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಪತ್ರಕರ್ತರು ತಮ್ಮ ವೃತ್ತಿ ಘನತೆ ಕಾಪಾಡಿಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಪತ್ರಕರ್ತರೆಂದು ಹೇಳಿಕೊಳ್ಳಲು ಅಂಜಿಕೆ ಪಡುವ ಪರಿಸ್ಥಿತಿ ನಿರ್ಮಾಣವಾದೀತು, ದಂಧೆ ಮಾಡುವಂತಿದ್ದರೆ ಬೇರೆ ಕ್ಷೇತ್ರ ಆಯ್ಕೆ ಮಾಡಿಕೊಳ್ಳಿ ಎಂದು ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಎಚ್ಚರಿಸಿದರು.ಪತ್ರಕರ್ತರ ಭವನದಲ್ಲಿ ನಡೆದ ಪತ್ರಿಕಾದಿನಾಚರಣೆ,ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಕೋವಿಡ್‍ನಿಂದ ಮೃತಪಟ್ಟ ಪತ್ರಕರ್ತರ ಕುಟುಂಬಗಳಿಗೆ ಸಂಘದಿಂದ 10 ಸಾವಿರ ರೂ ಚೆಕ್ ವಿತರಿಸಿ ಮಾತನಾಡಿದ ಅವರು, ಕಾಡಿಸಿ,ಪೀಡಿಸುವ ಮತ್ತು ದಂಧೆ ನಡೆಸುವವರು ಈ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ,ಜು.15:ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು 21ನೇ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ.ಜುಲೈ 16 ರಂದು ಶುಕ್ರವಾರ ನಗರದ ಪತ್ರಕರ್ತರ ಭವನದಲ್ಲಿ ಬೆಳಗ್ಗೆ 9-30 ಗಂಟೆಗೆ ನಡೆಯುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅಧ್ಯಕ್ಷ ವಿ.ಮುನಿರಾಜು ಮತ್ತು ಪ್ರಧಾನ ಕಾರ್ಯದರ್ಶಿ ಎಸ್.ಕೆ.ಚಂದ್ರಶೇಖರ್, ಖಜಾಂಚಿ ಎ.ಜಿ ಸುರೇಶ್‍ಕುಮಾರ್ ತಿಳಿಸಿದ್ದಾರೆ.ಸಂಘದ ವತಿಯಿಂದ ನೀಡಲಾಗುವ ಪ್ರಶಸ್ತಿಗಳು:ಕೆ.ಆರ್.ಕೃಷ್ಣಸ್ವಾಮಿ ಅವರ ನೆನಪಿನಲ್ಲಿ: ಟೇಕಲ್‍ನ ಕೋಲಾರ ಪತ್ರಿಕೆ ಹೋಬಳಿ ವರದಿಗಾರ ಲಕ್ಷ್ಮೀಶ, ಜಿ.ನಾರಾಯಣಸ್ವಾಮಿ ಅವರ ನೆನಪಿನಲ್ಲಿ: ಶ್ರೀನಿವಾಸಪುರದ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ರಾಜ್ಯದ ಕೈಗಾರಿಕೆಗಳಲ್ಲಿ 10 ಸಾವಿರ ಕೋಟಿ ರೂಪಾಯಿಗಳ ಸಿಎಸ್‍ಆರ್ ನಿಧಿ ಲಭ್ಯವಿದ್ದು, ಇದನ್ನು ಸದ್ಬಳಕೆ ಮಾಡಿಕೊಂಡು ಸಮುದಾಯ ಸೇವೆ ಮಾಡಲು ರೋಟರಿ ಪದಾಧಿಕಾರಿಗಳು ಮುಂದಾಗಬೇಕೆಂದು ರೋಟರಿ ನಿಯೋಜಿತ ರಾಜ್ಯಪಾಲ ಉದಯಕುಮಾರ್ ಕೆ.