
ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ಪಟ್ಟಣದ ಒಳ ಚರಂಡಿ ನೀರನ್ನು ಅಕ್ರಮವಾಗಿ ಬಳಸಿಕೊಳ್ಳುತ್ತಿರುವವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಹೇಳಿದರು. ಪಟ್ಟಣದ ಹೊರ ವಲಯದ ಅಮಾನಿ ಕೆರೆ ಸಮೀಪ ಬುಧವಾರ ಅಕ್ರಮವಾಗಿ ಒಳ ಚರಂಡಿಯಿಂದ ನೀರನ್ನು ಎತ್ತಲು ಬಳಸುತ್ತಿದ್ದ ಯಂತ್ರಗಳನ್ನು ವಶಪಡಿಸಿಕೊಂಡ ಬಳಿಕ ಮಾತನಾಡಿ, ಈ ಭಾಗದ ನಿವಾಸಿಗಳು ನೀಡಿದ ದೂರನ್ನು ಅನುಸರಿಸಿ, ಕಂದಾಯ, ಪುರಸಭೆ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಏಕ ಕಾಲದಲ್ಲಿ ದಾಳಿ ನಡೆಸಿ ಒಳಚರಂಡಿಯಿಂದ ನೀರೆತ್ತಲು ಬಳಸುತ್ತಿದ್ದ […]

ವರದಿ : ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ಆಗ್ನೆಯ ಪದವಿಧರರ ಕ್ಷೇತ್ರದ ಚುನಾವಣೆ ಸಂಬಂಧ ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಚುಣಾವಣೆ ನಡೆಸಲು ಜಿಲ್ಲಾ ಮಟ್ಟದಲ್ಲಿ ಹಾಗೂ ತಾಲ್ಲೂಕು ಮಟ್ಟಗಳಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಿಸಿ ಜಿಲ್ಲಾಧಿಕಾರಿಗಳು ಹಾಗೂ ಆಗ್ನೆಯ ಶಿಕ್ಷಕರ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳಾದ ಸಿ . ಸತ್ಯಭಾಮ ಅವರು ಆದೇಶಿಸಿದ್ದಾರೆ . ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ( 9480870000 ) ನೋಡಲ್ ಅಧಿಕಾರಿಗಳಾಗಿರುತ್ತಾರೆ . ತಾಲ್ಲೂಕು ಮಟ್ಟದ ನೋಡಲ್ ಅಧಿಕಾರಿಗಳಾಗಿ ಕೋಲಾರ ತಾಲ್ಲೂಕಿಗೆ […]

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ಕರ್ನಾಟಕ ಆಗ್ನೆಯ ಪದವೀಧರರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದೈವಾರ್ಷಿಕ ಚುನಾವಣೆಯು ಅಕ್ಟೋಬರ್ 28 ರಂದು ನಡೆಯಲಿದ್ದು , ಅಂತಿಮ ಕಣದಲ್ಲಿ 15 ಅಭ್ಯರ್ಥಿಗಳು ಸ್ಪರ್ದಿಸಿದ್ದಾರೆ ಎಂದು ಕೋಲಾರ ಜಿಲ್ಲಾಧಿಕಾರಿಗಳು ಹಾಗೂ ಸಹಾಯಕ ಚುನಾವಣಾಧಿಕಾರಿಗಳಾದ ಸಿ.ಸತ್ಯಭಾಮ ಅವರು ತಿಳಿಸಿದರು. ಇಂದು ತಮ್ಮ ಕಛೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ ಗೋಷ್ಠಿಯಲ್ಲಿ ಅವರು ಮಾತನಾಡಿದರು . ಕರ್ನಾಟಕ ಆಗ್ನೆಯ ಪದವೀದರರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದೈವಾರ್ಷಿಕ ಚುನಾವಣೆಯಲ್ಲಿ ಮಾನ್ಯತೆ ಪಡೆದ […]

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ,: ತಾಲೂಕಿನಾಧ್ಯಂತ ಜಾನುವಾರುಗಳಿಗೆ ಬಾಧಿಸುತ್ತಿರುವ ಮಾರಕ ಖಾಯಿಲೆಗಳಿಗೆ ಗುಣಮಟ್ಟದ ಚಿಕಿತ್ಸೆಯನ್ನು ನೀಡುವ ಜೊತೆಗೆ ವಿಶೇಷ ವೈದ್ಯರ ತಂಡ ರಚನೆ ಮಾಡಿ, ಸಂಚಾರಿ ವಾಹನ ಮತ್ತು ಕರಪತ್ರಗಳ ಮುಖಾಂತರ ರೈತರಲ್ಲಿ ಜಾಗೃತಿ ಮೂಡಿಸಬೇಕೆಂದು ಒತ್ತಾಯಿಸಿ ರೈತಸಂಘದಿಂದ ಪಶುಸಂಗೋಪನಾ ಇಲಾಖೆ ಸಹಾಯಕರಾದ ಸತ್ಯ ನಾರಾಯಣರವರಿಗೆ ಮನವಿ ನೀಡು ಒತ್ತಾಯಿಸಲಾಯಿತು.ಹೋರಾಟದ ನೇತೃತ್ವವಹಸಿ ಮಾತನಾಡಿದ ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಲಕ್ಷಾಂತರ ಕುಟುಂಬಗಳ ಜೀವನಾಡಿಯಾಗಿರುವ ಹೈನೋದ್ಯಮ ಇತ್ತೀಚೆಗೆ ಜಾನುವಾರುಗಳಿಗೆ ಬಾಧಿಸುತ್ತಿರುವ ಚರ್ಮಗಂಟು ರೋಗ, ಕಾಲುಬಾಯಿ ಜ್ವರ ಮತ್ತು […]

