ಶ್ರೀನಿವಾಸಪುರ : ಪಿಡಿಪಿಎಸ್ ಸ್ಕೀಮ್ ೧ ತಿಂಗಳು ಇರುತ್ತದೆ .ಯಾವುದೇ ಕಾರಣಕ್ಕೂ ರೈತರು ಆತುರವನ್ನು ಪಡುಬಾರದೆಂದು ತಿಳಿ ಹೇಳಿದರು. ರೈತರು ಹಣ್ಣು ಆಗದೀರ ಮಾರುಕಟ್ಟೆ ಮಾವಿನ ಕಾಯಿಗಳು ತೆಗೆದು ಕೊಂಡುಬಾರದೆಂದರು. ಹಂತ ಹಂತವಾಗಿ ಕಾಯಿಗಳನ್ನು ಕೀಳಬೇಕು ಸರ್ಕಾರವು ಜಾರಿಗೆ ತಂದಿರುವ ಈ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.ಎಲ್ಲಾ ರೈತರು ಅಧಿಕಾರಿಗಳೊಂದಿಗೆ ಸಹಕರಿಸಬೇಕೆಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಮನವಿ ಮಾಡಿದರು. ಪಟ್ಟಣದ ಎಪಿಎಂಸಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಮಾವು ಬೆಳೆಗಾರ ಸಮಸ್ಯೆಗಳ ಬಗ್ಗೆ ಚರ್ಚಿಸಿ ಮಾತನಾಡಿದರು. ನಾಳೆ ಬೆಳಗ್ಗೆಯಿಂದಲೇ ರೈತರು ರಿಜಿಸ್ಟ್ರೇಷನ್ […]
ಶ್ರೀನಿವಾಸಪುರ, ಜೂ. 26: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜಂಟಿ ಸಹಭಾಗಿತ್ವದಲ್ಲಿ ಜಾರಿಗೊಂಡಿರುವ ಮಾವು ಬೆಲೆ ವ್ಯತ್ಯಾಸ ಪಾವತಿ ಯೋಜನೆ (PDPS)ಯ ಲಾಭ ತಾಲ್ಲೂಕಿನ ಪ್ರತಿಯೊಬ್ಬ ಅರ್ಹ ಮಾವು ಬೆಳೆಗಾರನಿಗೂ ತಲುಪುವಂತೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು. ರೈತರ ನೋಂದಣಿ ಪ್ರಕ್ರಿಯೆಯಲ್ಲಿ ಯಾವುದೇ ರೀತಿಯ ತೊಂದರೆ, ವಿಳಂಬ ಅಥವಾ ಲೋಪಗಳು ಉಂಟಾಗದಂತೆ ಕಟ್ಟುನಿಟ್ಟಿನ ಮೇಲ್ವಿಚಾರಣೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸರ್ಕಾರವು ಮಾವು ಬೆಳೆಗಾರರ ಹಿತದೃಷ್ಟಿಯಿಂದ ಪ್ರತಿ ಕ್ವಿಂಟಾಲ್ಗೆ ₹1,750 […]
ಶ್ರೀನಿವಾಸಪುರ : ಪುರಸಭೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಯಂ ಪೌರಕಾರ್ಮಿಕರಿಗೆ ಪೌರಕಾರ್ಮಿಕ ಗೃಹಭಾಗ್ಯ ಯೋಜನೆಯಡಿಯಲ್ಲಿ ಗೃಹ ನಿರ್ಮಾಣ ಮಾಡಿಕೊಡಲು ಜಿಲ್ಲಾಧಿಕಾರಿಗಳನ್ನು ಪುರಸಭೆ ಮಾಜಿ ಅಧ್ಯಕ್ಷ ಬಿ.ಆರ್.ಬಾಸ್ಕರ್ ಒತ್ತಾಯಿಸಿದರು.ಪಟ್ಟಣದ ಪುರಸಭೆ ಕಚೇರಿಯಲ್ಲಿ ಗುರುವಾರ ನಡೆದ ಪತ್ರಿಕಾ ಗೋಷ್ಟಿಯಲ್ಲಿ ಮಾತನಾಡಿದರು. ಪುರಸಭೆಯ ಪೌರಕಾರ್ಮಿಕರಿಗೆ ವಸತಿ ಹಾಗು ಮೂಲ ಭೂತ ಸೌಲಭ್ಯಗಳನ್ನು ಕಲ್ಪಿಸುವ ಸರ್ಕಾರದ ಪೌರಕಾರ್ಮಿಕರ ಗೃಹಭಾಗ್ಯ ಯೋಜನೆಯಡಿಯಲ್ಲಿ 30 ಪೌರಕಾರ್ಮಿಕರಿಗೆ ಎಹೆಚ್ಪಿ ಘಟಕದಡಿ ಗೃಹ ನಿರ್ಮಾಣ ಮಾಡಲು ಈಗಾಗಲೇ ಜಿಲ್ಲಾ ಮಟ್ಟದ ಸಮಿತಿಯ ಶಿಫಾರಸ್ಸಿನಂತೆ 32 ನೇ ರಾಜ್ಯ ಮಟ್ಟದ ಸಮಿತಿಯ ಸಭೆ […]
ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನೂತನ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿರುವ ಎಂ.ಎನ್. ಅನುಚೇತ್ ಅವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ನೇತೃತ್ವದ ಪದಾಧಿಕಾರಿಗಳ ನಿಯೋಗ ಭೇಟಿ ಮಾಡಿ ಶುಭ ಹಾರೈಸಿತು. ಈ ಸಂದರ್ಭದಲ್ಲಿ ಕೆಯುಡಬ್ಲ್ಯೂಜೆ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ್, ರಾಜ್ಯ ಖಜಾಂಚಿ ವಾಸುದೇವ ಹೊಳ್ಳ, ರಾಜ್ಯ ಸಮಿತಿ ಸದಸ್ಯ ದೇವರಾಜು ಸೇರಿದಂತೆ ಹಲವರು ಉಪಸ್ಥಿತರಿದ್ದರು. ಭೇಟಿಯ ವೇಳೆ ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ಸೌಲಭ್ಯ ಹಾಗೂ […]
ಶ್ರೀನಿವಾಸಪುರ : ಕರ್ನಾಟಕದ ವಿದ್ಯುತ್ ವಿತರಣಾ ವ್ಯವಸ್ಥೆಯನ್ನು ಖಾಸಗೀಕರಣದ ಹೆಸರಿನಲ್ಲಿ Tata Power ಕಂಪನಿಗೆ ನೀಡಲು ಸರ್ಕಾರ ಮುಂದಾಗಿರುವುದನ್ನು ಖಂಡಿಸಿ ತಾಲ್ಲೂಕಿನ ರೈತಪರ, ಜನಪರ, ದಲಿತಪರ, ಕನ್ನಡಪರ ಹಾಗೂ ನೌಕರರ ಸಂಘಟನೆಗಳ ಒಕ್ಕೂಟದ ವತಿಯಿಂದ ಸೋಮವಾರ ಪ್ರತಿಭಟನೆ ನಡೆಯಿತು. ಸಂಯುಕ್ತ ಹೋರಾಟ ಸಮಿತಿಯ ನೇತೃತ್ವದಲ್ಲಿ ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ತಾಲ್ಲೂಕು ಕಚೇರಿ ಎದುರು ಧರಣಿ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ತಹಸೀಲ್ದಾರರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಂಯುಕ್ತ […]
ಬೆಂಗಳೂರು, ಜೂನ್ 19: ರಾಜ್ಯ ಸರ್ಕಾರವು 2012ನೇ ಬ್ಯಾಚ್ನ ಐಎಎಸ್ ಅಧಿಕಾರಿ ಅಕ್ರಂ ಪಾಷ ಅವರನ್ನು ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್ಎಚ್ಎಂ) ಮತ್ತು ಆರೋಗ್ಯ ಇಲಾಖೆಯ ಮಿಷನ್ ನಿರ್ದೇಶಕರಾಗಿ ನೇಮಕ ಮಾಡಿದ್ದು, ಅವರು ಶುಕ್ರವಾರ ಅಧಿಕೃತವಾಗಿ ಎನ್ಎಚ್ಎಂ ವ್ಯವಸ್ಥಾಪಕ ನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಿದರು. ಸರ್ಕಾರದ ಆದೇಶದಂತೆ, ವರ್ಗಾವಣೆಯಿಂದ ತೆರವಾಗಿದ್ದ ಈ ಮಹತ್ವದ ಹುದ್ದೆಗೆ ಅಕ್ರಂ ಪಾಷ ಅವರನ್ನು ನಿಯೋಜಿಸಲಾಗಿದೆ. ಈ ಹಿಂದೆ ಎನ್ಎಚ್ಎಂ ಮಿಷನ್ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಅವರ ವರ್ಗಾವಣೆಯ ಬಳಿಕ […]
