
ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ ಸೆ.16: ಖಾಲಿಯಿರುವ ಕೋಲಾರ ಜಿಲ್ಲಾ ಪಂಚಾಯಿತಿ ಸಿಇಒ ಹುದ್ದೆಯನ್ನು ಕೂಡಲೇ ಭರ್ತಿ ಮಾಡಿ, ಗ್ರಾಮೀಣ ಭಾಗದ ಅಭಿವೃದ್ಧಿಗೆ ಸಹಕರಿಸಬೇಕೆಂದು ಒತ್ತಾಯಿಸಿ ರೈತ ಸಂಘದಿಂದ ಜಿಲ್ಲಾ ಪಂಚಾಯತ್ ಮುಂದೆ ಹೋರಾಟ ಮಾಡಿ ಉಪ ಕಾರ್ಯದರ್ಶಿಗಳ ಮುಖಾಂತರ ಸರ್ಕಾರಕ್ಕೆ ಮನವಿ ನೀಡಿ ಒತ್ತಾಯಿಸಲಾಯಿತು. ರೈತ ಸಂಘದ ರಾಜ್ಯ ಉಪಾದ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ ಪ್ರಸ್ತುತ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಸೇರಿದಂತೆ ರೈತರಿಗೆ ನಾನಾ ಸಮಸ್ಯೆಗಳು ತೀವ್ರವಾಗಿದ್ದು, ನೆರವಿಗೆ ಯಾರೂ ಬರದಂತಾಗಿದೆ. […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಸಹಕಾರಿ ಸಂಸ್ಥೆಯೊಂದನ್ನು ರೈತರು,ಮಹಿಳೆಯರ ಆರ್ಥಿಕಾಭಿವೃದ್ದಿಗೆ ನೆರವಾಗುವ ರೀತಿಯಲ್ಲಿ ಹೇಗೆ ನಡೆಸಬಹುದು ಎಂಬುದನ್ನು ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿ ದೇಶಕ್ಕೆ ಮಾದರಿಯಾಗಿ ತೋರಿಸಿಕೊಟ್ಟಿದೆ ಎಂದು ಶಾಸಕರೂ ಹಾಗೂ ಇಪ್ಕೋ ವಿಮಾ ಕಂಪನಿ ಅಧ್ಯಕ್ಷ ಕೆ.ಶ್ರೀನಿವಾಸಗೌಡ ತಿಳಿಸಿದರು.ಬುಧವಾರ ನಗರದ ಡಿಸಿಸಿ ಬ್ಯಾಂಕ್ ಆವರಣದಲ್ಲಿ ಕೋಲಾರ ದಕ್ಷಿಣ ಕಸಬಾ ಸೊಸೈಟಿ ಆಶ್ರಯದಲ್ಲಿ ಬ್ಯಾಂಕಿನಿಂದ ರೈತರಿಗೆ 1.26 ಕೋಟಿ ರೂ ಕೆಸಿಸಿ ಸಾಲ ವಿತರಿಸಿ ಅವರು ಮಾತನಾಡುತ್ತಿದ್ದರು.ಬ್ಯಾಂಕಿನ ಹಿಂದಿನ ಸ್ಥಿತಿ 40 ಕೋಟಿಯೂ ವಹಿವಾಟು […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಎಂಜಿನಿಯರ್ಗಳು ವೃತ್ತಿಪರತೆ ಹೆಚ್ಚಿಸಿಕೊಂಡು ಉತ್ತಮ ಗುಣಮಟ್ಟದ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸ್ನೇಹ ಬಳಗ ಟ್ರಸ್ಟ್ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ಸರ್ ಎಂ.ವಿಶ್ವೇಶ್ವರಯ್ಯ ಅವರ ಜನ್ಮ ದಿನಾಚರನೆ ಸಮಾರಂಭದಲ್ಲಿ ಸ್ಥಳೀಯ ಎಂಜಿನಿಯರ್ಗಳನ್ನು ಸನ್ಮಾನಿಸಿ ಮಾತನಾಡಿ, ಸರ್. ಎಂ.