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ:- ಪತ್ರಕರ್ತರ ಸಹಕಾರ ಸಂಘದಲ್ಲಿ ಈಗಾಗಲೇ ನಿವೇಶನಕ್ಕಾಗಿ ನೊಂದಾಯಿಸಿಕೊಂಡಿರುವ ಪತ್ರಕರ್ತರಿಗೆ ಮಾರ್ಚ್ ಅಂತ್ಯದೊಳಗೆ ರಿಯಾಯಿತಿ ದರದಲ್ಲಿ ನಿವೇಶನ ಒದಗಿಸುವುದಾಗಿ ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಘೋಷಿಸಿದರು.ಮಂಗಳವಾರ ಕೋಲಾರ,ಚಿಕ್ಕಬಳ್ಳಾಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ವಿವಿಧೋದ್ದೇಶ ಸಹಕಾರ ಸಂಘದ 2019-20ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿ ಈಗಾಗಲೇ 4 ಎಕರೆ ಜಮೀನನ್ನು ಗುರುತಿಸಿ ಅಭಿವೃದ್ದಿಪಡಿಸಲಾಗುತ್ತಿದೆ ಎಂದರು.ಈಗಾಗಲೇ ಪತ್ರಕರ್ತರ ಸಹಕಾರ ಸಂಘದಲ್ಲಿ 60 ಪತ್ರಕರ್ತರು ನಿವೇಶನಕ್ಕಾಗಿ ನೊಂದಾಯಿಸಿದ್ದು, ಡಿಸೆಂಬರ್ […]

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ: ಕೊರೊನಾ ಲಾಕ್‍ಡೌನ್ ಸಮಯದಲ್ಲಿ ಸರ್ಕಾರ ಘೋಷಣೆ ಮಾಡಿದ್ದ ಹೂ ಹಾಗೂ ಮತ್ತಿತರರ ವಾಣಿಜ್ಯ ಬೆಳೆಗಳ ಪರಿಹಾರ ಹಣವನ್ನು ನೀಡುವಲ್ಲಿ ವಿಫಲವಾಗಿರುವ ಸರ್ಕಾರದ ವಿರುದ್ಧ ತೋಟಗಾರಿಕೆ ಇಲಾಖೆ ಮುಂದೆ ಬುಡ್ಡಿದೀಪಗಳೊಂದಿಗೆ ಅ.16ರ ಶುಕ್ರವಾರದಂದು ಅಹೋರಾತ್ರಿ ಹೋರಾಟ ನಡೆಸಲು ರೈತಸಂಘದ ಸಭೆಯಲ್ಲಿ ತೀರ್ಮಾನಿಸಲಾಯಿತು.ಸಭೆಯ ನೇತೃತ್ವವಹಿಸಿ ಮಾತನಾಡಿದ ರೈತಸಂಘದ ರಾಜ್ಯ ಉಪಾಧ್ಯಕ್ಷ, ಕೊರೊನಾ ಲಾಕ್‍ಡೌನ್ ಸಂದರ್ಭದಲ್ಲಿ ಕೇಂದ್ರ ಸರ್ಕಾರ 20 ಲಕ್ಷಕೋಟಿ ವಿವಿಧ ಇಲಾಖೆಗಳಿಗೆ ಬಿಡುಗಡೆ ಮಾಡಿ ತಿಂಗಳಾನುಗಟ್ಟಲೇ ಕಳೆದರೂ ಇದುವರೆಗೂ ರಾಜ್ಯದ ಪಾಲು […]

