ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪಾತನೆಲವಂಕಿ ಗ್ರಾಮದ ಸಮೀಪ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ.ತಾಲ್ಲೂಕಿನ ಚಿಂತಮಾನಿಪಲ್ಲಿ ಗ್ರಾಮದ ರೇಖಾ (32) ಕೊಲೆಯಾದ ಮಹಿಳೆ.ಭಾನುವಾರ ಪಾತನೆಲವಂಕಿ ಗ್ರಾಮದ ಸಮೀಪ ಪ್ರಯಾಣಿಕರ ತಂಗುದಾಣದಲ್ಲಿ ಬಸ್ಗಾಗಿ ಕಾಯುತ್ತಿದ್ದಾಗ, ಈ ಘಟನೆ ನಡೆದಿದೆ. ಕೊಲೆಗೆ ಕೌಟುಂಬಿಕ ಸಮಸ್ಯೆ ಕಾರಣ ಎಂದು ಹೇಳಲಾಗಿದೆ. ಕೃತ್ಯ ನಡೆದ ಬಳಿಕ ಘಟನಾ ಸ್ಥಳದಿಂದ ಓಡಿಹೋಗಿ ಲಕ್ಷ್ಮೀಸಾಗರ ಗೇಟ್ನಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿ ರಾಜು (38)ವನ್ನು ಪೊಲೀಸರು ಬಂದಿಸಿ ನ್ಯಾಯಾಂಗ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಜನಪದ ಕಲೆ ಹಾಗೂ ಸಾಹಿತ್ಯ ಆಧುನಿಕ ಕಲೆ ಹಾಗೂ ಸಾಹಿತ್ಯದ ತಾಯಿ ಬೇರು ಎಂಬುದನ್ನು ಅರಿಯಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಎಂ.ನಾಗರಾಜ ಹೇಳಿದರು.ತಾಲ್ಲೂಕಿನ ಗಂಗನ್ನಗಾರಿಪಲ್ಲಿ ಗ್ರಾಮದ ಏಕಲವ್ಯ ವಸತಿ ಶಾಲೆ ಆವರಣದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಪುಲಗೂರುಕೋಟೆ ಗ್ರಾಮ ಪಂಚಾಯಿತಿ ವತಿಯಿಂದ ಭಾನುವಾರ ಏರ್ಪಡಿಸಿದ್ದ ಗಿರಿಜನ ಉತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಗಿರಿಜನ ಸಮುದಾಯದ ಮಕ್ಕಳು ಸ್ಪರ್ಧಾತ್ಮಕ ಯುಗದಲ್ಲಿ ಗುಣಾತ್ಮಕ ಫಲಿತಾಂಶ ಪಡೆದು ಉತ್ತಮ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ; ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷರಾಗಿ ಭಾರತಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಉಪವಿಭಾಗಾಧಿಕಾರಿ ವಿ. ಸೋಮಶೇಖರ್ ತಿಳಿಸಿದರು.ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿದ್ದು, ಈ ಸ್ಥಾನಕ್ಕೆ ಭಾರತಿ, ಕೆ. ಬಿ. ಸುಗಣ ಇಬ್ಬರು ನಾಮಪತ್ರ ಸಲ್ಲಿಸಿದರು. ಇದರಲ್ಲಿ ಕೆ. ಬಿ. ಸುಗಣ ನಾಮಪತ್ರ ವಾಪಸ್ ತೆಗೆದುಕೊಂಡಿದ್ದರಿಂದ ಭಾರತಿ ಕಣದಲ್ಲಿ ಉಳಿದಿರುವುದರಿಂದ ಇವರನ್ನು ಅವಿರೋಧವಾಗಿ ಆಯ್ಕೆಮಾಡಲಾಗಿದೆ ಎಂದು ಚುನಾವಣಾ ಅಧಿಕಾರಿ ತಿಳಿಸಿದರು.ತಾಲ್ಲೂಕು ಪಂಚಾಯಿತಿಯಲ್ಲಿ ಒಟ್ಟು 18 ಸದಸ್ಯರಿದ್ದು, ಇದರಲ್ಲಿ ಜೆಡಿಎಸ್ 9 ಕಾಂಗ್ರೇಸ್ 8 […]