ವೇಶ್ವಶ್ವರಯ್ಯ ಅವರು ನಿರ್ಮಿಸಿರುವ ಕೆಆರ್ಎಸ್ ಅಣೆಕಟ್ಟು ವಿಶ್ವ ಪ್ರಸಿದ್ಧಿ ಪಡೆದಿದೆ. ಅದಕ್ಕೆ ನಿರ್ಮಾಣದ ಹಿಂದಿನ ವೃತ್ತಿಪರತೆ ಕಾರಣ ಎಂದು ಹೇಳಿದರು. ಲೋಕೋಪಯೋಗಿ ಇಲಾಖೆಯ ಸಹಾಯಕ […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಮುಧೋಳದಲ್ಲಿ ಸಹಾಯಕ ಖಜಾನಾಧಿಕಾರಿ ಎಸ್ಎಸ್ ಬಿರಾದಾರ ಅವರ ಕರ್ತವ್ಯಕ್ಕೆ ಅಡ್ಡಿಯುಂಟು ಮಾಡಿ ಕಪಾಳಕ್ಕೆ ಹೊಡೆದಿರುವ ಕೃಷಿ ಇಲಾಖೆ ಉಪನಿರ್ದೇಶಕರ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಹಾಗೂ ಖಜಾನೆ ಸಿಬ್ಬಂದಿಗೆ ರಕ್ಷಣೆಗೆ ಕೋರಿ ರಾಜ್ಯ ಖಜಾನೆ ನೌಕರರ ಸಂಘದ ಜಿಲ್ಲಾಶಾಖೆ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.ಜಿಲ್ಲಾ ಖಜಾನಾಧಿಕಾರಿ ರುಕ್ಮಿಣಿದೇವಿ ಹಾಗೂ ಸಂಘದ ಅಧ್ಯಕ್ಷ ಎಚ್.ಶಂಕರ್ ನೇತೃತ್ವದಲ್ಲಿ ಡಿಸಿಯವರಿಗೆ ಮನವಿ ಸಲ್ಲಿಸಿದ್ದು, ಮುಧೋಳದಲ್ಲಿ ಕೃಷಿ ಅಧಿಕಾರಿ ತೋರಿರುವ ಉದ್ದಟತನವನ್ನು ಖಂಡಿಸಲಾಯಿತು.ಸಮಯ ಮುಗಿದ ನಂತರ […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಗರ್ಭಿಣಿಯರು ಮಗುವಿನ ಆರೋಗ್ಯದ ದೃಷ್ಟಿಯಿಂದ ಪೌಷ್ಠಿಕ ಆಹಾರ ಸೇವನೆ ಮಾಡಬೇಕು ಹಾಗೂ ಕಾಲ ಕಾಲಕ್ಕೆ ಸರಿಯಾಗಿ ಸೂಚಿತ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ತಾಲ್ಲೂಕು ಮಕ್ಕಳ ಅಭಿವೃದ್ಧಿ ಯೋಜನೆಯ ಅಧಿಕಾರಿ ಸಿ.ರೊಸಲಿನ್ ಸತ್ಯ ಹೇಳಿದರು. ತಾಲ್ಲೂಕಿನ ಕಲ್ಲೂರು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಐಸಿಡಿಎಸ್ನಿಂದ ಸೋಮವಾರ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಪೋಷಣ್ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಸ್ವಸ್ಥ ಸಮಾಜ ನಿರ್ಮಾಣ ಕಾರ್ಯದಲ್ಲಿ ಮಹಿಳೆಯರ ಪಾತ್ರ ಹಿರಿದು. ಆರೋಗ್ಯವಂತ ಮಕ್ಕಳು ಆರೋಗ್ಯಪೂರ್ಣ […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ : ಜಿಲ್ಲೆ ವ್ಯಾಪ್ತಿಯಲ್ಲಿ ಬರುವ ಎಲ್ಲ ವಾಣಿಜ್ಯ ಮಳಿಗೆಗಳ ತೆರಿಗೆಯನ್ನು ಸಮರ್ಪಕವಾಗಿ ವಸೂಲಿ ಮಾಡಬೇಕು ಎಂದು ಪೌರಾಡಳಿತ , ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯ ಸಚಿವರಾದ ಕೆ ಆರ್ ನಾರಾಯಣಗೌಡ ಅವರು ತಿಳಿಸಿದರು . ಇಂದು ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಂಗ ಗಣದಲ್ಲಿ ಪೌರಾಡಳಿತ , ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು . ಜಿಲ್ಲೆಯಲ್ಲಿ ತೆರಿಗೆ ಹಣ ಕಡಿಮೆ ಆಗುತ್ತಿದ್ದು […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ: ಸರ್ಕಾರ ಘೋಷಣೆ ಮಾಡಿದ್ದ ಬೆಳೆ ಪರಿಹಾರವನ್ನು ಕೂಡಲೇ ಬಿಡುಗಡೆ ಮಾಡುವ ಜೊತೆಗೆ ಟೊಮೆಟೊ, ಆಲೂಗಡ್ಡೆ ಬೆಳೆಗೆ ಬರುವ ಅಂಗಮಾರಿ ಊಜಿ ನೊಣಕ್ಕೆ ಅವಶ್ಯಕತೆಯಿರುವ ಔಷದಿಯನ್ನು ಸರ್ಕಾರದಿಂದ ಉಚಿತವಾಗಿ ನೀಡಬೇಕು ಎಂದು ತೋಟಗಾರಿಗೆ ಸಚಿವರಾದ ನಾರಾಯಣಗೌಡರನ್ನು ರೈತಸಂಘದಿಂದ ಒತ್ತಾಯಿಸಿ ಬೆಳೆ ಸಮೇತ ಮನವಿ ಸಲ್ಲಿಸಲಾಯಿತು.ಮನವಿ ಸಲ್ಲಿಸಿ ಮಾತನಾಡಿದ ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಬೆಳೆನಷ್ಟ ಪರಿಹಾರವನ್ನು ಸರ್ಕಾರ ಘೋಷಣೆ ಮಾಡಿ 6 ತಿಂಗಳು ಕಳೆದರೂ ಇದುವರೆಗೂ ನೊಂದ ರೈತರಿಗೆ ಪರಿಹಾರ […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ ಸೆ.13: ಕೊರೊನ ಸಂಕಷ್ಟದಲ್ಲಿ ಸರ್ಕಾರ ಘೋಷಣೆ ಮಾಡಿದ್ದ ಬೆಳೆ ಪರಿಹಾರವನನು ಕೂಡಲೇ ಬಿಡುಗಡೆ ಮಾಡಬೇಕು ಹಾಗೂ ಟೊಮೆಟೊ, ಆಲೂಗಡ್ಡೆ ಬೆಳೆ ಬಾದಿಸುವ ಅಂಗಮಾರಿ ಊಜಿ ನೋಣಕ್ಕೆ ಅವಶ್ಯಕತೆಯಿರುವ ಔಷದಿಯನ್ನು ಉಚಿತವಾಗಿ ನೀಡಬೇಕು ಮತ್ತು ಇಲಾಖೆಯಲ್ಲಿ ನಡೆದಿರುವ ಭ್ರಷ್ಟಚಾರದ ಬಗ್ಗೆ ಉನ್ನತ ಅಧಿಕಾರಿಗಳಿಂದ ತನಿಖೆ ನಡೆಸಲು ಒತ್ತಾಯಿಸಿ ಸೆ.14ರಂದು ಜಿಲ್ಲೆಗೆ ಆಗಮಿಸುತ್ತಿರುವ ತೋಟಗಾರಿಗೆ ಸಚಿವರಿಗೆ ಮುತ್ತಿಗೆ ಹಾಕಲು ರೈತ ಸಂಘದ ಸಭೆಯಲ್ಲಿ ತೀರ್ಮಾನಿಸಲಾಯಿತು.ನಗರದಲ್ಲಿ ಭಾನುವಾರ ನಡೆದ ರಾಜ್ಯ ರೈತ ಸಂಘ […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೃಷಿ ವಿಜ್ಞಾನ ಕೇಂದ್ರ, ಕೋಲಾರ ಹಾಗೂ ರೇಷ್ಮೆ ಇಲಾಖೆ, ಶ್ರೀನಿವಾಸಪುರ ಸಹಯೋಗದಲ್ಲಿ ದಿನಾಂಕ 11.09.2020 ರಂದು ಶ್ರೀನಿವಾಸಪುರ ತಾಲ್ಲೂಕಿನ ಕಾಡುದೇವಾಂಡಹಳ್ಳಿ ಗ್ರಾಮದಲ್ಲಿ ರೇಷ್ಮೆ ಬೆಳೆಗಾರರಿಗೆ ಗುಣಮಟ್ಟದ ಬೈವೋಲ್ಟಿನ್ ರೇಷ್ಮೆಗೂಡು ಉತ್ಪಾದನೆ ಮತ್ತು ಬೆಳೆ ಸ್ಥಿರತೆಗೆ ಸೂಕ್ತ ಸಂಕರಣ ತಳಿಗಳ ಬಳಕೆ ಕುರಿತು ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸದರಿ ಕಾರ್ಯಕ್ರಮದಲ್ಲಿ ಕೋಲಾರ ಜಿಲ್ಲೆಯ ರೇಷ್ಮೆ ಉಪನಿರ್ದೇಶಕರಾದ ಡಿ.ಎಂ. ಆಂಜನೇಯಗೌಡರವರು ಭಾಗವಹಿಸಿ ಸುಧಾರಿತ ತಾಂತ್ರಿಕತೆಗಳನ್ನು ಅಳವಡಿಸಿಕೊಳ್ಳುವ ಮೂಲಕ ಗುಣಮಟ್ಟದ ರೇಷ್ಮೆಗೂಡು ಉತ್ಪಾದನೆಯ ಜೊತೆಗೆ […]