ಶ್ರೀನಿವಾಸಪುರ: ವಿದ್ಯಾರ್ಥಿಗಳು ಸರ್ಕಾರ ಹಾಗೂ ದಾನಿಗಳ ನೆರವಿನಿಂದ ಸಿಗುವ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಶಿಕ್ಷಣ ಪಡೆಯಬೇಕು. ಶಿಕ್ಷಣದಿಂದಲೇ ದೇಶದ ಅಭಿವೃದ್ಧಿ ಸಾಧ್ಯ ಎಂದು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಜಿ.ಎನ್. ಕೋದಂಡರಾಮಯ್ಯ ಹೇಳಿದರು. ತಾಲ್ಲೂಕಿನ ಯಲ್ದೂರು ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಾನಿಗಳ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಮಾಜದ ಕಟ್ಟಕಡೆಯ ಮಗುವಿಗೂ ಉತ್ತಮ ಶಿಕ್ಷಣ ಸಿಗುವಂತೆ ಸರ್ಕಾರದೊಂದಿಗೆ ದಾನಿಗಳೂ ಕೈಜೋಡಿಸಬೇಕು ಎಂದರು. ಇದರಿಂದ ಸರ್ಕಾರಿ ಶಾಲೆಯ […]
ಶ್ರೀನಿವಾಸಪುರ: ಮಾವಿನ ಹಣ್ಣಿನ ಸೀಸನ್ ಹಿನ್ನೆಲೆಯಲ್ಲಿ ಎಪಿಎಂಸಿ ಹಾಗೂ ವಿವಿಧ ಮಾವು ಮಾರುಕಟ್ಟೆಗಳಿಗೆ ಪ್ರತಿದಿನ ನೂರಾರು ಟ್ರ್ಯಾಕ್ಟರ್ಗಳ ಮೂಲಕ ಮಾವಿನಕಾಯಿ ಮತ್ತು ಮಾವಿನ ಹಣ್ಣಿನ ಸಾಗಾಟ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಸ್ತೆ ಸುರಕ್ಷತೆಗೆ ಒತ್ತು ನೀಡಿ ಶ್ರೀನಿವಾಸಪುರ ಪೊಲೀಸರು ರೇಡಿಯಂ ಸ್ಟಿಕ್ಕರ್ ಅಳವಡಿಕೆ ಕುರಿತು ಜಾಗೃತಿ ಮೂಡಿಸಿದರು. ಎಪಿಎಂಸಿ ಮಾವು ಮಾರುಕಟ್ಟೆ ಪ್ರದೇಶದಲ್ಲಿ ನಡೆದ ವಿಶೇಷ ಜಾಗೃತಿ ಕಾರ್ಯಕ್ರಮದಲ್ಲಿ ಟ್ರ್ಯಾಕ್ಟರ್ಗಳ ಪರಿಶೀಲನೆ ನಡೆಸಿದ ಪೊಲೀಸರು, ವಾಹನಗಳ ಮುಂಭಾಗ ಮತ್ತು ಹಿಂಭಾಗಗಳಲ್ಲಿ ಕಡ್ಡಾಯವಾಗಿ ರೇಡಿಯಂ ಸ್ಟಿಕ್ಕರ್ ಅಳವಡಿಸಿಕೊಳ್ಳುವಂತೆ ಚಾಲಕರು ಹಾಗೂ […]
ಶ್ರೀನಿವಾಸಪುರ: ಮಾವಿನ ಬೆಲೆ ಭಾರೀ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿರುವ ಬೆಳೆಗಾರರ ರಕ್ಷಣೆಗೆ ಪ್ರತಿ ಕೆ.ಜಿ.ಗೆ ಕನಿಷ್ಠ ₹10 ಬೆಂಬಲ ಬೆಲೆ ಘೋಷಿಸಬೇಕು ಎಂದು ಆಗ್ರಹಿಸಿ ಜೂನ್ 15ರಂದು ರೋಜರನಹಳ್ಳಿ ಗೇಟ್ನಲ್ಲಿ ಮಾವು ಸಮೇತ ರಾಜ್ಯ ಹೆದ್ದಾರಿ ಬಂದ್ ನಡೆಸಲು ರೈತ ಸಂಘದ ಸಭೆಯಲ್ಲಿ ತೀರ್ಮಾನಿಸಲಾಯಿತು. ಸಭೆಯಲ್ಲಿ ಮಾತನಾಡಿದ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ. ನಾರಾಯಣಗೌಡ, ರಾಜ್ಯದಲ್ಲಿ ಮಾವು ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ಕೋಲಾರ ಜಿಲ್ಲೆಯ ಬೆಳೆಗಾರರು ಇಂದು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಆರೋಪಿಸಿದರು. ಹವಾಮಾನ ವೈಪರೀತ್ಯ, […]

