
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ಕನ್ನಡ ಪರ ಸಂಘಟನೆಗಳು ಉದಯೋನು್ಮಖ ಕವಿಗಳನ್ನು ಸಮಾಜ ಮುಖಿಯಾಗಿ ಬೆಳೆಸಲು ಪೂರಕವಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಮಕ್ಕಳಲ್ಲಿ ಕನ್ನಡ ಸಾಹಿತ್ಯದ ಕಡೆ ಒಲವು ಮೂಡಿಸಬೇಕು ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್ ಹೇಳಿದರು. ತಾಲ್ಲೂಕಿನ ಪನಸಮಾಕನಹಳ್ಳಿ ಗ್ರಾಮದ ಸಾಹಿತಿ ಆರ್.ಚೌಡರೆಡ್ಡಿ ಅವರ ಮನೆಯಂಗಳದಲ್ಲಿ, ತಾಲ್ಲೂಕು ಕನ್ನಡ ಸಿರಿ ಸಾಹಿತ್ಯ ಪರಿಷತ್ತು ಹಾಗೂ ತಾಲ್ಲೂಕು ಚುಟುಕು ಸಾಹಿತ್ಯ ಪರಿಷತ್ತಿನ ವತಿಯಿಂದ ಶನಿವಾರ ಏರ್ಪಡಿಸಲಾಗಿದ್ದ ಕವಿಯ ಮನೆಯಂಗಳದಲ್ಲಿ ಸಾಹಿತ್ಯ ಸಂಭ್ರಮ ಸಮಾರಂಭ ಉದ್ಘಾಟಿಸಿ ಮಾತನಾಡಿ, […]

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಶ್ರೀನಿವಾಸಪುರ ತಾಲೂಕಿನಲ್ಲಿ ಸ್ವ-ಸಹಾಯ ಸಂಘವನ್ನುಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಕೋಲಾರ ಜಿಲ್ಲೆಯ ಮಾನ್ಯ ಹಿರಿಯ ಜಿಲ್ಲಾ ನಿರ್ದೇಶಕರಾದ ಶ್ರೀಯುತ ಚಂದ್ರಶೇಖರ್ ಜೆ ರವರು 3001 ನೇ ಪ್ರಗತಿಬಂಧು ಸ್ವ-ಸಹಾಯ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ರಾಜ್ಯಾದಂತ ವಿಸ್ತರಣೆಗೊಂಡಿದ್ದು ಯೋಜನೆಯ ಬೇರೆ ಬೇರೆ ಕಾರ್ಯಕ್ರಮವನ್ನು ಕುಟುಂಬದ ಅಭಿವೃದ್ದಿಗೆ ಪೂರಕವಾಗಿ ಅನುಷ್ಠಾನ.ಸಂಘದ ನಿಯಮಗಳ ಬಗ್ಗೆ & […]

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ:- ಮನ್ವಂತರ ಜನಸೇವಾ ಟ್ರಸ್ಟ್ ವತಿಯಿಂದ ಬಡ ವಿದ್ಯಾರ್ಥಿಗಳ ಶಿಕ್ಷಣ, ಗಂಭೀರ ಸ್ವರೂಪದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವವರಿಗೆ ನೆರವು ಸೇರಿದಂತೆ ಸೇವಾ ಸಂಭ್ರಮ ಯೋಜನೆಯಡಿ ವಿವಿಧ ಸಮಾಜಮುಖಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಟ್ರಸ್ಟ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಹೇಳಿದರು.ನಗರದ ಜಿಲ್ಲಾ ಸಹಕಾರಿ ಯೂನಿಯನ್ ಸಭಾಂಗಣದಲ್ಲಿ ಶುಕ್ರವಾರ ಪ್ರತಿಭಾವಂತ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ, ವೈದ್ಯಕೀಯ ಸೌಲಭ್ಯ ಹಾಗೂ ಗಂಭೀರ ಆರೋಗ್ಯ ಸಮಸ್ಯೆಯಿಂದ ಮೃತಪಟ್ಟ ಪತ್ರಕರ್ತರ ಕುಟುಂಬಕ್ಕೆ ಆರ್ಥಿಕ ನೆರವಿನ ಚೆಕ್ ವಿತರಿಸಿ […]