ಭಾಸ್ಕರ್ ಹೇಳಿದರು.ನಗರದ ಅಂತರಗಂಗೆ ಬೆಟ್ಟದ ರೆಸಾರ್ಟ್ ಸಭಾಂಗಣದಲ್ಲಿ ಗುರುವಾರ ಸಂಜೆ ಕೋಲಾರ ರೋಟರಿ ಸೆಂಟ್ರಲ್‍ನ ನೂತನ ಅಧ್ಯಕ್ಷರಾಗಿ ಸಿಎಂಆರ್ ಶ್ರೀನಾಥ್ ಪದಗ್ರಹಣ ಸಮಾರಂಭದ ಅಧ್ಯಕ್ಷತೆವಹಿಸಿ ಅವರು ಮಾತನಾಡುತ್ತಿದ್ದರು.ಕೈಗಾರಿಕೆಗಳ ಸಿಎಸ್‍ಆರ್ ನಿಧಿಯನ್ನು ಸದ್ಬಳಕೆ ಮಾಡಿಕೊಳ್ಳುವ ಸಲುವಾಗಿ ಪ್ರತಿ ರೋಟರಿ ಘಟಕವು […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಜಿಲ್ಲಾದ್ಯಂತ ಧಾರಾಕಾರ ಮಳೆ: ಒಂದೇ ವಾರದಲ್ಲಿ ದಾಖಲೆಯಾಯಿತು 44.3 ಮಿಮೀ ಮಳೆಜಿಲ್ಲೆಯಾದ್ಯಂತ ವಾಡಿಕೆಗಿಂತ ಹೆಚ್ಚಿನ ಮಳೆ ಸುರಿದಿದ್ದು, ಇನ್ನೂ ಮುಂದುವರೆದಿದೆ. ನಿರಂತರ ಬಿಟ್ಟೂ ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಕೆರೆ, ಕುಂಟೆಗಳು, ಹಳ್ಳಗಳಲ್ಲಿ ನೀರು ಹರಿಯುತ್ತಿದೆ. ಇಡೀ ವಾತಾವರಣ ಹಚ್ಚ ಹಸಿರಿನಿಂದ ಕೂಡಿದ್ದು, ಮಲೆನಾಡನ್ನೂ ಮೀರಿಸುವಂತಹ ಕಣ್ಮನ ಸೆಳೆಯುವ ವಾತಾವರಣ ನಿರ್ಮಾಣವಾಗಿದೆ.2021ರ ಜನವರಿ 1 ರಿಂದ ಜುಲೈ 15 ರವರೆಗೆ ವಾಡಿಕೆಯ 214.2 ಮಿಮೀ ಮಳೆಯ ಬದಲು 340.1 ಮಿಮೀ ಮಳೆ ಸುರಿದಿದ್ದು, […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ : ಪುರಸಭೆ ಮುಖ್ಯಾಧಿಕಾರಿ ಕೊಳೆತು ನಾರುತ್ತಿರುವ ಮಾವಿನ ಮಂಡಿ ಪ್ರದೇಶದ ಸ್ವಚ್ಛತೆಗೆ ಅಗತ್ಯ ಗಮನ ನೀಡಬೇಕು . ಅಲ್ಲಿ ಉಂಟಾಗಿರುವ ಅನಾರೋಗ್ಯ ಪರಿಸರವನ್ನು ಸರಿಪಡಿಸಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಅವರು ಸೂಚಿಸಿದರು . ಪಟ್ಟಣದಲ್ಲಿ ಬುಧವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಸರ್ಕಾರ ಹಾಗೂ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ , ತಾಲ್ಲೂಕಿನ ಕಾರ್ಮಿಕರಿಗೆ ದಿನಸಿ ಹಾಗೂ ಸುರಕ್ಷಾ ಕಿಟ್ ವಿತರಿಸಿ ಮಾತನಾಡಿ , ಕೋವಿಡ್ […]

