
ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕಿನ ಯಯ್ಯಪ್ಪಲ್ಲಿ ಗ್ರಾಮದಲ್ಲಿ ಶುಕ್ರವಾರ ಗ್ರಾಮ ದೇವತೆಗಳಾದ ಗಂಗಮ್ಮ ಹಾಗೂ ಪುಲೇಕಮ್ಮ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ ಏರ್ಪಡಿಸಿಲಾಗಿತ್ತು. ರಾಯಲ್ಪಾಡಿನ ವೆಲ್ಲಾಲ ಸತ್ಯನಾರಾಯಣ ಶಾಸ್ತ್ರಿ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿಗಳನ್ನು ಪೂರೈಸಲಾಯಿತು. ಶಾಸಕ ಕೆ.ಆರ್.ರಮೇಶ್ ಕುಮಾರ್, ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಕಾರ್ಯಕ್ರದಲ್ಲಿ ಭಾಗವಹಿಸಿದ್ದರು. ಸೇವಾಕರ್ತರಾದ ಬಿ.ಎನ್.ನಾರಾಯಣಸ್ವಾಮಿ, ಡಿಷ್ ಚಂದ್ರಶೇಖರ ರೆಡ್ಡಿ, ಕೃಷ್ಣಾರೆಡ್ಡಿ, ಮುನಿರೆಡ್ಡಿ, ಜಯರಾಮರೆಡ್ಡಿ, ಪ್ರಕಾಶ್, ಬಿ.ಸಿ.ನಾಗೇಶ್, ವರದರೆಡ್ಡಿ, ಕಿರಣ್, ಮುರಳಿ, ಸೋಮಶೇಖರರೆಡ್ಡಿ, ಮಂಜುನಾಥರೆಡ್ಡಿ ಇದ್ದರು.

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ಸಾರ್ವಜನಿಕರು ಅದಾಲತ್ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸತ್ಯಭಾಮ ಹೇಳಿದರು. ಪಟ್ಟಣದ ಸರ್ಕಾರಿ ನೌಕರರ ಭವನದ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಪಿಂಚಣಿ ಮತ್ತು ಕಂದಾಯ ಅದಾಲತ್ ಕಾರ್ಯಕ್ರಮದಲ್ಲಿ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಮಂಜೂರಾತಿ ಪತ್ರಗಳನ್ನು ವಿತರಿಸಿ ಮಾತನಾಡಿ, ಹೋಬಳಿ ಮಟ್ಟದಲ್ಲಿ ಅದಾಲತ್ ನಡೆಸಿ ಮಂಜೂರಾತಿ ಪತ್ರ ವಿತರಿಸುತ್ತಿರುವುದರಿಂದ ಫಲಾನುಭವಿಗಳಿಗೆ ಹೆಚ್ಚಿನ ಅನುಕೂಲವಾಗಿದೆ ಎಂದು ಹೇಳಿದರು.ಕೊರೊನಾ ಬಗ್ಗೆ ಹಾಗೂ ಸಿಬ್ಬಂದಿಯ ಕಾರ್ಯನಿರ್ವಹಣೆ ಕುರಿತು ಹಗುರವಾಗಿ ಮಾತನಾಡುವುದು ಸರಿಯಲ್ಲ. ಸಮಸ್ಯೆ ಗಂಭೀರವಾಗಿದೆ ಎಂಬುದನ್ನು […]

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ಡಿಸಿಸಿ ಬ್ಯಾಂಕ್ ಬಡ್ಡಿ ರಹಿತಿ ಸಾಲದ ಮೊತ್ತವನ್ನು ರೂ.50 ಸಾವಿರದಿಂದ 1 ಲಕ್ಷಕ್ಕೆ ಹೆಚ್ಚಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು. ಪಟ್ಟಣದ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಡಿಸಿಸಿ ಬ್ಯಾಂಕ್ ವತಿಯಿಂದ ಗುರುವಾರ ಏರ್ಪಡಿಸಿದ್ದ ಸಾಲ ವಿತರಣಾ ಸಮಾರಂಭದಲ್ಲಿ ಸ್ತ್ರೀ ಶಕ್ತಿ ಸಂಘದ ಸದಸ್ಯರಿಗೆ ಸಾಲದ ಹಣದ ಚೆಕ್ ವಿತರಿಸಿ ಮಾತನಾಡಿ, ಜಾತಿ, ಮತ ಹಾಗೂ ಪಕ್ಷ ಭೇದವಿಲ್ಲದೆ ಅರ್ಹ ಫಲಾನುಭವಿಗಳಿಗೆ ಸಾಲ ಸೌಲಭ್ಯ ಕಲ್ಪಿಸಲಾಗಿದೆ. ಈವರಿಗೆ 40 […]