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ಸಮುದಾಯ ಭವನಗಳು ಸಾಮಾಜಿಕ ಸಾಮರಸ್ಯ ಬೆಸೆಯುವ ಕೇಂದ್ರಗಳಾಗಬೇಕು. ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಶ್ರೀನಿವಾಸನ್ ಹೇಳಿದರು. ತಾಲ್ಲೂಕಿನ ಮೀಸಗಾನಹಳ್ಳಿ ಗ್ರಾಮದದಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ಸಮಾರಂಭದಲ್ಲಿ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ, ರೂ.8 ಲಕ್ಷ ವೆಚ್ಚದಲ್ಲಿ ಭವನ ನಿರ್ಮಿಸಲಾಗುವುದು. ತಾಲ್ಲೂಕಿನ ಶಾಸಕ ಕೆ.ಆರ್.ರಮೇಶ್ ಕುಮಾರ್ ಅವರ ಪ್ರಯತ್ನದ ಫಲವಾಗಿ ಪ್ರತಿ ಗ್ರಾಮದಲ್ಲೂ ಒಂದು ಅಂಬೇಡ್ಕರ್ ಭವನ ನಿರ್ಮಿಸಲು ಸಾಧ್ಯವಾಗಿದೆ ಎಂದು ಹೇಳಿದರು. ಕೆಸಿ […]

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ,ಸೆ.9: ರಾಜ್ಯದಲ್ಲಿ ಶತಾಯಗತಾಯ ಕಾಂಗ್ರೆಸ್‍ನ್ನು ಅಧಿಕಾರಕ್ಕೆ ತರಲೇಬೇಕು ಎಂದು ಪಣ ತೊಟ್ಟಿರುವ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರವರು ಗುರುವಾರ ಸಂಜೆ ಬೆಂಗಳೂರಿನ ಸಂಜಯ್‍ನಗರದ ಮಾಜಿ ಕೇಂದ್ರ ಸಚಿವ ಹಾಗೂ ಸಿ.ಡ್ಲ್ಯೂ.ಸಿ ಸದಸ್ಯರಾದ ಕೆ.ಹೆಚ್ ಮುನಿಯಪ್ಪ ರವರ ನಿವಾಸಕ್ಕೆ ತೆರಳಿ ಪಕ್ಷ ಸಂಘಟನೆ ಮತ್ತು ರಾಜ್ಯ ರಾಜಕೀಯದ ವಿದ್ಯಮಾನಗಳ ಕುರಿತು ಚರ್ಚಿಸಿದರು.ಇದೀಗ ನಡೆಯಲಿರುವ ಶಿರಾ ಮತ್ತು ರಾಜರಾಜೇಶ್ವರಿ ನಗರದ ವಿಧಾನಸಭಾ ಉಪಚುನಾವಣೆ ಹಾಗೂ ಶಿಕ್ಷಕರ ಮತ್ತು ಪದವಿಧರ ಕ್ಷೇತ್ರಗಳ ವಿಧಾನಪರಿಷತ್ ಚುನಾವಣೆ ಮತ್ತು […]

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ : ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2020-21ನೇ ಸಾಲಿನಲ್ಲಿ ಸಾಲ ಸೌಲಭ್ಯ ಪಡೆಯಲು ವೆಬ್ ಸೈಟ್ ವಿಳಾಸ kacdc.karnataka.gov.in ನ ಮುಖಾಂತರ ಅಗತ್ಯ ದಾಖಲೆಗಳೊಂದಿಗೆ ನವೆಂಬರ್ 15 ರೊಳಾಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ . ಅರ್ಜಿಗಳನ್ನು ಅನ್ ಲೈನ್ ಮುಖಾಂತರ ಮಾತ್ರ ಸ್ವೀಕರಿಸ ಲಾಗುವುದು . ಮಹಿಳೆಯರಿಗೆ – ಶೇ .33 ರಷ್ಟು ಮತ್ತು ವಿಶೇಷಚೇತನರಿಗೆ – ಶೇ .5 ರಷ್ಟು ಮೀಸಲಾತಿ ಇರುತ್ತದೆ . ಅರ್ಜಿದಾರರ ಮೊಬೈಲ್ ಸಂಖ್ಯೆಯು ಆಧಾರ್‌ಗೆ ಜೋಡಣೆಯಾಗಿರಬೇಕು […]