ವರದಿ ; ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ : ಎಲ್ಲಾ ಕ್ಷೇತ್ರಗಳಲ್ಲಿ ಜಾತಿ ಆದಾರವಾಗುತ್ತಿದೆ ಆದರೆ ಇಡೀ ದೇಶಕ್ಕೆ ಅನ್ನ ನೀಡುವ ಕೃಷಿ ಕೂಲಿ ಕಾರ್ಮಿಕರಲ್ಲಿ ಇಲ್ಲದ ಜಾತಿ ಇಂದು ವಿದ್ಯಾವಂತರಿಂದಲೇ ಜಾತಿ ಸೃಷ್ಟಿಯಾ ಗುತ್ತಿದೆಯೆಂದರೆ ಇನ್ನು ದೇಶವನ್ನು ಜಾತ್ಯಾತೀತವಾಗಿ ಕಟ್ಟಲು ಹೇಗೆ ಸಾದ್ಯವೆಂದು ಭಾರತ ಸೇವಾದಳದ ಜಿಲ್ಲಾಧ್ಯಕ್ಷ ಕೆ.ಎಸ್ ಗಣೇಶ್ರವರು ಅಭಿಪ್ರಾಯಿಸಿದರು . ಶ್ರೀನಿವಾಸಪುರ ತಾಲೂಕಿನ ರೋಣೂರು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾರತ ಸೇವಾದಳ ಕೋಲಾರ , ಸಾರ್ವಜನಿಕ ಶಿಕ್ಷಣ ಇಲಾಖೆ ಇವರ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಮೀಸಲಾತಿಗಾಗಿ ಹೋರಾಟ ನಡೆಸುವ ಮಹಿಳೆಯರು ಸಿಕ್ಕ ಅಧಿಕಾರದ ಜವಾಬ್ದಾರಿಯನ್ನು ಪುರುಷರಿಗೆ ವಹಿಸದೇ ಸವಾಲಾಗಿ ಸ್ವೀಕರಿಸಿ ಆಡಳಿತ ನಡೆಸಿ ಸಮಾಜಕ್ಕೆ ಮಾದರಿಯಾಗಬೇಕು ಎಂದು ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಅಭಿಪ್ರಾಯಪಟ್ಟರು.ಕೋಲಾರ,ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಆವರಣದಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳೆಯರಿಗೆ ಹರಿಸಿನ,ಕುಂಕುಮ,ಹೂವಿನೊಂದಿಗೆ `ಕಿಸಾನ್ ಶ್ರೀಲಕ್ಷ್ಮೀ’ ಠೇವಣಿ ಬಾಂಡ್ ವಿತರಿಸಿ ಅವರು ಮಾತನಾಡುತ್ತಿದ್ದರು.ಈಗಾಗಲೇ ಗ್ರಾಪಂ, ತಾಪಂ,ಜಿಪಂಗಳಲ್ಲಿ ಮಹಿಳೆಯರಿಗೆ ಶೇ.50 ಮೀಸಲಾತಿ ಇದೆ, ಜತೆಗೆ ವಿಧಾನಸಭೆ,ಲೋಕಸಭೆಯಲ್ಲೂ ಶೇ.33 […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ;ತಾಲ್ಲೂಕಿನ ಹೊದಲಿ ಗ್ರಾಮ ಪಂಚಾಯಿತಿಯಾ ಅವುಲಕುಪ್ಪ ಗ್ರಾಮದ ಎ.ವಿ. ನಾರಾಯಣಸ್ವಾಮಿ ಮತ್ತು ಭಾಗ್ಯಮ್ಮ ರವರ ಕುಟುಂಬದಲ್ಲಿ ಇವರು ಸಾಕಿರುವ ನಾಟಿ ಗೂ ಮಾತೆ (ಹಸು) ಮೂರು ಗಂಡು ಕರುಗಳಿಗೆ ಜನ್ಮ ನೀಡಿ ಗ್ರಾಮಕ್ಕೆ ಸಂತಸ ಉಂಟಾಗಿದೆ.ಅವುಲಕುಪ್ಪ ಗ್ರಾಮದ ಎ.ವಿ. ನಾರಾಯಣಸ್ವಾಮಿ ಮತ್ತು ಭಾಗ್ಯಮ್ಮ ಇವರು ಚೌಡೇಶ್ವರಿ ಅಮ್ಮನವರ ದೇವಾಲಯದ ಅರ್ಚಕರಾಗಿದ್ದು, ಜೊತೆಗೆ ಕೃಷಿಕರಾಗಿ ಪಶು ಸಂಗೋಪನೆಯಲ್ಲಿ ತೂಡಗಿದ್ದು, ಇವರ ಮನೆಯಲ್ಲಿ ಸಾಕಿಕೊಂಡಿರುವ ನಾಟಿ ಹಸು ನಾಲ್ಕನೇ ಫಲದಲ್ಲಿ ಮೂರು ಕರುಗಳಿಗೆ ಜನ್ಮ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಪ್ಯಾಕ್ಸ್ಗಳ ಮೂಲಕ ಜನರಿಕ್ ಔಷಧಿಗಳ ಮಾರಾಟಕ್ಕೆ ರಾಜ್ಯ ಸಹಕಾರ ಮಹಾಮಂಡಳ ಯೋಜನೆ ರೂಪಿಸಿದ್ದು, ಜಿಲ್ಲೆಯಲ್ಲಿ ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕಿನ ಮೂಲಕ ಅನುಷ್ಟಾನಗೊಳಿಸುವ ಸಂಬಂಧ ಚರ್ಚಿಸಲು ಏ.17 ರಂದು ಪೂರ್ವಭಾವಿ ಸಭೆ ಕರೆಯಲಾಗಿದೆ ಎಂದು ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ತಿಳಿಸಿದರು.ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಜಿಲ್ಲಾ ಸಹಕಾರಿ ಒಕ್ಕೂಟ, ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಹಾಗೂ ಸಹಕಾರ ಇಲಾಖೆ ಆಶ್ರಯದಲ್ಲಿ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಸಮಾಜ ಸರಳ ವಿವಾಹ ಪದ್ಧತಿಯನ್ನು ಗೌರವಿಸಬೇಕು. ಮದುವೆಗಾಗಿ ಸಾಲ ಮಾಡಿ ಸಂಕಷ್ಟಕ್ಕೆ ಒಳಗಾಗುವುದನ್ನು ತಪ್ಪಿಸಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ತಾಲ್ಲೂಕಿನ ಗುಮ್ಮರೆಡ್ಡಿಪುರ ಗ್ರಾಮದಲ್ಲಿ ಮಾರ್ಕೊಂಡಪ್ಪ ಸೇವಾ ಟ್ರಸ್ಟ್ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ಸಾಮೂಹಿಕ ವಿವಾಹ ಸಮಾರಂಭದಲ್ಲಿ ವಧೂವರನ್ನು ಆಶೀರ್ವದಿಸಿ ಮಾತನಾಡಿದ ಅವರು, ಸರಳತೆಯಲ್ಲಿ ಸಂತೋಷವಿದೆ. ಹಿಂದೆ ಗ್ರಾಮೀಣ ಪ್ರದೇಶದಲ್ಲಿ ನಡೆಯುತ್ತಿದ್ದ ವಿವಾಹಗಳು ಎಲ್ಲ ಕಾಲಕ್ಕೂ ಮಾದರಿಯಾಗಿವೆ ಎಂದು ಹೇಳಿದರು.ಈ ಸಂದರ್ಭದಲ್ಲಿ 10 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.ಸಾಮೂಹಿಕ ವಿವಾಹ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಕೇಂದ್ರ ಸರ್ಕಾರ ಆದಿ ಜಾಂಭವಂತಸ್ವಾಮಿ ಜಯಂತಿಯನ್ನು ರಾಷ್ಟ್ರೀಯ ಹಬ್ಬವನ್ನಾಗಿ ಘೋಷಿಸಬೇಕು ಎಂದು ಮಾದಿಗ ದಂಡೋರ ಸಂಘಟನೆಯ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಜೆ.ಎಂ.ದೇವರಾಜ್ ಆಗ್ರಹಿಸಿದರು.ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಶುಕ್ರವಾರ ಏರ್ಪಡಿಸಿದ್ದ ಆದಿ ಜಾಂಭವಂತಸ್ವಾಮಿ ಜಯಂತ್ಯುತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಆದಿ ಜಾಂಭವಂತಸ್ವಾಮಿ ತಮ್ಮ ಹಿರಿತನ ಹಾಗೂ ಸಮದೃಷ್ಟಿಯಿಂದ ಸಮಾಜದ ಎಲ್ಲ ವರ್ಗದ ಜನರ ಪ್ರೀತಿಗೆ ಪಾತ್ರರಾಗಿದ್ದಾರೆ. ಅವರ ಸ್ಮರಣೆಯಿಂದ ಮಾನವ ಇತಿಹಾಸದ ದರ್ಶನವಾಗುತ್ತದೆ ಎಂದು ಹೇಳಿದರು.ಸರ್ಕಾರ ಮಾದಿಗ […]