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ: ಜಡಿ ಮಳೆಯಿಂದ ಟೊಮೆಟೊ ಬೆಳೆಗೆ ಬಾಧಿಸುತ್ತಿರುವ ಅಂಗಮಾರಿ, ಚುಕ್ಕೆ ರೋಗಕ್ಕೆ ಸೂಕ್ತ ಔಷಧಿ ನೀಡಿ, ಈಗಾಗಲೇ ನಷ್ಟವಾಗಿರುವ ಬೆಳೆಗೆ ಪ್ರತಿ ಎಕರೆಗೆ 1 ಲಕ್ಷರೂ ಪರಿಹಾರ ನೀಡಬೇಕೆಂದು ಒತ್ತಾಯಿಸಿ ರೈತಸಂಘದಿಂದ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು.ಮನವಿ ಸಲ್ಲಿಸಿ ಮಾತನಾಡಿದ ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಜಿಲ್ಲಾದ್ಯಂತ ಸಾವಿರಾರು ಹೆಕ್ಟೇರ್‍ನಲ್ಲಿ ಟೊಮೆಟೊ ಬೆಳೆಯನ್ನು ಉತ್ತಮವಾಗಿ ಬೆಳೆಯಲಾಗಿದೆ. ಆದರೆ ಇತ್ತೀಚೆಗೆ ಸುರಿಯುತ್ತಿರುವ ಜಡಿ ಮಳೆಯಿಂದಾಗಿ ಅಂಗಮಾರಿ ಮತ್ತು ಚುಕ್ಕೆ ರೋಗಕ್ಕೆ […]

JANANUDI.COM NETWORK ಕೋಲಾರ: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯ ಮರು ಮೌಲ್ಯಮಾಪನದ ನಂತರ ಜಿಲ್ಲೆಯಲ್ಲಿ ಶೇ.100 ಸಾಧನೆಯ ಶಾಲೆಗಳ ಸಂಖ್ಯೆ 113 ರಿಂದ 135ಕ್ಕೇರಿದೆ ಮತ್ತು ಪೂರಕ ಪರೀಕ್ಷೆಯಲ್ಲೂ ಶೇ.76.40 ಫಲಿತಾಂಶ ಬಂದಿದೆ ಎಂದು ಡಿಡಿಪಿಐ ಕೆ.ಎಂ.ಜಯರಾಮರೆಡ್ಡಿ ತಿಳಿಸಿದರು.ಈ ಸಂಬಂಧ ಮಾಹಿತಿ ನೀಡಿದ ಅವರು, ಮರು ಮೌಲ್ಯಮಾಪನದ ನಂತರ ರಾಜ್ಯದಲ್ಲೇ 6ನೇ ಸ್ಥಾನ ಪಡೆದಿದ್ದ ಜಿಲ್ಲೆಯ ಒಟ್ಟಾರೆ ಫಲಿತಾಂಶವೂ ಶೇ.1 ರಷ್ಟು ಹೆಚ್ಚಳವಾಗಿದೆ, ಜತೆಗೆ ನಗರದ ಬೆಂಗಳೂರು ಮಾಂಟೋಸ್ಸರಿ ಶಾಲೆಯ ವಿದ್ಯಾರ್ಥಿನಿ ಸಾಯಿಮೇಘನಾ 625ಕ್ಕೆ 625 ಅಂಕ ಗಳಿಸಿ […]

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ.ಅ.19: ಡಿ.ಕೆ.ರವಿ ಅಭಿಮಾನಿಗಳ ಸಂಘದ ರಾಜ್ಯಾಧ್ಯಕ್ಷ ಸೀತಿಹೊಸೂರು ಮುರಳಿಗೌಡ ನೇತೃತ್ವದಲ್ಲಿ ಜಿಲ್ಲೆಯಿಂದ ಅನೇಕರು ತೆರಳಿ, ಆರ್.ಆರ್.ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕುಸುಮಾ ಅವರನ್ನು ಸನ್ಮಾನಿಸಿ, ಚುನಾವಣಾ ಪ್ರಚಾರ ನಡೆಸಿದರು.ಈ ವೇಳೆ ಮಾತನಾಡಿದ ಸೀತಿಹೊಸೂರು ಮುರಳಿಗೌಡ, ಕುಸುಮಾ ಅವರಿಗೆ ನಮ್ಮ ಸಂಘದಿಂದ ಸಂಪೂರ್ಣ ಬೆಂಬಲ ನೀಡಲಾಗಿದ್ದು, ಅವರ ಗೆಲುವಿಗಾಗಿ ಈಗಾಗಲೇ ಕೋಲಾರಮ್ಮ ದೇವಾಲಯದಲ್ಲಿ 501 ತೆಂಗಿನಕಾಯಿ ಒಡೆದು ವಿಶೇಷ ಪೂಜೆಯನ್ನು ಸಲ್ಲಿಸಿದ್ದೇವೆ ಎಂದು ತಿಳಿಸಿದರು.ಡಿ.ಕೆ.ರವಿ ಅವರು ಕೋಲಾರದಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಡಬಗ್ಗರಿಗೆ […]