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ: ಅರ್ಥಪೂರ್ಣವಾದ ಹುಟ್ಟುಹಬ್ಬದ ಆಚರಣೆಯೊಂದು ಬೀರಂಡಹಳ್ಳಿ ಕೋಲಾರ ಶ್ರೀ ಸಾಯಿಜ್ಯೋತಿ ವೃದ್ಧಾಶ್ರಮದಲ್ಲಿ ಸರಳವಾಗಿ ನೆರವೇರಿತು.ಪ್ರಾಂಶುಪಾಲರು ಹಾಗೂ ರೋಟರಿಕೋಲಾರಜಿಲ್ಲಾಉಪಾಧ್ಯಕ್ಷರೂಆಗಿರುವ ಹೆಚ್.ರಾಮಚಂದ್ರಪ್ಪಅವರ ಹುಟ್ಟುಹಬ್ಬವನ್ನು, ವೃದ್ಧಾಶ್ರಮದ ಅಶಕ್ತ ಹಿರಿಯ ಜೀವಿಗಳಿಗೆ ಅಕ್ಕಿ, ದಿನಸಿ, ಹಣ್ಣುಹಂಪಲು ಮತ್ತು ಹಾಲು ವಿತರಣೆಜೊತೆಗೆ,ಕೆ.ಜಿ.ಎಫ್‍ನಲ್ಲಿಕೊರೋನಾ ವಾರಿಯರ್ಸ್‍ಗಳಾಗಿ ಕಾರ್ಯನಿರ್ವಹಿಸಿದವರನ್ನು ಸನ್ಮಾನಿಸುವುದರೊಂದಿಗೆ ಈ ಹುಟ್ಟುಹಬ್ಬವನ್ನು ಸರಳವಾಗಿ ಹಾಗೂ ಅರ್ಥಪೂರ್ಣವಾಗಿಆಚರಿಸಲಾಯಿತು.ಈ ಸಂದರ್ಭದಲ್ಲಿರೋಟರಿಕೋಲಾರ ಸಂಸ್ಥೆಯ ವಲಯರಾಜ್ಯಪಾಲ ಟಿ.ಎಸ್.ರಾಮಚಂದ್ರೇಗೌಡ, ಸತ್ಯಜ್ಯೋತಿಆಶ್ರಮದ ಕಾರ್ಯದರ್ಶಿ ಸುಲೋಚನಾ, ಎಲ್‍ಐಸಿ ಅಧಿಕಾರಿ ಶೈಲಜರಾಮಚಂದ್ರಪ್ಪ, ಅನಿಕೇತನ ಸಾಂಸ್ಕøತಿಕ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಮುನಿಕೃಷ್ಣಪ್ಪ, ಕೆ.ಜಿ.ಎಫ್ ನಗರಸಭೆಯ […]

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ,ಅ.12: ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತದ 2019-20ನೇ ಸಾಲಿನ ಸರ್ವ ಸದಸ್ಯರುಗಳ ವಾರ್ಷಿಕ ಮಹಾಸಭೆಯನ್ನು ದಿನಾಂಕ: 13-10-2020 ರಂದು ಮಂಗಳವಾರ ಬೆಳಗ್ಗೆ 10-30 ಗಂಟೆಗೆ ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆವರಣದಲ್ಲಿ ಸಂಘದÀ ಅಧ್ಯಕ್ಷರಾದ ಕೆ.ಎಸ್.ಗಣೇಶ್ ರವರ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿದೆ.ಮಹಾಸಭೆಗೆ ವಿಶೇಷ ಆಹ್ವಾನಿತರಾಗಿ ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷರಾದ ಬ್ಯಾಲಹಳ್ಳಿ ಎಂ.ಗೋವಿಂದಗೌಡ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾದ ಬಿ.ವಿ.ಗೋಪಿನಾಥ್ […]

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ಹತ್ರಾಸ್ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಗಳಿಗೆ ಮರಣ ದಂಟನೆ ವಿಧಿಸಬೇಕು ಎಂದು ವಾಲ್ಮೀಕಿ ಸಮುದಾಯದ ಬ್ರಹ್ಮಾನಂದ ಸ್ವಾಮೀಜಿ ಹೇಳಿದರು. ಪಟ್ಟಣದಲ್ಲಿ ತಾಲ್ಲೂಕು ವಾಲ್ಮೀಕಿ ನಾಯಕ ಸ್ವಾಭಿಮಾನಿ ಚಳುವಳಿ ಹಾಗೂ ವಾಲ್ಮೀಕಿ ನವ ಸಮಾಜ ಟ್ರಸ್ಟ್ ಸದಸ್ಯರು ಹತ್ರಾಸ್ ಘಟನೆ ಖಂಡಿಸಿ ಪ್ರತಿಭಟನಾ ಪ್ರದರ್ಶನ ನಡೆಸಿದ ಬಳಿಕ ತಾಲ್ಲೂಕು ಕಚೇರಿ ಎದುರು ಮಾತನಾಡಿದರು. ಸಂಘಟನೆ ಜಿಲ್ಲಾಧ್ಯಕ್ಷ ವಿ.ಹರೀಶ್ ನಾಯಕ್ ಮಾತನಾಡಿ, ಉತ್ತರ ಪ್ರದೇಶದಲ್ಲಿ ಪರಿಶಿಷ್ಟ ಸಮುದಾಯದ ಮಹಿಳೆಯರಿಗೆ ರಕ್ಷಣೆ ಇಲ್ಲವಾಗಿದೆ. […]