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ:- ಬಲಿಷ್ಠ ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವವಾದುದು. ಇದರ ಘನತೆ ಗೌರವವನ್ನು ಉಳಿಸಿಕೊಂಡು ಹೋದವರು ಸಮಾಜದಲ್ಲಿ ಪೂಜ್ಯನೀಯ ವ್ಯಕ್ತಿಗಳಾಗುತ್ತಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಮಚಂದ್ರಪ್ಪ ತಿಳಿಸಿದರು.ರೋಟರಿ ಕೋಲಾರ ಹಾಗೂ ರೋಟರಿ ಕೋಲಾರ ಟ್ರಸ್ಟ್ ವತಿಯಿಂದ ನಗರದ ರೋಟರಿ ಭವನದಲ್ಲಿ ಆಯೋಜಿಸಿದ್ದ ಗುರುವಂದನೆ ಹಾಗೂ ಹಿರಿಯ ರೋಟೋರಿಯನ್‍ಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಪುರಾಣ ಪುಣ್ಯ ಕಾಲದಿಂದಲೂ ಗುರುವಿಗೆ ಶ್ರೇಷ್ಠ ಸ್ಥಾನ ಉಳಿಸಿಕೊಂಡು ಬರಲಾಗುತ್ತಿದೆ. ಹಾಗೆಯೇ ಭಾರತದ […]

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ:- ದೇಶದಲ್ಲೇ ಮೊದಲಬಾಗಿಗೆ ಮೈಕ್ರೋ ಎಟಿಎಂಗೆ ಚಾಲನೆ ನೀಡುವ ಮೂಲಕ ಕೋಲಾರ,ಚಿಕ್ಕಬಳ್ಳಾಪುರ ಜಿಲ್ಲೆಗಳ ತಾಯಂದಿರ ಮನೆಬಾಗಿಲಿಗೆ ಡಿಸಿಸಿ ಬ್ಯಾಂಕ್ ಗ್ರಾಹಕ ಸೇವೆ ಒದಗಿಸುತ್ತಿದೆ ಎಂದು ಬ್ಯಾಂಕಿನ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ತಿಳಿಸಿದರು.ಗುರುವಾರ ಜಿಲ್ಲೆಯ ಟೇಕಲ್ ಸಮೀಪದ ದಿನ್ನೇರಿಹಾರೋಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ವ್ಯಾಪ್ತಿಯಲ್ಲಿ 58 ಸ್ತ್ರೀಶಕ್ತಿ ಸಂಘಗಳಿಗೆ 2.75 ಕೋಟಿ ರೂ ಸಾಲ ವಿತರಿಸಿ ಅವರು ಮಾತನಾಡುತ್ತಿದ್ದರು.ತಾಯಂದಿರು ಇನ್ನೂ ಸಂಘದ ಕಾರ್ಯದರ್ಶಿಗೆ ಒಂದು ಮೆಸೆಜ್ ಇಲ್ಲವೇ, ಕರೆ ಮಾಡಿದರೆ ಅವರೇ […]

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ಗುರು ಅನ್ನುವ ಪದಕ್ಕೆ ಸಂಸ್ಕೃತ, ಕನ್ನಡ ಮತ್ತು ಹಿಂದಿ ಭಾಷೆಯಲ್ಲಿ ಕತ್ತಲಿನಿಂದ ಬೆಳಕಿನಡೆಗೆ ಕರೆದುಕೊಂಡು ಹೋಗುವವರು ಗುರುಗಳು ಅರ್ಥ. ಗುರು ಅಂದರೆ ಕತ್ತಲಿನಿಂದ ಬೆಳಕಿನಡೆಗೆ ಕರೆದೊಯ್ಯುವವರು ಶಿಕ್ಷಕರು ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಹೆಚ್.ಆರ್. ದೇವರಾಜ್ ತಿಳಿಸಿದರು.ಪಟ್ಟಣದ ಕನಕ ಭವನದಲ್ಲಿ ರೋಟರಿ ಶ್ರೀನಿವಾಸಪುರ ಸೆಂಟ್ರಲ್ ವತಿಯಿಂದ ಶಿಕ್ಷಣ ಕ್ಷೇತ್ರದಲ್ಲಿ ಉತ್ತಮವಾಗಿ ಸೇವೆ ಸಲ್ಲಿಸಿದ ಆಯ್ದ ಶಿಕ್ಷಕರಿಗೆ ನೇಷನ್ ಬಿಲ್ಡರ್ ಪ್ರಶಸ್ತಿ ಪ್ರಧಾನ ಸಮಾರಂಭದ ಕಾರ್ಯಕ್ರಮವನ್ನುಪಟ್ಟಣದಜೆ.ಎಂ.ಎಫ್.ಸಿ. ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಹೆಚ್.ಆರ್. […]