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ:- ಪದವೀಧರರಲ್ಲದವರನ್ನು ಮತಪಟ್ಟಿಗೆ ಸೇರಿಸಿರುವ ಪ್ರಕರಣದ ಸಂಬಂಧ ಶ್ರೀನಿವಾಸಪುರ ತಾಲ್ಲೂಕಿನ ತಹಸಿಲ್ದಾರ್ ಹಾಗೂ ಇಬ್ಬರು ಉಪತಹಸೀಲ್ದಾರರಿಗೆ ಚುನಾವಣಾ ಆಯೋಗ ಷೋಕಾಸ್ ನೋಟೀಸ್ ಜಾರಿ ಮಾಡಿದೆ ಎಂದು ವಿಧಾನಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ ತಿಳಿಸಿದರು.ಸೋಮವಾರ ವಿಧಾನಪರಿಷತ್ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ ಸಂಬಂಧ ಬಿಜೆಪಿ ಅಭ್ಯರ್ಥಿ ಚಿದಾನಂದ ಎಂ.ಗೌಡ ಪರ ನಗರದ ವಿವಿಧೆಡೆ ಮತಯಾಚನೆ ಮಾಡಿ ಅವರು ಮಾತನಾಡುತ್ತಿದ್ದರು.30 ಮಂದಿ ಬೋಗಸ್ ಮತದಾರರು ಎಂದು ದೂರು ನೀಡಲಾಗಿದ್ದು, ಇದರಲ್ಲಿ 14 ಮಂದಿ ಪದವೀಧರರೇ ಅಲ್ಲ […]

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ಸರ್ಕಾರವು ಜಾರಿಗೆ ತಂದಿರುವ ವಿವಿಧ ಯೋಜನೆಗಳನ್ನು ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ಸಿ ಸತ್ಯಭಾಮ ಅವರು ತಿಳಿಸಿದರು ಇಂದು ಮಾಲೂರು ತಾಲ್ಲೂಕಿನ ಟೇಕಲ್‌ನ ನಾಡಕಛೇರಿ ಆವರಣದಲ್ಲಿ ಹೋಬಳಿ ವ್ಯಾಪ್ತಿಯ ಕಂದಾಯ ಮತ್ತು ಪಿಂಚಣಿ ಅದಾಲತ್ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಾಗರಿಕರು ತಾಲ್ಲೂಕು ಕೇಂದ್ರಕ್ಕೆ ಬರುವುದಕ್ಕೆ ಕಷ್ಟ ಎಂದು ಭಾವಿಸಿ ಹೋಬಳಿವಾರು ಕಂದಾಯ ಮತ್ತು ಪಿಂಚಣಿ ಅದಾಲತ್ ಮಾಡಲಾಗುತ್ತಿದೆ. ಸಂಧ್ಯಾ ಸುರಕ್ಷಾ , ವಿಧವಾ ವೇತನ , ಪಿಂಚಣಿ , […]

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ಕೃಷಿ ಕ್ಷೇತ್ರದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಹಿರಿದು ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್ ಹೇಳಿದರು.ಪಟ್ಟಣದ ಸರ್ಕಾರಿ ನೌಕರರ ಭವನದ ಸಭಾಂಗಣದಲ್ಲಿ ನನ್ನ ಗ್ರಾಮ ನನ್ನ ಜನ ಟ್ರಸ್ಟ್ ವತಿಯಿಂದ ಶನಿವಾರ ಏರ್ಪಡಿಸಿದ್ದ ಮಹಿಳಾ ರೈತ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿ, ದೇಶಕ್ಕೆ ಅನ್ನ ಕೊಡುವ ರೈತ ಸಮುದಾಯ ಸಮಾಜದ ಎಲ್ಲ ವರ್ಗದ ಜನರ ಗೌರವಕ್ಕೆ ಪಾತ್ರವಾಗಿದೆ ಎಂದು ಹೇಳಿದರು.ರೈತ ಮಹಿಳೆಯರು ಶ್ರದ್ಧೆಯಿಂದ ದುಡಿಯುವುದರ ಜತೆಗೆ, ಮಕ್ಕಳಿಗೆ ಉತ್ತಮ ಶಿಕ್ಷಣ […]